FILM
ಗುರುಪ್ರಸಾದ್ ಸಾವಿನಲ್ಲಿ ವಿಕೃತಿ ಕಾಣುವ ವ್ಯಕ್ತಿ ಜಗ್ಗೇಶ್: ಜಗದೀಶ್ ಆಕ್ರೋಶ
Published
4 weeks agoon
By
NEWS DESK2ನಿರ್ದೇಶಕ ಗುರುಪ್ರಸಾದ್ ಅವರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ ಆಯಿತು. ಕೂಡಲೇ ಜಗ್ಗೇಶ್ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿದರು. ಆದರೆ ಅವರು ಗುರುಪ್ರಸಾದ್ ನಿಧನದ ಬಳಿಕ ಕೆಳಮಟ್ಟದಲ್ಲಿ ಟೀಕೆ ಮಾಡಿದ್ದು ಸರಿಯಲ್ಲ ಎಂದು ಬಿಗ್ ಬಾಸ್ ಖ್ಯಾತಿಯ ಲಾಯರ್ ಜಗದೀಶ್ ಅವರು ಹೇಳಿದ್ದಾರೆ. ಈ ಮನಸ್ಥಿತಿಯನ್ನು ವಿಕೃತಿ ಎಂದು ಜಗದೀಶ್ ಹೇಳಿದ್ದಾರೆ.
ಗುರುಪ್ರಸಾದ್ ಸಾವಿನ ನಂತರ ಜಗ್ಗೇಶ್ ಹೇಳಿದ ಮಾತುಗಳನ್ನು ಜಗದೀಶ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ವಾವ್ ಜಗ್ಗೇಶ್.. ಸತ್ತ ವ್ಯಕ್ತಿ ಬಗ್ಗೆ ಎಂತಹಾ ವಿಶ್ಲೇಷಕ ಕೃತಿಯನ್ನು ಕೊಟ್ಟೆ. ಸಾವಿನಲ್ಲೂ ವಿಕೃತಿ ಕಾಣಬಹುದಾಗಿದೆ ಎಂಬುದನ್ನು ನಿನ್ನಿಂದ ಕಲಿಯಬೇಕಾಗಿದೆ. ಸಂಸ್ಕೃತಿಯೇ ಅದೇ ರೀತಿ ಇದೆಯೋ ಅಥವಾ ನಿನ್ನ ಮನಸ್ಥಿತಿಯೇ ಅಷ್ಟು ವಿಕೃತವಾಗಿದೆಯೋ ನನಗೆ ಗೊತ್ತಿಲ್ಲ. ಗುರುಪ್ರಸಾದ್ಗೆ ಕೆರೆತ ಇತ್ತಾ? ಕೀವು, ರಕ್ತ ಬರುತ್ತಿತ್ತಾ? ಎಂಥ ಮನುಷ್ಯ ನೀನು? ಯಾವ ರೀತಿಯಲ್ಲಿ ಮನುಷ್ಯ ಎನ್ನಬೇಕೋ ತಿಳಿಯುತ್ತಿಲ್ಲ’ ಎಂದು ಜಗದೀಶ್ ಹೇಳಿದ್ದಾರೆ.
ನಿನ್ನನ್ನು ನೀನು ರಾಘವೇಂದ್ರರ ಭಕ್ತ ಅಂತ ಹೇಳ್ತೀಯ. ರಾಘವೇಂದ್ರನ ಭಕ್ತನಾಗಿ, ನಿನಗೆ ಲೈಫ್ ಕೊಟ್ಟ ಡೈರೆಕ್ಟರ್ ಬಗ್ಗೆ ಈ ರೀತಿ ಮಾತಾಡ್ತೀಯ. ‘ಮಠ’ ಸಿನಿಮಾದಲ್ಲಿ ಗುರುಪ್ರಸಾದ್ ನಿನಗೆ ಲೈಫ್ ಕೊಟ್ಟ. ಜಗ್ಗೇಶ್ ಯಾರು ಅಂತ ಇಡೀ ಕರ್ನಾಟಕ ಮರೆತುಹೋಗಿತ್ತು. ಸಾವಿನಲ್ಲೂ ವಿಕೃತಿ ಕಾಣುವಂತಹ ವ್ಯಕ್ತಿ ನೀನು ಎಂಬುದು ನನಗೆ ಗೊತ್ತಿರಲಿಲ್ಲ’ ಎಂದು ಜಗ್ಗೇಶ್ಗೆ ಜಗದೀಶ್ ಚಾಟಿ ಬೀಸಿದ್ದಾರೆ.
ಮಂಗಳೂರು/ಬೆಂಗಳೂರು: ಸರಿಯಾಗಿ ಒಂದು ತಿಂಗಳ ಬಳಿಕ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ಹಿಂದಿನ ರಹಸ್ಯ ಬಹಿರಂಗಗೊಂಡಿದೆ.
ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣದ ತನಿಖೆಯಿಂದ ಹಲವು ಸಂಗತಿಗಳು ಬಯಲಿಗೆ ಬಂದಿವೆ. ಅವರು ಹಣ ಇಲ್ಲದೇ ಸಾಲ ಮಾಡಿಕೊಂಡಿದ್ದರು. ಸ್ನೇಹಿತರು, ಸಂಬಂಧಿಕರು ಸೇರಿ ಹಲವರ ಬಳಿ ಕೋಟ್ಯಂತರ ರೂ. ಸಾಲ ಮಾಡಿದ್ದಾರೆ.
ಇದನ್ನೂ ಓದಿ: ತಾಯಿಯ ಆಸೆ ಈಡೇರಿಸಲು ಹೋಗಿ ಕಂಬಿ ಎಣಿಸುತ್ತಿರುವ ಮಗ !
ಸಾಲದಿಂದ ರೋಸಿ ಹೋಗಿದ್ದ ಗುರುಪ್ರಸಾದ್, ಆನ್ ಲೈನ್ ಜೂಜಿನ ಚಟಕ್ಕೆ ಸಿಲುಕಿರುವ ಬಗ್ಗೆ ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ. ಸಾಲ ಹೆಚ್ಚಾದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸಾಲ ಕೇಳುವಾಗ ‘ಫಿಲ್ಮ್ ಮಾಡ್ತಿದ್ದೀನಿ, ಸಿನಿಮಾದಿಂದ ಖಂಡಿತ ಹಣ ಬರುತ್ತೆ, ಆಗ ಹಣ ವಾಪಸ್ ಕೊಡುತ್ತೀನಿ ಎಂದು ಹೇಳುತ್ತಿದ್ದರಂತೆ. ಹೀಗಾಗಿ ಆನ್ ಲೈನ್ ಗೇಮ್ ಗಳಲ್ಲಿ ಬೆಟ್ಟಿಂಗ್ ಆಡುತ್ತಿದ್ದರು ಎಂದು ತಿಳಿದುಬಂದಿದೆ. ಅದರಲ್ಲೂ ಗುರುಪ್ರಸಾದ್ ರಮ್ಮಿ ಸರ್ಕಲ್ ಸುಳಿಗೆ ಸಿಲುಕ್ಕಿದ್ದರು. ಸಾಲ ಹೆಚ್ಚಾದ್ದಂತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
FILM
ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್
Published
13 hours agoon
03/12/2024By
NEWS DESK4ಮಂಗಳೂರು/ನವದೆಹಲಿ : ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಸಹೋದರಿ ಅಲಿಯಾ ಫಕ್ರಿಯನ್ನು ಬಂಧಿಸಲಾಗಿದೆ. ಮಾಜಿ ಪ್ರಿಯಕರ ಎಡ್ವರ್ಡ್ ಜೇಕಬ್ಸ್(35) ಮತ್ತು ಅನಸ್ತಾಸಿಯಾ ಎಟಿಯೆನ್ನೆಯನ್ನು ಹ*ತ್ಯೆಗೈದಿರುವ ಗಂಭೀರ ಆರೋಪ ಅಲಿಯಾ ವಿರುದ್ಧ ಕೇಳಿ ಬಂದಿದೆ. ಎಡ್ವರ್ಡ್ ಜೇಕಬ್ಸ್ ಮತ್ತು ಆತನ ಸ್ನೇಹಿತೆ ಅನಸ್ತಾಸಿಯಾ ನೆಲೆಸಿದ್ದ ಎರಡು ಅಂತಸ್ತಿನ ಕಟ್ಟಡಕ್ಕೆ ಅಲಿಯಾ ಫಕ್ರಿ ಬೆಂ*ಕಿ ಹಚ್ಚಿದ್ದರು. ನೀವೆಲ್ಲರೂ ಸಾಯಿರಿ ಎಂಬುದಾಗಿ ಆಕೆ ಕೂಗಾಡಿದ್ದರು ಎಂಬ ಬಗ್ಗೆ ವರದಿಯಾಗಿದೆ.
ಬೆಂ*ಕಿ ಸಂಪೂರ್ಣವಾಗಿ ಕಟ್ಟಡವನ್ನು ಆವರಿಸಿದ್ದರಿಂದ ಎಡ್ವರ್ಡ್ ಜೇಕಬ್ಸ್ ಮತ್ತು ಅನಸ್ತಾಸಿಯಾಗೆ ತಪ್ಪಿಕೊಳ್ಳಲಾಗಿರಲಿಲ್ಲ. ಹೀಗಾಗಿ, ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಪ್ರಾ*ಣಬಿಟ್ಟಿದ್ದರು.
ಇದನ್ನೂ ಓದಿ : ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ ಅನೌನ್ಸ್; ಶಿವಾಜಿ ಮಹಾರಾಜ್ ಆಗಿ ಡಿವೈನ್ ಸ್ಟಾರ್
ಜೇಕಬ್ಸ್ ಒಂದು ವರ್ಷದ ಹಿಂದೆ ಅಲಿಯಾ ಫಕ್ರಿಯೊಂದಿಗೆ ಬ್ರೇಕ್ ಅಪ್ ಮಾಡಿಕೊಂಡಿದ್ದ. ಆದರೂ ಅಲಿಯಾ ನನ್ನ ಮಗನನ್ನು ಹಿಂಬಾಸುತ್ತಿದ್ದಳು ಎಂಬುದಾಗಿ ಜೇಕಬ್ಸ್ ತಾಯಿ ಆರೋಪಿಸಿದ್ದಾರೆ. ಸದ್ಯ ಅಲಿಯಾರನ್ನು ನ್ಯೂಯಾರ್ಕ್‌ನ ಕ್ರಿಮಿನಲ್ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಜಿಲ್ಲಾ ಅಟಾರ್ನಿ ಮೆಲಿಂಡಾ ಜಾಮೀನು ನೀಡಲು ನಿರಾಕರಿಸಿದೆ ಎಂದು ತಿಳಿದುಬಂದಿದೆ.
FILM
ರಿಷಬ್ ಶೆಟ್ಟಿಯಿಂದ ಹೊಸ ಸಿನಿಮಾ ಅನೌನ್ಸ್; ಶಿವಾಜಿ ಮಹಾರಾಜ್ ಆಗಿ ಡಿವೈನ್ ಸ್ಟಾರ್
Published
14 hours agoon
03/12/2024By
NEWS DESK4ಮಂಗಳೂರು/ ಬೆಂಗಳೂರು : ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಬಳಿಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದಾರೆ. ಅವರ ಮುಂದಿನ ಚಿತ್ರಗಳ ಬಗ್ಗೆ ಸಹಜವಾಗೇ ಕುತೂಹಲ ಹುಟ್ಟಿಕೊಂಡಿದೆ. ಅಲ್ಲದೇ, ಕಾಂತಾರ ಫ್ರೀಕ್ವೆಲ್‌ನಲ್ಲಿ ಬ್ಯುಸಿ ಆಗಿದ್ದಾರೆ. ಈ ನಡುವೆ ಅವರು ಟಾಲಿವುಡ್ ಅಂಗಳಕ್ಕೂ ಕಾಲಿಡುತ್ತಿರೋದು ಗೊತ್ತಿರೋ ವಿಚಾರ. ತೆಲುಗಿನ ‘ಜೈ ಹನುಮಾನ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಇದೀಗ ರಿಷಬ್ ಕಡೆಯಿಂದ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ಹೌದು, ಅವರು ಬಾಲಿವುಡ್ ಅಂಗಳಕ್ಕೆ ಹಾರಿದ್ದಾರೆ.
ಶಿವಾಜಿ ಕಥೆಯಲ್ಲಿ ರಿಷಬ್ :
ಡಿವೈನ್ ಸ್ಟಾರ್ ಪ್ಯಾನ್ ಇಂಡಿಯಾ ಸಿನಿಮಾ ಛತ್ರಪತಿ ಶಿವಾಜಿ ಮಹಾರಾಜ್‌ನಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಪೋಸ್ಟರ್ ಕೂಡ ಬಿಡುಗಡೆಯಾಗಿದ್ದು, ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ರಿಷಬ್ ಶೆಟ್ಟಿ, ಭಾರತದ ಮಹಾನ್ ಯೋಧ, ರಾಜ ಶಿವಾಜಿಯ ಜೀವನ ಚರಿತ್ರೆಯನ್ನು ತೆರೆಗೆ ತರುತ್ತಿರುವುದು ನಮ್ಮ ಗೌರವ ಹಾಗೂ ಹೆಮ್ಮೆ. ಇದು ಬರೀ ಸಿನಿಮಾ ಅಲ್ಲ, ದುಷ್ಟರ ವಿರುದ್ಧ ಹೋರಾಡಿ ಮೊಘಲ್ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದ ವೀರ ಯೋಧನ ಕಥೆ. ತೆರೆ ಮೇಲೆ ಅದ್ಭುತ ಆ್ಯಕ್ಷನ್ ಡ್ರಾಮಾ ನೋಡಲು ಸಿದ್ಧರಾಗಿ ಎಂದು ಬರೆದುಕೊಂಡಿದ್ದಾರೆ.
ಇನ್ನು ಈ ಪೋಸ್ಟ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವರು ಶುಭಹಾರೈಸಿದರೆ, ಇನ್ನು ಕೆಲವರು ಬೇಸರ ವ್ಯಕ್ತ ಪಡಿಸಿದ್ದಾರೆ. ಶಿವಾಜಿ ಬಗ್ಗೆ ಸಿನಿಮಾ ಮಾಡಿದರೆ ನಾವು ಕನ್ನಡಿಗರು ನೋಡಲ್ಲ ಎಂದು ಒಬ್ಬರು ಕಮೆಂಟ್ಸ್ ಮಾಡಿದ್ದು, ಮತ್ತೆ ಕೆಲವರು ನಿಮ್ಮ ಮೇಲೆ ನಿರೀಕ್ಷೆ ಇಡುವುದು ತಪ್ಪು ಎಂದಿದ್ದಾರೆ.
ಇದನ್ನೂ ಓದಿ : Hair care: ಸ್ನಾನ ಮಾಡುವಾಗ ಈ ಟಿಪ್ಸ್ ಪಾಲಿಸಿದರೆ ಕೂದಲು ಉದುರುವುದಿಲ್ಲ..!
ಸಿನಿಮಾ ರಿಲೀಸ್ ಯಾವಾಗ?
ಅಂದಹಾಗೆ ಬಾಲಿವುಡ್ ನಿರ್ಮಾಪಕ, ನಿರ್ದೇಶಕ ಸಂದೀಪ್ ಸಿಂಗ್ ‘ಶಿವಾಜಿ ಮಹಾರಾಜ್’ ಸಿನಿಮಾ ಮಾಡುತ್ತಿದ್ದು, 2027ರ ಜನವರಿ 21 ರಂದು ವಿಶ್ವದಾದ್ಯಂತ ಸಿನಿಮಾ ಬಿಡುಗಡೆ ಆಗಲಿದೆ. ಹಿಂದಿ, ಮರಾಠಿ, ಕನ್ನಡ, ತಮಿಳು ಸೇರಿದಂತೆ ಒಟ್ಟು 6 ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದೆ. ಇನ್ನು ಈ ಚಿತ್ರದಲ್ಲಿ ಶಿವಾಜಿ ಮಹಾರಾಜ್ ಪತ್ನಿಯ ಪಾತ್ರದಲ್ಲಿ ಆಶಾ ಭೋಂಸ್ಲೆ ಮೊಮ್ಮಗಳು ಝಾನೈ ಭೋಂಸ್ಲೆ ನಟಿಸಲಿದ್ದಾರೆ ಎಂದು ತಿಳಿದುಬಂದಿದೆ.
LATEST NEWS
ಚುನಾವಣಾ ಬಾಂಡ್ ಅಕ್ರಮ : ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ಗೆ ರಿಲೀಫ್
ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ರಹಸ್ಯ ಬಯಲು !
ದೇಶದ ಅತಿ ಕಿರಿಯ, ಕರ್ನಾಟಕ ಮೂಲದ ಈ ಪೈಲಟ್ ಯಾರು ಗೊತ್ತಾ ??
ಡಿ.7 ರಂದು ಕುಡುಪು ಕ್ಷೇತ್ರದಲ್ಲಿ ಷಷ್ಠಿ ಬ್ರಹ್ಮ ರಥೋತ್ಸವ
ಮಾಜಿ ಪ್ರಿಯಕರನ ಹ*ತ್ಯೆ ಆರೋಪ; ಬಾಲಿವುಡ್‌ನ ಖ್ಯಾತ ನಟಿಯ ತಂಗಿ ಅರೆಸ್ಟ್
ಸ್ಟೇಟಸ್ನಲ್ಲಿ ಫೋಟೋ ಹಾಕಿದ ಮಾಜಿ ಪ್ರಿಯಕರ; ಆ*ತ್ಮಹತ್ಯೆಗೆ ಶರಣಾದ ವಿವಾಹಿತೆ!
Trending
- BANTWAL5 days ago
ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು
- FILM4 days ago
ಪುತ್ರಿಯೊಂದಿಗೆ ಶ್ರೀಕೃಷ್ಣ ಮಠಕ್ಕೆ ನಟಿ ಮಾಲಾಶ್ರೀ ಭೇಟಿ; ಕೋಟಿ ಗೀತಾ ಲೇಖನ ಯಜ್ಞ ದೀಕ್ಷೆ ಸ್ವೀಕಾರ
- Ancient Mangaluru6 days ago
ಮಂಗಳೂರಿನ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ನೀ*ರುಪಾಲು
- LATEST NEWS6 days ago
ನಾನ್ ವೆಜ್ ತಿನ್ನಬೇಡ ಎಂದ ಪ್ರಿಯತಮ: ಆ*ತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್ !