Connect with us

    DAKSHINA KANNADA

    ದೇರಳಕಟ್ಟೆಯ ಕೊರಗಜ್ಜ‌ನ ಆದಿಸ್ಥಳದಲ್ಲಿ ಜೆಸಿಬಿ ಸದ್ದು : ಕುಸಿಯುವ ಭೀತಿಯಲ್ಲಿ ಅಜ್ಜನ ಕಾರ್ಣಿಕ ಕ್ಷೇತ್ರ..!

    Published

    on

    ಉಳ್ಳಾಲ : ಕರಾವಳಿಯ ಕಾರ್ಣಿಕ ಸ್ಥಳಗಲ್ಲಿ ಒಂದಾದ ಉಳ್ಳಾಲ ಕುತ್ತಾರು ಕೊರಗಜ್ಜನ ಏಳು ತಳಗಳಲ್ಲಿ ಒಂದಾಗಿರುವ ದೇರಳಕಟ್ಟೆ ಆಸ್ಪತ್ರೆಯ ಎದುರುಗಡೆಯಿರುವ ಕೊರಗಜ್ಜನ ಆದಿಸ್ಥಳಕ್ಕೆ ಇದೀಗ ಅಪಾಯ ಎದುರಾಗಿದ್ದು ಭಕ್ತರು ಆತಂಕದಲ್ಲಿದ್ದಾರೆ.

    ಈ ಆದಿ ಸ್ಥಳದ ಸುತ್ತಮುತ್ತದ ಜಾಗವನ್ನು ಉದ್ಯಮಿಯೋರ್ವರು ಕರೀದಿ ಮಾಡಿದ್ದು ಜೆಸಿಬಿ ಮೂಲಕ ಅಗೆದು ಸಮತಟ್ಟು ಮಾಡೋ ಕಾರ್ಯ ಆರಂಭಗೊಂಡಿದೆ.

    ಇದರಿಂದ ಇದಕ್ಕೆ ತಾಗಿಕೊಂಡಿರುವ ಆದಿಸ್ಥಳಕ್ಕೆ ಅಪಾಯ ಎದುರಾಗಿದೆ.

    ಕಳೆದ ಕೆಲ ತಿಂಗಳುಗಳಿಂದ ಇಲ್ಲಿ ಜೆಸಿಬಿಯಿಂದ ಅಗೆತದ ಕಾರ್ಯ ನಡೆಯುತ್ತಿದ್ದು ಈ ನಡುವೆ ಕಾನೂನಿನ ತೊಡಕು ಉಂಟಾದ ಹಿನ್ನೆಲೆಯಲ್ಲಿ ಒಂದೊಮ್ಮ ಕಾಮಗಾರಿ ಸ್ಥಗಿತವಾಗಿತ್ತು.

    ಇದೀಗ ಮತ್ತೆ ಕಾರ್ಯಾಚರಣೆ ಆರಂಭಗೊಂಡಿದ್ದು ಮಣ್ಣು ಸಾಗಾಟ ಕಾರ್ಯ ಬಿರುಸಿನಿಂದ ಆರಂಭಗೊಂಡಿದೆ.

    ಇಲ್ಲಿ ಆದಿಸ್ಥಳದಲ್ಲಿ ತಿಂಗಳಿಗೊಮ್ಮೆ ಹರಕೆ ಕೋಲ ನಡೆಯುತ್ತಿದೆ. ಜಾತಿಮತವಿಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುತ್ತಾ ಬಂದಿರುತ್ತಾರೆ.

    ಆದರೆ ಇದೀಗ ಕಾರ್ಣಿಕ ಕ್ಷೇತ್ರದ ಬುಡಕ್ಕೆ ಪೆಟ್ಟು ಬಿದ್ದಿದ್ದು ಕೊರಗಜ್ಜನ ಸಾನಿಧ್ಯ ಕುಸಿಯುವ ಅಪಾಯದಲ್ಲಿದೆ ಎಂದು ಈ ಕ್ಷೇತ್ರದ ಭಕ್ತರಾದ ರಮೇಶ್ ಆತಂಕ ವ್ಯಕ್ತಪಡಿಸಿದ್ದು ಜಿಲ್ಲಾಡಳಿತ ತಕ್ಷಣ ಮಧ್ಯಪ್ರವೇಶಿಸಿ ಈ ಭಾಗದಲ್ಲಿ ಎದುರಾಗುವ ಅನಾಹುತವನ್ನು ತಪ್ಪಿಸಬೇಕೆಂದು ಮನವಿ ಮಾಡಿದ್ದಾರೆ.

    1 Comment

    1 Comment

    1. Aravind

      06/11/2022 at 10:59 AM

      ನೋಡು ಅಜ್ಜಿ , ನಿನ್ ಏನ್ ಆಗಿರು ಆದ್ರೆ ನಿಂಗೆ ಇರೋದು ಇನ್ ಒಂದ್ ಸ್ವಲ್ಪ ದಿನ ಅದನ್ನ ಮನೆಯವರ ಜೊತೆ ಚೆನ್ನಾಗಿ ಎಂಜಾಯ್ ಮಾಡಿ ಕಳಿ ಅದ್ ಬಿಟ್ಟು ಈ age ಅಲ್ಲಿ famous ಆಗ್ಬೇಕು ಅಂತ ಬಾಯ್ ಗೆ ಬಂದ್ ಹಾಗೆ ಮಾತಾಡಿ ಇರೋ ಆಯಸ್ಸನ್ನು ಕಳೆದು ಕೊಳ್ಬೇಡ, ಎಲುಬು ಇಲ್ಲದ ನಾಲಿಗೆ ಅಂತ ನಮ್ಮ ಆಚರಣೆ ಬಗ್ಗೆ ಮಾತಾಡಿದ್ರೆ …….. ತುಂಬಾ ಜನ ಹೋಗಿ ಆಯ್ತು next ನೀನೇ

    Leave a Reply

    Your email address will not be published. Required fields are marked *

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    LATEST NEWS

    Trending