Connect with us

DAKSHINA KANNADA

 “ಜಾಗೋ ಕಿಸಾನ್, ಕೃಷಿ ಸಂಹಾರ ಬಿಜೆಪಿಯ ಹುನ್ನಾರ” ಕಡಬದಲ್ಲಿ ಎಸ್.ಡಿ.ಪಿ.ಐ. ವತಿಯಿಂದ ಜಾಗೋ ಕಿಸಾನ್ ಅಭಿಯಾನಕ್ಕೆ ಚಾಲನೆ

Published

on

 “ಜಾಗೋ ಕಿಸಾನ್, ಕೃಷಿ ಸಂಹಾರ ಬಿಜೆಪಿಯ ಹುನ್ನಾರ” ಕಡಬದಲ್ಲಿ ಎಸ್.ಡಿ.ಪಿ.ಐ. ವತಿಯಿಂದ ಜಾಗೋ ಕಿಸಾನ್ ಅಭಿಯಾನಕ್ಕೆ ಚಾಲನೆ

ಕಡಬ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರ ಜಾರಿಗೆ ತಂದ ಕೃಷಿ ಮಸೂದೆ ವಿರುದ್ದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ “ಜಾಗೋ ಕಿಸಾನ್, “ಕೃಷಿ ಸಂಹಾರ ಬಿಜೆಪಿಯ ಹುನ್ನಾರ” ಎಂಬ ಶೀರ್ಷಿಕೆಯಡಿ ದೇಶವ್ಯಾಪಿ ಅಭಿಯಾನವನ್ನು ಕೈಗೊಂಡಿದ್ದು ಇದರ ಅಂಗವಾಗಿ ಎಸ್.ಡಿ.ಪಿ.ಐ ದ.ಕ ಜಿಲ್ಲೆಯ ಉದ್ಘಾಟನಾ ಕಾರ್ಯಕ್ರಮ ಅ.20 ರಂದು ಕಡಬದಲ್ಲಿ ನಡೆಯಿತು.

ಕಡಬ ತಾಲೂಕು ಕಛೇರಿ ಮುಂಭಾಗದಲ್ಲಿ ಎಸ್ ಡಿಪಿಐ ಜಾಗೋ ಕಿಸಾನ್ ಅಭಿಯಾನದ ಜಿಲ್ಲಾ ಉಸ್ತುವಾರಿ ಆಂಟನಿ ಪಿ.ಡಿ ಯವರು ಎಸ್ ಡಿಪಿಐ ಕಡಬ ತಾಲೂಕು ಅಧ್ಯಕ್ಷ ರಮ್ಲಾ ರವರಿಗೆ ಪಕ್ಷದ ದ್ವಜ ಹಸ್ತಾಂತರ ಮಾಡುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿ ಬಳಿಕ ಕಲಾರವರೆಗೆ ಪಾದಯಾತ್ರೆ ನಡೆಸಲಾಯಿತು.

ಕಲಾರದ ಭತ್ತದ ಗದ್ದೆಯಲ್ಲಿ ಭತ್ತದ ತೆನೆ ಕೊಯ್ಯುವ ಮೂಲಕ ಕಾರ್‍ಯಕ್ರಮವನ್ನು ಉದ್ಘಾಟಿಸಲಾಯಿತು. ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಸ್.ಡಿ.ಪಿ.ಐ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಮಜೀದ್ ಖಾನ್, ಕರ್ನಾಟಕ ರೈತ ಸಂಘ ಹಸಿರುಸೇನೆ ಜಿಲ್ಲಾದ್ಯಕ್ಷ,ರಾಜ್ಯ ಸಮಿತಿ ಸದಸ್ಯರಾದ ಸುರೇಶ್ ಭಟ್ ಕೊಜಂಬೆ, ಕರ್ನಾಟಕ ರೈತ ಸಂಘ ಹಸಿರು ಸೇನೆ ಕಡಬ ತಾಲೂಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್, ಜೆಡಿ ಎಸ್ ಮುಖಂಡ ಸೈಯದ್ ಮೀರಾ ಸಾಹೇಬ್, ಜಾಗೋ ಕಿಸಾನ್‌ನ ಜಿಲ್ಲಾ ಉಸ್ತುವಾರಿ ಆಂಟನಿಯವರು ಮಾತನಾಡಿದರು.

ವೇದಿಕೆಯಲ್ಲಿ ಎಸ್.ಡಿ.ಪಿ.ಐ. ಜಿಲ್ಲಾ ಪ್ರ. ಕಾರ್ಯದರ್ಶಿ ಶಾಹುಲ್ ಹಮೀದ್, ದಲಿತ ಮುಖಂಡ ಎಸ್.ಡಿ.ಪಿ.ಐ ಜಿಲ್ಲಾ ಸಮಿತಿಯ ಸದಸ್ಯ ಆನಂದ ಮಿತ್ತಬೈಲು, ಕಾರ್ಪೋರೇಟರ್ ಮುನೀಬ್ ಬೇಂಗ್ರೆ, ಪಿ.ಎಫ್.ಐ.ಉಪ್ಪಿನಂಗಡಿ ವಲಯಾಧ್ಯಕ್ಷ ಹಮೀದ್ ಮೆಜೆಸ್ಟಿಕ್, ದ.ಸಂ.ಸ. ಪುತ್ತೂರು ತಾಲೂಕು ಸಂಘಟನಾ ಸಂಚಾಲಕರಾದ ಬಾಬು ಸವಣೂರು, ಗಣೇಶ್ ಕುರಿಯಾನ,ಎಸ್.ಡಿ.ಪಿ.ಐ ಕಡಬ ತಾಲೂಕು ಅಧ್ಯಕ್ಷ ರಮ್ಲಾ ಸನ್‌ರೈಸ್, ಹಿರಿಯ ಕೃಷಿಕ ಅಬ್ದುಲ್ ಖಾದರ್ ಪರಪ್ಪು ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಹಿರಿಯರಾದ ಕುಂಞ, ಅಂಬೋಡಿ ಹಾಗೂ ಕಿರಿಯ ಕೃಷಿಕ ಮಹಮ್ಮದ್ ಅಲಿ ರವರಿಗೆ ಪ್ರೊ.ನಂಜುಡ ಸ್ವಾಮಿ ಹೆಸರಿನಲ್ಲಿ ಸ್ಮರಣಿಕೆ ನೀಡಿ ಗೌರವಹಿಸಲಾಯಿತು.

ಸಾದಿಕ್ ಅತ್ತಾಜೆ ಸ್ವಾಗತಿಸಿದರು. ಎಸ್.ಡಿ.ಪಿ.ಐ. ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ವಂದಿಸಿದರು.
ಕಡಬ ತಾಲೂಕು ಎಸ್ ಡಿಪಿಐ ಕಾರ್ಯದರ್ಶಿ ರಫೀಕ್ ನೆಲ್ಯಾಡಿ ಕಾರ್‍ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending