ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಸಂತ್ರಸ್ತ ಯುವತಿಯನ್ನೂ ಪ್ರತಿವಾದಿಯಾಗಿ ಸೇರಿಸಿಕೊಳ್ಳಲು, ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ಒಟ್ಟಾಗಿ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ವಿಚಾರಣೆಯನ್ನು ಜು.5ಕ್ಕೆ ಮುಂದೂಡಿದೆ.
ಈ ವೇಳೆ ಯುವತಿ ಪರ ವಾದಿಸಿದ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್, ಪೊಲೀಸರು ಪ್ರಕರಣದ ತನಿಖೆಯನ್ನು ಮುಕ್ತಾಯಗೊಳಿಸುವ ಹಂತದಲ್ಲಿದ್ದಾರೆ ಎಂಬ ಮಾಹಿತಿ ಇದೆ. ಆದರೆ, ಸಿಬಿಐ ತನಿಖೆ ಕೋರಿರುವ ಪಿಐಎಲ್ ನಲ್ಲಿ ಯುವತಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯ ವಿಚಾರಣೆ ಮುಕ್ತಾಯವಾಗುವವರೆಗೆ ಪ್ರಕರಣವನ್ನು ಮುಕ್ತಾಯಗೊಳಿಸಬಾರದು.
ಇದಕ್ಕೆ ಪ್ರತಿಕ್ರಿಯಿಸಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಪೊಲೀಸರು ಇನ್ನೂ ತನಿಖೆ ನಡೆಸುತ್ತಿದ್ದಾರೆ, ಜು.5ರೊಳಗೆ ತನಿಖೆ ಮುಕ್ತಾಯಗೊಳಿಸುವುದಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಈ ವೇಳೆ ಪೀಠ ಮೌಖಿಕವಾಗಿ ಎಫ್‌ಐಆರ್ ಮುಕ್ತಾಯಗೊಳಿಸದಂತೆ ಸೂಚಿಸಿತು.