ನವದೆಹಲಿ: ದೆಹಲಿಯಲ್ಲಿರುವ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್ (ಬಿಬಿಸಿ) ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ತಪಾಸಣೆ ನಡೆಸುತ್ತಿದ್ದಾರೆ.
ಐಟಿ ದಾಳಿ ಕುರಿತು ಟ್ವೀಟ್ ಮಾಡಿರುವ ಬಿಬಿಸಿ, ‘ಪ್ರಸ್ತುತ ನವದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರಿಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ.
ಈ ಪರಿಸ್ಥಿತಿಯನ್ನು ಸಾಧ್ಯವಾದಷ್ಟು ಬೇಗ ಪರಿಹರಿಸಲಾಗುವುದು ಎಂದು ನಾವು ಭಾವಿಸುತ್ತೇವೆ’ ಎಂದು ಬರೆದುಕೊಂಡಿದೆ.
2002ರ ಗುಜರಾತ್ ಕೋಮು ಗಲಭೆ ಕುರಿತು ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿ ಬಿಬಿಸಿ ಇತ್ತೀಚೆಗೆ ವ್ಯಾಪಕ ಚರ್ಚೆಗೆ ಗುರಿಯಾಗಿತ್ತು. ಜೊತೆಗೆ ಅದನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದು ಹಾಕಿತ್ತು.
ಇದೇ ವೇಳೆ ಬಿಬಿಸಿ ವಿಶ್ವದಲ್ಲೇ ಅತ್ಯಂತ ‘ಭ್ರಷ್ಟ ಬಕ್ವಾಸ್ ಕಾರ್ಪೊರೇಷನ್’ ಆಗಿ ಮಾರ್ಪಟ್ಟಿದೆ. ದುರದೃಷ್ಟವಶಾತ್, ಬಿಬಿಸಿಯ ಪ್ರಚಾರ ಮತ್ತು ಕಾಂಗ್ರೆಸ್ ಕಾರ್ಯಸೂಚಿಗಳು ಒಂದೇ ಆಗಿವೆ’ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಟ್ವಿಟ್ಟರ್‌ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಭಾರತದಲ್ಲಿ ಕಾರ್ಯನಿರ್ವಹಿಸುವ ಯಾವುದೇ ಮಾಧ್ಯಮ ಸಂಸ್ಥೆಯು ದೇಶದ ನಿಯಮಗಳು ಮತ್ತು ನಿಬಂಧನೆಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗುತ್ತದೆ. ಆದಾಯ ತೆರಿಗೆ ಇಲಾಖೆಯು ಕಾನೂನುಬದ್ಧವಾಗಿ ಬಿಬಿಸಿ ಕಚೇರಿ ಮೇಲೆ ದಾಳಿ ನಡೆಸಿದೆ ಎಂದಿದ್ದಾರೆ.