Connect with us

BANTWAL

ವಿಟ್ಲದಲ್ಲಿ ಜೆಸಿಬಿಯಿಂದ ಹಿಟ್‌ಆ್ಯಂಡ್‌ ರನ್‌: ಸೈಕಲ್‌ ಬಾಲಕನ ದಾರುಣ ಅಂತ್ಯ

Published

on

ಬಂಟ್ವಾಳ: ರಸ್ತೆಬದಿ ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದು ಬಾಲಕ ದಾರುಣವಾಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನದಲ್ಲಿ ಇಂದು ನಡೆದಿದೆ.


ಮೃತ ಬಾಲಕನನ್ನು ಮಹಮ್ಮದ್ ಅಖಿಲ್ (13) ಎಂದು ತಿಳಿದು ಬಂದಿದೆ. ಆರೋಪಿಯನ್ನು ಗದಗ ಮೂಲದ ಸಾದಿಕ್‌ ಎಂದು ಗುರುತಿಸಲಾಗಿದೆ.
ಘಟನೆ ವಿವರ
ಕನ್ಯಾನದ ಕಣಿಯೂರು ಎಂಬಲ್ಲಿ ರಸ್ತೆ ಬದಿಯಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ಮಹಮ್ಮದ್ ಅಖಿಲ್‌ಗೆ ನಿರ್ಲಕ್ಷ್ಯದಿಂದ ಚಲಾಯಿಸುತ್ತಿದ್ದ ಜೆಸಿಬಿ ಢಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಈ ವೇಳೆ ಆತ ತನ್ನ ಜೆಸಿಬಿ ಬಕೆಟ್‌ನಿಂದ ಬಾಲಕನ ಶವವನ್ನು ಪಕ್ಕಕ್ಕೆ ಸರಿಸಿ ಕೆಲಸದ ಜಾಗಕ್ಕೆ ತೆರಳಿ ಅಲ್ಲಿ ಜೆಸಿಬಿ ನಿಲ್ಲಿಸಿ ಮತ್ತೊಬ್ಬ ಡ್ರೈವರ್‌ ಬರುತ್ತಾನೆಂದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಢಿಕ್ಕಿ ಹೊಡೆದ ವಿಷಯ ಸ್ಥಳೀಯರಿಗೆ ತಿಳಿದು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ವೇಳೆ ಸ್ಥಳಕ್ಕಾಗಮಿಸಿದ ವಿಟ್ಲ ಠಾಣಾ ಪೊಲೀಸರು ಆರೋಪಿ ಸಾದಿಕ್ ಹಾಗೂ ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ಕುಡಿತದ ಅಮಲಿನಲ್ಲಿದ್ದ ಎಂದು ತಿಳಿದು ಬಂದಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending