ದೆಹಲಿ: ಸ್ವತಂತ್ರ ಭಾರತದ ಮೊದಲ, ಮಾಜಿ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರ 132ನೇ ಜನ್ಮಜಯಂತಿ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ನೆಹರೂ ಅವರನ್ನು ಸ್ಮರಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನಮಂತ್ರಿ, ಪಂಡಿತ್ ಜವಾಹರ್ಲಾಲ್ ನೆಹರೂ ಜನ್ಮದಿನದಂದು ಅವರಿಗೆ ನಮನಗಳು ಎಂದು ಹೇಳಿದ್ದಾರೆ.
ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರೂ ಎಂದೇ ಕರೆಯುತ್ತಿದ್ದರು. ಅವರಿಗೂ ಮಕ್ಕಳೆಂದರೆ ತುಂಬ ಅಚ್ಚುಮೆಚ್ಚಾಗಿತ್ತು.
ಇದೇ ಕಾರಣಕ್ಕೆ ಅವರ ಜನ್ಮದಿನವನ್ನು ಭಾರತದಲ್ಲಿ ಬಾಲ ದಿವಸ್ ಅಥವಾ ಮಕ್ಕಳ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ.
ಇಂದು ಅವರ ಜನ್ಮದಿನದಂದು ಕಾಂಗ್ರೆಸ್ ಅಧ್ಯಕ್ಷೆ ದೆಹಲಿಯಲ್ಲಿರುವ ಶಾಂತಿವನದಲ್ಲಿ ನೆಹರೂ ಅವರಿಗೆ ಪುಷ್ಪನಮನ ಸಲ್ಲಿಸಿದರು.