Home ದೇಶ-ವಿದೇಶ ಕೊರೊನಾ ವೈರಸ್ ವಿರುದ್ಧ ಅಂತಿಮ ಹೋರಾಟ : ಮಾ. 22 ರಂದು ದೇಶವ್ಯಾಪಿ ಜನತಾ ಕರ್ಫ್ಯೂ...

ಕೊರೊನಾ ವೈರಸ್ ವಿರುದ್ಧ ಅಂತಿಮ ಹೋರಾಟ : ಮಾ. 22 ರಂದು ದೇಶವ್ಯಾಪಿ ಜನತಾ ಕರ್ಫ್ಯೂ ಜಾರಿ..!!

ಕೊರೊನಾ ವೈರಸ್ ವಿರುದ್ಧ ಅಂತಿಮ ಹೋರಾಟ : ಮಾ. 22 ರಂದು ದೇಶವ್ಯಾಪಿ ಜನತಾ ಕರ್ಫ್ಯೂ ಜಾರಿ..!!

ನವದೆಹಲಿ : ಕರೋನಾ ವೈರಸ್ ವಿರುದ್ದ ಭಾರತ ಸಮರ ಸಾರಿದ್ದು, ಇದೇ ತಿಂಗಳ ಮಾರ್ಚ್ 22 ರಂದು ಜನತಾ ಕರ್ಪ್ಯೂ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.


ಪ್ರಪಂಚದಾದ್ಯಂತ ಜೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಇದು ಭಾರತದ 130 ಕೋಟಿ ಮಂದಿಯ ಆತಂಕಕ್ಕೆ ಕಾರಣವಾಗಿದೆ.

ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾರ್ಚ್ 22ರಂದು ಭಾನುವಾರ ಜನತಾ ಕರ್ಫ್ಯೂ ಆಚರಣೆಗೆ ಪ್ರಧಾನಿ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ.

ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ.

ಮುಂದಿನ ಕೆಲವು ವಾರ ಮನೆಯಿಂದ ಹೊರಗೆ ಬರಬೇಡಿ. ಈ ವೇಳೆ ಭಾನುವಾರ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ದೇಶದ ಜನತೆ ಮನೆಯಲ್ಲಿ ಇರಬೇಕು.

ಈ ಅವಧಿಯಲ್ಲಿ ಯಾರು ಹೊರಗಡೆ ಓಡಾಡಬೇಡಿ ಎಂದು ಮನವಿ ಮಾಡಿಕೊಂಡರು.

ವೈದ್ಯಕೀಯ ತುರ್ತು ಅಗತ್ಯ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ ಎಂದು ದೇಶದ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದು, ಕೊರೊನಾ ವೈರಸ್ ನಿಯಂತ್ರಣಕ್ಕೆ ಸರಕಾರ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಆದರೂ ಪರಿಸ್ಥಿತಿ ಕೈ ಮೀರಿದೆ. ಎಲ್ಲರೂ ಸರಕಾರ, ಸ್ಥಳಿಯಾಡಳಿತದ ಜತೆ ಸಹಕರಿಸಿ ಈ ಮಹಾ ಮಾರಿಯ ನಿಯಂತ್ರಣಕ್ಕೆ ಕೈ ಜೋಡಿಸಲು ಮೋದಿ ವಿನಂತಿಸಿದ್ದಾರೆ.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...