Monday, July 4, 2022

ಬೆಳ್ತಂಗಡಿ: ದಿನೇಶ್‌ ಕನ್ಯಾಡಿಗೆ ನ್ಯಾಯಕ್ಕಾಗಿ ಜಾಥಾ- SDPI ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಬೆಳ್ತಂಗಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ದಿನೇಶ್ ಕನ್ಯಾಡಿಗೆ ನ್ಯಾಯ ದೊರಕಿಸಿಕೊಡಿ ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾದ ವತಿಯಿಂದ ಬೆಳ್ತಂಗಡಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮಂಗಳೂರಿನ ಕಚೇರಿಗೆ ಬೃಹತ್ ಜಾಥಾ ಮಾರ್ಚ್‌ 29ರಂದು ನಡೆದಿತ್ತು.

ಆದರೆ ಇದೀಗ ಕಾನೂನುಬಾಹಿರವಾಗಿ ಪಕ್ಷದ ಕಾರ್ಯಕರ್ತರು ಮೆರವಣಿಗೆ ನಡೆಸಿ ಸಮಾಜದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಲು ಕಾರಣರಾಗಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಗರದಲ್ಲಿ ನಿಷೇಧಾಜ್ಞೆ ಇದ್ದರೂ ಕೂಡಾ ಕಾರ್ಯಕರ್ತರು ಅಕ್ರಮ ಕೂಟ ಸೇರಿ ಮೆರವಣಿಗೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ ಮಹೇಶ್ ಜೆ ಅವರು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ ವಿ ಅವರು ಜಿಲ್ಲೆಯಲ್ಲಿ ನಿಷೇಧಾಜ್ಞೆ ಘೋಷಿಸಿದ್ದರೂ

ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಮಾರ್ಚ್‌ 29ರಂದು ಬೆಳಿಗ್ಗೆ 10 ಗಂಟೆಯಿಂದ ಎಸ್.ಡಿ.ಪಿ.ಐ ಮುಖಂಡರು ಹಾಗೂ ಕಾರ್ಯಕರ್ತರು ಬೆಳ್ತಂಗಡಿ ಕಸಬಾ ಗ್ರಾಮದ ಬೆಳ್ತಂಗಡಿ ಬಸ್ಸು ನಿಲ್ದಾಣದ ಬಳಿ ಪಿಕಪ್ ವಾಹನದಲ್ಲಿ ಧ್ವನಿವರ್ಧಕ ಉಪಯೋಗಿಸಿ,

ಪಾದಯಾತ್ರೆ ಮುಖೇನ ಮೆರವಣಿಗೆ ನಡೆಸಿ ಕಾನೂನನ್ನು ಉಲ್ಲಂಘಿಸಿದ್ದಾರೆ. ಬಳಿಕ ಈ ಕಾಲ್ನಡಿಗೆ ಜಾಥಾ ಮಂಗಳೂರಿನಲ್ಲೂ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿಯಿಂದ ಹೊರಟ ಜಾಥಾವು ಸಂಜೆ ಮಂಗಳೂರು ನಗರದ ಕ್ಲಾಕ್‌ಟವರ್ ಬಳಿ ಸಮಾಪನಗೊಂಡಿತ್ತು.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹಾಲಿನ ಪುಡಿ ಪ್ಯಾಕೇಟ್‌ನಲ್ಲಿಟ್ಟು ಸಾಗಿಸುತ್ತಿದ್ದ ಅಕ್ರಮ ಚಿನ್ನ ವಶಕ್ಕೆ

ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿಟ್ಟು ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.ಕಾಸರಗೋಡಿನ ಪ್ರಯಾಣಿಕ ಪೇಸ್ಟ್ ರೂಪಕ್ಕೆ ಪರಿವರ್ತಿಸಿದ 31,31,440...

ಬಂಟ್ವಾಳದ ವಿಶ್ವ ಹಿಂದು ಪರಿಷತ್ ವತಿಯಿಂದ ರಕ್ತದಾನ ಶಿಬಿರ

ಬಂಟ್ವಾಳ: ವಿಶ್ವಹಿಂದುಪರಿಷತ್ ಬಜರಂಗದಳ ಪರಶುರಾಮ ಶಾಖೆ ಬಂಟ್ವಾಳ ಪ್ರಖಂಡದ ವತಿಯಿಂದ ಕೆಎಮ್‌ಸಿ ಮಂಗಳೂರು ಮತ್ತು ವೆನ್ಲಾಕ್ ಆಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಯಿತು.ರಕ್ತದಾನ ಶಿಬಿರದಲ್ಲಿ 180 ಯೂನಿಟ್ ರಕ್ತ ಸಂಗ್ರಹ...

ಕಾರ್ಕಳದಲ್ಲಿ ಅಕ್ರಮ ಗೋಸಾಗಾಟ: ಓರ್ವ ಪರಾರಿ-ಕಾರಿನಲ್ಲೇ ಅಸುನೀಗಿದ ದನ

ಕಾರ್ಕಳ: ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ಚೇಸ್ ಮಾಡಿದ ಘಟನೆ ಕಾರ್ಕಳದ ಹೆಬ್ರಿ ಕೆರೆಬೆಟ್ಟು ಮಹಾಲಿಂಗೇಶ್ವರ ದೇವಸ್ಥಾನದ ಬಳಿ ನಡೆದಿದೆ.ಉಡುಪಿಯ ಮಲ್ಪೆ...