Monday, October 18, 2021

ಬಹುಕಾಲದ ಗೆಳೆಯನ ಅಂತಿಮ ದರ್ಶನದ ವೇಳೆ ಕಣ್ಣೀರಿಟ್ಟ ಮಾಜಿ ಸಚಿವ ಜನಾರ್ದನ ಪೂಜಾರಿ

ಮಂಗಳೂರು: ಅನಾರೋಗ್ಯದ ಮಧ್ಯೆಯೂ ತನ್ನ ಬಹುಕಾಲದ ಗೆಳೆಯನ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ.


ಇಂದು ಮಿಲಾಗ್ರಿಸ್‌ ಚರ್ಚ್‌ನಲ್ಲಿ ರಾಜ್ಯ ಸಭಾ ಸದಸ್ಯ ಆಸ್ಕರ್‌ ಫರ್ನಾಂಡಿಸ್‌ ಅವರ ಅಂತಿಮ ದರ್ಶನ ಪಡೆಯಲು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಬಂದಿದ್ದರು. ಅಂತಿಮ ದರ್ಶನದ ವೇಳೆ ಭಾವುಕಗೊಂಡು, ಕಣ್ಣೀರಿಟ್ಟು ಕೆಲವು ನಿಮಿಷಗಳ ಕಾಲ ಮೌನವಾಗಿದ್ದುದು ಕಂಡು ಬಂತು.

 


ಇದೇ ವೇಳೆ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಮೇಯರ್‌ ಪ್ರೇಮಾನಂದ ಶೆಟ್ಟಿ ಅಂತಿಮ ದರ್ಶನ ಪಡೆದರು.

ಇಂದು ಸಂಜೆ ಪಾರ್ಥಿವ ಶರೀರ ಬೆಂಗಳೂರಿಗೆ ರವಾನೆಯಾಗಲಿದ್ದು, ನಾಳೆ ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಅಂತಿಮ ದರ್ಶನ ಪಡೆಯುವ ಸಾಧ್ಯತೆ ಹೆಚ್ಚಿದೆ.

ಆಸ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆಯೂ ಭೇಟಿ ನೀಡಿ ಮಾಧ್ಯಮದ ಮುಂದೆ ಕಣ್ಣೀರು ಹಾಕಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...