Home ಪ್ರಮುಖ ಸುದ್ದಿ ಈ ಬಾರಿಯಾದ್ರೂ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರ ವರ್ಗಾವಣೆಯಾಗುತ್ತಾ.?

ಈ ಬಾರಿಯಾದ್ರೂ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರ ವರ್ಗಾವಣೆಯಾಗುತ್ತಾ.?

ಈ ಬಾರಿಯಾದ್ರೂ ವೆನ್ಲಾಕ್ ಜಿಲ್ಲಾಸ್ಪತ್ರೆಯ ಅಧೀಕ್ಷಕರ ವರ್ಗಾವಣೆಯಾಗುತ್ತಾ.?

ಮಂಗಳೂರು: ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ವಿಚಾರದಲ್ಲಿ ಅವ್ಯವಸ್ಥೆ ನಡೆಯುತ್ತಿದೆ ಶಂಕಿತರು ಮತ್ತು ಪೀಡಿತರಿಗೆ ನೀಡುವ ಚಿಕಿತ್ಸೆ ಸರಿ ಇಲ್ಲ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ವಿಚಾರ ವೈರಲ್ ಆಗುತ್ತಿದ್ದಂತೆ ಸರ್ಕಾರಿ ಜಿಲ್ಲಾಸ್ಪತ್ರೆ ವೆನ್ಲಾಕ್ ನ ಅಧೀಕ್ಷಕಿ ಡಾ.ಹೆಚ್.ಆರ್ ರಾಜೇಶ್ವರಿ ದೇವಿ ಅವರ ಬದಲಾವಣೆಗೆ ಸರ್ಕಾರಿ ಮಟ್ಟದಲ್ಲಿ ಚಿಂತನೆ ನಡೆಯುತ್ತಿದ್ದೆ ಎಂದು ಬಲ್ಲ ಮೂಲಗಳು ಮಾಹಿತಿ ಹೊರಹಾಕಿದ್ದವು.

ವೆನ್ಲಾಕ್ ಕರ್ಮಕಾಂಡದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಂಸದ ನಳಿನ್ ಕುಮಾರ್ ಕಟೀಲ್ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳೊಂದಿಗೆ ಆಸ್ಪತ್ರೆಗೆ ದೌಡಾಯಿಸಿದ್ದರು.

ಅಲ್ಲದೇ ಸಂಸದ ಕಟೀಲ್ ಅಧೀಕ್ಷಕರ ವಿರುದ್ಧ ಗರಂ ಆಗಿದ್ದರು. ಇದರಿಂದ ಅಸಮಾಧಾನಗೊಂಡ ಅಧೀಕ್ಷಕರು ಬಳಿಕ ವೆನ್ಲಾಕ್ ವೈದ್ಯರ ಸಭೆ ಕರೆದು ಈ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ ಈಗಿರುವ ಅಧೀಕ್ಷಕರ ಸ್ಥಾನಕ್ಕೆ ಪ್ರಸ್ತುತ ವೆನ್ಲಾಕ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಶರತ್ ಮತ್ತು ಡಾ.ಶಿವಪ್ರಕಾಶ್ ಡಿ.ಎಸ್ ಅವರ ಹೆಸರುಗಳು ಕೇಳಿ ಬರುತ್ತಿದೆ.

ಸದ್ಯ ವೆನ್ಲಾಕ್ ಅಧೀಕ್ಷಕಿಯಾಗಿರುವ ಡಾ.ರಾಜೇಶ್ವರಿ ಸುಮಾರು 6 ವರ್ಷಗಳಿಂದ ವೆನ್ಲಾಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಹಿಂದೆಯೂ ವೆನ್ಲಾಕ್ ಅವ್ಯವಸ್ಥೆ ಬಗ್ಗೆ ದೂರುಗಳು ಕೇಳಿ ಬಂದಾಗ ರಾಜೇಶ್ವರಿ ಅವರ ವರ್ಗಾವಣೆ ಬಗ್ಗೆ ತೆರೆಮರೆಯಲ್ಲಿ ಪ್ರಯತ್ನ ನಡೆದು ಕೊನೆಕ್ಷಣದಲ್ಲಿ ಏನೂ ನಡೆದೇ ಇಲ್ಲವೆಂಬಂತೆ ಸೈಲೆಂಟ್ ಆಗಿ ಬಿಡುತ್ತಿತ್ತು.

ಸದ್ಯ ಕೊರೊನಾ ವಿಚಾರದಲ್ಲಿ ಇಷ್ಟೊಂದು ರಾದ್ದಾಂತ ನಡೆದ ಮೇಲೂ ಸರ್ಕಾರ ಅದ್ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತೆ ಎಂಬುದನ್ನು ಕಾದು ನೋಡಬೇಕಿದೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...