FILM
‘ಜವಾನ್’ ಶಾಕಿಂಗ್ ಕಲೆಕ್ಷನ್ – ಕೇವಲ 7 ದಿನಗಳಲ್ಲಿ ವಿಶ್ವದಾದ್ಯಂತ 700 ಕೋಟಿ..!
ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದ್ದು, ಕೇವಲ ಎಂಟು ದಿನಗಳಲ್ಲಿ 700ಕ್ಕೂ ಅಧಿಕ ಕೋಟಿ ರೂಗಳನ್ನು ಗಳಿಸುವ ಸೂಚನೆ ನೀಡಿದೆ.
ಮುಂಬೈ: ಅಟ್ಲಿ ನಿರ್ದೇಶನದ ಶಾರುಖ್ ಖಾನ್ ಅಭಿನಯದ ‘ಜವಾನ್’ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಕೇವಲ ಎಂಟು ದಿನಗಳಲ್ಲಿ 700ಕ್ಕೂ ಅಧಿಕ ಕೋಟಿ ರೂಗಳನ್ನು ಗಳಿಸುವ ಸೂಚನೆ ನೀಡಿದೆ.
ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅಭಿನಯದ ಜವಾನ್ ಸಿನಿಮಾದ ಅಬ್ಬರ ಬಾಕ್ಸ್ ಆಫೀಸ್ ನಲ್ಲಿ ಮುಂದುವರೆದಿದ್ದು,
ಚಿತ್ರವು ಸೆಪ್ಟೆಂಬರ್ 7 ರಂದು ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಥಿಯೇಟರ್ಗಳಲ್ಲಿ ಬಿಡುಗಡೆಯಾಗಿತ್ತು.
ಜವಾನ್ ಮೂಲಕ ನಾರ್ತ್ನಲ್ಲಿಯೂ ಭರ್ಜರಿಯಾಗಿ ಸೌಂಡ್ ಮಾಡುತ್ತಿದ್ದಾರೆ.ಶಾರುಖ್ ಖಾನ್ ಅವರ ಈ ಹಿಂದೆ ಬಿಡುಗಡೆಯಾದ ‘ಪಠಾಣ್’ ದೊಡ್ಡ ಯಶಸ್ಸನ್ನು ಕಂಡಿತು ಮತ್ತು ಅವರ ಅಭಿಮಾನಿಗಳು ಅದೇ ಸಾಲಿನಲ್ಲಿ ಈ ಚಿತ್ರಕ್ಕಾಗಿ ಕಾಯುತ್ತಿದ್ದರು. ಈಗ ಜವಾನ್ ರಿಲೀಸ್ ಆಗಿ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದೆ.
ದಿನ 3 – ₹ 140.17 ಕೋಟಿ
ದಿನ 4 – ₹ 156.80 ಕೋಟಿ
5 ನೇ ದಿನ – ₹ 52.39 ಕೋಟಿ
ದಿನ 6 – ₹ 38.21 ಕೋಟಿ
ದಿನ 7 – ₹ 34.06 ಕೋಟಿ
ದಿನ 8 – ₹ 28.79 ಕೋಟಿ
ಒಟ್ಟು – ₹ 684.71 ಕೋಟಿ
ಜವಾನ್ ಸಿನಿಮಾ ಪಠಾಣ್ ನಂತರ ಬಿಡುಗಡೆಯಾದ ಶಾರುಖ್ ಖಾನ್ ಅವರ ವರ್ಷದ ಎರಡನೇ ಸಿನಿಮಾವಾಗಿದೆ. ಇದರಲ್ಲಿ ನಯನತಾರಾ, ವಿಜಯ್ ಸೇತುಪತಿ, ಪ್ರಿಯಾಮಣಿ ಮತ್ತು ಸನ್ಯಾ ಮಲ್ಹೋತ್ರಾ ನಟಿಸಿದ್ದಾರೆ. ಇದರಲ್ಲಿ ದೀಪಿಕಾ ಪಡುಕೋಣೆ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
FILM
ಅಪಘಾತದಲ್ಲಿ ಕನ್ನಡದ ನಟಿಯ ದುರಂತ ಸಾ*ವು..!
ಅಂಧ್ರಪ್ರದೇಶ: ಕಿರುತೆರೆ ನಟಿ ಪವಿತ್ರಾ ಜಯರಾಂ(35 ವರ್ಷ) ಅಪಘಾತದಲ್ಲಿ ಸಾ*ವಿಗೀಡಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪದಲ್ಲಿ ಅಪಘಾತ ಸಂಭವಿಸಿದ್ದು ಪವಿತ್ರ ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ಮೂಲತಃ ಕನ್ನಡಿಗರಾದ ಪವಿತ್ರ ಜಯರಾಂ, ತೆಲುಗಿನ ‘ತ್ರಿನಯನಿ’ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದರು. ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು.
ನಟಿ ಪವಿತ್ರಾ ಅವರು ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದರು. ಇನ್ನು ತೆಲುಗಿನ ‘ತ್ರಿನಯನಿ’ ಧಾರಾವಾಹಿ ಮೂಲಕ ತೆಲುಗರ ಮನೆಮಾತಾಗಿದ್ದರು. ಈ ಧಾರಾವಾಹಿ ಕನ್ನಡದಲ್ಲೂ ಪ್ರಸಾರಗೊಳ್ಳುತ್ತಿದ್ದು ಇಲ್ಲಿಯೂ ಸಾಕಷ್ಟು ಜನಪ್ರಿಯತೆಯನ್ನು ಪಡೆದಿದ್ದರು.
ಪುಷ್ಟಾ-2 ರಿಲೀಸ್ ಕ್ರೇಜ್ನಲ್ಲಿರುವಾಗಲೇ ‘ಅಲ್ಲು ಅರ್ಜುನ್’ ವಿರುದ್ಧ ಪೊಲೀಸ್ ಕೇಸ್.!
ಪವಿತ್ರ ಜಯರಾಂ ಇಂದು(ಮೇ.12) ಮುಂಜಾನೆ ಕಾರು ಅಪಘಾತದಲ್ಲಿ ಸಾ*ವಿಗೀಡಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್ ಸಮೀಪ ಮೆಹಬೂಬ್ ನಗರದಲ್ಲಿ ನಡೆದ ಕಾರು ಅಪಘಾತದಲ್ಲಿ ನಟಿ ಪವಿತ್ರಾ ಸ್ಥಳದಲ್ಲೇ ಮ*ರಣ ಹೊಂದಿದ್ದಾರೆ. ಪವಿತ್ರ ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಪವಿತ್ರ ಸ್ಥಳದಲ್ಲೇ ಅಸುನೀಗಿದ್ದಾರೆ. ಶೂಟಿಂಗ್ ಎಂದು ಹೋಗಿದ್ದವರು ಮರಳಿ ಬಾರದ ಲೋಕ್ಕಕೆ ಹೊರಟಿದ್ದು ಇವರ ದುರಂತ ಸಾವಿಗೆ ಎಲ್ಲರೂ ಕಂಬನಿ ಮಿಡಿದಿದ್ದಾರೆ.
ನಟಿ ಪವಿತ್ರಾ ಜಯರಾಂ ಸಾವಿಗೆ ಕನ್ನಡ ಹಾಗೂ ತೆಲುಗಿನ ಕಿರುತೆರೆಯವರು ಸಂತಾಪ ಸೂಚಿಸಿದ್ದಾರೆ. ಈ ಅನಿರೀಕ್ಷಿತ ಸಾವಿನಿಂದ ಕಂಗಾಲಾಗಿರುವ ಕುಟುಂಬದ ಸದಸ್ಯರನ್ನು ನೆನೆದು ಹಲವರು ಕಂಬನಿ ಮಿಡಿದಿದ್ದಾರೆ.
FILM
‘ಪುಷ್ಪ-2 ‘ರಿಲೀಸ್ ಕ್ರೇಜ್ನಲ್ಲಿರುವಾಗಲೇ ‘ಅಲ್ಲು ಅರ್ಜುನ್’ ವಿರುದ್ಧ ಪೊಲೀಸ್ ಕೇಸ್.!
ಆಂಧ್ರಪ್ರದೇಶ: ಐಕಾನ್ ಸ್ಟಾರ್ ಅಲ್ಲು ಅರ್ಜುನ್ ‘ಪುಷ್ಪ-2 ದಿ ರೂಲ್’ ರಿಲೀಸ್ ಜೋಶ್ನಲ್ಲಿ ಇದ್ದಾರೆ. ಆದ್ರೆ ಇದೀಗ ಅವರಿಗೊಂದು ಬಿಗ್ ಶಾಕ್ ಎದುರಾಗಿದೆ. ಆಂಧ್ರ ಪೊಲೀಸರು ಅಲ್ಲು ಅರ್ಜುನ್ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ.
ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಅಲ್ಲು ಅರ್ಜುನ್ ತಮ್ಮ ಸ್ನೇಹಿತರ ಮನೆಗೆ ಭೇಟಿ ನೀಡಿದ್ದಾರೆ. ಪೊಲೀಸರ ಅನಮತಿ ಪಡೆಯದೆ ಸ್ನೇಹಿತ, ವೈಎಸ್ಆರ್ಸಿಪಿ ಶಾಸಕ ಶಿಲ್ಪಾ ರವಿಯವರ ಮನೆಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲು ಅರ್ಜುನ್ ನೋಡಲು ಭಾರೀ ಮಟ್ಟದಲ್ಲಿ ಅಭಿಮಾನಿಗಳು ಸೇರಿದ್ದರು. ಇದರಿಂದ ಕಂಪ್ಲೀಟ್ ಟ್ರಾಫಿಕ್ ಜಾಮ್ ಉಂಟಾಗಿದ್ದು ಕೆಲಸಕ್ಕೆ ತೆರಳುವವರಿಗೆ ತೊಂದರೆ ಉಂಟಾಗಿದೆ ಎನ್ನಲಾಗಿದೆ.
ಟರ್ಕಿಯಲ್ಲಿ ‘ಬಿಗ್ ಬಾಸ್’ ಖ್ಯಾತಿಯ ದೀಪಿಕಾ ದಾಸ್
ಇನ್ನು ಮೇ.13ರಂದು ಚುನಾವಣೆ ನಡೆಯಲಿದೆ. ಇನ್ನೂ ಚುನಾವಣೆಗೆ ಒಂದೇ ದಿನ ಇರುವುದರಿಂದ ಚುನಾವಣೆ ಪ್ರಚಾರಕ್ಕಾಗಿ ನಂದ್ಯಾಳದಲ್ಲಿರುವ ಸ್ನೇಹಿತನ ಮನೆಗೆ ಬಂದಿದ್ದರು. ಆದರೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಅನುಮತಿ ಪಡೆಯದೆ ಮನೆಗೆ ಭೇಟಿ ನೀಡಿದ್ದಾರೆ. ಈ ಕುರಿತು ಅಲ್ಲು ಅರ್ಜುನ್ ಹಾಗೂ ಶಾಸಕ ಶಿಲ್ಪಾ ರವಿ ವಿರುದ್ಧ ಟೂಟೌನ್ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
ರಿಲೀಸ್ಗೆ ಸಿದ್ಧವಾಗಿರುವ ‘ಪುಷ್ಪ-2’
ಇನ್ನು ಅಲ್ಲು ಅರ್ಜುನ್, ರಶ್ಮಿಕಾ ಮಂದಣ ಅಭಿನಯದ ಪುಷ್ಪ ಪಾರ್ಟ್-2 ಬಿಡುಗಡೆಗೆ ಸಿಧ್ದವಾಗಿದೆ. ಆಗಸ್ಟ್ 15, 2024 ರ ಬಿಡುಗಡೆಯ ದಿನಾಂಕವನ್ನು ಘೋಷಣೆ ಮಾಡಿದ್ದಾರೆ. ಪುಷ್ಪ ಭಾಗ 1 ಬಾಕ್ಸ್ ಆಫೀಸ್ನಲ್ಲಿ ಭಾರೀ ಸದ್ದು ಮಾಡಿತ್ತು. ಇದೀಗ ಪಾರ್ಟ್ 2 ಜನರ ನಿರೀಕ್ಷೆಯನ್ನು ಹೆಚ್ಚಿಸಿದೆ.
FILM
ಸೀರಿಯಲ್ನಲ್ಲಿ ಹೆಲ್ಮೆಟ್ ಇಲ್ಲದೆ ಸಂಚಾರ..ನಟಿಗೆ ದಂಡ ವಿಧಿಸಿದ ಸಂಚಾರಿ ಪೊಲೀಸರು..!
ಮಂಗಳೂರು: ಧಾರವಾಹಿ ಕಾಲ್ಪನಿಕವಾಗಿದ್ರು ಕೂಡಾ ಅದು ಜನರ ಮೇಲೆ ಎಷ್ಟು ಪ್ರಭಾರ ಬೀರುತ್ತದೆ ಅನ್ನೋದಕ್ಕೆ ಇಲ್ಲೊಂದು ಉದಾಹರಣೆ ಇದೆ. ಧಾರವಾಹಿಯಲ್ಲಿ ಬರುವ ಪಾತ್ರಗಳು ಪ್ರತೀಯೊಬ್ಬ ಜೀವನದಲ್ಲಿ ನಡೆದಿರುವ ಘಟನೆಯನ್ನು ಹೋಲುತ್ತದೆ. ಹಾಗಾಗಿ ವೀಕ್ಷಕರಿಗೂ ಅದು ನಿಜ ಘಟನೆಯಂತೆ ಗೋಚರಿಸುತ್ತದೆ.
ಇನ್ನೂ ಧಾರಾವಾಹಿಗಳಲ್ಲಿ ಬರುವ ಸನ್ನಿವೇಶಗಳನ್ನು ಎಷ್ಟೋ ಜನ ತಮ್ಮ ವೈಯಕ್ತಿಕ ಜೀವನದಲ್ಲೂ ಅಳವಡಿಸುತ್ತಾರೆ. ಹೀಗಿರುವಾಗ ಜೀ ಕನ್ನಡದಲ್ಲಿ ಪ್ರಸಾರವಾಗುವ ಸೀತಾರಾಮ ಸೀರಿಯಲ್ನಲ್ಲಿ ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ್ದಾರೆ. ಇದಕ್ಕೆ ಸಂಚಾರ ಪೊಲೀಸರು ನಟಿ ಹಾಗೂ ವಾಹನ ಮಾಲಕಿಯ ಮೇಲೆ ದಂಡ ವಿಧಿಸಿರುವ ಘಟನೆ ನಡೆದಿದೆ.
ಸೀತಾರಾಮ ಧಾರವಾಹಿಯ ದೃಶ್ಯವೊಂದರಲ್ಲಿ ನಟಿಯೊಬ್ಬರು ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿದಕ್ಕಾಗಿ ಪೊಲೀಸರು 500ರೂ. ದಂಡ ವಿಧಿಸಿರುವ ಅಪರೂಪದ ಘಟನೆ ನಡೆದಿದೆ. ಈ ಧಾರಾವಾಹಿಯಲ್ಲಿ 14ನೇ ಸಂಚಿಕೆಯ ದೃಶ್ಯದಲ್ಲಿ ಸ್ಕೂಟರ್ನಲ್ಲಿ ಇಬ್ಬರು ಸಂಚರಿಸುವ ದೃಶ್ಯವಿತ್ತು. ಅದರಲ್ಲಿ ಸವಾರೆ ಹೆಲ್ಲೆಟ್ ಧರಿಸಿದ್ದರೆ ಹಿಂಬದಿ ಕುಳಿತಾಕೆ ಹಲ್ಲೆಟ್ ಧರಿಸಿರಲಿಲ್ಲ.
ಮಂಗಳೂರಿನವರಿಂದ ಪೊಲೀಸರಿಗೆ ದೂರು:
ಟಿವಿಯಲ್ಲಿ ಪ್ರಸಾರವಾದ ಧಾರಾವಾಹಿಯ ದೃಶ್ಯವನ್ನು ವೀಕ್ಷಿಸಿದ ಮಂಗಳೂರಿನ ಜಯಪ್ರಕಾಶ್ ಎಕ್ಕೂರು ಎಂಬವರು, ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಧಾರಾವಾಹಿಯಲ್ಲಿ ಸಂಚಾರ ನಿಯಮದ ಉಲ್ಲಂಘನೆಯಾಗಿದೆ. ನಟ-ನಟಿಯರು ಸಂಚಾರ ನಿಯಮ ಉಲ್ಲಂಘಿಸುವುದು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ಹಾಗಾಗಿ ಧಾರಾವಾಹಿಯ ನಟಿ, ನಿರ್ದೇಶಕ ಮತ್ತು ಪ್ರಸಾರ ಮಾಡಿದ ವಾಹಿನಿ ವಿರುದ್ಧ ಸೂಕ್ತ ಕಾನೂನು ಪೊಲೀಸ್ ಆಯುಕ್ತರು ಮಂಗಳೂರು ಸಂಚಾರ ಪೂರ್ವ ಠಾಣೆಗೆ ಪ್ರಕರಣವನ್ನು ವಹಿಸಿದ್ದರು. ಅದರಂತೆ ಜಯಪ್ರಕಾಶ್ ಅವರಿಗೆ ಠಾಣೆಯಿಂದ ಹಿಂಬರಹ ನೀಡಿ, ದ್ವಿಚಕ್ರ ವಾಹನದ ಮಾಲಕರಿಗೆ ಮತ್ತು ಧಾರಾವಾಹಿಯ ನಿರ್ದೇಶಕರಿಗೆ ಮಾಹಿತಿ ಕೇಳಿ ನೋಟಿಸ್ ಜಾರಿಗೊಳಿಸಲಾಗಿತ್ತು. ಇನ್ನು ಈ ಧಾರಾವಾಹಿಯ ಪ್ರೊಡಕ್ಷನ್ ಮ್ಯಾನೇಜರ್ ನಿಂದ ಇನ್ನುಮುಂದೆ ಈ ಧಾರಾವಾಹಿಯಲ್ಲಿ ಸಂಚಾರ ನಿಯಮ ಉಲ್ಲಂಘಟನೆ ಮಾಡದಂತೆ ಹಿಂಬರಹ ಪಡೆದುಕೊಂಡಿದ್ದಾರೆ.
ಮಲತಂದೆಯಿಂದ ಹತ್ಯೆಯಾದ ಜಗ್ಗೇಶ್ ಸಿನೆಮಾ ನಟಿ..! 13 ವರ್ಷದ ಬಳಿಕ ಮಹತ್ವದ ತೀರ್ಪು
ಧಾರಾವಾಹಿಯ ದೃಶ್ಯವನ್ನು ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ಚಿತ್ರೀಕರಿಸಿದ್ದು ಮುಂದಿನ ವಿಚಾರಣೆಗೆ ಅಲ್ಲಿನ ಪೊಲೀಸ್ ಠಾಣೆಗೆ ಕಳುಹಿಸಿಕೊಡಲಾಗಿದೆ ಎಂದು ತಿಳಿಸಲಾಗಿತ್ತು. ಅರ್ಜಿಯ ಬಗ್ಗೆ ಪರಿಶೀಲನೆ ನಡೆಸಿದ ರಾಜಾಜಿನಗರ ಠಾಣಾ ಪೊಲೀಸರು ಸಂಬಂಧಪಟ್ಟ ನಟಿಗೆ ಮತ್ತು ಮಾಲಕಿಗೆ ಮೇ 10ರಂದು 500 ರೂ. ದಂಡ ವಿಧಿಸಿದ್ದಾರೆ.
ಧಾರಾವಾಹಿಯಲ್ಲಿ ನಟಿಯೊಬ್ಬರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಸವಾರ ಮಾಡುತ್ತಿರುವುದನ್ನು ಗಮನಿಸಿದ್ದೆ. ಈ ಕುರಿತಾಗಿ ಆಯುಕ್ತರಿಗೆ ದೂರು ಕೂಡಾ ನೀಡಿದ್ದೆ. ಇದಕ್ಕೆ ಪೊಲೀಸರು ಉತ್ತಮ ಸ್ಪಂದನೆ ನೀಡಿದ್ದಾರೆ. ಈ ರೀತಿ ದಂಡ ವಿಧಿಸಿರುವುದು ಬೇರೆಯವರಿಗೂ ಉತ್ತಮ ಪಾಠವಾಗಲಿದ್ದು, ಜಾಗೃತಿಇ ಮೂಡಿಸುವ ಕೆಲಸವೂ ಆಗಿದೆ ಎಂದು ದೂರುದಾರ ಮಂಗಳೂರಿನ ಜಯಪ್ರಕಾಶ್ ಎಕ್ಕೂರು ಹೇಳಿದ್ದಾರೆ.
- LATEST NEWS7 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- DAKSHINA KANNADA6 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS7 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!
- LATEST NEWS7 days ago
SSLC ಫಲಿತಾಂಶ ಪ್ರಕಟಿಸಲು ದಿನಾಂಕ ನಿಗದಿ; ಯಾವಾಗ?