Connect with us

    LATEST NEWS

    ”ಇನ್ಮೇಲೆ ನನ್ನನ್ನು ಬುದ್ಧಿವಂತ ಅಂತ ಕರೆದ್ರೆ ಚೆನ್ನಾಗಿರಲ್ಲ” ಅಂದಿದ್ಯಾಕೆ ಉಪೇಂದ್ರ..!? ಪವನ್ ಕಲ್ಯಾಣ್ ಬಗ್ಗೆ ನೆಟ್ಟಿಗರು ಹೇಳಿದ್ದೇನು?

    Published

    on

    ಬೆಂಗಳೂರು: ಕನ್ನಡ ಚಿತ್ರರಂಗದ ಬುದ್ಧಿವಂತ, ರಿಯಲ್ ಸ್ಟಾರ್ ಉಪೇಂದ್ರರರು ತನ್ನದೇ ಆದ ಪ್ರಜಾಕೀಯ ಪಕ್ಷವನ್ನು ಸಂಘಟಿಸಿದ್ದಾರೆ. ಈ ಪಕ್ಷದ ಮೂಲಕ ರಾಜಕೀಯದ ಕೆಲಸಗಳ ಕಡೆಗೆ ಗಮನ ಕೂಡಾ ಹರಸಿದ್ದಾರೆ. ಆದರೆ ಚುನಾವಣೆ ವೇಳೆ ಅದಕ್ಕೆ ತಕ್ಕ ಪ್ರತಿಫಲ ಸಿಗದೇ ಇರುವುದು ವಿಷಾದನೀಯ. ಇನ್ನು ಆಂಧ್ರದಲ್ಲಿ ಪವನ್ ಕಲ್ಯಾಣ್ ದೊಡ್ಡ ಮಟ್ಟದಲ್ಲಿ ಜಯಭೇರಿಯಾಗಿದ್ದಾರೆ. ಈ ವಿಚಾರವನ್ನು ಇಟ್ಟುಕೊಂಡು ನೆಟ್ಟಿಗರು ಉಪೇಂದ್ರರವರನ್ನು ಪವನ್‌ಗೆ ಹೋಲಿಕೆ ಮಾಡಿ ಟ್ರೋಲ್ ಮಾಡಲು ಆರಂಭಿಸಿದ್ದಾರೆ.

    ‘ಪವನ್​ ಕಲ್ಯಾಣ್​ ಅವರನ್ನು ಗೆಲ್ಲಿಸಲು ತೆಲುಗು ಜನ 14 ವರ್ಷ ತೆಗೆದುಕೊಂಡಿದ್ದಾರೆ. ಇನ್ನು ಉಪೇಂದ್ರ ಅವರನ್ನು ಗೆಲ್ಲಿಸಲು ಕನ್ನಡಿಗರು ಇನ್ನೆಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ’ ಎಂದು ಟ್ರೋಲ್​ ಪೇಜ್‌ನವರು ಹೀಗೆ ಬರೆದು ಪೋಸ್ಟ್​ ಮಾಡಿದ್ದರು. ಈ ಪೋಸ್ಟ್‌ನ್ನು ಉಪೇಂದ್ರ ಹಂಚಿಕೊಂಡಿದ್ದು, ಕ್ಯಾಪ್ಷನ್​ ಮೂಲಕ ಜನರಿಗೆ ಉತ್ತರ ನೀಡಿದ್ಧಾರೆ.

    ಮುಂದೆ ಓದಿ..; ನಟಿ – ಸಂಸದೆ ಕಂಗಾನಾಗೆ ಕಪಾಳ ಮೋಕ್ಷ..! CISF ಸಿಬ್ಬಂದಿ ವಿರುದ್ಧ ಆರೋಪ..!

    ಪೋಸ್ಟ್‌ಗೆ ಉಪೇಂದ್ರ ಪ್ರತಿಕ್ರಿಯಿಸಿದ್ದು ಹೇಗೆ..?

    ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್.. ಉಪೇಂದ್ರ ಸೋಲು ಗೆಲುವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ! ಎಂಥಾ ನಿಸ್ವಾರ್ಥ! ಎಂಥಾ ತ್ಯಾಗ ಮನೋಭಾವ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ. ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ. ಗೆದ್ದೇ ಗೆಲ್ತೀನಿ. ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ’ ಎಂದು ಬರೆದುಕೊಂಡಿದ್ದಾರೆ.

    ‘ನೆಕ್ಸ್ಟ್ ಎಲೆಕ್ಷನ್​ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ. ಆಗ್ಲೂ ನೀವ್ ಎಮೋಷನಲ್ ಪ್ರಚಾರ ಮಾಡ್ರಿ. ಸಭೆ ಸಮಾರಂಭ ಎಲ್ಲಾ ಮಾಡ್ರಿ. ಕಷ್ಟ ಪಡ್ರಿ. ಆಮೇಲೆ ಐದು ವರ್ಷ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ. ಉಸ್.. ಏನ್ ಬರೀಬೇಕೋ ಗೊತ್ತಾಗ್ತಿಲ್ಲರಪ್ಪೋ. ಈ ದಡ್ ನನ್ ಮಗಂಗೇ ಯಾವೋನಾದ್ರು ಇನ್ಮೇಲೆ ಬುದ್ಧಿವಂತ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲ’ ಎಂದು ಉಪೇಂದ್ರ ಪೋಸ್ಟ್​ ಮಾಡಿದ್ದಾರೆ.

    LATEST NEWS

    T20 ವಿಶ್ವಕಪ್: ಭಾರತ ತಂಡಕ್ಕೆ ಟ್ವೀಟ್ ಮೂಲಕ ಶುಭಕೋರಿದ ಸಿಎಂ

    Published

    on

    ಬೆಂಗಳೂರು:  ಬರೋಬ್ಬರಿ 11 ವರ್ಷಗಳ ವಿಶ್ವಕಪ್ ಕನಸು ಇದೀಗ ನನಸಾಗಿದೆ. 9 ನೇ ಆವೃತ್ತಿಯ ಟಿ20 ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್‌ಗಳಿಂದ ಮಣಿಸಿ ಟೀಂ ಇಂಡಿಯಾ 2ನೇ ಬಾರಿಗೆ ವಿಶ್ವಕಪ್‌ನ್ನು ಮುಡಿಗೇರಿಸಿಕೊಂಡಿದೆ.

    ಭಾರತ ತಂಡದ ಅದ್ಭುತ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯಾತಿ ಗಣ್ಯರು ಅಭಿನಂದಿಸಿದ್ದಾರೆ. ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸದಲ್ಲಿದ್ದರೂ ಕ್ರಿಕೆಟ್ ವೀಕ್ಷಣೆ ಮಾಡಿದ್ದಾರೆ. ರಾಜ್ಯ ರಾಜಕೀಯ ಜಂಜಾಟದ ನಡುವೆಯೂ ಕ್ರಿಕೆಟ್ ವೀಕ್ಷಣೆ ಮಾಡಿ ತಾನೊಬ್ಬ ಅಪ್ಪಟ ಕ್ರಿಕೆಟ್ ಅಭಿಮಾನಿ ಅನ್ನೋದನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಇಂಡಿಯಾ ಗೆಲುವಿನ ಬಳಿಕ ಇದೊಂದು ಐತಿಹಾಸಿಕ ಕ್ಷಣ ಎಂದು ಟ್ವೀಟ್ ಮಾಡಿದ್ದಾರೆ.

    ಟ್ವೀಟ್‌ ನಲ್ಲಿ ಹಿಗಿದೆ..

    ‘ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಅಭಿನಂದನೆಗಳು. ನಿರ್ಣಾಯಕ ಹಂತದಲ್ಲಿ ನಮ್ಮವರು ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದು ಪಂದ್ಯವನ್ನೂ ಸೋಲದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ. ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತಿರುವ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚತಕ್ಕದ್ದೆ. ಇದೊಂದು ಐತಿಹಾಸಿಕ ಕ್ಷಣ. ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ, ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ’ ಎಂದು ಟ್ವೀಟ್‌ ನಲ್ಲಿ ಬರೆದುಕೊಂಡಿದ್ದಾರೆ.

    Continue Reading

    LATEST NEWS

    ತಾಯಿಯ ದುಡುಕುತನ..! ಮಕ್ಕಳಿಬ್ಬರ ಜೀವಾಂತ್ಯ..!

    Published

    on

    ಉಡುಪಿ  : ತನ್ನಿಬ್ಬರು ಮಕ್ಕಳೊಂದಿಗೆ ಜೀವಾಂತ್ಯಗೊಳಿಸಲು ಕೆರೆಗೆ ಹಾರಿದ ತಾಯಿಯನ್ನು ರಕ್ಷಣೆ ಮಾಡಲಾಗಿದ್ದು, ಮಕ್ಕಳಿಬ್ಬರು ಇಹಲೋಕ ತ್ಯಜಿಸಿದ್ದಾರೆ. ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೆರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

    ಇಲ್ಲಿನ ನಂದ್ರೋಳ್ಳಿ ಎಂಬಲ್ಲಿ ತಾಯಿ ಶೀಲಾ ಎಂಬವರು ತನ್ನ ಮಕ್ಕಳಾದ ಧನರಾಜ್ (13 ವರ್ಷ) ಹಾಗೂ ಛಾಯ (7 ವರ್ಷ) ಜೊತೆ ಕೆರೆಗೆ ಹಾರಿದ್ದರು. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳೀಯರು ಕೆರೆಗೆ ಹಾರಿದವರ ರಕ್ಷಣೆಗೆ ಮುಂದಾಗಿದ್ದಾರೆ. ಈ ವೇಳೆ ತಾಯಿ ಶೀಲಾ ಅವರನ್ನು ರಕ್ಷಣೆ ಮಾಡಲಾಗಿದೆ. ಶೀಲಾ ಗಂಭೀರ ಸ್ಥಿತಿಯಲ್ಲಿ ಕುಂದಾಪುರ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಈ ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ

    Continue Reading

    DAKSHINA KANNADA

    3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

    Published

    on

    ಇಲ್ಲೊಬ್ಬ ಮಹಿಳೆ ಮದುವೆಯ ಫೋಟೋಗ್ರಾಫರ್ ಆಗಿ ಕೆಲಸ ಮಾಡುತ್ತಲೇ ಒಬ್ಬರನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳುವುದನ್ನು ನೋಡಿ ಬೇಸತ್ತಿದ್ದಾಳೆ. ಇದರಿಂದ ತಾನು ಮದುವೆ ವಿಚಾರದಲ್ಲಿ ಏನಾದರೂ ಭಿನ್ನವಾಗಿರುವುದನ್ನು ಮಾಡಬೇಕೆಂದು 3 ದಿನ ಮದುವೆ ಕಾರ್ಯಕ್ರಮವನ್ನು ಆಯೋಜನೆ ಮಾಡಿ ಬರೋಬ್ಬರಿ 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ.

    ಹೌದು, ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮದುವೆ ಛಾಯಾಗ್ರಾಹಕಿ ಆಗಿರುವ ಈ ಮಹಿಳೆ ಮದುವೆ ಸಮಾರಂಭಗಳಲ್ಲಿ ಎಲ್ಲರೂ ಒಟ್ಟಿಗೆ ಸೇರುವುದು, ಹಾಡು, ಕುಣಿತ, ಪಾರ್ಟಿ ಮಾಡುವುದನ್ನು ಕಂಡಿದ್ದಾಳೆ. ಇದರಿಂದ ತಾನು ಅದ್ಧೂರಿಯಾಗಿ ಮದುವೆ ಮಾಡಿಕೊಳ್ಳಬೇಕು ಎಂದು ಉದ್ದೇಶ ಹೊಂದಿದ್ದಳು. ಮುಂದುವರೆದು ಮದುವೆ ಆಗುವುದನ್ನು ಇನ್ನೂ ವಿಶೇಷವಾಗಿ ಆಚರಣೆ ಮಾಡಬೇಕು ಎಂದು ತನಗೆ ಗೊತ್ತಿರುವ ಎಲ್ಲ ಸ್ನೇಹಿತರಿಗೂ ಮದುವೆ ಆಮಂತ್ರಣ ಪತ್ರವನ್ನು ನೀಡಿದ್ದಾಳೆ.

    ಆದರೆ, ಮದುವೆ ಗಂಡು ಯಾರೆಂದು ಯಾರಿಗೂ ಹೇಳಿಲ್ಲ. ಆದರೆ, ತಾನು ಮದುವೆ ಮಾಡಿಕೊಳ್ಳುವವರಿಗೆ ಮಾತ್ರ ನಮ್ಮಿಬ್ಬರ ಮದುವೆಗೆ ಸಿದ್ಧವಾಗಿ ಬನ್ನಿ ಎಂದು ಹೇಳಿದ್ದಾಳೆ. ಹೀಗೆ, ಒಂದು ಮದುವೆ ಹೆಣ್ಣನ್ನು ಮದುವೆಯಾಗಲು ಬರೋಬ್ಬರಿ 60 ಜನರು ವೇದಿಕೆಯ ಬಳಿ ಬಂದಿದ್ದಾರೆ. ಆದರೆ, ಯಾರನ್ನೂ ನಿರಾಕರಿಸದೇ ಮೂರು ದಿನಗಳಲ್ಲಿ ಎಲ್ಲರನ್ನೂ ಮದುವೆ ಆಗಿದ್ದಾಳೆ. ಈ ಮೂಲಕ ತಾನು ‘ಒಬ್ಬ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಮಾಡಿಕೊಳ್ಳಲು ಇಷ್ಟವಿಲ್ಲ, ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ’ ಹೀಗಾಗಿ, 60 ಜನರನ್ನು ಮದುವೆ ಮಾಡಿಕೊಂಡಿದ್ದಾಳೆ. ಈಗ ಈಕೆಯ ಮದುವೆಗೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

    ಕೇವಲ ಮೂರು ದಿನದಲ್ಲಿ ಬರೋಬ್ಬರಿ 60 ಜನರನ್ನು ಮದುವೆಯಾದ ಮಹಿಳೆ ಆಸ್ಟ್ರೇಲಿಯಾದ ಕಾರ್ಲಿ ಸಾರೆ (40). ತನ್ನ ಮದುವೆಯ ಬಗ್ಗೆ ಮಾತನಾಡಿದ ಕಾರ್ಲಿ ಸಾರೆ ಅವರು, ‘ನನಗೆ ನನ್ನ ನಿರ್ಧಾರದ ಬಗ್ಗೆ ಹೆಮ್ಮೆಯಿದೆ. ನನ್ನ ಜೀವನದಲ್ಲಿ ಇವರೆಲ್ಲರೂ ಬಹಳ ಮುಖ್ಯ. ಆದ್ದರಿಂದ ನನಗೆ ಬೇಕು ಎನಿಸಿದ ಎಲ್ಲ ಆಪ್ತರನ್ನೂ ಒಟ್ಟಿಗೆ ಮದುವೆಯಾಗಿದ್ದೇನೆ’ ಎಂದು ಹೇಳಿಕೊಂಡಿದ್ದಾಳೆ.

    Continue Reading

    LATEST NEWS

    Trending