ಬಡ್ತಿ ಸಿಗದ ಅಸಮಾಧಾನ : ರಾಜೀನಾಮೆ ಸಲ್ಲಿಸಿ ಮನೆಗೆ ತೆರಳಿದ ಐಪಿಎಸ್ ಅಧಿಕಾರಿ..!
ಬೆಂಗಳೂರು : ಬಡ್ತಿ ನೀಡಲಿಲ್ಲವೆಂದು ಅಸಮಾಧಾನಗೊಂಡ ಹಿರಿಯ ಐಪಿಎಸ್ ಅಧಿಕಾರಿ ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಅರಣ್ಯ ಇಲಾಖೆಯ ಎಡಿಜಿಪಿ ರವೀಂದ್ರನಾಥ್ ಅವರು, ತಮಗಿಂತ ಕಿರಿಯ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬುಧವಾರ ಬಡ್ತಿ ನೀಡಿದ ಹಿನ್ನೆಲೆಯಲ್ಲಿ ತೀವ್ರ ನೊಂದ ಅವರು ತಡರಾತ್ರಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ರಾಜೀನಾಮೆ ನೀಡಲು ತೆರಳಿದ್ದರು.
ಆದರೆ, ಡಿಜಿ ಅವರಿಗೆ ಭೇಟಿಯಾಗಲು ಅವಕಾಶ ದೊರಕದೇ ಇರುವುದರಿಂದ ಕಂಟ್ರೋಲ್ ರೂಂಗೆ ತೆರಳಿ ಅವರು ತ್ಯಾಗ ಪತ್ರ ಸಲ್ಲಿಸಿದ್ದಾರೆ.
ಅಮರ್ ಕುಮಾರ್ ಪಾಂಡೆ ಅವರನ್ನು ಕಾನೂನು ಸುವ್ಯವಸ್ಥೆ ಎಡಿಜಿಪಿ ಹುದ್ದೆಯಿಂದ ಡಿಜಿಪಿ ಪೊಲೀಸ್ ತರಬೇತಿ ವಿಭಾಗಕ್ಕೂ, ಟಿ.ಸುನೀಲ್ ಕುಮಾರ್ ಅವರನ್ನು ಎಸಿಬಿ ಎಡಿಜಿಪಿಯಿಂದ ಸಿಐಡಿ ವಿಶೇಷ ಹಾಗೂ ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿಯೂ, ಸಿ.ಎಚ್.ಪ್ರತಾಪ್ ರೆಡ್ಡಿ ಅವರನ್ನು ಎಡಿಜಿಪಿ ಪೊಲೀಸ್ ಸಂಪರ್ಕ ಸಂವಹನ ಹಾಗೂ ಅಧುನೀಕರಣ ಜೊತೆಗೆ ಕಾನೂನು ಸುವ್ಯವಸ್ಥೆಗೆ ವರ್ಗಾಯಿಸಿ ಸರ್ಕಾರ ಬುಧವಾರ ರಾಜ್ಯ ಸರ್ಕಾರ ಆದೇಶಿಸಿ ಜೊತೆಗೆ ಈ ಮೂವರಿಗೂ ಡಿಜಿಪಿ ರಾಂಕ್ಗೆ ಬಡ್ತಿ ನೀಡಿತ್ತು.
ಈ ಪಟ್ಟಿಯಲ್ಲಿ ತಮ್ಮ ಹೆಸರು ನಮೂದಿಲ್ಲದರಿಂದ ರವೀಂದ್ರನಾಥ್ ಅವರು ರಾಜೀನಾಮೆ ನೀಡಿದ್ದಾರೆ.