Connect with us

DAKSHINA KANNADA

Mangaluru: ಜೈನಮುನಿ ಹತ್ಯೆ ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಿ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಆಗ್ರಹ

Published

on

ಜೈನಮುನಿ ಹತ್ಯೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ ಒತ್ತಾಯಿಸಿದರು. 

ಮಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ.

ಇಲ್ಲಿ ಸರಕಾರ ಇದೆಯೋ ಇಲ್ಲವೋ ಎನ್ನುವ ಸಂಶಯ ಜನಸಾಮಾನ್ಯರಿಗೆ ಕಾಡತೊಡಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರ ಜಗದೀಶ್ ಶೇಣವ ಆರೋಪಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು ಕ್ರಿಮಿನಲ್‌ಗಳಿಗೆ ಪೊಲೀಸರ ಭಯ ಇಲ್ಲದಂತಾಗಿದೆ.

ಪೊಲೀಸರು, ಮಂತ್ರಿಗಳು, ಸರಕಾರ ವರ್ಗಾವಣೆ ದಂದೆಯಲ್ಲಿ ನಿರತರಾಗಿದ್ದಾರೆ.

ಹೀಗಾಗಿ ಕಾನೂನು ಸುವ್ಯವಸ್ಥೆ ಮಾಡಲು ಇವರಿಗೆ ಪುರುಸೊತ್ತು ಇಲ್ಲದಂತಾಗಿದೆ.

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸದನದಲ್ಲಿ ನಡೆದುಕೊಳ್ಳುವ ರೀತಿ ನೋಡಿದರೆ ಇದು ಸಾಬೀತಾಗಿದೆ ಎಂದು ನುಡಿದರು.

ಮಂಗಳೂರಿನಲ್ಲಿ ಮುಸ್ಲಿಂ ತರಕಾರಿ ವ್ಯಾಪಾರಿ ಹಿಂದು ನೌಕರರನ್ನು ಬೆಂಕಿ ಹಚ್ಚಿ ಸುಟ್ಟಿರುವುದು, ಬೆಂಗಳೂರಿನಲ್ಲಿ ಹಾಡಹಗಲೇ ಡಬ್ಬಲ್ ಮರ್ಡರ್ ಆಗಿರುವುದು, ಮೈಸೂರಿನಲ್ಲಿ ಯುವ ಹಿಂದು ಕಾರ್ಯಕರ್ತನನ್ನು ಕೊಲೆ ಮಾಡಿರುವುದು ಇದೀಗ ಚಿಕ್ಕೋಡಿಯಲ್ಲಿ ಸರ್ವಸಂಗ ತ್ಯಾಗಿ ಜೈನಮುನಿಯನ್ನು ಬರ್ಬರ ಹತ್ಯೆ ಮಾಡಲಾಗಿರುವುದು ಪೊಲೀಸರ ವೈಫಲ್ಯವನ್ನು ತೋರಿಸಿದೆ.

ಜೈನಮುನಿ ಹತ್ಯೆ ಪ್ರಕರಣ ಪ್ರಪಂಚದಲ್ಲೇ ಅತ್ಯಂತ ಬರ್ಬರವಾದ ಹತ್ಯೆಯಾಗಿದೆ.

ಹೀಗಿದ್ದರೂ ರಾಜ್ಯ ಗೃಹ ಸಚಿವರು ಇದನ್ನು ಒಂದು ಸಾಮಾನ್ಯ ಕೊಲೆ ಎಂಬಂತೆ ಹೇಳುತ್ತಿದ್ದಾರೆ.

ಇದರಲ್ಲಿ ಎರಡನೇ ಆರೋಪಿಯನ್ನೂ ರಕ್ಷಿಸುವ ಕೆಲಸ ಮಾಡಲಾಗುತ್ತಿದೆ.

ಈ ಎಲ್ಲಾ ಘಟನೆಗಳ ಹಿಂಧೆ ಯಾವುದೋ ಒಂದು ಷಡ್ಯಂತ್ರ ಇದೆ ಎಂದು ದೂರಿದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ರವಿಶಂಕರ ಮಿಜಾರ್, ನಾಯಕರಾದ ರಾಧಾಕೃಷ್ಣ ಮೊದಲಾದವರಿದ್ದರು.

BANTWAL

ಬೈಕ್‌ಗಳು ಪರಸ್ಪರ ಮು*ಖಾಮು*ಖಿ ; ಬಾಲಕಿ ಸಾ*ವು

Published

on

ಬಂಟ್ವಾಳ: ಬೈಕ್ ಗಳ ನಡುವೆ ಭೀ*ಕರ ಅ*ಪಘಾ*ತ ಸಂಭವಿಸಿ ಬೈಕ್ ನಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃ*ತಪಟ್ಟ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆ ಎಂಬಲ್ಲಿ ನಿನ್ನೆ (ಜ.14) ರಾತ್ರಿ ನಡೆದಿದೆ.

ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃ*ತ ಬಾಲಕಿ ಎಂದು ಗುರುತಿಸಲಾಗಿದೆ.

ಬಾಲಕಿಯ ತಂದೆ ಬೈಕ್ ಚಾಲಕ ಅಬ್ದುಲ್ ರಹಮಾನ್ ಕೂಡ ಗಾ*ಯಗೊಂಡಿದ್ದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

 

ಇದನ್ನೂ ಓದಿ : ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

 

ರಾಮಲ್ ಕಟ್ಟೆಯಿಂದ ಹೆದ್ದಾರಿಯಲ್ಲಿ ರಾಂಗ್ ಸೈಡ್ ನಲ್ಲಿ ಬಂದ ನೆತ್ತರಕೆರೆ ನಿವಾಸಿ ರಂಜಿತ್ ಎಂಬಾತ ಬಿ.ಸಿ ರೋಡಿನ ಕಡೆಯಿಂದ ತುಂಬೆ ಕಡೆಗೆ ಸರಿಯಾದ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿ*ಕ್ಕಿ ಹೊಡೆದಿದ್ದಾನೆ. ರಂಜಿತ್ ಗೆ ಕೂಡ ಗಾ*ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಅ*ಪಘಾ*ತ ನಡೆದ ರಭಸಕ್ಕೆ ಬೈಕ್ ಸಂಪೂರ್ಣ ಜ*ಖಂಗೊಂಡಿದೆ. ಘಟನಾ ಸ್ಥಳಕ್ಕೆ ಪಾಣೆಮಂಗಳೂರು ಟ್ರಾಫಿಕ್ ಎಸ್.ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

DAKSHINA KANNADA

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

Published

on

ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

 

ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Continue Reading

DAKSHINA KANNADA

ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

Published

on

ಮಂಗಳೂರು/ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಮಳೆಯಾಗಿದ್ದು, ಕೆಲವೆಡೆ ಮಳೆಗಾಲದಂತೆ ಜೋರಾಗಿ ಮಳೆಯಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಅಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ವೃತ್ತದ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆ

ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ?
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.

ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28 ಡಿ.ಸೆ ಮತ್ತು 20 ಡಿ. ಸೆ ಇರುವ ಸಾಧ್ಯತೆ ಇದ್ದು, ನಾಳೆಯೂ ಹೀಗೆ ಇರಲಿದೆ.

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ. ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ. ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.

Continue Reading

LATEST NEWS

Trending

Exit mobile version