Saturday, October 1, 2022

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್ ಬಿಲ್‌ಬೋರ್ಡ್‌ನಲ್ಲಿ ಮಿಂಚಿದ ಮೊದಲ ಕನ್ನಡದ ನಟಿ ಇತಿ ಆಚಾರ್ಯ

ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ಇತಿ ಆಚಾರ್ಯ ನ್ಯೂಯಾರ್ಕ್ ನ ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಂಡ ಮೊದಲ ಸ್ಯಾಂಡಲ್ ವುಡ್ ನಟಿ ಎಂಬ ಹಿರಿಮೆಗೆ ಪಾತ್ರವಾಗಿದ್ದಾರೆ.


ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯದ ‘ಕವಚ’ ಸಿನಿಮಾದಲ್ಲಿ ನಟಿಸಿದ್ದ ಇವರು ಈ ಮೂಲಕ ಇಲ್ಲಿವರೆಗೂ ಯಾರೂ ಮಾಡಿರದ ಸಾಧನೆಯೊಂದನ್ನು ಮಾಡಿ ಜನಪ್ರಿಯತೆ ಗಳಿಸಿದ್ದಾರೆ.

ಇತ್ತೀಚೆಗೆ ನ್ಯೂಯಾರ್ಕ್ ನಲ್ಲಿ ನಡೆದ ನ್ಯೂಯಾರ್ಕ್ ಫ್ಯಾಶನ್ ವೀಕ್ ನಲ್ಲಿ ಭಾರತ ಮೂಲದ ಫ್ಯಾಶನ್ ಡಿಸೈನರ್ ಡಿಸೈನ್ ಮಾಡಿದ ಡ್ರೆಸ್ ಇತಿ ಶೋ ಕೇಸ್ ಮಾಡಿದ್ದಾರೆ.

ಇದನ್ನು ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ತನ್ನ ಹೋಲ್ಡಿಂಗ್ಸ್ ನಲ್ಲಿ ಹಾಕುವ ಮೂಲಕ ಮೊದಲ ಬಾರಿಗೆ ಕನ್ನಡದ ನಟಿಯನ್ನು ಗುರುತಿಸಿದೆ.


ಟೈಮ್ಸ್ ಸ್ಕ್ವೇರ್ ಬಿಲ್ ಬೋರ್ಡ್ ಅಂತರಾಷ್ಟ್ರೀಯ ವೇದಿಕೆಯಾಗಿದ್ದು ಸಾಮಾನ್ಯವಾಗಿ ಬಾಲಿವುಡ್ ನಟಿಮಣಿಯರೇ ಈ ಹೋಲ್ಡಿಂಗ್ಸ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದರು.

ಕನ್ನಡದ ನಟಿಮಣಿ ಈ ಹೋಲ್ಡಿಂಗ್ಸ್ ನಲ್ಲಿ ಮಿಂಚಿದ್ದು ಇದೇ ಮೊದಲು ಅನ್ನೋದೇ ವಿಶೇಷ. ಅಂತರಾಷ್ಟ್ರೀಯ ವೇದಿಕೆಯಲ್ಲಿ ಕನ್ನಡ ಚಿತ್ರರಂಗ ಹಾಗೂ ದೇಶವನ್ನು ಪ್ರತಿನಿಧಿಸಿದ್ದು ಹರುಷ ತಂದಿದೆ ಎನ್ನುತ್ತಾರೆ ಇತಿ ಆಚಾರ್ಯ.

ಮೂಲಕ ಇತಿ ಒಂದೇ ವರ್ಷದಲ್ಲಿ ಎರೆಡೆರಡು ಅಂತರಾಷ್ಟ್ರೀಯ ವೇದಿಕೆ ಹಂಚಿಕೊಂಡ ಸಾಧನೆ ಮಾಡಿದ್ದಾರೆ.

ನಟಿ ಹಾಗೂ ಮಾಡೆಲ್ ಆಗಿರುವ ಇತಿ 2016ರ ಮಿಸ್ ಸೌತ್ ಇಂಡಿಯಾ ವಿನ್ನರ್ ಕೂಡ ಹೌದು. ಆರ್ ವಿ ಎಸ್ ಪಿ ಪ್ರೊಡಕ್ಷನ್ ಹೌಸ್ ಮೂಲಕ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿದ್ದಾರೆ.

ಇದರ ಜೊತೆಗೆ ನಟನೆಯಲ್ಲೂ ಫುಲ್ ಬ್ಯುಸಿಯಾಗಿದ್ದಾರೆ. ಇತಿ ನಾಯಕಿಯಾಗಿ ನಟಿಸಿರುವ ಕನ್ನಡದ ಲಕ್ಷ್ಮೀಪುತ್ರ ಚಿತ್ರ ಬಿಡುಗಡೆಯಾಗಬೇಕಿದೆ.

ಕೇವಲ ಕನ್ನಡವಲ್ಲದೇ ಹಿಂದಿ, ತಮಿಳು, ಮಲಯಾಳಂ ಸಿನಿಮಾಗಳಲ್ಲಿ ಇತಿ ಆಚಾರ್ಯ ಬ್ಯುಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಪೋಸ್ಟ್‌ಮ್ಯಾನ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್...

ಕಾರ್ಕಳ: ದುರ್ಗಾ ದೌಡ್‌ನಲ್ಲಿ 7500 ಹಿಂದೂ ಕಾರ್ಯಕರ್ತರು ಭಾಗಿ-65ಕ್ಕೂ ಅಧಿಕ ಬಸ್ ವ್ಯವಸ್ಥೆ

ಕಾರ್ಕಳ: ಹಿಂದೂ ಜಾಗರಣ ವೇದಿಕೆಯ ಆಯೋಜಕತ್ವದಲ್ಲಿ ಉಡುಪಿಯಲ್ಲಿ ನಡೆಯುವ ದುರ್ಗಾ ದೌಡ್‌ನಲ್ಲಿ ಕಾರ್ಕಳ ತಾಲ್ಲೂಕಿನಿಂದ ಸುಮಾರು 7500 ಹಿಂದೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಮೂಲಕ ಈ ದುರ್ಗಾ ದೌಡ್ ಹಿಂದೂ ಶಕ್ತಿ ಸಂಚಲನ...

ಬಂಟ್ವಾಳ: ಬಸ್ & ಸ್ಕೂಟರ್ ಢಿಕ್ಕಿ-ಸವಾರನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.ಅಪಘಾತದಲ್ಲಿ ಬೈಕ್...