Connect with us

LATEST NEWS

ಜೆರೋಸಾ ಶಾಲೆಯಲ್ಲಿ ನಿಜವಾಗಿ ನಡೆದಿದ್ದೇನು…? ತನಿಖಾಧಿಕಾರಿಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆ…!

Published

on

ಮಂಗಳೂರು : ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಮಾಡಿದ ಪಾಠದ ವಿಚಾರವಾಗಿ ಉಂಟಾದ ವಿವಾದದ  ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ.  ಈ ಪ್ರಕರಣದ ತನಿಖೆ ನಡೆಸಲು ವಿಶೇಷ ಅಧಿಕಾರಿಯನ್ನಾಗಿ ಕಲಬುರ್ಗಿಯ ಐಎಎಸ್‌ ಅಧಿಕಾರಿ ಡಾ.ಆಕಾಶ್ ಅಂಕುರ್ ಅವರನ್ನು ನೇಮಿಸಲಾಗಿತ್ತು.

ತನಿಖಾಧಿಕಾರಿ ಡಾ.ಆಕಾಶ್  ಅಂಕುರ್‌

ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದ್ದ ಪ್ರಕರಣದ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶಿಕ್ಷಣ ಸಂಸ್ಥೆಯ ಶಿಕ್ಷಕಿ ಮಾಡಿರುವ ಪಾಠ ಹಾಗೂ ಆ ವೇಳೆ ಬಳಸಿದ ಪದಗಳ ಬಗ್ಗೆ ಆಕ್ಷೇಪ ವ್ಯಕ್ತವಾಗಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಇದಾದ ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಿ ಶಾಲಾ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಕಲಬುರ್ಗಿಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರ ಮೂಲಕ ತನಿಖೆ ನಡೆಸಿತ್ತು. ತನಿಧಿಕಾರಿಯಾಗಿ ಮಂಗಳೂರಿಗೆ ಆಗಮಿಸಿದ ಐಎಎಸ್ ಅಧಿಕಾರಿ ಡಾ. ಆಕಾಶ್ ಅಂಕುರ್ ಅವರು ಮೂರು ದಿನಗಳ ಕಾಲ ಮಂಗಳೂರಿನಲ್ಲಿದ್ದು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು.

ಶಾಲಾ ಶಿಕ್ಷಕ ವೃಂಧದ ಜೊತೆ ಶಾಸಕರ ಮಾತುಕತೆ...

ಶಾಲಾ ಆಡಳಿತ ಮಂಡಳಿ, ಶಾಲೆಯ ವಿದ್ಯಾರ್ಥಿಗಳು, ಪೋಷಕರು , ದೂರುದಾರರು ಹಾಗೂ ಪ್ರತಿಭಟನೆ ನಡೆಸಿದ್ದ ಸಂಘಟನೆಯ ಪ್ರಮುಖರ ವಿಚಾರಣೆ ನಡೆಸಿದ್ದರು. ತನಿಖೆಯಲ್ಲಿ ಕಂಡು ಬಂದಿರುವ ಸತ್ಯಾಸತ್ಯೆತೆ ಏನು ಎಂಬ ವಿಚಾರವಾಗಿ ವರದಿ ಸಿದ್ಧಪಡಿಸಿದ ತನಿಖಾಧಿಕಾರಿ ಡಾ.ಆಕಾಶ್ ಅಂಕುರ್ ಅವರು ಇದೀಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ವರದಿ ಸಲ್ಲಿಕೆ ಮಾಡಿದ್ದಾರೆ. ಆದರೆ ಐಎಎಸ್ ಅಧಿಕಾರಿ ನೀಡಿರುವ ವರದಿಯಲ್ಲಿ ಏನಿದೆ ಅನ್ನೋ ವಿಚಾರವನ್ನು ಸರ್ಕಾರ ಇನ್ನೂ ಬಹಿರಂಗ ಪಡಿಸಿಲ್ಲ. ಹೀಗಾಗಿ ತನಿಖಾಧಿಕಾರಿ ನೀಡಿದ ವರದಿಯನ್ನು ಸರ್ಕಾರ ತಕ್ಷಣ ಬಹಿರಂಗ ಪಡಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

 

1 Comment

1 Comment

  1. K T KUMAR

    10/03/2024 at 11:04 AM

    ಈ ಸರ್ಕಾರದಿಂದ ನಾವು ಏನನ್ನು ನಿರೀಕ್ಷಿಸಬಹುದು? ಇತ್ತೀಚಿನ “ಪಾಕಿಸ್ತಾನ್ ಜಿಂದಾಬಾದ್” ಪ್ರಕರಣದಲ್ಲಿ ನಾವು ಅವರನ್ನು ನೋಡಿದ್ದೇವೆ. ಸುಳ್ಳಿನ ವೈಭವೀಕರಣದ ಮೂಲಕ ಅವರು ಈ ಎಲ್ಲಾ ವರ್ಷಗಳಲ್ಲಿ ಬದುಕುಳಿದರು. ಮಾಹಿತಿ ತಂತ್ರಜ್ಞಾನಕ್ಕೆ ಧನ್ಯವಾದಗಳು, ಇನ್ನು ಮುಂದೆ ಈ ರೀತಿಯ ಸುಳ್ಳುಗಾರರು ಉಳಿಯುವುದಿಲ್ಲ.

Leave a Reply

Your email address will not be published. Required fields are marked *

LATEST NEWS

ಮೂರು ವರ್ಷದ ಮಗುವಿನ ಎದೆಗೆ ಕಾಲಿಟ್ಟು ಕೊಂ*ದ ಪಾಪಿ..! ಬೆಳಗಾವಿಯಲ್ಲೊಂದು ಅಮಾನುಷ ಘಟನೆ

Published

on

ಬೆಳಗಾವಿ: ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹ*ತ್ಯೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿಯಲ್ಲಿ ನಡೆದಿದೆ.

ಬುರ್ಲಟ್ಟಿ ಗ್ರಾಮದ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಮೂರು ವರ್ಷದ ಮೃತಪಟ್ಟಿರುವ ಮಗು.  ಜೋತಿಭಾ ತುಕಾರಾಮ ಬಾಬಾಬರ ಎಂಬವನು ಮಗುವನ್ನು ಕೊಂ*ದವರು ಎಂದು ತಿಳಿದು ಬಂದಿದೆ. ಮಗುವಿನ ತಂದೆ ಕಾಡಪ್ಪ ಕಾಳಪಾಟೀಲಗೆ ಕಳೆದ ವರ್ಷ ಜೋತಿಭಾ ಬಾಬಾಬರ ಐವತ್ತು ಸಾವಿರ ಸಾಲ ನೀಡಿದ್ದ ಎನ್ನಲಾಗಿದೆ. ಈ ಹಣವನ್ನು ವಾಪಸ್‌ ನೀಡುವಂತೆ ಕಾಳಪ್ಪನಿಗೆ ಕೇಳಿದಾಗ ಶನಿವಾರ ಬೆಳಗ್ಗೆ ಜೋತಿಭಾ ಕಾಳಪ್ಪನ ಮನೆ ಮುಂದೆ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದಾಗಿ ಇಬ್ಬರ ನಡುವೆ ಜಗಳ ತಾರಕಕ್ಕೇರಿ ಜೋತಿಭಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದಿದ್ದಾನೆ ಎಂದು ಮೃತಪಟ್ಟ ಮಗುವಿನ ಕುಟುಂಬಸ್ಥರು ಆರೋಪಿಸಿದ್ದಾರೆ.

ಮುಂದೆ ಓದಿ..: ಸಾ*ವಿನಲ್ಲಿ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

ಸಾ*ವಿನಲ್ಲೂ ಒಂದಾದ ತಂದೆ ಮಗ.. ತಂದೆಯ ಅಗಲಿಕೆ ನೋವಲ್ಲೇ ಅಸುನೀಗಿದ ಮಗ..!

Published

on

ಕೊಪ್ಪಳ: ಒಂದೇ ದಿನದಲ್ಲಿ ತಂದೆ ಮಗ ಇಬ್ಬರೂ ಸಾವನ್ನಪ್ಪಿದ ಘಟನೆ ಕೊಪ್ಪಳದ ಬಂಡಿಹರ್ಲಾಪುರಾದಲ್ಲಿ ನಡೆದಿದೆ. ತಂದೆಯ ಸಾವಿನ ನೋವಿನಲ್ಲಿ ಮಗ ಕೂಡಾ ಸಾವನ್ನಪ್ಪಿದ್ದಾರೆ. ಮೃ*ತರನ್ನು ರಾಮರೆಡ್ಡಿ (70) ಮತ್ತು ಆದಿನಾರಾಯಣ ರೆಡ್ಡಿ (42) ಎಂದು ಗುರುತಿಸಲಾಗಿದೆ.

death

ಮುಂದೆ ಓದಿ..; ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

ರಾಮರೆಡ್ಡಿ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ(ಎ.28) ಬೆಳಿಗ್ಗೆ ಮೃತಪಟ್ಟಿದ್ದರು. ಅದೇ ದಿನ ರಾತ್ರಿ 8.30ಕ್ಕೆ ಮಗ ಆದಿನಾರಾಯಣ ರೆಡ್ಡಿ ಕೂಡ ಪ್ರಾಣ ಬಿಟ್ಟಿದ್ದಾರೆ. ಆದಿನಾರಾಯಣ ತಂದೆಯನ್ನು ಬಹಳ ಪ್ರೀತಿಸುತ್ತಿದ್ದು, ತಂದೆಯ ಸಾವಿನ ದುಃಖದಲ್ಲಿ ಕುಳಿತಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಆದಿನಾರಾಯಣ ರೆಡ್ಡಿ, ಪತ್ನಿ ಹಾಗೂ ತನ್ನೆರಡು ಮಕ್ಕಳನ್ನು ಅಗಲಿದ್ದಾರೆ.

Continue Reading

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

Trending