ಸಿಎಎ ವಿರೋಧಿ ಪ್ರತಿಭಟನೆಗೆ ಅಕ್ಷರ ಸಂತನಿಗೆ ಅಹ್ವಾನ; ವ್ಯಾಪಕ ವಿರೋಧ
Published
5 years agoon
By
Adminಸಿಎಎ ವಿರೋಧಿ ಪ್ರತಿಭಟನೆಗೆ ಅಕ್ಷರ ಸಂತನಿಗೆ ಅಹ್ವಾನ; ವ್ಯಾಪಕ ವಿರೋಧ
ಮಂಗಳೂರು: ಕೇಂದ್ರ ಸರಕಾರದ ಸಿಎಎ ಹಾಗೂ ಎನ್.ಆರ್.ಸಿ ಕಾನೂನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಾನೂನಿನ ಬಗ್ಗೆ ಅರಿವಿಲ್ಲದವರನ್ನೂ ಸೇರಿಸಿಕೊಳ್ಳಲಾಗುತ್ತಿದೆ ಎನ್ನುವ ಬಿಜೆಪಿ ಪಕ್ಷದ ಆರೋಪಗಳ ನಡುವೆಯೇ ಇಂತಹುದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ.
ಕಿತ್ತಳೆ ಹಣ್ಣನ್ನು ಮಾರಿ ಶಾಲೆ ಕಟ್ಟಿದ ಅಕ್ಷರ ಸಂತ ಹರೇಕಳ ಹಾಜಬ್ಬ ಅವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರಕಾರ ಅವರಿಗೆ ಈ ಬಾರಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿರುವುದು ಎಲ್ಲೆಲ್ಲೂ ಜನಜನಿತವಾದ ವಿಷಯ.
ಇದೇ ಕಾರಣಕ್ಕೆ ಹಾಜಬ್ಬನವರನ್ನು ಎಲ್ಲಾ ಕಡೆಗಳಲ್ಲೂ ಗೌರವಿಸಿ ಸನ್ಮಾನಿಸಲಾಗುತ್ತಿದೆ. ಜನರ ಪ್ರೀತಿಗೆ ಸೋತು ಹಾಜಬ್ಬರು ಎಲ್ಲಿ ಕರೆದರೂ ಇಲ್ಲ ಎನ್ನದೆ ಹೋಗುತ್ತಿದ್ದಾರೆ.
ಆದರೆ ಹಾಜಬ್ಬರ ಇದೇ ಮುಗ್ದತೆಯನ್ನು ಬಳಸಿಕೊಂಡು ಸಂಘಟನೆಯೊಂದು ಇವರನ್ನು ಸಿಎಎ, ಎನ್ಆರ್‌ಸಿ ವಿರೋಧಿ ಪ್ರತಿಭಟನೆಗೂ ಅವರ ಅರಿವಿಗೆ ತರದೆ ಅತಿಥಿಯನ್ನಾಗಿ ಮಾಡಿದೆ.
ನಾಳೆ ಉಡುಪಿಯಲ್ಲಿ ನಡೆಯಲಿರುವ ಈ ಪ್ರತಿಭಟನೆಯನ್ನು ಒಂದು ಕಾರ್ಯಕ್ರಮ ಎಂದು ಹಾಜಬ್ಬರಿಗೆ ಮನವರಿಕೆ ಮಾಡಿ ಕಾರ್ಯಕ್ರಮದ ಉದ್ಘಾಟನೆಗೆ ತಾವು ಬರಬೇಕೆಂದು ಕಾರ್ಯಕ್ರಮದ ಆಯೋಜಕರು ಆಹ್ವಾನಿಸಿದ್ದರು. ಆದರೆ ಮಾಧ್ಯಮಗಳ ಮೂಲಕ ನಾಳೆ ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮ ಸಿಎಎ ವಿರೋಧಿ ಪ್ರತಿಭಟನೆ ಎಂದು ತಿಳಿದ ತಕ್ಷಣ ಹಾಜಬ್ಬನವರು ಕಾರ್ಯಕ್ರಮಕ್ಕೆ ಬರಲಾಗುವುದಿಲ್ಲ ಎಂದು ಸಂಘಟಕರಿಗೆ ತಿಳಿಸಿದ್ದಾರೆ.
ಸಾಮಾನ್ಯ ಜನರಂತಿರುವ ನನ್ನನ್ನು ಇಂಥ ವಿಷಯಗಳಲ್ಲಿ ಸಿಲುಕಿಸುವ ಕೆಲಸ ಯಾರೂ ಮಾಡಬಾರದೆಂದು ಅವರು ಮನವಿ ಮಾಡಿದ್ದಾರೆ. ಆ ಕಾನೂನಿನ ಬಗ್ಗೆ ನನಗೆ ಏನೂ ಗೊತ್ತಿಲ್ಲದಿರುವಾಗ ನನ್ನನ್ನು ಕಾರ್ಯಕ್ರಮ ಉದ್ಘಾಟನೆಗೆ ಕರೆದಿರುವ ಹಿಂದಿನ ಉದ್ಧೇಶ ಏನೆಂದು ನನಗೆ ತಿಳಿದಿಲ್ಲ ಎಂದು ಹಾಜಬ್ಬ ಹೇಳಿಕೊಂಡಿದ್ದಾರೆ.
ತನ್ನದೇ ಸಾಮರ್ಥ್ಯದಲ್ಲಿ ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಿಕೊಂಡಿರುವ ಹರೇಕಳ ಹಾಜಬ್ಬನವರಿಗೆ ಶಿಕ್ಷಣದ ವಿಚಾರ ಬಿಟ್ಟರೆ ಬೇರೆ ಯಾವುದೂ ತಿಳಿದಿಲ್ಲ. ಇಂಥ ವ್ಯಕ್ತಿಯನ್ನು ವಿವಾದಾತ್ಮಕ ವಿಷಯಗಳಲ್ಲಿ ಸಿಲುಕಿಸುವ ಯತ್ನ ಉಡುಪಿಯ ಸಂಘಟನೆಗಳಿಂದ ನಡೆದಿರುವುದು ಖಂಡನೀಯ ವಿಚಾರವೂ ಆಗಿದೆ.
ವೀಡಿಯೋಗಾಗಿ
You may like
LATEST NEWS
ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಅಪ್ರಾಪ್ತನ ಜೊತೆ 10 ವರ್ಷದ ಬಾಲಕಿ ಪರಾರಿ
Published
48 seconds agoon
06/01/2025By
NEWS DESK2ವಡೋದರ: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ ಗುಜರಾತ್‌ನ ಧನ್ಸೂರಾ ಗ್ರಾಮದ ಹತ್ತು ವರ್ಷ ವಯಸ್ಸಿನ 5ನೇ ತರಗತಿ ವಿದ್ಯಾರ್ಥಿನಿ ಅಪ್ರಾಪ್ತ ವಯಸ್ಸಿನ ಬಾಲಕನ ಜೊತೆ ಓಡಿ ಹೋಗಿರುವ ಘಟನೆ ನಡೆದಿದೆ.
ಕಳೆದ ಕೆಲ ಸಮಯದಿಂದ ತನ್ನ ತಾಯಿಯ ಮೊಬೈಲ್‌ನಲ್ಲಿ ಇನ್ಸ್ಟಾಗ್ರಾಮ್ ಖಾತೆಯನ್ನು ಬಳಸಿ 16 ವರ್ಷದ ಬಾಲಕನ ಜೊತೆ ಚಾಟಿಂಗ್ ಮಾಡಲು ಶುರು ಮಾಡಿದ್ದಾಳೆ. ಇಬ್ಬರ ನಡುವಿನ ಮೆಸೇಜ್ ಆತ್ಮೀಯತೆಗೆ ತಿರುಗಿದೆ.
ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದ್ದು, ಅದರಂತೆ ಡಿಸೆಂಬರ್ 31ರಂದು ಬಾಲಕಿ ಮನೆಯಿಂದ ಹೊರಗೆ ಹೋಗಿದ್ದಾಳೆ. ಇತ್ತ ಬಾಲಕಿಯ ಮನೆಯವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವನ್ನು ದಾಖಲಿಸಿದ್ದಾರೆ. ತಮ್ಮ ಮಗಳನ್ನು ಕಿಡ್ನಾಪ್ ಮಾಡಿರಬಹುದೆನ್ನುವ ಸಂಶಯದ ಮೇರೆಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಇಬ್ಬರು ಅಪ್ರಾಪ್ತರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಆ ಬಳಿಕ ಇಬ್ಬರನ್ನು ವಿಚಾರಣೆ ನಡೆಸಿದ್ದಾರೆ.
ತಾವಿಬ್ಬರು ಇನ್ಸ್ಟಾಗ್ರಾಮ್ ಮೂಲಕ ಪರಿಚಿತರು. ಇಬ್ಬರು ಪ್ರೀತಿಸುತ್ತಿದ್ದೇವೆ. ತಮ್ಮ ಮೂವರು ಸ್ನೇಹಿತರ ಸಹಾಯ ಪಡೆದು ಓಡಿಹೋಗಲು ನಿರ್ಧಾರ ಮಾಡಿದ್ದು, ಅದಕ್ಕಾಗಿ ಮನೆ ಬಿಟ್ಟು ಬಂದಿರುವುದಾಗಿ ಪೊಲೀಸರ ಮುಂದೆ ಇಬ್ಬರೂ ಅಪ್ರಾಪ್ತರು ಹೇಳಿದ್ದಾರೆ. ಸದ್ಯ ಇಬ್ಬರನ್ನು ಬಾಲಾಪರಾಧಿಗ್ರಹಕ್ಕೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಬಜಪೆ: ಎಲೆಕ್ಟ್ರಾನಿಕ್ ಅಂಗಡಿ, ಬೇಕರಿ, ತರಕಾರಿ ಅಂಗಡಿ ಹಾಗೂ ಬಂಡ ಶಾಲೆಯ ಒಂದು ಗೂಡಂಗಡಿಗೆ ಶುಕ್ರವಾರದ ರಾತ್ರಿ ವೇಳೆಯಲ್ಲಿ ಕಳ್ಳರು ನುಗ್ಗಿ, ಮೊಬೈಲ್, ಎಲೆಕ್ಟ್ರಾನಿಕ್ ಸಾಮಾಗ್ರಿ, ಚಿನ್ನದ ಉಂಗುರ, ನಗದು, ಬೇಕರಿಯಿಂದ ತಿಂಡಿ, ನಗದು, ತರಕಾರಿ ಅಂಗಡಿಯಿಂದ ನಗದು ನಾಣ್ಯ, ಸಿಗರೇಟ್, ಗೂಡಂಗಡಿಯಿಂದ ಬಿಸ್ಕತ್‌ನ್ನು ಕಳವು ಮಾಡಿರುವ ಘಟನೆ ಗುರುಪುರ ಪೇಟೆಯಲ್ಲಿ ನಡೆದಿದೆ.
ಗುರುಪುರ ಪೇಟೆಯ ಉಮೇಶ್ ಭಟ್ ರ ಎಲೆಕ್ಟ್ರಾನಿಕ್ ಅಂಗಡಿಗೆ ನುಗ್ಗಿ 12 ಮೊಬೈಲ್ ಫೋನ್, 20 ಸಾವಿರ ರೂಪಾಯಿ ಮೊತ್ತದ ಇಲೆಕ್ಟ್ರಾನಿಕ್ ಸಾಮಾಗ್ರಿಗಳು, 60 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಉಂಗುರ, ಸುಮಾರು 25 ಸಾವಿರ ರೂಪಾಯಿ ನಗದು ಕಳವು ಮಾಡಲಾಗಿದೆ. ಉಮೇಶ್ ನ ಸಹೋದರ ರಮೇಶ್ ಭಟ್ ರ ಬೇಕರಿ ಅಂಗಡಿಗೆ ನುಗ್ಗಿದ ಕಳ್ಳರು ಬೇಕರಿ ತಿಂಡಿಗಳನ್ನು ಹಾಗೂ ನಗದುಗಳನ್ನು ಶಟರ್ ಬೀಗ ಒಡೆದು ಕಳವು ಮಾಡಿದ್ದಾರೆ. ಸಂಶುದ್ದೀನ್ ನ ತರಕಾರಿ ಅಂಗಡಿಯ ಮರದ ಬಾಗಿಲಿನ ಬೀಗವನ್ನು ಒಡೆದು ನುಗ್ಗಿದ ಕಳ್ಳರು, ಡಬ್ಬಿಯಲ್ಲಿದ್ದ ಹತ್ತು ರೂಪಾಯಿಯ ನ್ಯಾಣ ಸುಮಾರು 10 ಸಾವಿರ ರೂಪಾಯಿ ನಗದು, ಸುಮಾರು 10ಸಾವಿರ ರೂಪಾಯಿ ಮೌಲ್ಯದ ಸಿಗರೇಟ್ ಸಹಿತ 20 ಸಾವಿರ ರೂಪಾಯಿ ಮೌಲ್ಯದ ಸೊತ್ತು ಕಳವು ಮಾಡಿದ ಕಳ್ಳರು ಅಂಗಡಿಯಲ್ಲಿನ ಫ್ರೀಜ್‌ನಲ್ಲಿದ್ದ ಮೊಸರನ್ನು ಕುಡಿದಿದ್ದಾರೆ ಹಾಗೂ ಚೆಲ್ಲಿದ್ದಾರೆ. ಅಂಗಡಿಯಲ್ಲಿದ್ದ ಅನಾನಸನ್ನು ತುಂಡು ಮಾಡಿ,ತಿಂದಿದ್ದಾರೆ. ಇಲ್ಲಿ ಕಳ್ಳರು ಹಲವು ಹೊತ್ತು ಕಾಲ ಕಳೆದಿರುವುದು ಕಂಡು ಬಂದಿದೆ.ಬಂಡಸಾಲೆಯಲ್ಲಿ ಧರ್ಮಣ ಪೂಜಾರಿ ಗೂಡಂಗಡಿಯ ಶಟರ್‌ನ ಬೀಗ ಮುರಿದು ಬಿಸ್ಕತ್‌ನ್ನು ಕಳವು ಮಾಡಿದ್ದಾರೆ.
ಸುಮಾರು ರಾತ್ರಿ 2 ರಿಂದ 3 ಗಂಟೆಯೊಳಗೆ ಈ ಕಳವು ನಡೆದಿದೆ. ಇದು ಒಂದು ಕಳ್ಳರ ತಂಡವಾಗಿದ್ದು, ಗುರುಪುರ ಪೇಟೆಯಲ್ಲಿ ಸಿಸಿ ಕ್ಯಾಮಾರದಲ್ಲಿ ಕಳ್ಳರ ಸುಳಿವು ಸಿಗುವ ಬಗ್ಗೆ ಸಾರ್ವಜನಿಕರು ತಿಳಿಸಿದ್ದಾರೆ. ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಕಳವಿನ ಬಗ್ಗೆ ಮಾಹಿತಿ ಪಡೆದು ಹೇಳಿಕೆ ತೆಗೆದುಕೊಂಡು ಹೋಗಿದ್ದಾರೆ.
LATEST NEWS
ಮುಂದಿನ 3 ದಿನ ಕರ್ನಾಟಕದಲ್ಲಿ ಶೀತಗಾಳಿ ಎಚ್ಚರಿಕೆ
Published
20 minutes agoon
06/01/2025By
NEWS DESK2ಬೆಂಗಳೂರು: ಮುಂದಿನ ಮೂರು ದಿನ ಕರ್ನಾಟಕದ ಹಲವು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ, ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಶೀತಗಾಳಿಯ ಎಚ್ಚರಿಕೆಯನ್ನು ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಬೀದರ್, ವಿಜಯಪುರ, ಕಲಬುರಗಿ, ಹಾವೇರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಶೀತಗಾಳಿ ಇರಲಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಮಂಡ್ಯ ದಾವಣಗೆರೆ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದ್ದು, ಜನ ಅಗತ್ಯ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ರಾಜ್ಯಾದ್ಯಂತ ಚುಮುಚುಮು ಚಳಿ ಹೆಚ್ಚಾಗಿದ್ದು, ಕೆಲವೆಡೆ 15 ಡಿಗ್ರಿಗಿಂತ ಕೆಳಗೆ ತಾಪಮಾನ ಕುಸಿದಿದೆ. ಮುಂದಿನ 3 ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಕನಿಷ್ಠ ಉಷ್ಣಾಂಶ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಂಜು ಮುಸುಕಿನ ವಾತಾವರಣ ಮುಂದುವರೆಯಲಿದೆ.
LATEST NEWS
ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ
ಸಾರ್ವಜನಿಕ ಶೌಚಾಲಯದಲ್ಲಿದ್ದ ಮಹಿಳೆಯ ಪೋಟೋ ತೆಗೆದು ಪರಾರಿಯಾದ ಕಿಡಿಗೇಡಿ
ವೇಶ್ಯಾವಾಟಿಕೆ: ಇಬ್ಬರು ಆರೋಪಿಗಳ ಬಂಧನ, ಯುವತಿಯ ರಕ್ಷಣೆ
ಸಾಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಡಾ ನಾ ಡಿ ಸೋಜ ಅಂತಿಮ ದರ್ಶನ
ಶೀತ, ಜ್ವರವಿದ್ದರೆ ಸಾರ್ವಜನಿಕ ಸ್ಥಳಕ್ಕೆ ಹೋಗಬಾರದು; ರಾಜ್ಯಸರ್ಕಾರದ ಮಾರ್ಗಸೂಚಿ
Trending
- DAKSHINA KANNADA5 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA3 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- LATEST NEWS6 days ago
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ
- DAKSHINA KANNADA4 days ago
ಚಲಿಸುತ್ತಿದ್ದ ಅಟೋ ಗೆ ಅಡ್ಡ ಬಂದ ನಾಯಿ; ಅ*ಪಘಾತ ತಪ್ಪಿಸುವ ಯತ್ನದಲ್ಲಿ ಯಕ್ಷಗಾನ ಕಲಾವಿದನಿಗೆ ಗಾಯ