Saturday, November 27, 2021

ಮಾಜಿ ಸಿಎಂ ಯಡಿಯೂರಪ್ಪ ಆಪ್ತನ ಮನೆ ಮೇಲೆ ಐಟಿ ದಾಳಿ: 300 ಅಧಿಕಾರಿಗಳಿಂದ ಶೋಧ

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಪ್ರಭಾವಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಹಾಗೂ ಹಲವರ ಮನೆ ಮೇಲೆ ಏಕಕಾಲಕ್ಕೆ ಐಟಿ ದಾಳಿ ನಡೆದಿದೆ.
ಬೆಂಗಳೂರಿನ ಭಾಷ್ಯಂ ಸರ್ಕಲ್‌ನಲ್ಲಿರುವ ಬಿಎಸ್‌ ಯಡಿಯೂರಪ್ಪ ಆಪ್ತ ಸಹಾಯಕ ಉಮೇಶ್ ಮನೆ ಮತ್ತು ಕಚೇರಿ ಸೇರಿ 4 ಕಡೆಗಳಲ್ಲಿ ಐಟಿ ದಾಳಿ ನಡೆದಿದೆ.

ಉಮೇಶ್ ಅವರು ಮಾಜಿ ಸಿಎಂ ಯಡಿಯೂರಪ್ಪ, ಸಂಸದ ರಾಘವೇಂದ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಮೂವರಿಗೂ ಪಿಎ ರೀತಿ ಕೆಲಸ ಮಾಡುತ್ತಿದ್ದರು.

ಯಡಿಯೂರಪ್ಪ ವಿಪಕ್ಷ ನಾಯಕರಾಗಿದ್ದಾಗ ಮತ್ತು ಮುಖ್ಯಮಂತ್ರಿ ಆಗಿದ್ದಾಗ ಅವರಿಗೆ ಉಮೇಶ್ ಪಿಎ ಆಗಿದ್ದರು.


300ಕ್ಕೂ ಅಧಿಕಾರಿಗಳ ತಂಡವು ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿ ಶೋಧ ಕಾರ್ಯ ನಡೆಸುತ್ತಿದೆ. ತೆರಿಗೆ ವಂಚನೆ ಹಾಗೂ ತೆರಿಗೆ ವಂಚನೆಗೆ ಸಹಾಯ ಆರೋಪದ ಮೇಲೆ ಈ ದಾಳಿ ನಡೆದಿದೆ.

ರಾಮಕೃಷ್ಣ ಹೆಗಡೆ ನಗರ ಸೇರಿ ಬೆಂಗಳೂರಿನ 50ಕ್ಕೂ ಹೆಚ್ಚು ಕಡೆ ಕಾರ್ಯಾಚರಣೆ ನಡೆಸಿದ್ದು, ಬೆಳಗ್ಗೆ 5 ಗಂಟೆಯಿಂದಲೇ ದಾಖಲಾತಿಗಳ ಪರಿಶೋಧನೆ ಕೆಲಸ ನಡೆಯುತ್ತಿದೆ.

ರಾಮಕೃಷ್ಣ ಹೆಗಡೆ ನಗರದ ನಿವಾಸಿ ನೀರಾವರಿ ಇಲಾಖೆಯ ಚಾರ್ಟೆಡ್ ಅಕೌಂಟೆಂಟ್​​ ಎನ್ನಲಾಗುತ್ತಿರುವ ಅಮಲಾ ಎಂಬುವರ ಮನೆ ಸೇರಿದಂತೆ ವಿವಿಧ ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

ಸಹಕಾರನಗರದ ರಾಹುಲ್ ಎಂಟರ್ ಪ್ರೈಸಸ್, ಸಿಮೆಂಟ್ ಮತ್ತು ಸ್ಟೀಲ್ ಡೀಲರ್ ಕಚೇರಿಗಳ ಮೇಲೆಯೂ ದಾಳಿ ನಡೆದಿದ್ದು,

ಮೂರು ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ದಾಳಿ ನಡೆಸಿ ಕಡತಗಳ ಪರಿಶೀಲಿಸುತ್ತಿದ್ದಾರೆ. ಎಲ್ಲಾ ಸಿದ್ಧತೆಯೊಂದಿಗೆ ಏಕಕಾಲದಲ್ಲಿ ದಾಳಿ ನಡೆದಿದ್ದು,

ಐಟಿ ಅಧಿಕಾರಿಗಳು 120 ಇನ್ನೋವಾ ಕ್ರಿಸ್ಟಾ ಕಾರುಗಳನ್ನು ಬುಕ್ ಮಾಡಿಕೊಂಡಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...