LATEST NEWS
ಗಣರಾಜ್ಯೋತ್ಸವಕ್ಕೆ ವಿವಿಧ ಕ್ಷೇತ್ರದ ಸಾಧಕರಿಗೆ ಆಹ್ವಾನ
Published
5 hours agoon
By
NEWS DESK3ಮಂಗಳೂರು/ನವದೆಹಲಿ : ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಜ.26ರಂದು ನಡೆಯಲಿರುವ 76ನೇ ಗಣರಾಜ್ಯೋತ್ಸವ ಮೆರವಣಿಗೆಗೆ 10,000 ಅತಿಥಿಗಳನ್ನು ಆಹ್ವಾನಿಸಲಾಗುತ್ತದೆ.
ಗ್ರಾ.ಪಂ. ಅಧ್ಯಕ್ಷರಾಗಿ ಸಾಧನೆ ಮಾಡಿದವರು, ಪ್ಯಾರಾಲಿಂಪಿಕ್ಸ್ ಕೂಟದಲ್ಲಿ ಸಾಧನೆ ಮಾಡಿದವರು, ಕೈಮಗ್ಗ ಕುಶಲಕರ್ಮಿಗಳು, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣ ಕಾರ್ಯಕರ್ತರು ಸೇರಿದ್ದಂತೆ ಒಟ್ಟು 31 ವಿಭಾಗಗಳ ಸಾಧಕರು ಸೇರಿದ್ದಾರೆ.
ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಳಿ ದುರಂತ
ಸರಕಾರಿ ಕಾರ್ಯಕ್ರಮಗಳಲ್ಲಿ ಜನರ ಭಾಗವಹಿಸುವಿಕೆ ಹೆಚ್ಚಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಮಂಗಳೂರು/ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆ ಕರ್ನಾಟಕ ಸರ್ಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.
ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದ್ದು, ಜನವರಿ 20 ರಿಂದ ಇದು ಜಾರಿಯಾಗಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬಿಯರ್ ದರ ಪರಿಷ್ಕರಿಸಲು 2024 ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರೀಮಿಯಂ ಬಿಯರ್ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
ಎರಡು ಪಟ್ಟು ಹೆಚ್ಚಿದ ಬಿಯರ್ ಮಾರಾಟ :
ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಿಂದ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.
LATEST NEWS
ದಿಢೀರ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ ವರುಣ್ ಆರನ್
Published
4 minutes agoon
10/01/2025By
NEWS DESK2ನವದೆಹಲಿ: ವರುಣ್ ಆರನ್ ಶುಕ್ರವಾರ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್ನಲ್ಲಿ ಹೃದಯಸ್ಪರ್ಶಿ ಪೋಸ್ಟ್ನೊಂದಿಗೆ ಎಲ್ಲಾ ರೀತಿಯ ಕ್ರಿಕೆಟ್’ನಿಂದ ನಿವೃತ್ತಿ ಘೋಷಿಸಿದ್ದಾರೆ.
ಅಂದ್ಹಾಗೆ, ವರುಣ್, 2010-11ರ ವಿಜಯ್ ಹಜಾರೆ ಟ್ರೋಫಿ ಫೈನಲ್ನಲ್ಲಿ ಗುಜರಾತ್ ವಿರುದ್ಧ 153 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸುದ್ದಿಯಾಗಿದ್ದರು.
ದುರದೃಷ್ಟವಶಾತ್, ಭಾರತೀಯ ವೇಗದ ಬೌಲರ್ ವೃತ್ತಿಜೀವನವು ಪುನರಾವರ್ತಿತ ಗಾಯಗಳಿಂದ ಬಳಲುತ್ತಿದೆ. ಯಾಕಂದ್ರೆ, ವರುಣ್ ಆರನ್, ಒಟ್ಟು 18 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ದೇಶವನ್ನ ಪ್ರತಿನಿಧಿಸಿದ್ದು, ಕೇವಲ 29 ವಿಕೆಟ್ಗಳನ್ನು ಪಡೆದಿದ್ದಾರೆ. ಆದಾಗ್ಯೂ, ಆರೋನ್ ನಿಯಮಿತವಾಗಿ ಜಾರ್ಖಂಡ್ ಪರ ದೇಶೀಯ ಕ್ರಿಕೆಟ್ ಆಡುತ್ತಿದ್ದರು.
ಎಲ್ಲಾ ಮಾದರಿಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವರುಣ್ ಆರನ್ .!
ಗಾಯಗಳಿಂದಾಗಿ ವರುಣ್ ಆರೋನ್ ಕಳೆದ ಫೆಬ್ರವರಿಯಲ್ಲಿ ರೆಡ್-ಬಾಲ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು, ಮತ್ತು ಈಗ ಅವರು ಅಂತಿಮವಾಗಿ ಎಲ್ಲಾ ರೀತಿಯ ಆಟದಿಂದ ಹೊರಗುಳಿದಿದ್ದಾರೆ. ಜನವರಿ 10 ರಂದು ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿ 2024-25 ರಲ್ಲಿ ಗೋವಾ ವಿರುದ್ಧ ಜಾರ್ಖಂಡ್ ಪರ ವೇಗದ ಬೌಲರ್ ತಮ್ಮ ಕೊನೆಯ ಪಂದ್ಯವನ್ನ ಆಡಿದರು.
ತಮ್ಮ ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಮಯವನ್ನ ಕರೆದ ಆರೋನ್ ಇನ್ಸ್ಟಾಗ್ರಾಮ್’ನಲ್ಲಿ, “ಕಳೆದ 20 ವರ್ಷಗಳಿಂದ, ನಾನು ವೇಗವಾಗಿ ಬೌಲಿಂಗ್ ಮಾಡುವ ಅವಸರದಲ್ಲಿ ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಅಭಿವೃದ್ಧಿ ಹೊಂದಿದ್ದೇನೆ. ಇಂದು, ಅಪಾರ ಕೃತಜ್ಞತೆಯೊಂದಿಗೆ, ನಾನು ಪ್ರತಿನಿಧಿ ಕ್ರಿಕೆಟ್ನಿಂದ ಅಧಿಕೃತವಾಗಿ ನಿವೃತ್ತಿ ಘೋಷಿಸುತ್ತೇನೆ” ಎಂದು ಹೇಳಿದ್ದಾರೆ.
LATEST NEWS
ಕಾಲೇಜು ಕಾರ್ಯಕ್ರಮದಲ್ಲಿ ಅಶ್ವಿನ್ ಮಾತಿಗೆ ಅಸಮಾಧಾನ ವ್ಯಕ್ತಪಡಿಸಿದ ಫ್ಯಾನ್ಸ್
Published
17 minutes agoon
10/01/2025By
NEWS DESK3ಮಂಗಳೂರು/ಚೆನ್ನೈ : ಇತ್ತೀಚೆಗೆ ರವಿಚಂದ್ರನ್ ಆಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿ ಕ್ರಿಕೆಟ್ ಜಗತ್ತನ್ನು ಮತ್ತು ಅವರ ಅಭಿಮಾನಿಗಳನ್ನು ದಿಗ್ಬ್ರಮೆಗೊಳಿಸಿದ್ದರು. ಇದೀಗ ಹಿಂದಿ ಭಾಷೆ ವಿಚಾರದಲ್ಲಿ ಮತ್ತೆ ಹೆಡ್ ಲೈನ್ ಆಗಿದ್ದಾರೆ.
ಏನಿದು ವಿವಾದ
ಭಾರತದ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಚೆನ್ನೈನ ಖಾಸಗಿ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ್ದರು. ಪದವಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಶ್ವಿನ್ ಅವರನ್ನು ವೇದಿಕೆಗೆ ಕರೆಯಲಾಗಿತ್ತು. ವೇದಿಕೆಗೆ ಆಗಮಿಸಿದ್ದ ಅಶ್ವಿನ್, ಸಭಿಕರಲ್ಲಿ ಪ್ರಶ್ನೆಯನ್ನು ಕೇಳಿದರು.
ಇದನ್ನೂ ಓದಿ: ಕ್ರಿಕೆಟಿಗ ಮನೀಶ್ ಪಾಂಡೆ ದಾಂಪತ್ಯ ಜೀವನದಲ್ಲಿ ಬಿರುಕು?
‘ಇಲ್ಲಿ ಎಷ್ಟು ಜನ ಇಂಗ್ಲಿಷ್ ಮಾತನಾಡುತ್ತಾರೆ’ ಎಂದು ಮೊದಲ ಪ್ರಶ್ನೆ ಕೇಳಿದರು. ವೇದಿಕೆ ಮುಂಭಾಗದಲ್ಲಿದ್ದ ಸಭಿಕರು ಕೈ ಎತ್ತಿದ್ದಾರೆ. ಅದೇ ರೀತಿ ಎಷ್ಟು ಜನ ತಮಿಳು ಮಾತನಾಡುತ್ತಾರೆ ಎಂದು ಕೇಳಿದ್ದಾರೆ. ಆಗ ಇಡೀ ಸಭಾಂಗಣ ಪ್ರತಿಧ್ವನಿಸಿದೆ. ನಂತರ ‘ಎಷ್ಟು ಜನ ಹಿಂದಿ ಮಾತನಾಡುತ್ತಾರೆ’ ಎಂದಿದ್ದಾರೆ. ಆಗ ಸಭಾಂಗಣದಲ್ಲಿ ಮೌನ ಆವರಿಸಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅಶ್ವಿನ್ ‘ಹಿಂದಿ ರಾಷ್ಟ್ರಭಾಷೆಯಲ್ಲ; ಅಧಿಕೃತ ಭಾಷೆ’ ಎಂದಿದ್ದಾರೆ. ಅಶ್ವಿನ್ ಅವರ ಈ ಹೇಳಿಕೆಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ಸೇರಿದಂತೆ ಹಲವು ವಿರೋಧ ಪಕ್ಷಗಳು ಕೇಂದ್ರವು ರಾಜ್ಯಗಳ ಮೇಲೆ, ವಿಶೇಷವಾಗಿ ದಕ್ಷಿಣದಲ್ಲಿ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಅಶ್ವಿನ್ ನೀಡಿರುವ ಹೇಳಿಕೆ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.