Friday, August 12, 2022

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.


ಕಾರವಾರ ಶಹರ ಪೊಲೀಸ್ ಠಾಣೆ ವ್ಯಾಪ್ತಿಯ ಬಸ್ ಸ್ಟಾಂಡ್ ಹತ್ತಿರ ಸುಮಾರು ಓಂ ಪ್ರಕಾಶ್ (60) ಎನ್ನುವ ವ್ಯಕ್ತಿ ವಾಸ ಮಾಡುತ್ತಿದ್ದರು.

ಮಾನಸಿಕ ಅಸ್ವಸ್ಥರಾಗಿದ್ದ ಪ್ರಕಾಶ್ ಅವರು ಕಳೆದ ಹಲವು ದಿನಗಳಿಂದ ಊಟ ಸಿಗದೇ ಅಲೆದಾಡುತ್ತಿದ್ದರು. ಅವರಿಗೆ ಯಾರೂ ಕೂಡ ಅನ್ನ ನೀರು ಕೊಡುತ್ತಿರಲಿಲ್ಲ.

ಹಸಿವು ಆದಂತಹ ಸಂದರ್ಭದಲ್ಲಿ ದನದ ಸೆಗಣಿ ತಿಂದು ಬದುಕುತಿದ್ದರು. ಇದನ್ನು ಮನಗಂಡ ಕಾರವಾರದ ಪೊಲೀಸ್ ಅಧಿಕಾರಿಗಳು ಈಶ್ವರ ಮಲ್ಪೆವರೆಗೆ ಕರೆ ಮಾಡಿ ವಿಷಯ ತಿಳಿಸಿದ್ದು, ಈಶ್ವರ್ ಮಲ್ಪೆಯವರು ಆ್ಯಂಬುಲೆನ್ಸ್ ಮೂಲಕ ತೆರಳಿ ಅವರನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿದ್ದಾರೆ.


ಮಾತ್ರವಲ್ಲ ಆ ವ್ಯಕ್ತಿಯನ್ನು ಶುಚಿಗೊಳಿಸಿ, ಅವರಿಗೆ ಊಟವನ್ನು ನೀಡಿದ್ದಾರೆ. ಇವರ ಈ ಮಾನವೀಯ ಕಾಳಜಿಗೆ ಪ್ರಶಂಸೆಗಳ ಸುರಿ ಮಳೆ ಹರಿದು ಬರುತ್ತಿದೆ.

 

LEAVE A REPLY

Please enter your comment!
Please enter your name here

Hot Topics

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್...

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....