Sunday, November 27, 2022

ಬೆಳ್ಮಣ್‌ನಲ್ಲಿ ಜೀಪು ಪಲ್ಟಿ: ಯುವತಿ ಜೀವಾಂತ್ಯ-ಮೂವರಿಗೆ ಗಂಭೀರ

ಬೆಳ್ಮಣ್‌: ಜೀಪು ಪಲ್ಟಿಯಾಗಿ ಯುವತಿಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಸಮೀಪ ನಿನ್ನೆ ಸಂಜೆ ನಡೆದಿದೆ.


ಕಿನ್ನಿಗೋಳಿಯಿಂದ ಮುಂಡ್ಕೂರು ಕಡೆಗೆ ತೆರಳುತ್ತಿದ್ದ ಜೀಪಿನಲ್ಲಿ ಚಾಲಕನ ಸಹಿತ ಆರು ಮಂದಿ ಪ್ರಯಾಣಿಸುತ್ತಿದ್ದು ಮೂವರು ಗಂಭೀರ ಗಾಯಗೊಂಡಿದ್ದರೆ ಇನ್ನುಳಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕುಳಾಯಿಯಿಂದ ಖಾಸಗಿ ಕಾರ್ಯಕ್ರಮ ಮುಗಿಸಿ ಹಿಂತಿರುಗಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿತು.

ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಬಾಂಬ್ ಸ್ಫೋಟ ಆರೋಪಿ ಶಾರೀಕ್‌ಗೆ ಆಸ್ಪತ್ರೆಯಲ್ಲಿ ಬಿಗು ಪೊಲೀಸ್ ಬಂದೋಬಸ್ತ್‌-ಸ್ಪೋಟದ ಬೆನ್ನಲ್ಲೇ ಟ್ವೀಟ್‌ ಮಾಡಿದ ಝಾಕೀರ್‌…

ಮಂಗಳೂರು: ಮಂಗಳೂರಿನಲ್ಲಿ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಆರೋಪಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ. ಇದೀಗ ಶಾರೀಕ್‌ ಜೀವಕ್ಕೂ ಆಪತ್ತು ಇರುವ ಹಿನ್ನೆಲೆಯಲ್ಲಿ ಆಸ್ಪತ್ರೆ ಬಳಿ ಪೊಲೀಸರು ಬಿಗು...

ಸುಳ್ಯದಲ್ಲಿ ಪತ್ನಿಯನ್ನು ಕೊಂದು ಮೃತದೇಹವನ್ನು ಗೋಣಿಚೀಲದಲ್ಲಿಟ್ಟಿದ್ದ ಪಾಪಿ ಪತಿ ಪ.ಬಂಗಾಳದಲ್ಲಿ ಅರೆಸ್ಟ್

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೀರಮಂಗಲ ಸಮೀಪದ ಬಾಡಿಗೆ ಮನೆಯೊಂದರಲ್ಲಿ ಗೋಣಿಚೀಲದೊಳಗೆ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಲದಲ್ಲಿ ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಪತಿ ಇಬ್ರಾನ್ ಶೇಖ್...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...