Connect with us

LATEST NEWS

ಶಾಲೆಯಲ್ಲಿ ಬಿಂದಿ ಧರಿಸಿದ್ದಕ್ಕೆ ಶಿಕ್ಷಕನಿಂದ ಥಳಿತ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ..!

Published

on

ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನಗಾದ ಅವಮಾನಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜಾರ್ಖಂಡ್ : ಜಾರ್ಖಂಡ್‌ನ ಧನ್‌ಬಾದ್‌ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನಗಾದ ಅವಮಾನಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ತನ್ನ ಹಣೆಯ ಮೇಲೆ ‘ಬಿಂದಿ’ ಹಾಕಿಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಿಕ್ಷಕ ಕಪಾಳಮೋಕ್ಷ ಮಾಡಿದ್ದರು.

ಈ ಘಟನೆಯ ಬಳಿಕ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪ್ರಾಂಶುಪಾಲರು ಮತ್ತು ಶಿಕ್ಷಕರಿಬ್ಬರನ್ನು ಧನ್‌ಬಾದ್ ಪೊಲೀಸರು ಬಂಧಿಸಿದ್ದಾರೆ.

ಧನ್‌ಬಾದ್ ಪೊಲೀಸರ ಪ್ರಕಾರ, ಉಷಾ ಕುಮಾರಿ (16) ಸೋಮವಾರ ತನ್ನ ಹಣೆಗೆ ಬಿಂದಿ ಹಾಕಿದ್ದಕ್ಕಾಗಿ ಶಾಲೆಯಲ್ಲಿ ಪ್ರಾರ್ಥನೆಯ ವೇಳೆ ಮಹಿಳಾ ಶಿಕ್ಷಕಿಯಿಂದ ಆದ ಅವಮಾನ ಮತ್ತು ಕಪಾಳಮೋಕ್ಷದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆ ತಲುಪಿದ ನಂತರ ಬಾಲಕಿ ಹನುಮಂತನಗರಿ ಕಾಲೋನಿಯಲ್ಲಿರುವ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿ ಟೆತುಲ್ಮರಿ ಪೊಲೀಸರನ್ನು ಉದ್ದೇಶಿಸಿ ಆತ್ಮಹತ್ಯೆ ಪತ್ರವನ್ನು ಬರೆದು ತನ್ನ ಸಮವಸ್ತ್ರದಲ್ಲಿ ಇಟ್ಟುಕೊಂಡಿದ್ದಳು.

ಘಟನೆಗೆ ಶಾಲೆಯ ಶಿಕ್ಷಕಿ ಮತ್ತು ಪ್ರಾಂಶುಪಾಲರೇ ಹೊಣೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಘಟನೆಯ ಕುರಿತು ಮಾತನಾಡಿದ ತೆತುಲ್ಮರಿ ಪೊಲೀಸ್ ಠಾಣೆ ಎಸ್‌ಎಚ್‌ಒ ಆಶಿಶ್ ಕುಮಾರ್ ಯಾದವ್, “ಈ ದುರದೃಷ್ಟಕರ ಘಟನೆ ಸೋಮವಾರ ಸಂಭವಿಸಿದೆ.

ನಾವು ಶಾಲಾ ಶಿಕ್ಷಕ ಮತ್ತು ಆಡಳಿತ ಮಂಡಳಿವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಎಂದಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ ಆರೋಪಿ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಜಾರ್ಖಂಡ್‌ನ ಧನ್‌ಬಾದ್‌ನ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಧ್ಯಕ್ಷ ಉತ್ತಮ್ ಮುಖರ್ಜಿ ಹೇಳಿದ್ದಾರೆ.

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending