sports
IPL 2025 : ಮೆಗಾ ಹರಾಜಿಗೆ 13 ವರ್ಷದ ಬಾಲಕ !?
Published
13 minutes agoon
ಮಂಗಳೂರು/ಮುಂಬೈ: 2025ರ ಮೆಗಾ ಹರಾಜಿಗೆ ದಿನಗಣನೆ ಶುರುವಾಗಿದ್ದು,ನವೆಂಬರ್ 24 ಮತ್ತು 25ರಂದು ನಡೆಯಲಿದೆ.ಈ ಬಾರಿ ನಡೆಯುವ ಮೆಗಾ ಹರಾಜಿನಲ್ಲಿ ಒಟ್ಟು 574 ಆಟಗಾರರು ಭಾಗಿಯಾಗಲಿದ್ದು, 366 ಭಾರತೀಯರು ಮತ್ತು 208 ವಿದೇಶಿ ಆಟಗಾರರು ಸೇರಿದ್ದಾರೆ. ಈ ಬಾರಿಯ ಹರಾಜಿನಲ್ಲಿ ಅತ್ಯಂತ ಹಿರಿಯ ಆಟಗಾರರು ಹಾಗೂ ಅತ್ಯಂತ ಕಿರಿಯ ಆಟಗಾರರು ಪಾಲ್ಗೋಳ್ಳಲಿದ್ದಾರೆ.
2025ರ ಮೆಗಾ ಹರಾಜಿನಲ್ಲಿ ಬಾಗಿಯಾಗುವ ಅತ್ಯಂತ ಹಿರಿಯ ಆಟಗಾರ ಜೇಮ್ಸ್ ಆಂಡರ್ಸನ್ ಭಾಗಿಯಾಗಲಿದ್ದಾರೆ ಆದರೆ, ಅತ್ಯಂತ ಕಿರಿಯ ಆಟಗಾರ ನಮ್ಮ ಭಾರತದವರೇ ಅನ್ನೋದು ವಿಶೇಷ. ಅವರೇ 13 ವರ್ಷದ ವೈಭವ್ ಸೂರ್ಯವಂಶಿ.
ಸೌದಿ ಅರೇಬಿಯಾದಲ್ಲಿ ಹರಾಜು ಪ್ರಕ್ರೀಯೆ
ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿರುವ ಹರಾಜು ಪ್ರಕ್ರೀಯೆಯಲ್ಲಿ ಈ ಎಲ್ಲಾ ಆಟಗಾರರು ಪಾಲ್ಗೋಳ್ಳಲಿದ್ದಾರೆ. ಬಿಸಿಸಿಐ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಬಾರಿ 574 ಆಟಗಾರರ ಪೈಕಿ 366 ಭಾರತೀಯರು ಮತ್ತು 208 ವಿದೇಶಿಯರು 3 ಜೊತೆಗಾರ ದೇಶಗಳ ಆಟಗಾರರು ಸೇರಿದ್ದಾರೆ. ಈ ಮೆಗಾ ಹರಾಜಿನಲ್ಲಿ 318 ಭಾರತೀಯ ಅನ್ ಕ್ಯಾಪ್ಡ್ ಮತ್ತು 12 ಅನ್ ಕ್ಯಾಪ್ಡ್ ವಿದೇಶಿ ಆಟಗಾರರು ಭಾಗವಹಿಸಲಿದ್ದಾರೆ.
ಅತ್ಯಂತ ಕಿರಿಯ ಆಟಗಾರ ವೈಭವ್ ಸೂರ್ಯವಂಶಿ
ಈ ಬಾರಿಯ ಹರಾಜು ಪ್ರಕ್ರೀಯೆಯಲ್ಲಿ, 42 ವರ್ಷದ ಜೇಮ್ಸ್ ಆಂಡರ್ಸನ್ ಅತ್ಯಂತ ಹಿರಿಯ ಆಟಗಾರ ಖ್ಯಾತಿಗೆ ಪಾತ್ರರಾಗಿದ್ದರೆ, ಅತ್ಯಂತ ಕಿರಿಯ ಆಟಗಾರ ಬಿಹಾರದ ಸಮಸ್ತಿಪುರದ ವೈಭವ್ ಸೂರ್ಯವಂಶಿ. ಇನ್ನೂ 13 ವರ್ಷದ ಹುಡುಗ, ಚಿಕ್ಕ ವಯಸ್ಸಿನಲ್ಲಿಯೇ ರಣಜೀ ಟ್ರೋಫಿ,ಹೇಮಂತ್ ಟ್ರೋಫಿ,ಕೂಚ್ ಬೆಹಾರ್ ಟ್ರೋಫಿ ಹಾಗೂ ವಿನೂ ಮಂಕಡ್ ಟ್ರೋಫಿಗಳನ್ನು ಆಡಿದ್ದಾರೆ.
ಇತ್ತೀಚೆಗೆ ಭಾರತ ತಂಡದ ಅಂಡರ್-19 ತಂಡಕ್ಕೂ ಆಯ್ಕೆಯಾಗಿದ್ದ ಸೂರ್ಯವಂಶಿ, ಬಿಹಾರ ಪರ ರಣಜಿಗೆ ಪದಾರ್ಪಣೆ ಮಾಡಿ ಉತ್ತಮ ಪ್ರದರ್ಶನ ನೀಡಿದ್ದರು. ಆ ನಂತರ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತದ ಎ ತಂಡದಲ್ಲಿ ಆಯ್ಕೆ ಮಾಡಲಾಯಿತು, ಅಲ್ಲಿಯೂ ಉತ್ತಮ ಪ್ರದರ್ಶನ ನೀಡಿದ ಸೂರ್ಯವಂಶಿ, ಕೇವಲ 58 ಎಸೆತಗಳಲ್ಲಿ ಶತಕ ದಾಖಲಿಸಿದ್ದರು. ಅವರ ಈ ಇನ್ನಿಂಗ್ಸ್ ನಲ್ಲಿ 14 ಬೌಂಡರಿ ಮತ್ತು 4 ಸಿಕ್ಸ್ ರಗಳು ಸೇರಿದ್ದವು. ಸೂರ್ಯವಂಶಿ ತಮ್ಮ ವೃತ್ತಿಜೀವನದಲ್ಲಿ ಇದೂವರೆಗೆ 5 ಪ್ರಥಮದರ್ಜೆ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಆಡಿರುವ 10 ಇನ್ನಿಂಗ್ಸ್ ಗಳಲ್ಲಿ 100 ರನ್ ಗಳಿಸಿದ್ದಾರೆ.
ಬಿಸಿಸಿಐ ಪ್ರಕಟಿಸಿರುವ ಅಂತಿಮ ಪಟ್ಟಿಯಲ್ಲಿ ವೈಭವ್ ಸೂರ್ಯವಂಶಿ 491ನೇ ಸ್ಥಾನದಲ್ಲಿದ್ದು ಅನ್ ಕ್ಯಾಪ್ಡ್ ಆಟಗಾರನಾಗಿ ಕಾಣಿಸಿಕೊಳ್ಳಲಿದ್ದಾರೆ.
ಮಂಗಳೂರು/ಜೋಹಾನ್ಸ್ ಬರ್ಗ್: ದಿ ವಾಂಡರರ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರೀಕಾ ನಡುವಿನ ಟಿ-20 ಸರಣಿಯ 4ನೇ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡವು 135 ರನ್ ಗಳ ಭರ್ಜರಿ ಜಯ ದಾಖಲಿಸಿದೆ.ಈ ಮೂಲಕ 3-1ರ ಅಂತರದಿಂದ ಭಾರತ ಸರಣಿಯನ್ನು ವಶಪಡಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಭಾರತ ತಂಡ ಸಂಜು ಸ್ಯಾಮ್ಸನ್ 56 ಎಸೆತಗಳಲ್ಲಿ 109 ರನ್ ಸಿಡಿಸಿದರು. ಇದರಲ್ಲಿ 9 ಸಿಕ್ಸರ್,6 ಬೌಂಡರಿ ಸೇರಿದೆ. ತಿಲಕ್ ವರ್ಮಾ 47 ಎಸೆತಗಳಲ್ಲಿ 120 ರನ್ ಗಳ ಶತಕ ಆಟ ಆಡಿದರು.ಇದರಲ್ಲಿ 10 ಸಿಕ್ಸರ್,9 ಬೌಂಡರಿ ಇದ್ದವು. ಇವರಿಬ್ಬರ ಶತಕದಾಟದ ನೆರವಿನಿಂದ 20 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 283 ರನ್ ಗಳ ಬೃಹತ್ ಮೊತ್ತ ಪ್ರೇರಿಸಿತು. ಈ ಮೂಲಕ ದಕ್ಷಿಣ ಆಫ್ರೀಕಾದ ಬೌಲರ್ ಗಳು ದುಬಾರಿಯಾದರು.
ನಂತರ ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರೀಕಾ ತಂಡದ ಬ್ಯಾಟರ್ ಗಳನ್ನು,ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು. ಭಾರತ ತಂಡ ದಕ್ಷಿಣ ಆಫ್ರೀಕಾವನ್ನು 148 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 135 ರನ್ ಗಳ ಭರ್ಜರಿ ಜಯ ತಂದುಕೊಟ್ಟರು. ಭಾರತದ ಪರ 3 ಓವರ್ ಬೌಲಿಂಗ್ ಮಾಡಿದ ವೇಗಿ ಅರ್ಷದೀಪ್ ಸಿಂಗ್ 3 ವಿಕೆಟ್ ಪಡೆದು 20 ರನ್ ಬಿಟ್ಟುಕೊಟ್ಟರು,4 ಓವರ್ ಬೌಲಿಂಗ್ ಮಾಡಿದ ಸ್ಪೀನ್ನರ್ ವರುಣ್ ಚಕ್ರವರ್ತಿ 2 ವಿಕೆಟ್ ಪಡೆದು 42 ರನ್ ಕೊಟ್ಟರು ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ 2 ಓವರ್ ಬೌಲಿಂಗ್ ಮಾಡಿ,ಕೇವಲ 6 ರನ್ ಕೊಟ್ಟು 2 ವಿಕೆಟ್ ಪಡೆದು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.
ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು
ಅಂತರಾಷ್ಟ್ರೀಯ ಟಿ-20 ಮಾದರಿಯ ಈ ಪಂದ್ಯದಲ್ಲಿ ಭಾರತ 283 ರನ್ ಕಲೆ ಹಾಕುವ ಮೂಲಕ ವಿದೇಶಿ ನೆಲದಲ್ಲಿ ಅತಿ ಹೆಚ್ಚು ಮೊತ್ತ ಪ್ರೇರಿಸುವ ಮುಲಕ ದಾಖಲೆ ಬರೆದಿದೆ.ಸಂಜು ಸ್ಯಾಮ್ಸನ್ ಒಂದು ವರ್ಷದಲ್ಲಿ ಮೂರು ಶತಕ ಸಿಡಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.ಒಂದೇ ಸರಣಿಯಲ್ಲಿ 2 ಶತಕ ಸಿಡಿಸಿದ ದಾಖಲೆಗೂ ಸಂಜು ಭಾಜನರಾದರು.ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಭರ್ಜರಿ ಶತಕ ಬಾರಿಸುವ ಮೂಲಕ ಭರ್ಜರಿ ಜೊತೆಯಾಟವಾಡಿ ಒಂದೇ ಇನ್ನಿಂಗ್ಸ್ ನಲ್ಲಿ ಇಬ್ಬರು ಬ್ಯಾಟ್ಸ್ ಮ್ಯಾನ್ ಗಳು ಶತಕ ಸಿಡಿಸಿದ್ದು ಇದೇ ಮೊದಲು.ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಶತಕ ಸಿಡಿಸಿದಲ್ಲದೆ, 210 ರನ್ ಗಳ ದಾಖಲೆಯ ಜೊತೆಯಾಟವನ್ನು ಆಡಿದರು.ಈಗಾಗೀ ಅತೀ ದೊಡ್ಡ ಜೊತೆಯಾಟವಾಡಿದ ದಾಖಲೆ ಈ ಇಬ್ಬರು ಆಟಗಾರರ ಪಾಲಾಯಿತು.
sports
ಎರಡನೇ ಮಗುವಿಗೆ ತಂದೆಯಾದ ಟೀಂ ಇಂಡಿಯಾ ನಾಯಕ; ಜೂನಿಯರ್ ಹಿಟ್ ಮ್ಯಾನ್ ಆಗಮನ
Published
6 hours agoon
16/11/2024By
NEWS DESK4ಮಂಗಳೂರು/ಮುಂಬಯಿ : ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ರೋಹಿತ್ ಪತ್ನಿ ರಿತಿಕಾ ಸಜ್ದೇ ಶುಕ್ರವಾರ(ನ.15) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಮಾಹಿತಿ ತಿಳಿಯುತ್ತಿದ್ದಂತೆ ರೋಹಿತ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಷ್ ಗಳನ್ನು ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ಕ್ರಿಕೆಟಿಗನಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ರೋಹಿತ್ ಶರ್ಮಾ ತಮ್ಮ ಮ್ಯಾನೇಜರ್ ಆಗಿದ್ದ ರಿತಿಕಾ ಅವರನ್ನು 2015 ರ ಡಿಸೆಂಬರ್ 13ರಂದು ವರಿಸಿದ್ದರು. ರೋಹಿತ್ ಮತ್ತು ರಿತಿಕಾ ದಂಪತಿ 2018ರಲ್ಲಿ ಮಗಳು ಸಮೈರಾಳನ್ನು ಸ್ವಾಗತಿಸಿದ್ದರು.
ಇದನ್ನೂ ಓದಿ : ದಾರಿ ತಪ್ಪಿಸಿದ ಗೂಗಲ್ ಮ್ಯಾಪ್ : ರಂಗ ಕಲಾವಿದರಿಬ್ಬರ ದಾ*ರುಣ ಸಾವು..!
2ನೇ ಮಗುವಿನ ನಿರೀಕ್ಷೆಯಲ್ಲಿದ್ದ ರೋಹಿತ್ ಆಸ್ಟ್ರೇಲಿಯಾ ವಿರುದ್ದದ 2ನೇ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎನ್ನಲಾಗುತಿತ್ತು. ಒಂದು ವೇಳೆ ರೋಹಿತ್ ಮೊದಲ ಪಂದ್ಯದಲ್ಲಿ ಭಾಗಿಯಾಗದಿದ್ದಲ್ಲಿ ಭಾರತ ತಂಡವನ್ನು ಜಸ್ಪ್ರೀತ್ ಬೂಮ್ರಾ ಮುನ್ನಡೆಸಲ್ಲಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ತಂಡದ ನಡುವಿನ ಮೊದಲ ಟೆಸ್ಟ್ ಪಂದ್ಯವು ನವೆಂಬರ್ 22 ರಿಂದ ಶುರುವಾಗಲಿದೆ.
sports
“ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್ ಕಾರಣ” : ಕೆ.ಎಲ್.ರಾಹುಲ್
Published
1 day agoon
15/11/2024ಮಂಗಳೂರು: “ಕುಡ್ಲದ ಜನಕ್ಲೆನ ಮೋಕೆ, ಅಭಿಮಾನ ಎನ್ನ ಈ ಸಾಧನೆಗ್ ಕಾರಣ” (ಮಂಗಳೂರಿನ ಜನರ ಪ್ರೀತಿ, ಅಭಿಮಾನ ನನ್ನ ಈ ಸಾಧನೆಗೆ ಕಾರಣ) ಎಂದು ಭಾರತ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್. ರಾಹುಲ್ ತುಳು ಪ್ರೇಮವನ್ನು ಮೆರೆದಿದ್ದಾರೆ. ತುಳು ಭಾಷೆಯಲ್ಲಿ ಮಾತನಾಡುವ ಮೂಲಕ ಮಂಗಳೂರಿನಲ್ಲಿ ತಾನು ಕಳೆದ ದಿನಗಳನ್ನು ಸಂದರ್ಶನವೊಂದರಲ್ಲಿ ಮೆಲುಕು ಹಾಕಿದ್ದಾರೆ.
“ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಬೇಕು ಎಂಬ ಕನಸು ಮಂಗಳೂರಿನ ಎನ್‌ಐಟಿಕೆ ಮೈದಾನದಲ್ಲಿ ಕ್ರಿಕೆಟ್ ಆಡುವಾಗಲೇ ಇತ್ತು. ಇದು ಸಾಕಾರಗೊಳ್ಳಬಹುದು ಎಂಬ ಆತ್ಮವಿಶ್ವಾಸ ಇರಲಿಲ್ಲ. ಆದರೆ ಮಂಗಳೂರಿನ ಜನರ ಪ್ರೀತಿ, ವಿಶ್ವಾಸ ದಿಂದಲೇ ಇದು ಸಾಧ್ಯವಾಯಿತು. ನಾನು ಬಾಲ್ಯದಿಂದ ಈವರೆಗೆ ಇಷ್ಟೊಂದು ಸಾಧನೆಗೈದಿದ್ದೇನಾ ಎಂದು ನನಗೆ ಅನಿಸುವುದುಂಟು” ಎಂದು ಹೆಮ್ಮೆಯಿಂದ ತುಳು ಭಾಷೆಯಲ್ಲೇ ಹೇಳಿದ್ದಾರೆ.
ಕೆ.ಎಲ್. ರಾಹುಲ್ ಬಾಲ್ಯವನ್ನು ಮಂಗಳೂರಿನಲ್ಲಿ ಕಳೆದಿದ್ದು, ನಗರದ ನೆಹರೂ ಮೈದಾನದಲ್ಲಿ ಕ್ರಿಕೆಟ್ ಅಭ್ಯಾಸ ಮಾಡುತ್ತಿದ್ದರು. ರಾಹುಲ್ ತಂದೆ ಲೋಕೇಶ್ ಎನ್‌ಐಟಿಕೆಯಲ್ಲಿ ಪ್ರೊಫೆಸರ್ ಮತ್ತು ತಾಯಿ ರಾಜೇಶ್ವರಿ ಮಂಗಳೂರು ವಿ.ವಿ. ಕಾಲೇಜಿನಲ್ಲಿ ಪ್ರಾಧ್ಯಾಪಕಿಯಾಗಿದ್ದರು. ಇದೇ ಕಾರಣಕ್ಕೆ ರಾಹುಲ್‌ಗೆ ಮಂಗಳೂರಿನ ಬಗ್ಗೆ ವಿಶೇಷ ಗೌರವ. ಅನೇಕ ಸಂದರ್ಭಗಳಲ್ಲಿ ಮಂಗಳೂರಿನ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ್ದಾರೆ.
ರಾಹುಲ್ ಲಕ್ನೋ ಸೂಪರ್ ಜೈಂಟ್ಸ್ ತಂಡದಿಂದ ಹೊರಬಿದ್ದ ಬಳಿಕ ಈಗ 2025ರ ಐಪಿಎಲ್‌ನಲ್ಲಿ ಯಾವ ತಂಡದ ಪರ ಆಡಲಿದ್ದಾರೆ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡುತ್ತಿದೆ. ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ತಂಡಕ್ಕೆ ರಾಹುಲ್ ಸೇರ್ಪಡೆ ಕುರಿತು ಚರ್ಚೆ ನಡೆಯುತ್ತಿವೆ. ನ.22ರಿಂದ ಆರಂಭವಾಗಲಿರುವ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ರಾಹುಲ್ ಆಯ್ಕೆಯಾಗಿದ್ದಾರೆ.
LATEST NEWS
‘ಅಮರನ್’ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಥಿಯೇಟರ್ ಮೇಲೆ ಪೆಟ್ರೋಲ್ ಬಾಂ*ಬ್ ಎಸೆತ
ಸಂಜು ಸ್ಯಾಮ್ಸನ್-ತಿಲಕ್ ವರ್ಮಾ ಜೊತೆಯಾಟ: ಭಾರತಕ್ಕೆ ಜಯ
ಕ್ರಿಕೆಟರ್ ಆಗಬೇಕಿದ್ದ ಆದಿತ್ಯ ಹೀರೋ ಆಗಿದ್ದರ ಹಿಂದಿನ ಕಥೆ ಗೊತ್ತಾ ?
ಭೀ*ಕರ ರಸ್ತೆ ಅ*ಪಘಾತ: ನವವಿವಾಹಿತರು ಸೇರಿ ಏಳು ಮಂದಿ ಸಾ*ವು
ಮಗಳ ದೇ*ಹವನ್ನೇ ತುಂ*ಡರಿಸಿ, ಲಿ*ವರ್ ತಿಂದ ಕ್ರೂ*ರಿ ತಾಯಿ ..!
ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ವಾಹನ ಚಾಲನೆ ಮಾಡಿದ ಚಾಲಕ; ಕಾರ್ಮಿಕ ಸಾ*ವು
Trending
- LATEST NEWS3 days ago
ಬಾದಾಮಿ-ಹರ್ಬಲ್ ಟೀಯಂತಹ ಸಿಂಪಲ್ ಆಹಾರದಿಂದಲೇ 32 ಕೆಜಿ ಸ್ಲಿಮ್ ಆದ ವ್ಯಕ್ತಿ; 90 ದಿನಗಳಲ್ಲೇ ರಿಸಲ್ಟ್!
- FILM3 days ago
ಅಭಿಷೇಕ್-ಅವಿವಾ ಪುತ್ರನಿಗೆ ಅಂಬರೀಷ್ ಹೆಸರು
- FILM4 days ago
ಅಂಬಿ ಮನೆಗೆ ಜ್ಯೂನಿಯರ್ ಅಭಿ ಎಂಟ್ರಿ; ಗಂಡು ಮಗುವಿಗೆ ಜನ್ಮವಿತ್ತ ಅವಿವಾ
- DAKSHINA KANNADA3 days ago
ತೃತೀಯ ಲಿಂಗಿ ತಾಯಿಯ ಹೋರಾಟ ; ಅಪ್ಪನ ಹೆಸರಿಲ್ಲದೆ ಪಾಸ್ಪೋರ್ಟ್ ಪಡೆದ ಮಗ .. !