Connect with us

DAKSHINA KANNADA

ಹೋರಾಟಗಾರರೊಂದಿಗೆ ಕೂತು ಪ್ರಚಾರ ಪಡೆದು ಹೋದ ಯು.ಟಿ ಖಾದರ್ ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೆ? ಡಾ.ಭರತ್ ಶೆಟ್ಟಿ ವೈ ತಿರುಗೇಟು

Published

on

ಮಂಗಳೂರು: ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಹೋಗಿರುವ ಶಾಸಕ ಯು ಟಿ ಖಾದರ್ ಅವರಿಗೆ ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲ ಆಗಿದ್ದಾರೆ.

ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಡಾಕ್ಟರ್ ಭರತ್ ಶೆಟ್ಟಿ ವೈ ಅವರು ಯು.ಟಿ ಖಾದರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ ಖಾದರ್ ಹೇಳಿಕೊಂಡು ಬಂದಿದ್ದಾರೆ ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ.

ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ .

ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ನಿಂದ ಇಂತಹ ಆರೋಪಗಳು ನಿರೀಕ್ಷಿತ ಎಂದು ಶಾಸಕ ಭರತ್ ಶೆಟ್ಟಿ ಪ್ರತಿಕ್ರಿಯೆ ನೀಡಿದ್ದಾರೆ.

ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್ ನಲ್ಲಿ ಹೆಜಮಾಡಿ ಟೋಲ್ ಗೇಟ್, ಜೂನ್ ನಲ್ಲಿ ಸುರತ್ಕಲ್ ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ ಸರಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ ಎಂದು ಬಹಿರಂಗ ಪಡಿಸಿರುವ ಡಾ.ಭರತ್ ಶೆಟ್ಟಿ ವೈ ಅವರು ,
ಅಂದೇ ಹಿಂಪಡೆಯಲು ಇದ್ದ ಅವಕಾಶ ನ್ನು ಕೈ ಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದರು.

ಆಗ 60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ?

ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲಿ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್ ಗಳ ವಿಲೀನಕ್ಕೆ ಮುಂದಾಗಿರುವುದನ್ನು ಶಾಸಕ ಯು ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ.

ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ಅನ್ನ ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ಡಾ. ಭರತ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

DAKSHINA KANNADA

ULLALA : ಮಲಗಿದ್ದಲ್ಲೇ ಹೃದಯಾಘಾ*ತಕ್ಕೆ ಬ*ಲಿಯಾದ ಯುವಕ

Published

on

ಉಳ್ಳಾಲ : ಇತ್ತೀಚೆಗಿನ ದಿನಗಳಲ್ಲಿ ಹೃದಯಾಘಾ*ತ ಪ್ರಕರಣಗಳು ಹೆಚ್ಚುತ್ತಿವೆ. ಹೃದಯಾಘಾ*ತ ಸಂಭವಿಸಲು ವಯಸ್ಸಿನ ಇತಿ ಮಿತಿ ಎಂಬುದಿಲ್ಲದಂತಾಗಿದೆ. ಇದೀಗ ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೇ ಹೃದಯಾಘಾ*ತಕ್ಕೀಡಾಗಿ ಸಾ*ವನ್ನಪ್ಪಿರುವ ಘಟನೆ ಮಂಗಳವಾರ ಸಂಭವಿಸಿದೆ.


ಕನೀರುತೋಟ ನಿವಾಸಿ ಜಿತೇಶ್ (28) ಸಾ*ವನ್ನಪ್ಪಿದವರು. ಜಿತೇಶ್ ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದರು. ಯಾವತ್ತೂ ಬೇಗ ಏಳುತ್ತಿದ್ದ ಜಿತೇಶ್ ಇನ್ನೂ ಯಾಕೆ ಎದ್ದಿಲ್ಲ ಎಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ : ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

ಮಂಗಳೂರಿನ ಕೆಟಿಎಂ ಷೋರೂಮಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿತೇಶ್, ಕೊರೊನಾ ಸಂದರ್ಭ ಪಂಡಿತ್ ಹೌಸ್ ನಿವಾಸಿ ಯುವತಿಯನ್ನು ವಿವಾಹವಾಗಿದ್ದರು. ಮೃ*ತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Continue Reading

DAKSHINA KANNADA

ಕಬಕ-ಮುರ ರೈಲ್ವೇ ಹಳಿಯಲ್ಲಿ ವ್ಯಕ್ತಿಯ ಶ*ವ ಪತ್ತೆ

Published

on

ಪುತ್ತೂರು: ಇಲ್ಲಿನ ಮುರ ಎಂಬಲ್ಲಿ ಕಬಕ-ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿಯಲ್ಲಿ ವ್ಯಕ್ತಿಯೊಬ್ಬರ ಮೃ*ತದೇಹ ಪತ್ತೆಯಾಗಿರುವ ಘಟನೆ ಎ.23ರಂದು ಬೆಳಗಿನ ಜಾವ ಬೆಳಕಿಗೆ ಬಂದಿದೆ.

death

ಮೃತಪಟ್ಟ ವ್ಯಕ್ತಿಯ ದೇಹ ಹಳಿಯಿಂದ ಸ್ವಲ್ಪ ದೂರಕ್ಕೆ ಎಸೆಯಲ್ಪಟ್ಟಿದ್ದು ಕಾಲು ತುಂಡಾದ ಸ್ಥಿತಿಯಲ್ಲಿ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಇದು ಆತ್ಮಹ*ತ್ಯೆಯೋ? ಅಥವಾ ರೈಲು ಡಿಕ್ಕಿಯಾಗಿ ಸಂಭವಿಸಿದ ಘಟನೆಯೋ ಅನ್ನುವುದು ತನಿಖೆ ವೇಳೆ ಬೆಳಕಿಗೆ ಬರಲಿದೆ.

ಮುಂದೆ ಓದಿ..; ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

death

Continue Reading

BELTHANGADY

ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ

Published

on

ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮ‌ಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.

bison

ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!

ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.

Continue Reading

LATEST NEWS

Trending