Saturday, November 27, 2021

ಬೆಂಗಳೂರಿನಲ್ಲಿ ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಜಿಮ್ ಟ್ರೈನರ್

ಬೆಂಗಳೂರು: ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮರಪ್ಪ ಲೇಔಟ್​ನಲ್ಲಿ ಸಂಭವಿಸಿದೆ.

29 ವರ್ಷದ ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ, ಕಾರ್ತಿಕ್ ಜಿಮ್ ಟ್ರೈನಿಯಾಗಿದ್ದರು. ಪ್ರೇಮ ವೈಫಲ್ಯದ ಬಗ್ಗೆ ವಿಡಿಯೋ ಮಾಡಿಟ್ಟು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ಕಾರ್ತಿಕ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದರು. ಇತ್ತೀಚಿಗೆ ಕಾರ್ತಿಕ್​ನಿಂದ ಯುವತಿ ದೂರವಾಗಿದ್ದಳು. ಯುವತಿ ನೆನಪಿನಲ್ಲಿ ಕಾರ್ತಿಕ್ ಕಾಲ ಕಳೆಯುತ್ತಿದ್ದರಂತೆ. ಪ್ರೇಮ ವೈಫಲ್ಯ ಬಗ್ಗೆ ಆಪ್ತರ ಬಳಿ ಹೇಳಿಕೊಂಡಿದ್ದರು. ಈ ವಿಚಾರ ತಿಳಿದ ಪೋಷಕರು ಮದುವೆ ಮಾಡಲು ಮುಂದಾಗಿದ್ದರು. ಕಾರ್ತಿಕ್​ಗೆ ಹೆಣ್ಣು ನೋಡುವ ಶಾಸ್ತ್ರಕ್ಕೆ ಪೋಷಕರು ಹೋಗಬೇಕಿತ್ತು.

ಅದರೆ ನಿನ್ನೆ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಕಾರ್ತಿಕ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಪ್ರೇಮ ವೈಫಲ್ಯ ಬಗ್ಗೆ ಕಾರ್ತಿಕ್ ವಿಡಿಯೋ ಮಾಡಿದ್ದಾರೆ.

ತನ್ನ ಮೊಬೈಲ್​ನಲ್ಲಿ ವಿಡಿಯೋ ಮಾಡಿ ನಂತರ ಸಾವಿಗೆ ಶರಣಾಗಿದ್ದಾರೆ. ಸದ್ಯ ಮೊಬೈಲ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...