Connect with us

    ಕೊರೊನಾ ಆರ್ಭಟದ ಎಫೆಕ್ಟ್: ನಾಳೆಯಿಂದ 5 ದಿನಗಳ ಕಾಲ ಜಿಲ್ಲೆಯಲ್ಲಿ ಚಿನ್ನದ ಮಳಿಗೆ ಬಂದ್..!!

    Published

    on

    ಕೊರೊನಾ ಆರ್ಭಟದ ಎಫೆಕ್ಟ್: ನಾಳೆಯಿಂದ 5 ದಿನಗಳ ಕಾಲ ಜಿಲ್ಲೆಯಲ್ಲಿ ಚಿನ್ನದ ಮಳಿಗೆ ಬಂದ್..!!

    ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೊರೋನಾ ‌ಪ್ರಕರಣ ಹೆಚ್ಚಳ ಹಿನ್ನೆಲೆ ನಾಳೆ (ಜುಲೈ 5) ಯಿಂದ ಸುಮಾರು 5 ದಿನಗಳ ‌ಕಾಲ ಜಿಲ್ಲೆಯ ಜ್ಯುವೆಲ್ಲರಿ ಶಾಪ್ ಗಳು ಸಂಪೂರ್ಣ ಬಂದ್ ಆಗಲಿದೆ.

    ಕಾರ್ಪೊರೇಟ್ ಸ್ವರ್ಣಾಭರಣ ಮಳಿಗೆ ಸೇರಿ ಜುಲೈ 5 ರಿಂದ ಜುಲೈ 9ರ ವರೆಗೆ ಜ್ಯುವೆಲ್ಲರಿಗಳು ಬಂದ್ ಆಗಲಿವೆ.

    ದ.ಕ ಜಿಲ್ಲಾ ಸ್ವರ್ಣ ವ್ಯಾಪಾರ ಸಂಘ ನಿರ್ಧಾರ ಕೈಗೊಂಡಿದ್ದು, ಚಿನ್ನಾಭರಣ ಕಾಯ್ದಿರಿಸಿದವರು ಇಂದು (ಜುಲೈ 4) ಮಳಿಗೆಗೆ ಆಗಮಿಸಲು ಸೂಚನೆ ನೀಡಲಾಗಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಬೆಂಗಳೂರಿನಲ್ಲಿ ಮಹಿಳೆಯ ಬರ್ಬರ ಹ*ತ್ಯೆ – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್

    Published

    on

    ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊ*ಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕ ನಗರದಲ್ಲಿ ನಡೆದಿದೆ.

    ಮಹಿಳೆಯನ್ನು ಕೊಂ*ದು ನಂತರ ಮೃ*ತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹ*ತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ಫ್ರಿಡ್ಜ್‌ನಲ್ಲಿ ಇರಿಸಿ ಮಗುವನ್ನು ಮನೆಯಲ್ಲೇ ಬಿಟ್ಟು ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    2-3 ತಿಂಗಳಿನಿಂದ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ.

    Continue Reading

    LATEST NEWS

    ಶಿರೂರು ಗುಡ್ಡ ಕುಸಿತ; ಕೊನೆಗೂ ನಾಪತ್ತೆಯಾಗಿದ್ದ ಟ್ರಕ್‌ ಪತ್ತೆ

    Published

    on

    ಕಾರವಾರ: ಶಿರೂರು ಭೂ ಕುಸಿತದ ಬಳಿಕ ಗಂಗಾವಳಿ ನದಿಯಾಳದಲ್ಲಿ ಬಿದ್ದ ಟ್ರಕ್‌ ಕೊನೆಗೂ ಪತ್ತೆಯಾಗಿದೆ.

    ಜುಲೈ 16 ರಂದು ಭೂ ಕುಸಿತ ಸಂಭವಿಸಿದ ಬಳಿಕ ಕೇರಳದ ಅರ್ಜುನ್‌ ಚಲಾಯಿಸುತ್ತಿದ್ದ ಟ್ರಕ್‌ ಗಂಗಾವಳಿ ನದಿಗೆ ಬಿದ್ದಿತ್ತು. ನದಿಯಲ್ಲಿ ನೀರಿನ ಪ್ರಮಾಣ ಜಾಸ್ತಿ ಇದ್ದ ಕಾರಣ ಟ್ರಕ್‌ ಪತ್ತೆ ಮಾಡಲು ಕಷ್ಟವಾಗಿತ್ತು. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಟ್ರಕ್‌ ಪತ್ತೆಗೆ ನಿರಂತರ ಪ್ರಯತ್ನ ನಡೆಸುತ್ತಿದ್ದರು.

    ಈಗ ಟ್ರಕ್‌ ಗುಡ್ಡ ಕುಸಿತಗೊಂಡ ಜಾಗದ ಬಳಿಯೇ ಸಿಕ್ಕಿ ಬಿದ್ದಿದೆ. ಟ್ರಕ್‌ ಮೇಲೆ ಸಾಕಷ್ಟು ಕಲ್ಲು ಮತ್ತು ಮಣ್ಣುಗಳಿವೆ. ಹೀಗಾಗಿ ಮಣ್ಣು ಮತ್ತು ಕಲ್ಲುಗಳನ್ನು ತೆಗೆದು ಟ್ರಕ್‌ ಮೇಲಕ್ಕೆ ಎತ್ತಲು ಸಿದ್ಧತೆ ನಡೆಯುತ್ತಿದೆ.

    ಜುಲೈ 16 ರಂದು ಭೂಕುಸಿತ ಸಂಭವಿಸಿದಾಗ ಅರ್ಜುನ್ ಮರ ತುಂಬಿಸಿಕೊಂಡು ಟ್ರಕ್‌ನಲ್ಲಿ ಕೋಝಿಕ್ಕೋಡ್‌ ಕಡೆಗೆ ಹೋಗುತ್ತಿದ್ದರು.

    Continue Reading

    FILM

    ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!

    Published

    on

    ಹೈದರಾಬಾದ್/ಮಂಗಳೂರು: ಜಾನಿ ಮಾಸ್ಟರ್ ಮೇಲಿರುವ ನೃತ್ಯ ನಿರ್ದೇಶಕಿಯ ಅತ್ಯಾಚಾರ ಆರೋಪಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಜಾನಿ ಮಾಸ್ಟರ್ ಪತ್ನಿ ಆಯಿಷಾ ಮೇಲೂ ಕ್ರಮಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

    ಈಗಾಗಲೇ ಜಾನಿ ಮಾಸ್ಟರ್‌ ನನ್ನು ಡ್ಯಾನ್ಸ್‌ ನಿರ್ದೇಶಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ ಗೋವಾ ಪೊಲೀಸರು ಬಂಧಿಸಿ ಹೈದರಾಬಾದ್‌ನ ಚಂಚಲ್‌ ಗುಡಾ ಜೈಲಿಗೆ ಕಳುಹಿಸಿದ್ದಾರೆ. ನೃತ್ಯ ಸಂಯೋಜಕಿಯೊಬ್ಬಳು ನನ್ನ ಮೇಲೆ ಜಾನಿ ಮಾಸ್ಟರ್ ಅತ್ಯಾಚಾರವೆಸಗಿದ್ದಾರೆ ಹಾಗೂ ಅವರ ಪತ್ನಿ ಆಯಿಷಾ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ನರಸಿಂಗ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಖ್ಯಾತ ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ಅರೆಸ್ಟ್..!

    ಪ್ರಕರಣದಲ್ಲಿ ಆಯೇಷಾರನ್ನು ಆರೋಪಿಯನ್ನಾಗಿಸಲು ಪೊಲೀಸರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಮತ್ತೊಂದೆಡೆ ಶನಿವಾರ(ಸೆ.21) ನರಸಿಂಗಿ ಪೊಲೀಸರು, ಜಾನಿ ಮಾಸ್ಟರ್ ನನ್ನು ಕಸ್ಟಡಿಗೆ ನೀಡುವಂತೆ ಉಪ್ಪಾರಪಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಿದ್ದಾರೆ. ಹತ್ತು ದಿನಗಳ ಕಾಲ ಕಸ್ಟಡಿಗೆ ಕೋರುವ ಸಾಧ್ಯತೆ ಇದೆ. ಫೋಕ್ಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಆತನನ್ನು ಸಂಪೂರ್ಣವಾಗಿ ಪ್ರಶ್ನಿಸಲು ಪೊಲೀಸರು ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಅಲ್ಲದೆ, ಆತನ ಪತ್ನಿ ವಿರುದ್ಧವೂ ಆರೋಪ ಕೇಳಿ ಬಂದಿರುವುದರಿಂದ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

    Continue Reading

    LATEST NEWS

    Trending