Connect with us

    DAKSHINA KANNADA

    ಕಾರ್ಕಳ: ಅಜೆಕಾರು ಬಳಿ ರಸ್ತೆ ಅಪ*ಘಾತ – ಐವರಿಗೆ ಗಾ*ಯ

    Published

    on

    ಕಾರ್ಕಳ: ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದ ರಸ್ತೆ ಅಪ*ಘಾತದಲ್ಲಿ ಐವರು ಗಾ*ಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

    ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಹರೀಶ್(35) ಲಲಿತಾ(62) ಪ್ರೇಮಾ(58) ಶಾರದಾ(52) ಗೀತಾ(39) ಎಂಬವರಿಗೆ ಗಾಯವಾಗಿದೆ.

    ಅಜೆಕಾರು ವಿಭಾಗದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

    108 ಅಂಬುಲೆನ್ಸ್ ನ ಪೈಲೆಟ್ ಕಿಶೋರ್ ಹಾಗೂ ಇಎಂಟಿ ದೇವಿಕಾ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.

    DAKSHINA KANNADA

    ಡೆಂಗಿಗಿಂತ ವಿಪಕ್ಷಗಳ ಸುಳ್ಳು ವೇಗವಾಗಿ ಹರಿದಾಡ್ತಾ ಇದೆ..! ಡೆಂಗಿ ಬಗ್ಗೆ ಜನರು ಆತಂಕ ಪಡಬೇಕಾಗಿಲ್ಲ : ಗುಂಡೂರಾವ್

    Published

    on

    ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿರುವುದು ನಿಜ, ಆದರೆ ಮೆಡಿಕಲ್ ಎಮರ್ಜೆನ್ಸಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡೆಂಗಿ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಪ್ರತಿನಿತ್ಯ ನಿಗಾ ವಹಿಸುತ್ತಿದ್ದು, ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.‌ ಯಾವುದೇ ಬೆಡ್ ಅಥಾವಾ ಔಷಧಿಯ ಕೊರತೆಯಿಲ್ಲ.‌ ಡೆಂಗಿ ಬಗ್ಗೆ ತಾಂತ್ರಿಕ ಸಲಹಾ ಸಮಿತಿಯವರೊಂದಿಗೆ ಚರ್ಚೆ ನಡೆಸಿದ್ದು, ಮೆಡಿಕಲ್ ಎಮರ್ಜೆನ್ಸಿ ಘೋಷಿಸುವ ಅಗತ್ಯವಿಲ್ಲ ಎಂದು ಸಲಹಾ ಸಮಿತಿಯವರು ತಿಳಿಸಿದ್ದಾರೆ ಎಂದರು.‌

    ಇನ್ನು ಎರಡು ತಿಂಗಳು ಡೆಂಗಿ ಹಾವಳಿ ಇರುತ್ತದೆ. ಜನರು ಹೆಚ್ಚು ಜಾಗೃತರಾಗಬೇಕು. ಮನೆಯ ಸುತ್ತಮುತ್ತಲು ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು. ಆರೋಗ್ಯ ಇಲಾಖೆ ಕೂಡ ಜನರಲ್ಲಿ ಡೆಂಗಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.‌ ಪ್ರತಿ ಶುಕ್ರವಾರ ಅಭಿಯಾನದ ರೀತಿಯಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ತಾಣಗಳನ್ನ ನಾಶ ಪಡಿಸುವ ಕಾರ್ಯ ನಡೆಸುತ್ತಿದೆ. ಹೆಚ್ಚು ಡೆಂಗಿ ಪ್ರಕರಣಗಳು ಕಂಡು ಬರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರೆದು, ಟೆಸ್ಟಿಂಗ್ ಹೆಚ್ಚಿಸಲು ಜಿಲ್ಲಾಧಿಕಾರಿಗಳಿಗೆ ಹಾಗೂ ಸಿಇಒ ಗಳಿಗೆ ಸೂಚಿಸಲಾಗಿದೆ. ಔಷಧಿಗಳ ಲಭ್ಯತೆ ಇದೆ.

    ಡೆಂಗಿ ವಿಚಾರದಲ್ಲಿ ವಿಪಕ್ಷ ನಾಯಕರು ಆತಂಕ ಹುಟ್ಟಿಸುವಂತ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಇದು ಸರಿಯಲ್ಲ. ಇಂಥಹ ಸಂದರ್ಭದಲ್ಲಿ ವಿಪಕ್ಷಗಳು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದರೆ ಡೆಂಗಿ ಹರಡುವ ಸೊಳ್ಳೆಗಳಿಗಿಂತ ವಿಪಕ್ಷ ನಾಯಕರ ಸುಳ್ಳುಗಳು ಹೆಚ್ಚು ಹರಡುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿ ನಾಯಕರ ಹೇಳಿಕೆಗಳನ್ನ ಟೀಕಿಸಿದರು. ಸಂಸದ ಡಾ. ಮಂಜುನಾಥ್ ಅವರು ಉತ್ತಮ ಸಲಹೆಗಳನ್ನ ನೀಡಿದ್ದಾರೆ. ನಾನು ಅವರ ಜೊತೆ ಮಾತನಾಡಿದ್ದೇನೆ. ಆ ರೀತಿಯ ಸಕಾರಾತ್ಮಕ ಚಿಂತನೆಗಳನ್ನ ವಿಪಕ್ಷಗಳು ಪ್ರದರ್ಶಿಸಲಿ ಎಂದರು.

    ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೆ, ಯಾವುದೇ ರೆಸಾರ್ಟ್ ಹೋಗಿರಲಿಲ್ಲ

    ಡೆಂಗಿ ಹೆಚ್ಚಳಕ್ಕೂ, ನಾನು ಮಂಗಳೂರಿನ ಅಂತಾರಾಷ್ಟ್ರೀಯ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿ ಈಜಿದ್ದಕ್ಕೂ ಎತ್ತಣ ಸಂಬಂಧ ಎಂದು ಸಚಿವ ದಿನೇಶ್ ಗುಂಡೂರಾವ್ ಬಿಜೆಪಿಯನ್ನ ಪ್ರಶ್ನಿಸಿದರು. ಮಂಗಳೂರಿನಲ್ಲಿ ನಾನು ಈಜಿದ್ದು ಮಾತ್ರವಲ್ಲ, ಡೆಂಗಿ ಈಡಿಸ್ ಸೊಳ್ಳೆಗಳ ಲಾರ್ವಾ ನಾಶಪಡಿಸುವ ಬೃಹತ್ ಅಭಿಯಾನಕ್ಕೆ ಕೂಡ ಚಾಲನೆ ಕೊಟ್ಟಿದ್ದೇನೆ. ಮನೆ ಮನೆಗೆ ತೆರಳಿ ನೀರು ಶೇಖರಣೆಯಾಗಿರುವ ಸ್ಥಳಗಳನ್ನ ಗುರುತಿಸಿ ಅಲ್ಲಿಯ ನಿವಾಸಿಗಳನ್ನ ಎಚ್ಚರಿಸಿದ್ದೇವೆ. ಎರಡು ದಿನ ಪ್ರವಾಸದಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ.‌ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ತಾಲೂಕು ಮಟ್ಟದಲ್ಲಿ ಜನತಾ ದರ್ಶನ ನಡೆಸಿದ್ದೇನೆ.. ಹೀಗಿರುವಾಗ ಬಿಜೆಪಿ ನಾನು ಈಜುಕೊಳ್ಳದಲ್ಲಿ ಈಜಿದ್ದನ್ನೇ ಪ್ರಶ್ನೆ ಮಾಡಿದೆ‌.. ಬಿಜೆಪಿಗರಿಗೆ ಈಜು ಒಂದು ರೀತಿಯಲ್ಲಿ ಮೋಜು ಮಸ್ತಿಯಾಗಿರಬಹುದು‌.. ಆದರೆ ನನಗಲ್ಲ.. ನಾನು ಮಂಗಳೂರಿನ ಸರ್ಕಾರಿ ಈಜುಕೊಳಕ್ಕೆ ಭೇಟಿ ನೀಡಿದ್ದೇನೆ ಹೊರೆತು ಬಿಜೆಪಿಯವರ ರೀತಿ ಯಾವುದೋ ರೆಸಾರ್ಟ್ ಗೆ ಹೋಗಿಲ್ಲ.‌ ಅದು ಬೆಳಗ್ಗೆ 6 ಗಂಟೆಗೆ ಎದ್ದು, ಸಮಯ ಬಿಡುವು ಮಾಡಿಕೊಂಡು ನಾನು ಈಜುಕೊಳಕ್ಕೆ ಹೋಗಿದ್ದೆ. ಏಕೆಂದರೆ ಈಜುಕೊಳ್ಳಕ್ಕೆ ಭೇಟಿ ನೀಡುವುದು ನನ್ನ ಮಂಗಳೂರು ಪ್ರವಾಸದ ಒಂದು ಭಾಗವಾಗಿತ್ತು ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದರು.‌

    Continue Reading

    DAKSHINA KANNADA

    ಉಳ್ಳಾಲ ದರ್ಗಾದಲ್ಲಿ ಕೂರತ್ ತಂಙಳ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ರಸ್ತೆ ಸಂಚಾರದಲ್ಲಿ ಬದಲಾವಣೆ

    Published

    on

    ಉಳ್ಳಾಲ: ಇಂದು ಬೆಳಗ್ಗೆ ನಿಧನರಾದ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಅವರ ಪಾರ್ಥಿವ ಶರೀರ ಇಂದು (ಜು.8) ಸಂಜೆ 7 ಗಂಟೆ ಸುಮಾರಿಗೆ ಉಳ್ಳಾಲ ದರ್ಗಾ ವಠಾರಕ್ಕೆ ತಲುಪುವ ಸಾಧ್ಯತೆ ಇದೆ. ಅಂತಿಮ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇರುವುದರಿಂದ ಸೂಕ್ತ ಬಂದೋಬಸ್ತ್ ಗಾಗಿ ಎಸಿಪಿ ಧನ್ಯಾ ನೇತೃತ್ವದಲ್ಲಿ ದರ್ಗಾ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

    ಜನ ನಿಭಿಡತೆ ನಿಯಂತ್ರಿಸಲು ದರ್ಗಾಕ್ಕೆ ಆಗಮಿಸುವ ರಸ್ತೆ ಸಂಚಾರದಲ್ಲಿ ಬದಲಾವಣೆ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

    ಉಳ್ಳಾಲ ದರ್ಗಾಕ್ಕೆ ಆಗಮಿಸುವವರು ಓವರ್ ಬ್ರಿಡ್ಜ್ ಮೂಲಕ ಮಾಸ್ತಿಕಟ್ಟೆಯವರೆಗೆ ಮಾತ್ರ ವಾಹನದಲ್ಲಿ ಬರಲು ಅವಕಾಶ ಕಲ್ಪಿಸಲಾಗಿದೆ. ಬಳಿಕ ಮಾಸ್ತಿಕಟ್ಟೆಯಿಂದ ಕಾಲ್ನಡಿಗೆಯಲ್ಲಿ ದರ್ಗಾ ತಲುಪಬಹುದು. ದರ್ಗಾಕ್ಕೆ ಆಗಮಿಸಿ ಹಿಂದಿರುಗುವವರು ಸೋಮೇಶ್ವರ ಮಾರ್ಗವಾಗಿ ತೆರಳಬೇಕು ಎಂದು ಎಸಿಪಿ ತಿಳಿಸಿದರು.

    ವಾಹನ ಪಾರ್ಕಿಂಗ್ ಗೆ ಉಳ್ಳಾಲಬೈಲು, ಹಝ್ರತ್ ಶಾಲೆ, ಉಳ್ಳಾಲ ಬೀಚ್, ಮಾಸ್ತಿಕಟ್ಟೆ, ಅಬ್ಬಕ್ಕ ಸರ್ಕಲ್, ಭಗವತಿ ದೇವಸ್ಥಾನ ಬಳಿ ವ್ಯವಸ್ಥೆ ಮಾಡಲಾಗಿದೆ ಎಂದವರು ವಿವರಿಸಿದರು.

    ಸಭೆಯಲ್ಲಿ ಉಳ್ಳಾಲ ಠಾಣಾ ಇನ್ ಸ್ಪೆಕ್ಟರ್ ಬಾಲಕೃಷ್ಣ, ಉಳ್ಳಾಲ ಜುಮಾ ಮಸೀದಿ ಮತ್ತು ಸೈಯದ್ ಮದನಿ ದರ್ಗಾ ಸಮಿತಿಯ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಮತ್ತಿತರರು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಅಂತಾರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

    Published

    on

    ಮಂಗಳೂರು : ಅಂತಾರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

    ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಫ್ಲಾಯ್ಡ್ ಮಿಸ್ಕಿತ್, ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ರಾಜಸ್ಥಾನದ ಅಲ್ವಾರಿನಲ್ಲಿ ನಡೆದ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ನಡೆಯಲಿರುವ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ

    Continue Reading

    LATEST NEWS

    Trending