Connect with us

    ಕೇಂದ್ರ ಸಚಿವ ರಾಜನಾಥ್ ಸಿಂಗ್ ಜನವರಿ 27ರಂದು ಮಂಗಳೂರಿಗೆ

    Published

    on

    ಕೇಂದ್ರ ಸಚಿವ ರಾಜನಾಥ್ ಸಿಂಗ್ ಜನವರಿ 27ರಂದು ಮಂಗಳೂರಿಗೆ

    ಮಂಗಳೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಬೆಂಬಲಿಸಿ ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ರವರು ಆಗಮಿಸಲಿದ್ದಾರೆ.

    ಪೌರತ್ವ ಕಾಯಿದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಬಾಗವಹಿಸುವ ನಿರೀಕ್ಷೆ ಇದೆ. ಇದೆ ಸಂಧರ್ಬದಲ್ಲಿ ನಗರದ ಬಸ್ ,ಟ್ಯಾಕ್ಸಿ, ಮತ್ತು ಆಟೋ ಚಾಲಕರ ಸಂಘದ ಸದಸ್ಯರು ಬೆಂಬಲ ನೀಡಲಿದ್ದು ,ವ್ಯಾಪಾರಸ್ತರು ಸ್ವಯಂ ಪ್ರೇರಿತರಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮ್ಮ ಅಂಗಡಿ ಮುಂಗಟ್ಟುಗ ಳನ್ನು ಮುಚ್ಚಿ ಬೆಂಬಲ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

    ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳ ಸೇರಿದಂತೆ ಉಡುಪಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರ ದಿಂದ ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.  ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಹಾಲದ ಜೋಶಿ, ರಾಜ್ಯ ಬಿಜೆಪಿ ಅದ್ಯಕ್ಷ ನಳಿನ್ ಕುಮಾರ್ ಕಟೀಲ್, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ,ಉತ್ತರ ಕನ್ನಡ ಸಂಸದ ಅನಂತ್ ಕುಮಾರ್, ಮೈಸೂರು ಸಂಸದ ಪ್ರತಾಪ ಸಿಂಹ ಮತ್ತು ಕರಾವಳಿ ಭಾಗದ ಎಲ್ಲ ಶಾಸಕರು ಹಾಗೂ ರಾಜ್ಯ ಸರ್ಕಾರದ ಪ್ರಮುಖ ಸಚಿವರು ಬಾಗವಹಿಸಿಲಿದ್ದಾರೆ.

    ಪ್ರತಿಯೊಂದು ವಿಧಾನ ಸಭಾ ಕ್ಷೇತ್ರದ ಬೂತ್ ಮಟ್ಟದಿಂದ ಸ್ಥಳೀಯರೇ ಸಮಾವೇಶದಲ್ಲಿ ಭಾಗವಹಿಸಲು ವಾಹನದ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಸಾರ್ವಜನಿಕರಿಗೆ ವಾಹನದ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

    ಸಂಚಾರದಲ್ಲಿ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಪೊಲೀಸ್ ಇಲಾಖೆಯು ಮಾರ್ಗ ಸೂಚಿಯನ್ನು ರಚಿಸಿದ್ದು ಈ ನಿಟ್ಟಿ ನಲ್ಲಿ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

    ಪೌರತ್ವ ತಿದ್ದುಪಡಿ ಕಾಯಿದೆಯ ಕುರಿತು ಸಾರ್ವಜನಿಕರಿಗೆ ಏನಾದರೂ ಗೊಂದಲಗಳಿದಲ್ಲಿ ಈ ಸಮಾವೇಶದಲ್ಲಿ ಪಾಲ್ಗೊಂಡು ಮಾಹಿತಿ ತಿಳಿಯಬಹುದಾಗಿದೆ ಎಂದು ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಪಕ್ಷದ ಸಂಘಟಕರ ಪ್ರಕಟಣೆ ತಿಳಿಸಿದೆ.

    Click to comment

    Leave a Reply

    Your email address will not be published. Required fields are marked *

    International news

    9/11 ದಾಳಿ: ಆರೋಪಿಗಳಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ?

    Published

    on

    ಮಂಗಳೂರು/ವಾಷಿಂಗ್ಟನ್ : ಸುಮಾರು 3,000 ಜನರನ್ನು ಬಲಿಪಡೆದ 2001ರಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಆರೋಪಿಗಳ ಜತೆ ಮಾಡಿಕೊಂಡಿರುವ ವಿಚಾರಣಾಪೂರ್ವ ಒಪ್ಪಂದವನ್ನು ರದ್ದುಗೊಳಿಸುವಂತೆ ಸರ್ಕಾರವು ಫೆಡರಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.

    ದಾಳಿಯ ಪ್ರಮುಖ ಸಂಚುಕೋರ ಖಾಲಿದ್ ಶೈಖ್ ಮೊಹಮ್ಮದ್ ಮತ್ತು ಇತರ ಇಬ್ಬರು ಆರೋಪಿಗಳು ಹಾಗೂ ಪ್ರಾಸಿಕ್ಯೂಟರ್ ಗಳ ನಡುವೆ ಈಚೆಗೆ ವಿಚಾರಣಾಪೂರ್ವ ಒಪ್ಪಂದ ಏರ್ಪಟ್ಟಿತ್ತು. ಇದರಿಂದ ಶೈಖ್ ಹಾಗೂ ಇತರರಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ದೊರೆತಿದೆ.

    ‘ಶೈಖ್ ಹಾಗೂ ಇತರ ಇಬ್ಬರು ಸಹ ಆರೋಪಿಗಳ ತಪ್ಪೊಪ್ಪಿಗೆ ಸ್ವೀಕರಿಸಿದರೆ, ಅವರನ್ನು ಬಹಿರಂಗವಾಗಿ ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಸರ್ಕಾರ ಕಳೆದುಕೊಳ್ಳಲಿದೆ. ಸಾವಿರಾರು ಮಂದಿಯ ಸಾವಿಗೆ ಕಾರಣವಾದ ಮತ್ತು ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದ ಘೋರ ಕೃತ್ಯದ ಆರೋಪ ಹೊತ್ತಿರುವ ಮೂವರಿಗೆ ಗಲ್ಲು ಶಿಕ್ಷೆ ವಿಧಿಸುವ ಅವಕಾಶವೂ ತಪ್ಪಲಿದೆ’ ಎಂದು ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ನ್ಯಾಯಾಂಗ ಇಲಾಖೆಯು ಮಂಗಳವಾರ ವಾದಿಸಿದೆ.

    ಇದನ್ನೂ ಓದಿ: ತಿರುಪತಿ ದುರಂ*ತಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂ*ತಾಪ

    ಈ ಮೂವರು ಆರೋಪಿಗಳು ಕಳೆದ ಎರಡು ದಶಕಗಳಿಂದ ಕ್ಯೂಬಾದ ಗ್ವಾಂಟನಾಮೊದಲ್ಲಿರುವ ಅಮೆರಿಕ ಸೇನೆಯ ಜೈಲಿನಲ್ಲಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಖಾಲಿದ್ ಶೈಖ್ ತಪ್ಪೊಪ್ಪಿಗೆ ಹೇಳಿಕೆಯನ್ನು ಶುಕ್ರವಾರ ನೀಡಲಿದ್ದಾನೆ. ಇದರ ನಡುವೆಯೇ ಸರ್ಕಾರವು ಮೇಲ್ಮನವಿ ನ್ಯಾಯಾಲಯದ ಮೊರೆ ಹೋಗಿದೆ.

    2001ರ ಸೆಪ್ಟೆಂಬರ್ 11ರಂದು ಭಯೋತ್ಪಾದಕರಿಂದ ಅಪಹರಿಸಲಾದ ಎರಡು ಪ್ರಯಾಣಿಕ ವಿಮಾನಗಳು ನ್ಯೂಯಾರ್ಕ್ ನಗರದ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳಿಗೆ ಡಿಕ್ಕಿ ಹೊಡೆದಿದ್ದವು. ಮೂರನೇ ವಿಮಾನವು ವಾಷಿಂಗ್ಟನ್ ನಲ್ಲಿರುವ ಪೆಂಟಗನ್ ಗೆ ಅಪ್ಪಳಿಸಿತ್ತು. ನಾಲ್ಕನೇ ವಿಮಾನದಲ್ಲಿದ್ದ ಪ್ರಯಾಣಿಕರು ಅಪಹರಣಕಾರರೊಂದಿಗೆ ಹೋರಾಡಿದ್ದರಿಂದ ಅದು ಪೆನ್ಸಿಲ್ವೇನಿಯಾದಲ್ಲಿ ಪತನಗೊಂಡಿತ್ತು.

    Continue Reading

    LATEST NEWS

    ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಸಹೋದರ ‘ಚೈತನ್ಯ’ ವಿಧಿವಶ.!

    Published

    on

    ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ದಿವಂಗತ ಅಪರ್ಣಾ ಸಹೋದರ ಚೈತನ್ಯ ಇಂದು ನಿಧನರಾಗಿದ್ದಾರೆ ಎಂದು ಅಪರ್ಣಾ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ತಿಳಿಸಿದ್ದಾರೆ.

    ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪರ್ಣೆಯ ಅಣ್ಣ ಚೈತನ್ಯ ನಿನ್ನೆ ನಡುರಾತ್ರಿಯಲ್ಲಿ ಈ ಇಹತೊರೆದು ಸರಿದಿದ್ದಾರೆ. ತೀವ್ರತಮ ವಿಷಾದ. ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರದೂನು ಎಂದು ಹೇಳಿದ್ದಾರೆ.

    Continue Reading

    LATEST NEWS

    ತಿರುಪತಿ ದುರಂ*ತಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂ*ತಾಪ

    Published

    on

    ಮಂಗಳೂರು/ನವದೆಹಲಿ :  ತಿರುಪತಿಯಲ್ಲಿ  ದುರಂ*ತವೊಂದು ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಉಂಟಾದ ನೂಕುನುಗ್ಗಲಿನಿಂದಾಗಿ 7 ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂ*ತಾಪ ಸೂಚಿಸಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾ*ಲ್ತುಳಿತ ಘಟನೆಯಿಂದ ನೋ*ವಾಗಿದೆ. ಘಟನೆಯಲ್ಲಿ ಗಾ*ಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ.

    ರಾಷ್ಟ್ರಪತಿ ಸಂತಾಪ :

    ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ದು*ರ್ಘಟನೆಯಲ್ಲಿ ಮೃ*ತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದೇವರು  ಕುಟುಂಬಸ್ಥರಿಗೆ ತಮ್ಮ ಆಪ್ತರನ್ನು ಕಳೆದುಕೊಂಡ ದು:ಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

    ಗುರುವಾರ(ಜ.9) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ನಿರ್ಧರಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಬುಧವಾರ ಸಂಜೆಯೇ ಭಾರಿ ಜನರು ಜಮಾಯಿಸಿದ್ದರು.

    ಇದನ್ನೂ ಓದಿ : ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್

    ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಕಾರಣ ಅವರನ್ನು ಹೊರಕ್ಕೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿಒಳನುಗ್ಗುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಕೆಲವರು ಕೆಳಗೆ ಬಿದ್ದಿದ್ದು ಕಾಲ್ತುಳಿತದಿಂದ ಅಸ್ವಸ್ಥಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅವರಲ್ಲಿ 7 ಭಕ್ತರು ಸಾವನ್ನಪ್ಪಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

    Continue Reading

    LATEST NEWS

    Trending