Thursday, September 29, 2022

‘ಏರೆಗ್ಲಾ ಪನೋಡ್ಚಿ’ ಆಡಿಯೋ ವೈರಲ್‌ ಬಗ್ಗೆ ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಯಾರು ಆಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಬಗ್ಗೆ ತನಿಖೆಯಾಗಲಿದೆ ಎಂದು ಹೇಳಿದ್ದಾರೆ.

ನಳಿನ್ ಕುಮಾರ್‌ ವಿರುದ್ಧ ವ್ಯವಸ್ಥಿತ ಸಂಚು ರೂಪಿಸಿ ಅವರನ್ನು ಬಲಿಪಶು ಮಾಡಲು ಹೊರಟಿದ್ದಾರೆ. ಯಾರೋ ಹುಚ್ಚರು ಆಡಿಯೋವನ್ನು ಸೃಷ್ಟಿ ಮಾಡಿದ್ದಾರೆ. ನಳಿನ್ ಕುಮಾರ್ ಕಟೀಲ್ ಆಡಿಯೋ ನನ್ನದಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಈ ಬಗ್ಗೆ ತನಿಖೆ ಅಗತ್ಯವಿಲ್ಲ. ಬದಲಾಗಿ ಆಡಿಯೋ ಯಾರು ವೈರಲ್ ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕು ಎಂದು ಈಶ್ವರಪ್ಪ ಆಗ್ರಹಿಸಿದ್ದಾರೆ.

ಹಿಂದೂ ಸಮಾಜ ಹಾಗೂ ದೇಶಕ್ಕಾಗಿ ಉಸಿರಿರುವವರೆಗೆ ಹೋರಾಡುತ್ತೇನೆ. ನನ್ನ ಸಚಿವ ಸ್ಥಾನ ಹೋದರೆ ಹೋಗಲಿ. ಸಚಿವ ಸ್ಥಾನ ಹೋದರೆ ಒಂದು ಗೂಟ ಹೋದಂತೆ. ಯಾರೂ ಸಹ ಅಧಿಕಾರಕ್ಕೆ ಗೂಟ ಹೊಡೆದು ಕುಳಿತಿಲ್ಲ. ಯುವಕರಿಗೆ ಆದ್ಯತೆ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಹೀಗಾಗಿ ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ಸುಳ್ಯ: ಮಾಡರ್ನ್‌ಯುಗಕ್ಕೆ ಹೊಂದಿಕೊಂಡ ಕಾಗೆ ತನ್ನ ಗೂಡು ಹೆಣೆದಿದ್ದು ಕಬ್ಬಿಣದ ತಂತಿಯಲ್ಲಿ..!

ಸುಳ್ಯ: ಕಾಗೆಯೊಂದು ಕಬ್ಬಿಣದ ತಂತಿಗಳನ್ನೇ ಬಳಸಿ ಗೂಡು ಹೆಣೆದಿರುವ ಅದ್ಭುತ ಘಟನೆ ಸುಳ್ಯದ ಚೊಕ್ಕಾಡಿಯಲ್ಲಿ ನಡೆದಿದೆ.ಚೊಕ್ಕಾಡಿಯ ಭಗವಾನ್ ಶ್ರೀ ಸತ್ಯಸಾಯಿ ವಿದ್ಯಾಕೇಂದ್ರದ ಆವರಣದಲ್ಲಿ ಸ್ವಚ್ಚತೆ ಕಾರ್ಯ ಕೈಗೊಂಡ ವೇಳೆ ಮರವೊಂದರ ಕೊಂಬೆಯಲ್ಲಿ ಈ...