DAKSHINA KANNADA
“ಜ.22 ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ”- ಕಾಂಗ್ರೆಸ್ ದ.ಕ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್..!
Published
2 years agoon
By
Adminಮಂಗಳೂರು: ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
“ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ.
ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ ಬಿಡುಗಡೆಗೊಳ್ಳುತ್ತಿಲ್ಲ.
ಸಂಪೂರ್ಣ ನಿಂತುಹೋಗಿದೆ. ವಿದ್ಯಾರ್ಥಿಗಳಿಂದ ಹಿಡಿದು ವಯೋವೃದ್ಧರವರೆಗೆ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇದನ್ನು ಮರೆಮಾಚಿ ರಾಜ್ಯ ಸರಕಾರ ಜನರ ಕಣ್ಣಿಗೆ ಮಣ್ಣೆರಚ್ಚುತ್ತಿದೆ. ಇದನ್ನು ಖಂಡಿಸಲು ಯಾತ್ರೆ ನಡೆಸಲಾಗುತ್ತಿದೆ” ಎಂದವರು ಹೇಳಿದರು.
“ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು ನಿಲ್ಲಿಸಿದೆ. ಕೃಷಿಕರಿಗೆ ಪೂರಕವಾಗಿ ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ.
ಜಿಎಸ್ಟಿ, ಟ್ಯಾಕ್ಸ್ ನಿಂದ ಜನರು ರೋಸಿಹೋಗಿದ್ದು ಅವರ ಧ್ವನಿಯಾಗಿ ಸರಕಾರದ ವೈಫಲ್ಯವನ್ನು ಖಂಡಿಸಲು ಪ್ರಜಾಧ್ವನಿ ಯಾತ್ರೆಯನ್ನು ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿದೆ.
ಇದೇ ಸಂದರ್ಭದಲ್ಲಿ ಅಶೋಕ್ ರೈ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ” ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್, ರೋಜಿ ಜಾನ್, ಎಂ.ಬಿ. ಪಾಟೀಲ್, ಕೆಪಿಸಿಸಿ ಉಸ್ತುವಾರಿ ಸಲೀಂ ಮುಹಮ್ಮದ್, ಮಧು ಬಂಗಾರಪ್ಪ, ಧ್ರುವ ನಾರಾಯಣ್, ಹೆಚ್. ಕೆ. ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ನವೀನ್ ಡಿಸೋಜ ಉಪಸ್ಥಿತರಿದ್ದರು.
Baindooru
ಕದ್ರಿ ಪಾರ್ಕ್ನಲ್ಲಿ ‘ಕಲಾಪರ್ಬ’; ಯು.ಟಿ.ಖಾದರ್ನಿಂದ ಲಾಂಛನ ಬಿಡುಗಡೆ
Published
40 minutes agoon
22/11/2024ಮಂಗಳೂರು : ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿ ಪಾರ್ಕ್ ನಲ್ಲಿ ಶರಧಿ ಪ್ರತಿಷ್ಟಾನವು ಆಯೋಜಿಸುವ ‘ ಕಲಾ ಪರ್ಬ ‘ ಇದರ ಲಾಂಛನ ಮತ್ತು ಕರಪತ್ರವನ್ನು ಇಂದು ಕರ್ನಾಟಕ ವಿಧಾನ ಸಭಾಧ್ಯಕ್ಷರಾದ ಯು.ಟಿ. ಖಾದರ್ ರವರು ಬಿಡುಗಡೆ ಗೊಳಿಸಿದರು.
ಕಲಾವಿದರೆಲ್ಲರನ್ನೂ ಒಗ್ಗೂಡಿಸಿ ವಿವಿಧ ಕಲಾ ಪ್ರಕಾರಗಳನ್ನು ಒಂದೇ ಕಡೆ ಅಭಿವ್ಯಕ್ತ ಪಡಿಸುವ ಮತ್ತು ಇದರ ಮೂಲಕ ಕಲಾ ಕ್ಷೇತ್ರ ಇನ್ನಷ್ಟು ವಿಕಸನವಾಗುವ ಉದ್ದೇಶವನ್ನು ಇಟ್ಟುಕೊಂಡು ಈ ಕಲಾ ಪರ್ಬವನ್ನು ಆಯೋಜಿಸಲಾಗುತ್ತಿದೆ. ಇಲ್ಲಿ ಮೂರ್ತ – ಅಮೂರ್ತ, ಹಿರಿಯ – ಕಿರಿಯ ಎಂಬ ಯಾವುದೇ ಅಂತರ, ಬೇಧ ಇಲ್ಲದೇ ಎಲ್ಲಾ ಕಲಾವಿದರು ತಮ್ಮ ಕಲಾ ಪ್ರಕಾರಗಳನ್ನು ಕಲಾ ವೀಕ್ಷಕರಿಗೆ, ಕಲಾಭಿಮಾನಿಗಳಿಗೆ ಕಲಾಕೃತಿಗಳ ಪ್ರದರ್ಶನ, ಮಾರಾಟ ಮತ್ತು ಪ್ರಾತ್ಯಕ್ಷಿಕೆ ಮೂಲಕ ಪರಿಚಯಿಸುವುದು ಪ್ರಮುಖವಾಗಿರುತ್ತದೆ. ಚಿತ್ರ ಕಲೆ, ಶಿಲ್ಪಕಲೆ ಮತ್ತು ನೃತ್ಯ ಪ್ರಕಾರಗಳ ವಿವಿಧ ರೂಪಗಳ ಅಭಿವ್ಯಕ್ತ ಹರಿವು, ಸೆಳವುಗಳ ಮೂಲಕ ಮೇಳದ ರೂಪದಲ್ಲಿ ಇಲ್ಲಿ ಆಗುತ್ತಿರುವುದು ಕಲಾ ಸಂಭ್ರಮ ಮತ್ತು ಕಲಾ ಜಂಗಮ.
ಸುಮಾರು 200 ಮಳಿಗೆಗಳಲ್ಲಿ ಕಲಾಕೃತಿ, ಛಾಯಾ ಚಿತ್ರ 30 ಮಳಿಗೆಗಳಲ್ಲಿ ಶಿಲ್ಪ ಕಲಾ ಪ್ರದರ್ಶನ ಮತ್ತು ಪ್ರಾತ್ಯಕ್ಷಿಕೆ ಇರುವುದು. ಕಲಾಕೃತಿಗಳನ್ನು ಮಿತ ದರದಲ್ಲಿ ಖರೀದಿಸುವವರಿಗೆ ಉತ್ತಮ ಅವಕಾಶವಿದು.
ಲಾಂಛನದ ಅರ್ಥ :
ಈ ಕಲಾಪರ್ಬದ ಲಾಂಛನವು ಒಂದು ಸಂದೇಶವನ್ನು ನೀಡುತ್ತಿದೆ. ಇಲ್ಲಿ ಒಂದು ಕ್ಯಾನ್ವಾಸ್ ನಲ್ಲಿ 3 ಬಣ್ಣಗಳ ಸಂಗಮ ( K ) ಇಲ್ಲಿ ಕ್ಯಾನ್ವಾಸ್ ಕಲಾಕೃತಿಯ ಪ್ರತೀಕವಾದರೂ ನಮ್ಮ ಸಮಾಜವೇ ಒಂದು ರೀತಿಯ ಕ್ಯಾನ್ವಾಸ್ ಎಂಬ ಚೌಕಟ್ಟು. ಈ ಬದುಕಿನ ಚೌಕಟ್ಟಿನ ಒಳಗೆ ಎಲ್ಲರದ್ದೂ ಒಂದು ರೀತಿಯ ಬಣ್ಣದ ಬದುಕು. ನಮ್ಮ ನಿತ್ಯ ದಿನಚರಿ, ಚಟುವಟಿಕೆಗಳಿಂದ ಸಮಾಜಕ್ಕೆ, ಪ್ರಕೃತಿಗೆ ಒಂದು ಕೊಡುಗೆಯನ್ನು ನೀಡಬೇಕಾದರೆ ನಮ್ಮ ಸೀಮಿತ ಚೌಕಟ್ಟಿನಿಂದ ವಾದ ಮತ್ತು ಪಾದಗಳನ್ನು ಹೊರಗಿಡಲೇ ಬೇಕು. ಇದರ ಪ್ರತಿ ರೂಪವಾಗಿ ಕ್ಯಾನ್ವಾಸ್ ನಿಂದ ಒಂದು ಕಡೆ ಕುಂಚ ( ವಾದ…ತತ್ವ, ಸಿದ್ದಾಂತ ) ಹೊರಗೆ ಬಂದಿರುತ್ತದೆ. ಇನ್ನೊಂದು ಕಡೆ ಹೆಜ್ಜೆ ( ಪಾದ…ನಡೆ, ನಡತೆ ) ಹೊರಗೆ ಬಂದಿರುತ್ತದೆ.
ಅಂದರೆ ಕಲಾಕ್ಷೇತ್ರದಲ್ಲಿ ಆಗಲಿ, ಸಮಾಜದಲ್ಲಾಗಲಿ ನಾವು ನಮ್ಮದೇ ಸೀಮಿತ ಬಣ್ಣ, ಬದುಕು ಎಂಬ ಚೌಕಟ್ಟಿನಲ್ಲಿ ಕಂಡು ಕೊಂಡದ್ದಕ್ಕಿಂತ, ನಾವು ಚೌಕಟ್ಟು ಮೀರಿ ಹೊರ ಆಯಾಮವನ್ನು ತಲುಪಲು ಪ್ರಯತ್ನಿಸಿದರೆ ( ಖಾಸಗಿ ಬದುಕಿನಿಂದ ಸಾಮಾಜಿಕ ಬದುಕಿಗೆ ) ಉತ್ತಮವಾದ ಕಲಾಕೃತಿಯನ್ನು ಮತ್ತು ಸಮಾಜವನ್ನು ರೂಪಿಸಬಹುದು ಎಂಬುದು ಈ ಲಾಂಛನದ ಒಳಾರ್ಥ.
ಅದೇ ರೀತಿ ಕರ ಪತ್ರದಲ್ಲಿ ಬಣ್ಣದ ಹುಡುಗಿಯೊಬ್ಬಳು ಸಂಭ್ರಮಿಸುತ್ತಿದ್ದಾಳೆ. ಆಕೆಯ ಮುಖ ಬಣ್ಣದ ಪಾಲೇಟ್ ಮತ್ತು ನೀರಿನ ಹೂಜಿ, ಕೈ, ಕಾಲುಗಳು ಕುಂಚ ( ಚಿತ್ರ ಕಲಾ ಮೇಳ ಆಗಿರುವುದರಿಂದ ) ಕೆಳಗಿನ ಪಾದದ ಕುಂಚಗಳಲ್ಲಿ ಹೆಜ್ಜೆ – ಗೆಜ್ಜೆ ( ಈ ಪರ್ಬದಲ್ಲಿ ನೃತ್ಯವೂ ಇರುವುದರಿಂದ ) ಉಟ್ಟ ಲಂಗವು ಶಿಲಾ ಹಾಸುಗಳ ಪ್ರತಿರೂಪ ( ಈ ಪರ್ಬದಲ್ಲಿ ಶಿಲ್ಪ ಕಲೆಯೂ ಇರುವುದರಿಂದ ) ಎದೆ ಭಾಗದಲ್ಲಿ ಕ್ಯಾಮೆರಾ ಲೆನ್ಸ್ ( ಈ ಪರ್ಬದಲ್ಲಿ ಛಾಯಾ ಚಿತ್ರ ಪ್ರದರ್ಶನವೂ ಇರುವುದರಿಂದ ) ಇದೆಲ್ಲರ ಪ್ರತೀಕವಾಗಿ ಈ ಚಿತ್ರವನ್ನು ರಚಿಸಲಾಗಿದೆ.
ಬನ್ನಿ ಕಲಾ ಪರ್ಬ ನಿಮ್ಮದೇ…ಬಣ್ಣದ ಲೋಕದಲ್ಲಿ ಸಂಭ್ರಮಿಸೋಣ. ನಿಮ್ಮ ಬೆಂಬಲವೇ ಈ ಪರ್ಬದ ಯಶಸ್ಸು
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
20 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
LATEST NEWS
ಶೀಘ್ರದಲ್ಲೇ ಉಬರ್ನಿಂದ ಶಟಲ್ ಬಸ್ ಸೇವೆ; ಯಾವಾಗ ಪ್ರಾರಂಭ?
ಉತ್ತರ ಕನ್ನಡದಲ್ಲಿ ಮಂಗನಬಾವು ಸೋಂಕು 125 ಕ್ಕೆ ಏರಿಕೆ
ಸದ್ದಿಲ್ಲದೇ ನಡೆಯಿತು ನಟಿ ರಕ್ಷಿತಾ ಸಹೋದರ ರಾಣಾ ಎಂಗೇಜ್ಮೆಂಟ್; ಪ್ರೇಮ್ ಇರಲಿಲ್ಲ ಯಾಕೆ?
ಧರ್ಮಸ್ಥಳದಲ್ಲಿ ಪೊಣ್ಣಂ ಪ್ರಭಾಕರ್ ವಿಶೇಷ ಪೂಜೆ
ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾ*ವು: ಮೂವರ ಬಂಧನ
ಕಾಸರಗೋಡು: ಮಹಿಳಾ ಪೊಲೀಸ್ಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ