Connect with us

    DAKSHINA KANNADA

    ಉಳ್ಳಾಲ ನಗರಸಭೆಗೆ ಕಿವಿಗೆ ಹೂವಿಟ್ಟು ಬಂದ ಜೆಡಿಎಸ್‌: ತಳ್ಳಾಟ-ನೂಕಾಟ

    Published

    on

    ಉಳ್ಳಾಲ: ಇಲ್ಲಿನ ನಗರಸಭೆಯ ಬಜೆಟ್‌ ಮಂಡನೆ ವೇಳೆ ಬಜೆಟ್‌ ಭಾಷಣ ವಿರೋಧಿಸಿ ಜೆಡಿಎಸ್ ಕೌನ್ಸಿಲರ್ ಗಳು ಕಿವಿಗೆ ಹೂವಿಟ್ಟು ಆಡಳಿತರೂಢ ಕಾಂಗ್ರೆಸನ್ನು ಅಣಕಿಸಿದ್ದಾರೆ. ನಂತರ ಗಲಾಟೆ ವಿಕೋಪಕ್ಕೆ ಹೋಗಿ ತಳ್ಳಾಟ ನೂಕಾಟ ನಡೆದಿದೆ.


    ಇಂದು ಉಳ್ಳಾಲ ನಗರಸಭೆ ಆಡಳಿತ ಸೌಧದಲ್ಲಿ ಬಜೆಟ್ ಮಂಡನೆ ವೇಳೆ ಜೆಡಿಎಸ್ ನ ಸದಸ್ಯರಾದ ದಿನಕರ ಉಳ್ಳಾಲ್, ಅಬ್ದುಲ್ ಬಶೀರ್, ಖಲೀಲ್, ಜಬ್ಬಾರ್, ಮುಶ್ತಾಕ್ ಪಟ್ಲ ಅವರು ಕಿವಿಗೆ ಹೂವಿಟ್ಟು ಬಜೆಟ್ಗೆ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ.
    ಈ ವೇಳೆ ಬಿಜೆಪಿ ನಾಮ ನಿರ್ದೇಶಿತ ಸದಸ್ಯ ಬಾಬು ಬಂಗೇರ ಮಾತನಾಡಿ ಕಾಂಗ್ರೆಸ್ ಬಜೆಟ್ಗೆ ಬೆಂಬಲ ಸೂಚಿಸಿದರೆ, ಜೆಡಿಎಸ್ ನವರು ವಿರೋಧ ವ್ಯಕ್ತ ಪಡಿಸುತ್ತಿದ್ದಾರೆ. ನಾವು ಬಜೆಟ್ ವಿಚಾರದಲ್ಲಿ ತಟಸ್ಥ ಎಂದಾಕ್ಷಣ ಸಭೆಯ ವೇದಿಕೆಯಲ್ಲಿದ್ದ ನಗರಸಭೆ ಉಪಾಧ್ಯಕ್ಷ ಆಯುಬ್ ಮಂಚಿಲ ಟೇಬಲನ್ನ ಬಡಿದು ಬೆಂಬಲ ಸೂಚಿಸಿದ್ದಾರೆ.

    ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಜೆಡಿಎಸ್ ಹಿರಿಯ ಸದಸ್ಯ ದಿನಕರ್ ಉಳ್ಳಾಲ್ ವಿರೋಧ ಪಕ್ಷ ಬಿಜೆಪಿ ಮತ್ತು ಆಡಳಿತ ಪಕ್ಷ ಕಾಂಗ್ರೆಸ್ ಹೊಂದಾಣಿಕೆಯ ರಾಜಕೀಯ ನಡೆಸುತ್ತಿದ್ದು, ನೀವಿಬ್ಬರು ಒಂದೇ ನಾಣ್ಯದ ಎರಡು ಮುಖಗಳೆಂದು ಆಕ್ಷೇಪಿಸಿದ್ದಾರೆ.

    ಈ ವೇಳೆ ಸದನದಲ್ಲಿ ಆಡಳಿತ ವಿರೋಧ ಪಕ್ಷಗಳ ನಡುವೆ ಗದ್ದಲ ಎಬ್ಬಿದ್ದು ನಗರ ಸಭೆ ಅಧ್ಯಕ್ಷೆ ಚಿತ್ರಕಲಾ ಗಲಾಟೆಯ ಮಧ್ಯೆಯೇ ರಾಷ್ಟ್ರಗೀತೆ ಹಾಡುವುದರೊಂದಿಗೆ ಸಭೆಯನ್ನ ಅರ್ಧಕ್ಕೆ ಮೊಟಕುಗೊಳಿಸಿದ್ದಾರೆ.


    ಎಸ್ ಡಿಪಿಐ ಸದಸ್ಯರಾದ ಅಝ್ಗರ್ ಆಲಿ ನಗರಸಭೆ ಪ್ರಬಂದಕರಲ್ಲಿ ಅಜೆಂಡದಲ್ಲಿ ಸಭೆ ಸಂಪೂರ್ಣಗೊಂಡಿಲ್ಲವೆಂದು ದಾಖಲಿಸಲು ಸೂಚಿಸಿದ್ದಾರೆ.

    ಈ ವೇಳೆ ಮಧ್ಯೆ ಪ್ರವೇಶಿಸಿದ ಕಾಂಗ್ರೆಸ್ ನಗರ ಸದಸ್ಯರಾದ ಭಾರತಿ ಮತ್ತು ವೀಣಾ ಶಾಂತಿ ಡಿ‌ ಸೋಜ ಪ್ರಬಂದಕರಲ್ಲಿ ಅಝ್ಗರ್ ವಿರುದ್ಧ ಪೊಲೀಸ್ ದೂರು ನೀಡುವಂತೆ ಹೇಳಿದ್ದು ಇದರಿಂದ ಕೆರಳಿದ ಅಝ್ಗರ್ ಕೈ ಸದಸ್ಯೆಯರ ವಿರುದ್ಧ ಗಲಾಟೆ ನಡೆಸಿದ್ದು ಮಾತಿನ ಚಕಮಕಿ ತಳ್ಳಾಟ ನಡೆದಿದೆ.

    DAKSHINA KANNADA

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    LATEST NEWS

    Trending