Connect with us

LATEST NEWS

ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ; ಕಾರಣ ಏನು?

Published

on

ನವದೆಹಲಿ : ಪ್ರಧಾನಿ ಕಾರಿನ ನೋಂದಣಿಯನ್ನು ವಿಸ್ತರಿಸಲು ಅಸಾಧ್ಯ ಎಂದು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ( NGT ) ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಿದ್ದ ಮೂರು ಡಿಸೇಲ್‌ ಕಾರುಗಳ ನೋಂದಣಿ ವಿಸ್ತರಿಸುವಂತೆ ಎಸ್‌ಪಿಜಿ (SPG) ಮನವಿ ಸಲ್ಲಿಸಿತ್ತು.

ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಹೇಳಿದ್ದೇನು?

“ಈ ಮೂರು ಕಾರುಗಳು ಸಾಮಾನ್ಯವಾಗಿ ಬಳಸಲ್ಪಡದ ವಿಶೇಷ ಉದ್ದೇಶದ ವಾಹನಗಳಾಗಿವೆ. ಈ ವಾಹನಗಳು ಹತ್ತು ವರ್ಷಗಳಲ್ಲಿ ಬಹಳ ಕಡಿಮೆ ಚಲಿಸಿವೆ ಮತ್ತು ಪ್ರಧಾನಿ ಅವರ ಭದ್ರತೆಯ ನಿರ್ದಿಷ್ಟ ಉದ್ದೇಶಕ್ಕಾಗಿ ಅಗತ್ಯವಾಗಿವೆ. ಆದರೆ ಸುಪ್ರೀಂ ಕೋರ್ಟ್ 2018ರ ಅಕ್ಟೋಬರ್‌ 29ರಂದು ನೀಡಿದ ಆದೇಶದಂತೆ ಆ ವಾಹನಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ. ಹೀಗಾಗಿ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದು ಎನ್‌ಜಿಟಿ ಹೇಳಿದೆ.

ಎಸ್‌ಪಿಜಿ ಈ ಕಾರುಗಳಿಗೆ ಅನುಮತಿ ಕೇಳಿದ್ಯಾಕೆ?

ಈ ವಾಹನಗಳ ವಿನ್ಯಾಸ ಮತ್ತು ತಾಂತ್ರಿಕ ಹಾಗೂ ಕಾರ್ಯತಂತ್ರಗಳು ಬಹಳಷ್ಟು ವಿಶೇಷವಾಗಿದೆ. ಇಂತಹ ವಾಹನಗಳು ಮಾರುಕಟ್ಟೆಯಲ್ಲಿ ಸುಲಭವಾಗಿ ಲಭ್ಯವಾಗುವುದಿಲ್ಲ. ಭದ್ರತೆಯ ದೃಷ್ಟಿಯಲ್ಲಿ ವಿಶೇಷವಾಗಿ ವಿನ್ಯಾಸ ಮಾಡಿರುವ ಕಾರಣ ಈ ಕಾರುಗಳಿಗೆ ಇನ್ನೂ ಐದು ವರ್ಷಗಳ ಕಾಲ ನೊಂದಣಿಯನ್ನು ವಿಸ್ತರಿಸಿ ಎಂದು ಎಸ್‌ಪಿಜಿ ಕೋರಿಕೆ ಸಲ್ಲಿಸಿತ್ತು.

ದೆಹಲಿ ಎನ್‌ಸಿಆರ್‌ನಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಕ್ರಮವಾಗಿ ಎನ್‌ಜಿಟಿ ಮತ್ತು ಸುಪ್ರೀಂ ಕೋರ್ಟ್ ಈ ಆದೇಶಗಳನ್ನು ಹೊರಡಿಸಿದ್ದವು. ಎನ್‌ಜಿಟಿ 2015ರ ಏಪ್ರಿಲ್‌ನಲ್ಲಿ ದೆಹಲಿ ಎನ್‌ಸಿಆರ್‌ ರಸ್ತೆಗಳಲ್ಲಿ 10 ವರ್ಷಕ್ಕಿಂತ ಹಳೆಯದಾದ ಎಲ್ಲ ಡೀಸೆಲ್ ವಾಹನಗಳನ್ನು ಓಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. 10 ವರ್ಷಕ್ಕಿಂತ ಹಳೆಯದಾದ ಯಾವುದೇ ಡೀಸೆಲ್ ವಾಹನವನ್ನು ನೋಂದಾಯಿಸದಂತೆ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು.

 ಇದನ್ನೂ ಓದಿ…238 ಬಾರಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಮತ್ತೆ ಲೋಕಸಭಾ ಅಖಾಡಕ್ಕೆ…!

2013ರಲ್ಲಿ ತಯಾರಿಸಿದ ಮತ್ತು 2014ರ ಡಿಸೆಂಬರ್‌ನಲ್ಲಿ ನೋಂದಾಯಿಸಲಾದ ಮೂರು ರೆನಾಲ್ಟ್ ಎಂಡಿ -5 (Renault MD-5) ವಿಶೇಷ ಶಸ್ತ್ರಸಜ್ಜಿತ ವಾಹನಗಳು 9 ವರ್ಷಗಳಲ್ಲಿ ಕ್ರಮವಾಗಿ ಸುಮಾರು 6,000 ಕಿ.ಮೀ., 9,500 ಕಿ.ಮೀ. ಮತ್ತು 15,000 ಕಿ.ಮೀ. ಕ್ರಮಿಸಿವೆ.

Click to comment

Leave a Reply

Your email address will not be published. Required fields are marked *

FILM

ಮೇಕಪ್ ರೂಂನಲ್ಲಿ ಕೂಡಿ ಹಾಕಿದ್ರು…ಆಮೇಲೆ…ನಿರ್ಮಾಪಕನಿಂದಾದ ಕರಾಳ ಅನುಭವ ಬಿಚ್ಚಿಟ್ಟ ಖ್ಯಾತ ಕಿರುತೆರೆ ನಟಿ!

Published

on

ಸಿನಿಮಾ ರಂಗದಲ್ಲಿ ತಮಗಾದ ಕೆಟ್ಟ ಅನುಭವಗಳ ಬಗ್ಗೆ ನಟಿಯರು ಹೇಳಿಕೊಳ್ಳುತ್ತಲೇ ಇರುತ್ತಾರೆ. ಕಾಸ್ಟಿಂಗ್ ಕೌಚ್ ವಿಚಾರ ಇತ್ತೀಚೆಗೆ ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ. ಈ ನಡುವೆ ಮತ್ತೊಬ್ಬ ನಟಿ ಕಿರುತೆರೆಯಲ್ಲಿ ತನಗಾದ ಕೆಟ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ಹೌದು, ಕಿರುತೆರೆ ಖ್ಯಾತ ನಟಿ ಕೃಷ್ಣಾ ಮುಖರ್ಜಿ ಈ ಬಗ್ಗೆ ನೋವು ಹಂಚಿಕೊಂಡಿದ್ದಾರೆ.


ಧಾರಾವಾಹಿಯಿಂದ ಹೊರಬರಲು ಕಾರಣ ತಿಳಿಸಿದ ನಟಿ:

ಕೃಷ್ಣಾ ‘ಯೇ ಹೇ ಮೊಹಾಬತೇ’ ಧಾರಾವಾಹಿ ಮೂಲಕ ಫೇಮಸ್ ಆಗಿದ್ದರು. ನಾಗಿನ್ 2 ಕೂಡ ಅವರಿಗೆ ಹೆಸರು ತಂದು ಕೊಟ್ಟಿದೆ. ಇದೀಗ ಅವರು ತಮಗಾದ ಕಿರುಕುಳದ ವಿಚಾರವನ್ನು ಹಂಚಿಕೊಂಡಿದ್ದಾರೆ. ಕೃಷ್ಣಾ ‘ಶುಭ ಶಗುನ್’ ಹೆಸರಿನ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಇದರಿಂದ ಅವರು ಹೊರ ಬಂದಿದ್ದಾರೆ. ಇದಕ್ಕೆ ಕಾರಣ ಧಾರಾವಾಹಿ ನಿರ್ಮಾಪಕ ಕುಂದನ್ ಸಿಂಗ್ ಅವರು ನೀಡಿದ ಕಿರುಕುಳ ಎಂದು ನಟಿ ಆರೋಪಿಸಿದ್ದಾರೆ.


ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿವರವಾಗಿ ಹೇಳಿದ್ದಾರೆ. ‘ಇದನ್ನು ಬರೆಯುವಾಗ ನನ್ನ ಕೈಗಳು ನಡುಗುತ್ತಿವೆ. ಆದರೂ ನಾನು ಬರೆಯಲೇಬೇಕು. ನಾನು ಇವರಿಂದ ಖಿನ್ನತೆಗೆ ಒಳಗಾಗಿದ್ದೇನೆ. ನಾವು ನಮ್ಮ ಭಾವನೆಗಳನ್ನು ಹಿಡಿದಿಟ್ಟು, ನಮ್ಮ ಒಳ್ಳೆಯ ಜೀವನವನ್ನು ಮಾತ್ರ ಸೋಶಿಯಲ್ ಮೀಡಿಯಾದಲ್ಲಿ ತೋರಿಸುತ್ತೇವೆ. ಆದರೆ, ಇದು ರಿಯಾಲಿಟಿ’ ಎಂದು ಬರೆದುಕೊಂಡಿದ್ದಾರೆ.
‘ನನಗೆ ಇನ್ನಷ್ಟು ಹಾನಿ ಆಗಬಹುದು ಎನ್ನುವ ಕಾರಣಕ್ಕೆ ಕುಟುಂಬದವರು ಈ ಬಗ್ಗೆ ಪೋಸ್ಟ್ ಮಾಡೋದು ಬೇಡ ಎಂದರು. ನಾನೇಕೆ ಹೆದರಬೇಕು? ನ್ಯಾಯ ಪಡೆಯೋದು ನನ್ನ ಹಕ್ಕು’ ಎಂದು ಬರೆದಿದ್ದಾರೆ. ಅಲ್ಲದೇ, ಕುಂದನ್ ಸಿಂಗ್ ಅವರನ್ನು ಟ್ಯಾಗ್ ಕೂಡಾ ಮಾಡಿದ್ದಾರೆ.

ಮೇಕಪ್ ರೂಂ ಲಾಕ್ ಮಾಡಿದ್ದರು :

ಕಳೆದ ಒಂದೂವರೆ ವರ್ಷ ನನಗೆ ಸುಲಭದ್ದಾಗಿರಲಿಲ್ಲ. ನಾನು ಖಿನ್ನತೆಗೆ ಒಳಗಾಗಿದ್ದೇನೆ. ನಾನು ಒಂಟಿಯಾಗಿದ್ದಾಗ ಅಳುತ್ತಿದ್ದೇನೆ. ದಂಗಲ್ ಟಿವಿಗಾಗಿ ಶುಭ್ ಶಗುನ್ ಧಾರಾವಾಹಿ ಒಪ್ಪಿಕೊಂಡಾಗಿನಿಂದ ಈ ಸಮಸ್ಯೆ ಆಗುತ್ತಿದೆ. ನನ್ನ ಜೀವನದಲ್ಲಿ ಮಾಡಿದ ಅತಿ ಕೆಟ್ಟ ನಿರ್ಧಾರ. ನನಗೆ ಅದನ್ನು ಮಾಡಬೇಕು ಎಂದಿರಲಿಲ್ಲ. ಬೇರೆಯವರ ಮಾತನ್ನು ಕೇಳಿ ಕಾಂಟ್ರ್ಯಾಕ್ಟ್ ಸಹಿ ಮಾಡಿದೆ’ ಎಂದಿದ್ದಾರೆ ಕೃಷ್ಣಾ.

‘ಪ್ರೊಡಕ್ಷನ್ ಹೌಸ್ ಹಾಗೂ ನಿರ್ಮಾಪಕ ಕುಂದನ್ ಸಿಂಗ್ ಅವರು ನನಗೆ ಕಿರುಕುಳ ನೀಡಿದ್ದಾರೆ. ನನಗೆ ಅಂದು ಅನಾರೋಗ್ಯವಾಗಿತ್ತು. ಜೊತೆಗೆ ಅವರು ಸಂಭಾವನೆಯನ್ನೂ ಕೊಡುತ್ತಿರಲಿಲ್ಲ. ಹೀಗಾಗಿ ನಾನು ಶೂಟ್ ಮಾಡಲ್ಲ ಎಂದೆ. ಇದಕ್ಕಾಗಿ ಅವರು ಮೇಕಪ್​ ರೂಂನಲ್ಲಿ ನನ್ನನ್ನು ಲಾಕ್ ಮಾಡಿದ್ದರು. ನಾನು ಬಟ್ಟೆ ಬದಲಿಸುವಾಗ ಬಾಗಿಲು ಮುರಿಯುವ ರೀತಿಯಲ್ಲಿ ಬಾಗಿಲು ಬಡಿಯುತ್ತಿದ್ದರು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!


ಕೃಷ್ಣಾ ಪೋಸ್ಟ್ ಗೆ ಹಲವು ಮಂದಿ ಕಮೆಂಟ್ ಮಾಡಿದ್ದು, ನಿಮಗೆ ನ್ಯಾಯ ಸಿಗಲೇಬೇಕು ಎಂದು ಕೆಲವರು ಹೇಳಿದ್ದು, ನಿಮ್ಮ ಜೊತೆ ನಾವಿದ್ದೇವೆ ಎಂದು ಕೆಲವರು ಹೇಳಿದ್ದಾರೆ. ಇದು ಮನಸ್ಸು ಮುರಿಯುವ ವಿಚಾರ ಎಂದು ಕಮೆಂಟ್ ಮಾಡಲಾಗಿದೆ. ಅವರ ಅಭಿಮಾನಿಗಳು ಮಾತ್ರವಲ್ಲದೇ, ಕಲಾವಿದರೂ ಕಮೆಂಟ್ ಗಳನ್ನು ಮಾಡಿ ನಿಮ್ಮ ಜೊತೆಗೆ ನಾವಿದ್ದೇವೆ ಎನ್ನುತ್ತಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದ್ದಾರೆ.

 

Continue Reading

FILM

ರಾಮ-ಸೀತೆಯಂತೆ ಕಾಣಿಸಿಕೊಂಡ ರಣ್​ಬೀರ್​, ಸಾಯಿ ಪಲ್ಲವಿ.. ರಾಮಾಯಣ ಸಿನಿಮಾ ಸೆಟ್ಟಿನ ಫೋಟೋ ಲೀಕ್​

Published

on

ರಾಮಾಯಣ ಬಾಲಿವುಡ್‌ನಲ್ಲಿ ತೆರೆ ಮೇಲೆ ಬರಲಿರುವ ಬಹುನೀರಿಕ್ಷಿತ ಸಿನಿಮಾ. ಆದರೀಗ ಈ ಸಿನಿಮಾದ ಕೆಲವು ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಆಗಿದೆ.

ನಿತೇಶ್ ತಿವಾರಿ ನಿರ್ದೇಶನದಲ್ಲಿ ರಾಮಾಯಣ ಸಿನಿಮಾ ಮೂಡಿಬರುತ್ತಿದೆ. ಈ ಸಿನಿಮಾದಲ್ಲಿ ರಣ್‌ಬೀರ್ ಕಪೂರ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರೋ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ರಣ್‌ಬೀರ್ ಮತ್ತು ಸಾಯಿ ಪಲ್ಲವಿ ಸಿನಿಮಾದಲ್ಲಿ ಭಗವಾನ್ ರಾಮ ಮತ್ತು ಸೀತಾ ದೇವಿ ಪಾತ್ರದಲ್ಲಿ ಕಾಣಿಸಿಕೊಂಡ ಫೋಟೋ ಲೀಕ್ ಆಗಿದೆ.

ಸದ್ಯ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಶನಿವಾರದಂದು ರಾಮಾಯಣ ಸೆಟ್‌ನಲ್ಲಿ ರಣ್‌ಬೀರ್ ಅಯೋಧ್ಯೆಯ ಶ್ರೀ ರಾಮ ಚಂದ್ರನಂತೆ ಕಾಣಿಸಿಕೊಂಡಿದ್ದಾರೆ. ಅತ್ತ ಸಾಯಿ ಪಲ್ಲವಿ ಕೂಡ ಸೀತೆಯಂತೆ ಕಂಗೊಳಿಸಿದ್ದಾರೆ. ಆದರೆ ಇದೇ ಸೆಟ್‌ನಲ್ಲಿ ಇವರಿಬ್ಬರ ಫೋಟೋ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದಶರಥನ ವೇಷದಲ್ಲಿ ಅರುಣ್​ ಗೋಯಲ್

ಇದಲ್ಲದೆ ರಾಮಾಯಣ ಸಿನಿಮಾದಲ್ಲಿ ನಟಿಸುತ್ತಿರುವ ಅರುಣ್​ ಗೋಯಲ್​ ದಶರಥನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ. ಲಾರಾ ದತ್ತಾ ಕೈಕೇಯಿ, ಬಾಬಿ ಡಿಯೋಲ್​, ವಿಜಯ್​ ಸೇತುಪತಿ, ಸನ್ನಿ ಡಿಯೋಲ್​ ಮೂವರು ಕುಂಭಕರಣ, ವಿಭೀಷಣ, ಹನುಮಂತನಾಗಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ರಣ್​ಬೀರ್​ ಸಸ್ಯಹಾರಿ

ಇನ್ನು ರಣ್​ಬೀರ್​ ರಾಮನ ಪಾತ್ರಕ್ಕಾಗಿ ಸಸ್ಯಹಾರವನ್ನು ಸೇವಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅನಿಮಲ್​ ಸಿನಿಮಾದ ಬಳಿಕ ರಣಬೀರ್​ ರಾಮಾಯಣ ಚಿತ್ರತಂಡ ಸೇರಿಕೊಂಡಿದ್ದಾರೆ. ಅಂದಹಾಗೆಯೇ ಅನಿಮಲ್​ನಲ್ಲಿ ನಟಿ ರಶ್ಮಿಕಾ ಮಂದಣ್ಣನವರು ರಣಬೀರ್​ ಅವರ ನಾಯಕಿಯಾಗಿ ಕಾಣಿಸಿಕೊಂಡಿದ್ದರು.

Continue Reading

FILM

ಖ್ಯಾತ ಕಿರುತೆರೆ ನಟ ಗುರುಚರಣ್ ಸಿಂಗ್ ನಾಪತ್ತೆ!

Published

on

ನವದೆಹಲಿ : ಖ್ಯಾತ ಕಿರುತೆರೆ ನಟ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಜನಪ್ರಿಯ ಕಾರ್ಯಕ್ರಮ ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಮೂಲಕ ಗಮನ ಸೆಳೆದಿರುವ ನಟ ಗುರುಚರಣ್ ಸಿಂಗ್ ಅವರು ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ನಟನ ತಂದೆ ದೆಹಲಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.


ದೂರಿನಲ್ಲಿ ಏನಿದೆ?

ದೆಹಲಿ ಪೊಲೀಸರಿಗೆ ತಂದೆ ನೀಡಿರುವ ದೂರಿನ ಪ್ರಕಾರ, 50ರ ಹರೆಯದ ನಟ ಏಪ್ರಿಲ್ 22 ರಂದು ದೆಹಲಿಯ ತಮ್ಮ ನಿವಾಸದಿಂದ ಮುಂಬೈಗೆ ತೆರಳಿದ್ದಾರೆ. ಅಂದಿನಿಂದ ಅವರು ನಾಪತ್ತೆಯಾಗಿದ್ದಾರೆ. ಅವರು ಮುಂಬೈಗೆ ಬಂದಿಳಿಯಬೇಕಿತ್ತು, ಆದರೆ ಮುಂಬೈ ತಲುಪಿಲ್ಲ. ಮನೆಗೂ ವಾಪಸಾಗಲಿಲ್ಲ. ಫೋನ್ ಸಂಪರ್ಕಕ್ಕೂ ಸಿಗಲಿಲ್ಲ. ಈ ಹಿನ್ನೆಲೆ ಪೊಲೀಸ್​ ಠಾಣಾ ಮೆಟ್ಟಿಲೇರಬೇಕಾಯಿತು ಎಂದು ತಿಳಿಸಲಾಗಿದೆ.

“ಅವರು ಮಾನಸಿಕವಾಗಿ ಸ್ಥಿರವಾಗಿದ್ದು, ನಾವು ಅವರನ್ನು ಹುಡುಕಿದ್ದೇವೆ. ಆದರೆ, ಈಗ ಅವರು ಕಾಣೆಯಾಗಿದ್ದಾರೆ” ಎಂದು ಗುರುಚರಣ್ ಸಿಂಗ್​​ ತಂದೆ ಪೊಲೀಸರಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಈ ನಾಪತ್ತೆ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿದ್ದಾರೆ. ನಾವು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗುರುಚರಣ್ ಸಿಂಗ್ ಕೊನೆಯದಾಗಿ ಏಪ್ರಿಲ್ 22 ರಂದು ದೆಹಲಿ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದರು. ಅವರು ಮುಂಬೈಗೆ ತೆರಳಿದ್ದರು ಎನ್ನಲಾಗಿದೆ. ಆದರೆ, ಅವರು ಮುಂಬೈಗೆ ತಾವು ತಲುಪಬೇಕಾಗಿದ್ದ ಸ್ಥಳಕ್ಕೆ ತಲುಪಿಲ್ಲ. ಮನೆಗೂ ಹಿಂತಿರುಗಿಲ್ಲ. ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ. ನಟನ ದಿಢೀರ್ ಕಣ್ಮರೆ ಪ್ರಕರಣ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ : ಕೊನೆಗೂ ಪ್ರಭಾಸ್ ‘ಕಲ್ಕಿ 2898AD’ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್! ಯಾವಾಗ ತೆರೆಗೆ?

ಶೋ ತೊರೆದಿದ್ದ ನಟ :

ಗುರುಚರಣ್ ಅವರು ‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ಚಿತ್ರದಲ್ಲಿ ಸೋಧಿ ಪಾತ್ರ ನಿರ್ವಹಿಸಿದ್ದರು. ಈ ಮೂಲಕ ಜನಪ್ರಿಯತೆ ಸಂಪಾದಿಸಿದ್ದರು. ಅದಾಗ್ಯೂ, ಅವರು ಕೆಲ ವರ್ಷಗಳ ಹಿಂದೆ ಕಾರ್ಯಕ್ರಮವನ್ನು ತೊರೆದರು. ತಂದೆಯ ಅನಾರೋಗ್ಯ ಹಿನ್ನೆಲೆ ಶೋ ಬಿಡಬೇಕಾಯಿತು.

ಇದೀಗ ಅವರ ನಾಪತ್ತೆ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅಲ್ಲದೇ, ಅವರ ಅಭಿಮಾನಿಗಳಲ್ಲಿ ಆತಂಕ ಹುಟ್ಟು ಹಾಕಿದೆ.

Continue Reading

LATEST NEWS

Trending