Connect with us

    BANTWAL

    ಬಂಟ್ವಾಳ ಜಕ್ರಿಬೆಟ್ಟುವಿನ ಇಂಟರ್‌ನೆಟ್ ಸಮಸ್ಯೆ ಪರಿಹಾರ

    Published

    on

    ಬಂಟ್ವಾಳ: ಜಕ್ರಿಬೆಟ್ಟುವಿನ ಪರಿಸರದ ಮಕ್ಕಳು ಆನ್ಲೈನ್ ಪಾಠ ಕೇಳಬೇಕಾದರೆ ದೂರದ ನದಿತಟಕ್ಕೆ ಹೋಗಬೇಕು. ಆಫ್ಲೈನ್ ಪಾಠ, ಡೌನ್‌ ಲೋಡ್ ಮಾಡಲೂ ನದಿ ತಟವೇ ಗತಿ, ಹೋಮ್ ವರ್ಕ್ ಅನ್ನು ಶಾಲೆಗೆ ಸೆಂಡ್ ಮಾಡಬೇಕಾದರೆ ನದಿ ತಟದಲ್ಲೇ ಒಂದಷ್ಟು ಹೊತ್ತು ಕಳೆಯಲೇ ಬೇಕು.


    ಇದು ಗ್ರಾಮೀಣ ಪ್ರದೇಶದ ಯಾವುದೋ ಕುಗ್ರಾಮದ ಕಥೆಯಲ್ಲ. ಬಂಟ್ವಾಳ ಪುರಸಭಾ ವ್ಯಾಪ್ತಿಯ ಚೆಂಡ್ತಿಮಾರ್-ಮಣಿಹಳ್ಳ ಪರಿಸರದ ಮಕ್ಕಳ ವ್ಯಥೆ. ಆದರೆ ಇದೀಗ ಈ ಭಾಗದ ಜನರ ಕಷ್ಟಗಳಿಗೆ ಸ್ಪಂದಿಸಿದ ಏರ್ ಟೆಲ್ ಸಂಸ್ಥೆ ನೂತನ ಟವರ್ ಲೋಕಾರ್ಪಣೆ ಮಾಡಲು ಸಿದ್ದಗೊಂಡಿದೆ.

    ಬಂಟ್ವಾಳ ತಾಲೂಕಿನ ಚೆಂಡ್ತಿಮಾರ್ ಮತ್ತು ಮಣಿಹಳ್ಳ ಪರಿಸರ ವ್ಯಾಪ್ತಿಯಲ್ಲಿ ವಾಸಿಸುವ ಜನರು ನೆಟ್ ವರ್ಕ್ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಆನ್ಲೈನ್ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಡು ಅಯ್ಯಯ್ಯೋ ಎನ್ನುವಂತಿತ್ತು.

    ಈ ಪರಿಸರದ ಆಸುಪಾಸಿನಲ್ಲಿ ಸುಮಾರು 250 ಮನೆಗಳಿದ್ದು ಸಾವಿರಕ್ಕಿಂತಲೂ ಹೆಚ್ಚು ಜನ ವಾಸ್ತವ್ಯವಿದ್ದಾರೆ.

    ಆದರೆ ಇಲ್ಲಿನ ಗ್ರಾಮಸ್ಥರು ಕರೆ ಮಾಡಬೇಕಾದರೆ ಮನೆಯಿಂದ ಹೊರಗೆ ಬರಬೇಕು. ಇಂಟರ್ನೆಟ್ ಕನೆಕ್ಟ್ ಆಗಲು ಟೆರೇಸ್ ಹತ್ತಬೇಕು‌ ಇಲ್ಲವೇ ನದಿತಟಕ್ಕೆ ಬರಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.

    ಆಫ್ ಲೈನ್ ನಲ್ಲಿ ಕಳುಹಿಸಿಕೊಡುವ ಹೋಂ ವರ್ಕ್ ಗಳನ್ನು ಡೌನ್ ಲೋಡ್ ಮಾಡಲು, ಮಾಡಿದ ಹೋಮ್ ವರ್ಕ್ ಗಳನ್ನು ಶಾಲೆಗೆ ಕಳುಹಿಸಲೂ ನದಿತಟವೇ ಬೇಕು ಎನ್ನುವಂತಿದ್ದರೆ, ಮಕ್ಕಳ ಜೊತೆಗೆ ಹೆತ್ತವರೂ ಬರಲೇಬೇಕಾದ ಸ್ಥಿತಿಯೂ‌ ಇಲ್ಲಿತ್ತು.

    ಕೆಲವೊಮ್ಮೆ ಇಲ್ಲಿಯೂ ಉಂಟಾಗುವ ನೆಟ್ ವರ್ಕ್ ಸಮಸ್ಯೆ ಹಲವು ಬಾರಿ ಆನ್ಲೈನ್ ನಲ್ಲಿ ಮಕ್ಕಳ ಹಾಜರಾತಿಗೂ ಸಮಸ್ಯೆ ತಂದುಕೊಟ್ಟಿತ್ತು.

    ನಗರಪ್ರದೇಶಕ್ಕೆ ಹತ್ತಿರವಿದ್ದರೂ ಇಲ್ಲಿನವರನ್ನು ಕಾಡುತ್ತಿರುವ ನೆಟ್ ವರ್ಕ್ ಸಮಸ್ಯೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಿ ಶಾಶ್ವತಪರಿಹಾರ ಒದಗಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದರು.

    ಕೆಲವೊಂದು ಅಡಚಣೆಗಳ ಕಾರಣ ನಾವು ಟವರ್ ನಿರ್ಮಾಣ ಮಾಡುವಲ್ಲಿ ವಿಳಂಬವಾಗಿದೆ. ಪ್ರಸ್ತುತ ಎಲ್ಲಾ ವಿಘ್ನಗಳು ಕಳೆದು ಸುಸಜ್ಜಿತ ರೀತಿಯಲ್ಲಿ ಟವರ್ ನಿರ್ಮಾಣಗೊಂಡಿದೆ ಎಂದು ಏರಿಯಾ ಮ್ಯಾನೇಜರ್ ಶೈಲೇಶ್ ಹೇಳಿದ್ದಾರೆ.

     

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending