Sunday, November 27, 2022

ಮಂಗಳೂರು: ಪೋಸ್ಟ್‌ಮ್ಯಾನ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಎರಡು ವರ್ಷಗಳ ಹಿಂದೆ ಮಂಗಳೂರಿನ ಅಶೋಕ ನಗರದ ಅಂಚೆ ಕಚೇರಿಯ ಪೋಸ್ಟ್ ಮ್ಯಾನ್ ದಿನೇಶ್ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣದ ಆರೋಪಿ ಮಂಗಳೂರು ನಗರದ ಬೋಳೂರು ಮಠದಕಣಿ ನಿವಾಸಿ ಮನೀಶ್ ನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರು 6 ನೇ ಜೆಎಂ ಎಫ್ ಸಿ ನ್ಯಾಯಾಲಯ ತೀರ್ಪು ನೀಡಿದೆ.


ಪೋಸ್ಟ್ ಮ್ಯಾನ್ ದಿನೇಶ್ ಅವರು 2020 ಜೂನ್ 16 ರಂದು ಬೆಳಗ್ಗೆ ಮಠದಕಣಿಯ ಮನೀಶ್ ನಿಗೆ ರಿಜಿಸ್ಟರ್ಡ್ ಪೋಸ್ಟ್ ಬಟವಾಡೆ ಮಾಡಲು ಹೋಗಿದ್ದ ಸಂದರ್ಭದಲ್ಲಿ ಮನೀಶ್ ದಿನೇಶ್ ಅವರನ್ನು ಅವಾಚ್ಯವಾಗಿ ಬೈದು ನಿಂದಿಸಿ ಕಬ್ಬಿಣದ ರಾಡ್‌ ನಿಂದ ಹಲ್ಲೆ ನಡೆಸಿ ದೂಡಿ ಹಾಕಿ ಕಾಗದ ಪತ್ರಗಳನ್ನು ಹರಿದು ಅವರ ಬೈಕನ್ನು ಜಖಂ ಗೊಳಿಸಿ ಸುಮಾರು 13,500 ರೂಪಾಯಿ ನಷ್ಟ ಉಂಟು ಮಾಡಿದ್ದರು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಠಾಣೆಯ ಇನ್ಸ್ ಪೆಕ್ಟರ್ ಹಾರೂನ್ ಅಖ್ತರ್ ಅವರು ಪ್ರಕರಣದ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ 6 ನೇ ಜೆಎಂ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪೂಜಾಶ್ರೀ ಎಚ್.ಎಸ್. ಅವರು ಸಾಕ್ಷಿಗಳ ವಿಚಾರಣೆ ನಡೆಸಿ ವಾದ ವಿವಾದಗಳನ್ನು ಆಲಿಸಿ ಆರೋಪಿ ಮನೀಶ್ ತಪ್ಪಿತಸ್ಥ ಎಂದು ನಿರ್ಣಯಿಸಿ ಆರೋಪಿಗೆ ಐಪಿಸಿ 427 ಅನ್ವಯ 2500 ರೂಪಾಯಿ ದಂಡ ಹಾಗೂ ದಂಡ ಪಾವತಿಸಲು ತಪ್ಪಿದರೆ 10 ದಿನಗಳ ಸಾಮಾನ್ಯ ಸಜೆ, ಐಪಿಸಿ 332 ಅನ್ವಯ 10 ತಿಂಗಳ ಸಾಮಾನ್ಯ ಶಿಕ್ಷೆ, ಐಪಿಸಿ 353 ಅನ್ವಯ 5 ತಿಂಗಳ ಸಜೆ, ಐಪಿಸಿ 324 ಅನ್ವಯ 6 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

ಈ ಪ್ರಕರಣದಲ್ಲಿ ಸರಕಾರದ ಪರವಾಗಿ ಮಂಗಳೂರಿನ 6 ನೇ ನ್ಯಾಯಾಲಯದ ಪ್ರಭಾರ ಹಿರಿಯ ಸಹಾಯಕ ಸರಕಾರಿ ಅಭಿಯೋಜಕ ಮೋಹನ್ ಕುಮಾರ್ ಬಿ. ಅವರು ವಾದ ಮಂಡಿಸಿದ್ದರು.

LEAVE A REPLY

Please enter your comment!
Please enter your name here

Hot Topics

ವಿಶ್ವದಲ್ಲೇ ಬೃಹತ್ ಗಾತ್ರದ ಮೂತ್ರಕೋಶದ ಕಲ್ಲು ಹೊರತೆಗೆದ ಮಣಿಪಾಲ ವೈದ್ಯರು..!

ಉಡುಪಿ: ವ್ಯಕ್ತಿಯೋರ್ವರ 11.5 x 7.5 ಸೆಂಮೀ ಅಳತೆಯ 672 ಗ್ರಾಂ ತೂಕದ ಮೂತ್ರಕೋಶದ ಕಲ್ಲನ್ನು ಮಣಿಪಾಲದ ಕಸ್ತೂರಿ ಬಾ ಆಸ್ಪತ್ರೆಯಲ್ಲಿ ಶಸ್ತ್ರಕ್ರಿಯೆ ನಡೆಸಿ ಹೊರೆ ತೆಗೆದಿರುವ ಘಟನೆ ನಡೆದಿದೆ. ಇದು ವಿಶ್ವದಲ್ಲಿ ಇಲ್ಲಿಯವರೆಗೆ...

ಸುಳ್ಯ: ಸಚಿವ ಅಂಗಾರ ಅವರಿಗೆ ಡೆಂಗ್ಯೂ ದೃಢ-ಆಸ್ಪತ್ರೆಗೆ ದಾಖಲು

ಸುಳ್ಯ: ಶಾಸಕ, ಬಂದರು, ಮೀನುಗಾರಿಕೆ ಹಾಗೂ ಒಳ ನಾಡು ಜಲ ಸಾರಿಗೆ ಸಚಿವ ಎಸ್‌. ಅಂಗಾರ ಅವರಿಗೆ ಡೆಂಗ್ಯೂ ದೃಢಪಟ್ಟ ಕಾರಣ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.  ಈ ಹಿನ್ನೆಲೆ ಅವರು ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಾಗಿರುವುದಾಗಿ...

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...