Connect with us

LATEST NEWS

ಜೀವನ್ ರಾಂ ಸುಳ್ಯ ಅವರಿಗೆ ಕರ್ನಾಟಕ ಜಾನಪದ ವಿ.ವಿ.ಯಿಂದ ಗೌರವ ಡಾಕ್ಟರೇಟ್

Published

on

ಸುಳ್ಯ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು ನೀಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಗೆ ಪ್ರಸಿದ್ಧ ರಂಗಕರ್ಮಿ ಜೀವನ್ ರಾಂ ಸುಳ್ಯ ಆಯ್ಕೆ ಆಗಿದ್ದಾರೆ.

ಜೀವನ್ ರಾಂರವರು ರಂಗಭೂಮಿ, ಜಾನಪದ, ಯಕ್ಷಗಾನ, ಸಂಗೀತ, ಕಲೆ, ಜಾದೂ, ಚಲನಚಿತ್ರ ಹಾಗೂ ಸಂಘಟನೆ ಮುಂತಾಗಿ ಸಾಂಸ್ಕೃತಿಕ ಲೋಕದಲ್ಲಿ ಮಾಡಿದ ಗಣನೀಯ ಸಾಧನೆಯನ್ನು ಗುರುತಿಸಿ ಜಾನಪದ ವಿಶ್ವವಿದ್ಯಾಲಯು ಇವರನ್ನು ಈ ಗೌರವಕ್ಕೆ ಆಯ್ಕೆ ಮಾಡಿರುತ್ತದೆ.

ಡಿಸೆಂಬರ್ 1ರಂದು ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಕರ್ನಾಟಕ ಜಾನಪದ ವಿ.ವಿ.ಯ ಆರನೇ ಘಟಿಕೋತ್ಸವದ ಸಂದರ್ಭದಲ್ಲಿ ಜೀವನ್ ರಾಂ ಅವರಿಗೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಪದವಿ ಪ್ರದಾನ ಮಾಡಲಿದ್ದಾರೆ.


ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವತ್ ನಾರಾಯಣ್ ಸಿ.ಎನ್. ಇವರು ಉಪಸ್ಥಿತರಿರುತ್ತಾರೆಂದು ಜಾನಪದ ವಿ.ವಿ.ಯ ಕುಲಪತಿಗಳಾದ ಪ್ರೊ.ಟಿ.ಎಂ.ಭಾಸ್ಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಹುಮುಖ ಪ್ರತಿಭೆ ಕಡು ಬಡತನದಲ್ಲಿ ಬೆಳೆದ ಜೀವನ್ ರಾಂರವರು ಮೂಲತ: ಯಕ್ಷಗಾನ ಕುಟುಂಬದಿಂದ ಬಂದವರು. ತನ್ನ ನಿರಂತರ- ಅವಿರತ ಕಠಿಣ ಪರಿಶ್ರಮದಿಂದಲೇ ಸಾಂಸ್ಕೃತಿಕ ಲೋಕದಲ್ಲಿ ತನ್ನದೇ ಛಾಪನ್ನು ಮೂಡಿಸಿದ್ದಾರೆ.

ಇವರು ನೀನಾಸಂ ರಂಗ ಶಿಕ್ಷಣ ಕೇಂದ್ರದಲ್ಲಿ ರಂಗಪದವಿ ಪಡೆದು, ನೀನಾಸಂ ತಿರುಗಾಟದಲ್ಲಿ 5 ವರ್ಷ ನಟನಾಗಿ, ತಂತ್ರಜ್ಞನಾಗಿ, ಸಂಚಾಲಕನಾಗಿ ದುಡಿದವರು.

ಜಾನಪದ, ಯಕ್ಷಗಾನ, ಕಲೆ, ಜಾದೂವನ್ನು ತನ್ನ ನಾಟಕಗಳಲ್ಲಿ ಸಮರ್ಥವಾಗಿ ಬಳಸಿಕೊಂಡ ಜೀವನ್ ರಾಂ ನಿರ್ದೇಶನದ ಪ್ರತಿಯೊಂದು ಪ್ರಯೋಗಗಳೂ ಒಂದಕ್ಕಿಂತ ಒಂದು ಭಿನ್ನ ವಿಭಿನ್ನ.

ವಿಶೇಷ ರಂಗವಿನ್ಯಾಸ, ಬೆಳಕು ಸಂಯೋಜನೆ, ವಸ್ತ್ರವಿನ್ಯಾಸ, ರಂಗತಂತ್ರಗಳಿಂದ ನಾಟಕಗಳನ್ನು ಅದ್ಭುತವಾಗಿ ಕಟ್ಟುವ ಜೀವನ್ ರಾಂ ರವರು ದೇಶದಾದ್ಯಂತ ತನ್ನದೇ ಆದ ಪ್ರೇಕ್ಷಕ ಬಳಗವನ್ನು ಸೃಷ್ಟಿಸಿಕೊಂಡಿದ್ದಾರೆ.

ಮಕ್ಕಳ ಮತ್ತು ಕಾಲೇಜು ರಂಗಭೂಮಿಯಲ್ಲಿ ವಿಶೇಷ ಆಸಕ್ತಿ ಹೊಂದಿದ ಜೀವನ್ ರಾಂ ಇದುವರೆಗೆ ಸಾವಿರಾರು ವಿದ್ಯಾರ್ಥಿಗಳ ಪ್ರತಿಭೆಗೆ ವೇದಿಕೆ ನೀಡಿದವರು.

ಬೇರೆಲ್ಲೂ ಕಾಣ ಸಿಗದ, ತನ್ನ ಸ್ವಂತ ವಾಸದ ಮನೆಯನ್ನೇ ಸಾಂಸ್ಕೃತಿಕ ತಾಣವನ್ನಾಗಿಸಿ, ಸಾರ್ವಜನಿಕರಿಗೆ ನಿರಂತರ ಚಟುವಟಿಕೆಗಳನ್ನು ನೀಡುತ್ತಾ , ಆರೋಗ್ಯಕರ ಸಾಂಸ್ಕೃತಿಕ ವಾತಾವರಣ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಅಪರೂಪದ ರಂಗಕರ್ಮಿ ಜೀವನ್ ರಾಂ ಸುಳ್ಯ.

ಸುಜನಾ ಯಕ್ಷಗಾನ ಅಧ್ಯಯನ ಕೇಂದ್ರ ಮತ್ತು ರಂಗಮನೆ ನಾಟಕ ಶಾಲೆಯ ಸ್ಥಾಪಕರಾಗಿದ್ದಾರೆ. ಸಾಮಾಜಿಕ ಜನಜಾಗೃತಿಗಾಗಿ ಇವರೇ ರಚಿಸಿ,ನಿರ್ದೇಶಿಸಿ, ಅಭಿನಯಿಸಿದ ಬೀದಿನಾಟಕ ಪ್ರದರ್ಶನಗಳ ಸಂಖ್ಯೆ 3000 ಕ್ಕಿಂತಲೂ ಅಧಿಕ.

ಮಂಗಳೂರು ವಿ.ವಿ.ಯಲ್ಲಿ ಮತ್ತು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಕೇಂದ್ರದಲ್ಲಿ ಇವರು ನಿರ್ಮಿಸಿದ ಯಕ್ಷಗಾನದ ಎರಡು ಮ್ಯೂಸಿಯಂಗಳು ಅಧ್ಯಯನಕ್ಕೆ ಪೂರಕವಾದ ಅತ್ಯಮೂಲ್ಯ ವಸ್ತು ಸಂಗ್ರಹಗಳಾಗಿವೆ.

ರಂಗದಶಾವತಾರಿ, ರಂಗಮಾಂತ್ರಿಕ, ರಂಗಮಾಣಿಕ್ಯ, ಕಲಾಶ್ರೀ, ಬಾಲ ಸೇವಾರತ್ನ ಪುರಸ್ಕಾರ, ಸರಸ್ವತಿ ಪುರಸ್ಕಾರ, ಕರ್ನಾಟಕ ನಾಟಕ ಅಕಾಡೆಮಿ ಸಿ.ಜಿ.ಕೆ.ಪುರಸ್ಕಾರ, ಸುವರ್ಣ ರಂಗ ಸಮ್ಮಾನ್, ಸೌರಭ ಪ್ರಶಸ್ತಿ, ಉಪಾಧ್ಯಾಯ ಸಮ್ಮಾನ್,ಕಲಾ ಸಿಂಧು ಪುರಸ್ಕಾರ, ಆಳ್ವಾಸ್ ಮಕ್ಕಳ ಸಿರಿ ಪ್ರಶಸ್ತಿ, ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಸಾಧನಶ್ರೀ ಪ್ರಶಸ್ತಿ, ಅರೆಹೊಳೆ ರಂಗಭೂಮಿ ಪ್ರಶಸ್ತಿ ,
ಸೇಡಂ ಅಮ್ಮ ಪ್ರಶಸ್ತಿ, ಆರ್ಯಭಟ ಅಂತರ್ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ತನ್ನ ಅತ್ತುತ್ತಮ ನಿರ್ದೇಶನದ ಏಕಾಂಕ ಹಾಗೂ ಕಿರು ನಾಟಕಗಳಿಗೆ ವಿಶ್ವವಿದ್ಯಾಲಯ ಮಟ್ಟದಲ್ಲಿ ಸತತ 11 ಬಾರಿ ರಾಷ್ಟೀಯ ರಂಗ ಪ್ರಶಸ್ತಿ ದೊರೆತಿದೆ. ಸಿಕ್ಕ ಸನ್ಮಾನಗಳು ನೂರಾರು.

ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ, ಜಾನಪದ ಜಾತ್ರೆಯ ಜಿಲ್ಲಾ ಸಂಚಾಲಕರಾಗಿ, ಕರ್ನಾಟಕ ಸರಕಾರದ ರಂಗಸಮಾಜದ ಸದಸ್ಯರಾಗಿ ,ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ ಇವರು ಪ್ರಸ್ತುತ ಕಾರ್ಕಳ ಯಕ್ಷ ರಂಗಾಯಣದ ಪ್ರಥಮ ನಿರ್ದೇಶಕರಾಗಿ ಕಾರ್ಯೋನ್ಮುಖರಾಗಿದ್ದಾರೆ.

DAKSHINA KANNADA

ಪಾವಂಜೆ ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆ..!

Published

on

ಮುಲ್ಕಿ: ಮಂಗಳೂರು ಹೊರವಲಯದ ಮುಲ್ಕಿಯ ಠಾಣಾ ವ್ಯಾಪ್ತಿಯ ಹಳೆಯಂಗಡಿ ಸಮೀಪದ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದಲ್ಲಿ ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಯುವಕನ ಶವ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕಳೆದ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ.

ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರೆದಿದೆ.

Continue Reading

DAKSHINA KANNADA

Kadaba: ಹಠಾತ್ ಕಾಡಾನೆ ದಾಳಿ- ವ್ಯಕ್ತಿ ಗಂಭೀರ..!

Published

on

ಕಡಬ: ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರ ಸ್ಥಿತಿಗೊಂಡು ಆಸ್ಪತ್ರೆಯಲ್ಲಿ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದ ಮರ್ಧಾಳ-ಕೊಣಾಜೆಯಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಗರ್ತಿಲ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.

ಚೋಮ ಅವರು ಸಂಜೆ ವೇಳೆ ಕೆಲಸ ಬಿಟ್ಟು ಮನೆಗೆ ತೆರಳುತ್ತಿದ್ದ ಸಂದರ್ಭ ನೆಲ್ಯಡ್ಕ ಶಾಲೆಯ ಸಮೀಪ ಇರುವ ಕಾರ್ತಿಕೇಯ ಭಜನಾ ಮಂದಿರ ಬಳಿ ಆನೆಯೊಂದು ಹಠತ್ ದಾಳಿ ನಡೆಸಿದೆ.

ಪರಿಣಾಮ ವ್ಯಕ್ತಿ ಗಂಭೀರ ಗಾಯಗೊಂಡಿದ್ದಾರೆ.

ಸದ್ಯ ಚೋಮ ಅವರ ಸ್ಥಿತಿಯು ಚಿಂತಾಜನಕವಾಗಿದ್ದು, ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಈ ಹಿಂದೆ ಆನೆ ದಾಳಿಯ ಘಟನೆಗಳು ನಡೆದಿದ್ದು, ಕೃಷಿ ನಾಶದಂತಹ ಘಟನೆಗಳು ದಿನಂಪ್ರತಿ ನಡೆಯುತ್ತಿದೆ ಎನ್ನಲಾಗಿದೆ.

 

 

Continue Reading

DAKSHINA KANNADA

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಅಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ಆಯ್ಕೆ

Published

on

ಮಂಗಳೂರು: ಮಂಗಳೂರು ಸೊಬೆಸ್ಟಿಯನ್ ಹಾಲ್ ನಲ್ಲಿ ನಡೆದ  ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯಲ್ಲಿ  ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ  ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ.

ಸಂಚಾಲಕರಾಗಿ ಕರುಣಾಕರ್ ಕಾನಂಗಿ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಉಪಾಧ್ಯಕ್ಷರಾಗಿ ರಮೇಶ್ ಕಲಾ ಶ್ರೀ ಮಂಗಳೂರು, ಜಯಕರ್ ಸುವರ್ಣ ಉಡುಪಿ, ಜೊತೆ ಕಾರ್ಯದರ್ಶಿ ಹರೀಶ್ ಪಿ ಕೋಟ್ಯಾನ್ ಮುಲ್ಕಿ, ಹೆರಿಕ್ ಡಿಸೋಜ ಬ್ರಹ್ಮಾವರ, ಸಂಘಟನಾ ಕಾರ್ಯದರ್ಶಿ ಕೃಷ್ಣರಾವ್ ಕಾಪು, ರಮೇಶ್ ಹೊಸಬೆಟ್ಟು ಸುರತ್ಕಲ್, ಛಾಯಾ ಕಾರ್ಯದರ್ಶಿ ರವಿ ಕೋಟ್ಯಾನ್ ಮೂಡಬಿದ್ರಿ, ಕ್ರೀಡಾ ಕಾರ್ಯದರ್ಶಿ ರಂಜಿತ್ ಕುಂದಾಪುರ, ಭಾರದ್ವಾಜ್ ಬೆಳ್ತಂಗಡಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ್ ಉಳ್ಳಾಲ ಮಾಧ್ಯಮ ಕಾರ್ಯದರ್ಶಿ ಹರೀಶ್ ರಾವ್ ಆಯ್ಕೆಯಾಗಿದ್ದಾರೆ.

ಈ ಚುನಾವಣಾ ಪ್ರಕ್ರಿಯೆಯನ್ನು ಎಸ್ ಕೆಪಿಎ ಯ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಆನಂದ್ ಬಂಟ್ವಾಳ್ ಅವರು ನಡೆಸಿಕೊಟ್ಟರು.

 

Continue Reading

LATEST NEWS

Trending