Connect with us

    kerala

    ಶ್ರೇಷ್ಠ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ವಿ*ಧಿವಶ

    Published

    on

    ಮಂಗಳೂರು/ಕೋಝಿಕ್ಕೋಡ್: ಮಲಯಾಳಂನ ಹಿರಿಯ  ಸಾಹಿತಿ, ಗೀತರಚನೆಕಾರ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ (91) ಬುಧವಾರ(ಡಿ.25) ತಡರಾತ್ರಿ ವಿಧಿವಶರಾಗಿದ್ದಾರೆ.

    ಹೃದಯ ಸಂಬಂಧಿ ತೊಂದರೆಯಿಂದ ಬಳಲುತ್ತಿದ್ದ ಎಂಟಿ ಯನ್ಕೆನುಲ ದಿನಗಳ ಹಿಂದೆಯಷ್ಟೇ ಬೇಬಿ ಮೆಮೋರಿಯಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು . ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾ*ವನ್ನಪ್ಪಿದ್ದಾರೆ. ಅಗಲಿದ ಎಂಟಿ ವಾಸುದೇವನ್ ನಾಯರ್ ಗೆ ಗೌರವ ಸೂಚಕವಾಗಿ ರಾಜ್ಯ ಸರ್ಕಾರ ಡಿ. 26 ಮತ್ತು 27 ರಂದು ಅಧಿಕೃತ ಶೋ*ಕಾಚರಣೆ ಘೋಷಿಸಿದೆ. ಡಿಸೆಂಬರ್ 26ಕ್ಕೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡುವಂತೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೂಚನೆ ನೀಡಿದ್ದಾರೆ. ಇಂದು (ಡಿ. 26)ರಂದು ಸಂಜೆ 5 ಗಂಟೆಗೆ ಮಾವೂರು ಸಾರ್ವಜನಿಕ ಚಿತಾಗಾರದಲ್ಲಿ ಅಂ*ತ್ಯಕ್ರಿಯೆ ನಡೆಯಲಿದೆ.

    ‘ನಿರ್ಮಾಲ್ಯಂ’ ಸೇರಿದಂತೆ 6 ಚಲನಚಿತ್ರಗಳು ಮತ್ತು ಎರಡು ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದ್ದಾರೆ, ಇದು ಮಲಯಾಳಂ ಚಿತ್ರರಂಗದ ಶ್ರೇಷ್ಠತೆಗಳಲ್ಲಿ ಒಂದಾಗಿದೆ. ಕಾದಂಬರಿ, ಸಣ್ಣ ಕಥೆ, ಚಿತ್ರಕಥೆ, ನಾಟಕ, ಮಕ್ಕಳ ಸಾಹಿತ್ಯ, ಪ್ರವಾಸ ಕಥನ, ಲೇಖನ ಹೀಗೆ ಬರವಣಿಗೆಯ ಎಲ್ಲ ಪ್ರಕಾರಗಳಲ್ಲೂ ತಮ್ಮ ಛಾಪು ಮೂಡಿಸಿರುವ ಎಂ.ಟಿ.ಯವರು ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದರು. ಇವರ ಸೇವೆಯನ್ನು ಮೆಚ್ಚಿ ಸರ್ಕಾರ 2005ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತು. ಅಷ್ಟು ಮಾತ್ರವಲ್ಲದೆ ಜ್ಞಾನಪೀಠ, ಎಜುತಚ್ಚನ್ ಪ್ರಶಸ್ತಿ, ವಯಲಾರ್ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಲ್ಲತ್ತೋಳ್ ಪ್ರಶಸ್ತಿ, ಜೆ.ಸಿ. ಅವರು ಡೇನಿಯಲ್ ಪ್ರಶಸ್ತಿ ಸೇರಿದಂತೆ ಲೆಕ್ಕವಿಲ್ಲದಷ್ಟು ಗೌರವಗಳನ್ನು ಇವರು ಪಡೆದುಕೊಂಡಿದ್ದಾರೆ. ಅವರು ನಾಲ್ಕು ಬಾರಿ ಚಿತ್ರಕಥೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು 11 ಬಾರಿ ರಾಜ್ಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದರು. ಮೂರು ಬಾರಿ ಅತ್ಯುತ್ತಮ ನಿರ್ದೇಶಕ ರಾಜ್ಯ ಚಲನಚಿತ್ರ ಪ್ರಶಸ್ತಿ ಪಡೆದರು

     

    ಮೃತರು ಪತ್ನಿ ಕಲಾಮಂಡಲಂ ಸರಸ್ವತಿ ಹಾಗೂ ಮಕ್ಕಳಾದ ಸಿತಾರಾ ಮತ್ತು ಅಶ್ವತಿಯನ್ನು ಅ*ಗಲಿದ್ದಾರೆ. ಎಂಟಿ ನಿ*ಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಗಣ್ಯಾತಿ ಗಣ್ಯರು ಸಂ*ತಾಪ ವ್ಯಕ್ತಪಡಿಸಿದ್ದಾರೆ.

    kerala

    ದಿ*ಢೀರ್ ಹ*ಚ್ಚಿಕೊಂಡ ಬೆಂ*ಕಿ; ಆರು ಅಂಗಡಿಗಳು ಅ*ಗ್ನಿಗಾ*ಹುತಿ !!

    Published

    on

    ಕಾಸರಗೋಡು: ಆರು ಅಂಗಡಿಗಳಿಗೆ ದಿ*ಢೀರನೆ ಬೆಂ*ಕಿ ಹೊ*ತ್ತಿಕೊಂಡು ಉ*ರಿದ ಘಟನೆ ಶನಿವಾರ (ಡಿ.21) ತಡರಾತ್ರಿ ಪೆರ್ಲ ಬಳಿ ನಡೆದಿದೆ.

    ಪೆರ್ಲ ಪೇಟೆಯಲ್ಲಿ ಇರುವಂತಹ ಪೂಜಾ ಫ್ಯಾನ್ಸಿ , ಗೋಪಿನಾಥ್ ಪೈ ಕ್ಲೋತ್ ಸೆಂಟರ್, ಪತ್ರಿಕಾ ವಿತರಣಾ ಮಳಿಗೆ, ಪ್ರವೀಣ್ ಆಟೋ ಮೊಬೈಲ್, ಸಾದತ್ ಸ್ಟೋರ್, ಗೌತಮ್ ಕೋಲ್ಡ್ ಹೌಸ್ ಮೊದಲಾದವು ಸಂಪೂರ್ಣ ಅ*ಗ್ನಿಗಾ*ಹುತಿಯಾಗಿರುವ ಅಂಗಡಿಗಳು ಎಂದು ಗುರುತಿಸಲಾಗಿದೆ.

     

    ಇದನ್ನೂ ಒದಿ : ಮೊಹಾಲಿ ಕಟ್ಟಡ ಕು*ಸಿತ ಪ್ರಕರಣ; ಎರಡು ಸಾ*ವು, ಹಲವರು ಕಟ್ಟಡದಡಿ ಇರುವ ಶಂಕೆ !!

     

    ಮೂರು ಗಂಟೆಗೂ ಅಧಿಕ ಸಮಯದ ಬಳಿಕ ಬೆಂ*ಕಿಯನ್ನು ನಂದಿಸಲಾಯಿತು. ಶಾ*ರ್ಟ್ ಸ*ರ್ಕ್ಯೂಟ್ ಬೆಂ*ಕಿ ಅ*ನಾಹುತಕ್ಕೆ ಕಾರಣ ಎಂದು ಶಂಕಿಸಲಾಗಿದೆ. ರಾತ್ರಿ 12ಗಂಟೆ ಸುಮಾರಿಗೆ ಘಟನೆ ನಡೆದಿದ್ದು , ಉಪ್ಪಳ ಕಾಸರಗೋಡಿನಿಂದ ಆಗಮಿಸಿದ ಐದು ಅ*ಗ್ನಿಶಾಮಕ ದಳದ ಸಿಬ್ಬಂದಿ‌ ಹಾಗೂ ಸ್ಥಳೀಯರ ಸಹಕಾರದಿಂದ ಬೆಂ*ಕಿಯನ್ನು ನಂದಿಸಿ ಹೆಚ್ಚಿನ ಅ*ನಾಹುತ ತಪ್ಪಿಸಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

    Continue Reading

    kerala

    ರಜೆ ನೀಡಲಿಲ್ಲವೆಂದು ಆ*ತ್ಮಹ*ತ್ಯೆಗೆ ಶರಣಾದ ಪೊಲೀಸ್ ಪೇದೆ !!

    Published

    on

    ಮಂಗಳೂರು/ಮಲಪ್ಪುರಂ: ಕೇರಳ ಪೊಲೀಸರ ವಿಶೇಷ ಕಾರ್ಯಾಚರಣೆ ಗ್ರೂಪ್‌ಗೆ ಸೇರಿದ ಕಮಾಂಡೋ ಗುಂಡು ಹಾರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಮಲಪ್ಪುರಂ ಜಿಲ್ಲೆಯ ಅರೀಕೋಡ್‌ನಲ್ಲಿರುವ ಪೊಲೀಸ್ ಕ್ಯಾಂಪ್‌ನಲ್ಲಿ ಭಾನುವಾರ (ಡಿ.15) ರಾತ್ರಿ ನಡೆದಿದೆ.

    ನಕ್ಸಲ್ ಚಟುವಟಿಕೆಯನ್ನು ಭೇದಿಸುವ ಕ್ಯೂಬಿಂಗ್ ಕಾರ್ಯಚರಣೆಯಲ್ಲಿ ಸಕ್ರಿಯರಾಗಿದ್ದ ವಿನೀತ್ (35) ಮೃ*ತ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ.

    ಭಾನುವಾರ ರಾತ್ರಿ ವಿನೀತ್ ತನ್ನ ಗರ್ಭಿಣಿ ಪತ್ನಿಯ ಜೊತೆಗಿರಲು ಉನ್ನತ ಅಧಿಕಾರಿಗಳ ಬಳಿ ರಜೆಗೆ ಮನವಿ ಮಾಡಿಕೊಂಡಿದ್ದಾರೆ. ಆದರೆ ರಜೆ ನೀಡಲು ನಿರಾಕರಿಸಿದ ಹಿನ್ನಲೆ ಕೆಲಸದ ಒತ್ತಡವನ್ನು ತಾಳಲಾರದೆ ತನ್ನ ಸರ್ವಿಸ್ ರೈ*ಫಲ್‌ನಿಂದ ಗುಂ*ಡು ಹಾ*ರಿಸಿಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ವಿಪರೀತ ಕೆಲಸದ ಒತ್ತಡದಿಂದ ಆ*ತ್ಮಹ*ತ್ಯೆ ಮಾಡಿಕೊಂಡ ಕೇರಳ ಪೊಲೀಸ್ ಸಿಬ್ಬಂದಿಗಳ ಪಟ್ಟಿಗೆ ವಿನೀತ್ ಸಾ*ವು ಸೇರ್ಪಡೆಯಾಗಿದೆ. ಅಂದಾಜಿನ ಪ್ರಕಾರ, ಸುಮಾರು 90 ಪೊಲೀಸರು ಇದೇ ರೀತಿ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

    ವಿನೀತ್ ನಕ್ಸಲರನ್ನು ಹಿಂಬಾಲಿಸುವ ಕಾರ್ಯಾಚರಣೆಯನ್ನು ನಿರ್ವಹಿಸುವ ವಿಶೇಷ ಕಾರ್ಯಾಚರಣೆ ಗುಂಪಿನ ಕಮಾಂಡೋ ಆಗಿದ್ದರು. ವಯನಾಡ್ ಮೂಲದವರಾದ ಅವರು ಕಳೆದ 45 ದಿನಗಳಿಂದ ಬಿಡುವಿಲ್ಲದೆ ಕೆಲಸ ಮಾಡುತ್ತಿದ್ದು, ರಜೆಗಾಗಿ ಮಾಡಿದ್ದ ಮನವಿಯನ್ನು ನಿರಾಕರಿಸಿದ ಹಿನ್ನಲೆ ದುರ್ಘಟನೆ ಸಂಭವಿಸಿದೆ. ವಿನೀತ್ ಒತ್ತಡವನ್ನು ಸಹಿಸಲಾಗದೆ ದುಡಿಕಿನ ನಿರ್ಧಾರ ತೆಗೆದುಕೊಂಡಿದ್ದಾರೆ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಪ್ರಾ*ಣಪಕ್ಷಿ ಹಾರಿಹೋಗಿತ್ತು.

    Continue Reading

    kerala

    ಪ್ರೀತಿಸಿ, ಓಡಿಹೋಗಿ ಮದುವೆ; ಪತಿ ಮನೆಯಲ್ಲಿಯೇ ನೇ*ಣಿಗೆ ಶರಣಾದ ನವವಧು

    Published

    on

    ಮಂಗಳೂರು/ಕೇರಳ: ಮನೆಯವರ ಮಾತು ವಿರೋಧಿಸಿ ಕೇರಳ ಮೂಲದ ಯುವಕನ ಜೊತೆಗೆ ಮದುವೆಯಾಗಿದ್ದ ಮಹಿಳೆಯೊಬ್ಬಳು ಆ*ತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ.

    ಇಂದುಜಾ (25) ಆ*ತ್ಮಹತ್ಯೆಗೆ ಶರಣಾದ ನವವಿವಾಹಿತೆ.

    ‘ಮಗಳ ಸಾ*ವಿಗೆ ಆಕೆಯ ಗಂಡ ಹಾಗೂ ಕುಟುಂಬವೇ ಕಾರಣ’ ಎಂದು ಮೃ*ತಳ ಪೋಷಕರು ಆರೋಪಿಸಿದ್ದಾರೆ. ಪಾಲೋಡ್ ಇಟಿಂಜಾರ್ ಕೊಳಚಲ್ ಕೊನ್ನಮೂಡ್ ಮೂಲದ ಇಂದುಜಾಗಂಡನ ಮನೆಯಲ್ಲಿಯೇ ಶ*ವವಾಗಿ ಪತ್ತೆಯಾಗಿದ್ದಾರೆ. ಇಂದುಜಾ ಅಭಿಜಿತ್‌ ಎಂಬ ಯುವಕನನ್ನು ಪ್ರೀತಿ ಮಾಡುತ್ತಿದ್ದು, ಇವರಿಬ್ಬರ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪೋಷಕರು ಎಷ್ಟೇ ಬುದ್ಧಿವಾದ ಹೇಳಿದರೂ ಅವರ ಮಾತು ಕೇಳದೆ ಮನೆ ಬಿಟ್ಟು ಓಡಿ ಹೋಗಿ ದೇವಸ್ಥಾನದಲ್ಲಿ ಮದುವೆಯಾಗಿದ್ದಳು. ಬಳಿಕ ಇಂದುಜಾ ಪೋಷಕರು ಸುಮ್ಮನಾಗಿದ್ದರು. ‘ಮದುವೆಯಾಗಿ ಅಭಿಜಿತ್‌ ಮನೆಗೆ ಹೋದ ಇಂದುಜಾಗೆ ಪತಿಯ ಮನೆಯಲ್ಲಿ ನಿತ್ಯವೂ ನರಕಯಾತನೆ ಶುರುವಾಗಿತ್ತು. ಮಾನಸಿಕ ಕಿರುಕುಳ, ಬೆದರಿಕೆಯನ್ನು ಗಂಡನ ಮನೆಯವರು ಹಾಕುತ್ತಿದ್ದರು’ ಎಂಬ ಆರೋಪ ಕೇಳಿ ಬಂದಿದೆ. ಇಂದುಜಾ ಆ*ತ್ಮಹತ್ಯೆ ಮಾಡಿಕೊಳ್ಳುವಂತಹ ಹೇಡಿಯಲ್ಲ. ಮನೆಯ ಎರಡನೇ ಮಹಡಿಯಲ್ಲಿರುವ ಅಭಿಜಿತ್‌ ಮಲಗುವ ಕೋಣೆಯ ಕಿಟಕಿಯಿಂದ ನೇ*ಣು ಬಿಗಿದ ಸ್ಥಿತಿಯಲ್ಲಿ ಶ*ವ ಪತ್ತೆಯಾಗಿದ್ದು, ಅಭಿಜಿತನ್ನು ಬಂಧಿಸಲು ಒತ್ತಾಯಿಸಿದ್ದಾರೆ.

    ಎರಡು ವರ್ಷ ಪ್ರೀತಿ ಮಾಡಿ ಮದುವೆಯಾಗಿದ್ದ ಈಕೆಗೆ ಆಕೆಯ ಪ್ರೀತಿಸಿದ ಗಂಡನೇ ಆಕೆಯ ಜೊತೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇಂದುಜಾ ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಅಭಿಜಿತ್‌ ಖಾಸಗಿ ವಾಹನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಘಟನೆ ನಡೆದ ಸಮಯದಲ್ಲಿ ಅಭಿಜಿತ್‌ ಅಜ್ಜಿ ಮಾತ್ರ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಂದುಜಾ ತಾಯಿ, ಹಾಗೂ ಸಹೋದರನ ಜೊತೆ ಫೋನನಲ್ಲಿ ಮಾತನಾಡುತ್ತಿದ್ದಳು ಎಂದು ಆಕೆಯ ಗಂಡನ ಮನೆಯವರು ಹೇಳಿದ್ದಾರೆ. ಈಕೆ ತನ್ನ ಗಂಡನ ಮನೆಯವರ ಕಿ*ರುಕುಳ, ಬೆ*ದರಿಕೆ ಕುರಿತು ತಾಯಿಯ ಬಳಿ ಹೇಳುತ್ತಿದ್ದಳು. ಮಗಳ ಸಾ*ವಿನಲ್ಲಿ ಅನೇಕ ಅನುಮಾನಗಳಿದ್ದು, ಸೂಕ್ತ ತನಿಖೆಯನ್ನು ಮಾಡಬೇಕೆಂದು ಮೃ*ತಳ ಪೋಷಕರು ಒತ್ತಾಯ ಮಾಡಿದ್ದಾರೆ.

    ಅಭಿಜಿತ್‌ ಮಧ್ಯಾಹ್ನ ಮನೆಗೆ ಊಟ ಮಾಡಲು ಬಂದಾಗ ಇಂದುಜಾ ಕಿಟಕಿಯಲ್ಲಿ ನೇ*ಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾಳೆ. ಕೂಡಲೇ ಆಕೆಯನ್ನು ನೆಡುಮಂಗಾಡ್‌ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆಯನ್ನು ಉಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending