Connect with us

    LATEST NEWS

    ಜಾರ್ಖಂಡ್ ಚುನಾವಣೆ – ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಅಮಿತ್ ಶಾ

    Published

    on

    ರಾಂಚಿ: ಮುಂಬರುವ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಪ್ರಣಾಳಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಂಚಿಯಲ್ಲಿ ಭಾನುವಾರ ಬಿಡುಗಡೆ ಮಾಡಿದರು.

    ರಾಂಚಿಯಲ್ಲಿ ನೆರೆದಿದ್ದ ಜನರನ್ನು ಉದ್ದೇಶಿಸಿ ಮಾತನಾಡಿದ ಶಾ, “ನಾವು ಇಂದು ‘ಸಂಕಲ್ಪ ಪತ್ರ’ವನ್ನು ಬಿಡುಗಡೆ ಮಾಡುತ್ತಿದ್ದೇವೆ, ಭಾರತೀಯ ಜನತಾ ಪಕ್ಷವು ಎಲ್ಲಾ ಪಕ್ಷಗಳಿಗಿಂತ ಭಿನ್ನವಾಗಿದೆ. ಏಕೆಂದರೆ ದೇಶದ ರಾಜಕೀಯದಲ್ಲಿ ಭರವಸೆ ಪೂರೈಸುವ ಏಕೈಕ ಪಕ್ಷವಾಗಿದೆ, ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ನಾವು ಎಲ್ಲಾ ನಿರ್ಣಯಗಳನ್ನು ಪೂರೈಸಿದ್ದೇವೆ ಮತ್ತು ಆದ್ದರಿಂದಲೇ ಜಾರ್ಖಂಡ್‌ನ ಜನರು, ವಿಶೇಷವಾಗಿ ಹಿಂದುಳಿದ ವರ್ಗಗಳು, ಬಡವರು, ಆದಿವಾಸಿಗಳು, ದಲಿತರು ನಮ್ಮ ಕಡೆಗೆ ನೋಡುತ್ತಿದ್ದಾರೆ. ದೊಡ್ಡ ಭರವಸೆಯೊಂದಿಗೆ ಸಂಕಲ್ಪ ಪತ್ರ ಬಿಡುಗಡೆ ಮಾಡುತ್ತಿದ್ದೇನೆ” ಎಂದರು.

    ಕಾರ್ಯಕ್ರಮದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ , ಸಂಜಯ್ ಸೇಠ್ ಮತ್ತು ಬಿಜೆಪಿ ಜಾರ್ಖಂಡ್ ಅಧ್ಯಕ್ಷ ಬಾಬುಲಾಲ್ ಮರಾಂಡಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಮಂಗಳೂರು: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

    Published

    on

    ಮಹಾನಗರ: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ರಾತ್ರಿ ವೇಳೆ ಪ್ರಿಪೇಯ್ಡ್ ಆಟೋ ವ್ಯವಸ್ಥೆ ಇಲ್ಲದೆ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಆಟೋ ಚಾಲಕರು ಮನಬಂದಂತೆ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ ಎಂದು ಕೆಲವು ಪ್ರಯಾಣಿಕರು ದೂರಿದ್ದಾರೆ.

    ರೈಲು ನಿಲ್ದಾಣದಲ್ಲಿ ಬೆಳಗ್ಗೆ 6ರಿಂದ ರಾತ್ರಿ 9 ಗಂಟೆಯವರೆಗೆ ಮಾತ್ರವೇ ಪ್ರಿ ಪೇಯ್ಡ್ ಆಟೋ ವ್ಯವಸ್ಥೆ ಇದೆ. ಅನಂತರ ವಂದೇಭಾರತ್‌ ರೈಲುಗಳು ಸಹಿತ ಹಲವಾರು ರೈಲುಗಳು ನಿಲ್ದಾಣಕ್ಕೆ ಬರುತ್ತವೆ. ಅದರಲ್ಲಿ ಬರುವ ಪ್ರಯಾಣಿಕರಿಗೆ ಪ್ರೀ ಪೇಯ್ಡ್ ಆಟೋ ಸಿಗುತ್ತಿಲ್ಲ. ಈ ಪ್ರಯಾಣಿಕರಿಂದ ಕೆಲವು ಆಟೋರಿಕ್ಷಾ ಚಾಲಕರು ತೀರಾ ಹೆಚ್ಚಿನ ಬಾಡಿಗೆಯನ್ನು ವಸೂಲಿ ಮಾಡುತ್ತಾರೆ. ಆಟೋರಿಕ್ಷಾ ನಿಲ್ದಾಣದಲ್ಲಿ ಬಾಡಿಗೆದರದ ವಿಷಯವಾಗಿ ಚರ್ಚೆ, ಗಲಾಟೆಗಳು ನಡೆಯುತ್ತವೆ. ಪೊಲೀಸರು ಕೂಡ ಇರುವುದಿಲ್ಲ. ಹಾಗಾಗಿ ಪ್ರಯಾಣಿಕರು ಬೇರೆ ಉಪಾಯವಿಲ್ಲದೆ ಹೆಚ್ಚಿನ ಬಾಡಿಗೆಗೆ ಒಪ್ಪಿಕೊಂಡು ಮನೆ ಸೇರುವಂತಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

    ಯಾಕೆ ಇಲ್ಲ?

    ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಬೆಳಗ್ಗೆ 6ರಿಂದ ರಾತ್ರಿ 9.30ರ ವರೆಗೂ ಪ್ರಿ ಪೇಯ್ಡ ಆಟೋರಿಕ್ಷಾ ಕೌಂಟರ್‌ ತೆರೆದಿರುತ್ತದೆ.

    ಮನಬಂದಂತೆ ಬಾಡಿಗೆ ದರ

    ನಾನು ರಾತ್ರಿ 11.30ಕ್ಕೆ ವಂದೇಭಾರತ್‌ ರೈಲಿನಲ್ಲಿ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಬಂದಾಗ ಅಲ್ಲಿ ಪ್ರಿಪೇಯ್ಡ್ ಆಟೋರಿಕ್ಷಾ ಕೌಂಟರ್‌ ಇರಲಿಲ್ಲ. ಇದರಿಂದ ನನಗೆ ತುಂಬಾ ತೊಂದರೆಯಾಗಿದೆ. ರಾತ್ರಿ ವೇಳೆಯೂ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯ ರೈಲುಗಳು ಬರುತ್ತವೆ. ಸಾವಿರಾರು ಮಂದಿ ಪ್ರಯಾಣಿಕರು ಆಗಮಿಸುತ್ತಾರೆ. ಹಾಗಾಗಿ ಕೂಡಲೇ ರಾತ್ರಿಯೂ ಪ್ರಿಪೇಯ್ಡ್ ಆಟೋ ಕೌಂಟರ್‌ ಆರಂಭಿಸಬೇಕು.

    Continue Reading

    LATEST NEWS

    ಸಾಲಭಾದೆ ತಾಳದೆ ಬಾವಿಗೆ ಹಾರಿ ಪ್ರಾ*ಣಬಿಟ್ಟ ಮಹಿಳೆ

    Published

    on

    ಮಂಗಳೂರು/ಮುಧೋಳ: ಸಾಲಭಾದೆ ತಾಳದೆ ರೈತ ಮಹಿಳೆಯೋರ್ವಳು ಬಾವಿಗೆ ಹಾರಿ ಆ*ತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಸೋರಗಾವಿ ಗ್ರಾಮದಲ್ಲಿ ಸೋಮವಾರ (ನ.4) ನಡೆದಿದೆ.

     

    ಇತ್ತೀಚಿನ ದಿನಗಳಲ್ಲಿ ಆ*ತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದು, ಅದರಲ್ಲಿ ಬಹುಪಾಲು ರೈತರು ತೆಗೆದುಕೊಂಡ ಸಾಲ ಮನ್ನಿಸಲಾಗದೆ ಆ*ತ್ಮಹತ್ಯೆ ಮಾಡಿಕೊಳ್ಳುವವರೇ ಆಗಿದ್ದಾರೆ. ಇದೀಗ ಅಂತಹದ್ದೇ ಘಟನೆ ಮುಧೋಳದಲ್ಲೂ ನಡೆದಿರುವುದು.

    ಮೃ*ತ ಮಹಿಳೆಯನ್ನು ದೊಡ್ಡವ್ವ ಕಟ್ಟಿಮನಿ (46) ಎಂದು ಗುರುತಿಸಲಾಗಿದೆ.

    ದೊಡ್ಡವ್ವ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ 3,80,000 ಸಾ*ಲ ಪಡೆದಿದ್ದರು. ಘಟನೆಗೆ ಸಂಬಂಧಿಸಿದಂತೆ ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    DAKSHINA KANNADA

    ಎಡನೀರು ಮಠದ ಶ್ರೀಗಳ ಮೇಲೆ ಹ*ಲ್ಲೆ ಪ್ರಕರಣ: ಶಾಸಕ ಡಾ.ಭರತ್ ಶೆಟ್ಟಿ ವೈ ಖಂಡನೆ

    Published

    on

    ಕಾವೂರು: ಕಾಸರಗೋಡು ಬೊವಿಕ್ಕಾನದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ತೀರ್ಥ ಶ್ರೀಪಾದರ ವಾಹನಕ್ಕೆ ಹಾ*ನಿ ಮಾಡಿರುವುದನ್ನು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಭರತ್ ಶೆಟ್ಟಿ ತೀವ್ರವಾಗಿ ಖಂಡಿಸಿದ್ದಾರೆ.

    ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಪುಂಡರು, ಹಿಂದು ವಿರೋಧಿ ಶಕ್ತಿಗಳು ಸವಾಲು ಹಾಕುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು  ಅಲ್ಲಿನ ಸರಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತಿದೆ.  ಹಿಂದೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ಹಾಗೂ ನಮ್ಮ ಸಮಾಜದ ಪೂಜ್ಯ ಮಠಗಳಲ್ಲಿ ಒಂದಾಗಿರುವ ಎಡನೀರು ಮಠದ ಶ್ರೀಗಳ ಮೇಲಿನ ದಾ*ಳಿ ಹಿಂದೂ ಸಮಾಜದ ಮೇಲೆ ನಡೆದಿರುವ ದಾ*ಳಿಯಾಗಿದೆ.

    ಇದನ್ನೂ ಓದಿ : ಬಿಗ್​ಬಾಸ್​ಗೆ ವೈಲ್ಡ್ ​ಕಾರ್ಡ್ ಎಂಟ್ರಿ ಕೊಡ್ತಾರಂತೆ ಪುಟ್ಟಕ್ಕನ ಮಗಳು ಸ್ನೇಹಾ

    ಸರಕಾರ  ತಕ್ಷಣ ಸಮಾಜಘಾ*ತ ಶಕ್ತಿಗಳನ್ನು ಹೆಡೆಮುರಿ ಕಟ್ಟಲು  ಜಾಮೀನು ರಹಿತ ಸೆಕ್ಷನ್ ಅಡಿ ಕೇಸು ದಾಖಲಿಸಬೇಕು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಒತ್ತಾಯಿಸಿದ್ದಾರೆ.

    Continue Reading

    LATEST NEWS

    Trending