STATE
ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಆಯ್ಕೆ
Published
3 years agoon
By
Adminಮಂಗಳೂರು: ಕರ್ನಾಟಕ ಸರಕಾರದ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಹಿರಿಯ ಪತ್ರಕರ್ತ, ಮಂಗಳೂರು ಪ್ರೆಸ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಆಯ್ಕೆಗೊಂಡಿದ್ದಾರೆ.
ಪತ್ರಿಕೋದ್ಯಮದಲ್ಲಿ 33 ವರ್ಷ ಸೇವೆ ಸಲ್ಲಿಸಿರುವ ಇವರು ಜಯಕಿರಣದಲ್ಲಿ ಕಳೆದ 16 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. 2018 ರಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ, 2008 ರಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಕೆ.ಸದಾಶವ ಶೆಣೈ ಅವರು ಆಯ್ಕೆಯಾಗಿದ್ದಾರೆ.
You may like
ಮಂಗಳೂರು/ಗದಗ : ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಯ ಕಾರು ಚಾಲಕ ನೇ*ಣಿಗೆ ಶರಣಾಗಿದ್ದಾರೆ. ಸುನಿಲ್ ಲಮಾಣಿ(25) ಆತ್ಮಹ*ತ್ಯೆ ಮಾಡಿಕೊಂಡವರು. ಸುನಿಲ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಮಲ್ಲಾಡ್ ಕಾಲೋನಿಯಲ್ಲಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆತ್ಮಹ*ತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸುನೀಲ್ ಲಮಾಣಿ ಆತ್ಮಹ*ತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶಾಸಕ ಚಂದ್ರು ಲಮಾಣಿ ಇತ್ತೀಚೆಗೆ ಖರೀದಿಸಿದ್ದ ಮನೆಯಲ್ಲಿ ಸುನೀಲ್ ಆತ್ಮಹ*ತ್ಯೆ ಮಾಡಿಕೊಂಡಿದ್ದು, ಆತ ಚಂದ್ರು ಅವರ ಸಂಬಂಧಿ ಎಂದು ತಿಳಿದುಬಂದಿದೆ . ಮನೆ ಕಟ್ಟುವ ವಿಚಾರದಲ್ಲಿ ಸಹೋದರರ ನಡುವೆ ಕಲಹ ಉಂಟಾಗಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ ಸುನಿಲ್ ಆತ್ಮಹ*ತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.
ಇದನ್ನೂ ಓದಿ : ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!
ಸ್ಥಳಕ್ಕೆ ಲಕ್ಷ್ಮೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹ*ತ್ಯೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.
ಮಂಗಳೂರು/ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ.
ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿಚಂದ್ರ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು.
ರವಿಚಂದ್ರ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟ್ಟಿದ್ದಾಗ ಈ ದುರಂತ ನಡೆದಿದೆ. ಕೆಳಗೆ ಜಿಗಿದ ಯೋಧರ ಮೇಲೆ ಸೇನಾ ವಾಹನ ಪಲ್ಟಿಯಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇದನ್ನೂ ಓದಿ: ಕರಾವಳಿ : ಏರುಪೇರಾಗುತ್ತಿರುವ ಹವಮಾನ ; ಹೆಚ್ಚುತ್ತಿರುವ ಕಾಯಿಲೆ
16 ವರ್ಷಗಳಿಂದ ನಾಗಾಲ್ಯಾಂಡ್ ರೈಫಲ್ಸ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಚಂದ್ರ ತಳವಾರ ಹುತಾತ್ಮರಾಗಿದ್ದು, ಇನ್ನೂ ನಾಲ್ಕು ವರ್ಷಗಳಲ್ಲಿ ನಿವೃತ್ತರಾಗಲಿದ್ದರು. ಮೃತರು ಪತ್ನಿ ಶೀತಲ್ ತಳವಾರ, 11 ವರ್ಷದ ಪುತ್ರಿ ಹಾಗೂ 8 ವರ್ಷದ ಪುತ್ರ ಸೇರಿದಂತೆ ಅಪಾರ ಬಂಧು ಬಳಗ ಅಗಲಿದ್ದಾರೆ.
ಇವರ ಇನ್ನೊಬ್ಬ ಚಿಕ್ಕ ಸಹೋದರ ಶಿವರಾಜ ತಳವಾರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನಿಬ್ಬರು ಸಹೋದರರು ಊರಲ್ಲಿಯೇ ಕೆಲಸ ಮಾಡುತ್ತಿದ್ದಾರೆ.
ಮಂಗಳೂರು/ಬೆಂಗಳೂರು: ಈಗಾಗಲೇ ಬಸ್ ಟಿಕೆಟ್ ದರ ಏರಿಕೆ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ಸರ್ಕಾರ ಮತ್ತೆ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ 9 ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆ ಕರ್ನಾಟಕ ಸರ್ಕಾರ ಬಜೆಟ್‌ಗೆ ಮುನ್ನವೇ ಬಿಯರ್ ದರ ಏರಿಕೆ ಮಾಡಿದೆ.
ಮದ್ಯದ ಬಾಟಲ್ಗೆ ಕನಿಷ್ಠ 10 ರಿಂದ 50 ರೂ.ವರೆಗೆ ಹೆಚ್ಚಳವಾಗಲಿದೆ. ಪ್ರತಿ ಬಿಯರ್ನಲ್ಲಿನ ಅಲ್ಕೋಹಾಲ್ ಅಂಶದ ಮೇಲೆ ದರ ಏರಿಕೆಯಾಗಲಿದ್ದು, ಜನವರಿ 20 ರಿಂದ ಇದು ಜಾರಿಯಾಗಲಿದೆ. ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟವನ್ನು ರಾಜ್ಯದಲ್ಲಿ ಉತ್ತೇಜಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಐಎಂಎಲ್ ಮದ್ಯದ ಬೆಲೆ ಶೇ 25 ರಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಬಿಯರ್ ದರ ಪರಿಷ್ಕರಿಸಲು 2024 ರ ಆಗಸ್ಟ್ನಲ್ಲಿಯೇ ಕರಡು ಅಧಿಸೂಚನೆ ಹೊರಡಿಸಲಾಗಿತ್ತು. ಮುಖ್ಯಮಂತ್ರಿಗಳು ದರ ಏರಿಕೆಗೆ ಸಮ್ಮತಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರೀಮಿಯಂ ಬಿಯರ್ ಬೆಲೆ ಏರಿಕೆಗೆ ಬ್ರೂವರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (BAI) ತಕರಾರು ವ್ಯಕ್ತಪಡಿಸಿದೆ. ದೇಶದಲ್ಲೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಬೆಲೆಗೆ ಬಿಯರ್ ಮಾರಾಟವಾಗುತ್ತಿದೆ. ಬೆಲೆ ಏರಿಕೆಯಿಂದ ಬಿಯರ್ ಮಾರಾಟ ಕಡಿಮೆಯಾಗಿದೆ ಎಂದು ಹೇಳಿದೆ.
ಎರಡು ಪಟ್ಟು ಹೆಚ್ಚಿದ ಬಿಯರ್ ಮಾರಾಟ :
ಕರ್ನಾಟಕದಲ್ಲಿ ಕಳೆದ ಎರಡು ವರ್ಷಗಳಿಂದ ಬಿಯರ್ ಮಾರಾಟ ಎರಡು ಪಟ್ಟು ಹೆಚ್ಚಾಗಿದೆ. ಕೋವಿಡ್ ನಂತರದ ಅವಧಿಯಲ್ಲಿ ಗ್ರಾಹಕರ ನಡವಳಿಕೆಯಲ್ಲಿನ ಬದಲಾವಣೆ ಮತ್ತು ಬೇಸಿಗೆಯ ತಾಪಮಾನದಲ್ಲಿನ ಏರಿಕೆ ಕೂಡ ಬಿಯರ್ ಬೇಡಿಕೆ ಹೆಚ್ಚಲು ಕಾರಣ ಎಂದು ಮೂಲಗಳು ತಿಳಿಸಿವೆ.