ಮಂಗಳೂರು: ಥಾಯ್ಲೆಂಡ್‌ನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಜೋಹಾನ್ ಸಲಿಲ್ ಮಥಿಯಾಸ್ ಗೆದ್ದಿದ್ದಾರೆ.
ಮಂಗಳೂರಿನ ಮಿಲಾಗ್ರೆಸ್ ಕಾಲೇಜಿನಲ್ಲಿ 2ನೇ ವರ್ಷದ ಬಿಸಿಎ-ಎಐ ವಿದ್ಯಾರ್ಥಿಯಾಗಿರುವ ಜೋಹಾನ್ ಸಲಿಲ್ ಮಥಿಯಸ್ ಅವರು ಥಾಯ್ಲೆಂಡ್‌ನಲ್ಲಿ ನಡೆದ ಪ್ರತಿಷ್ಠಿತ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಫ್ಯಾಷನ್ ರನ್‌ವೇ ಸರಣಿಯ ಭಾಗವಾಗಿರುವ ಈ ಈವೆಂಟ್‌ನಲ್ಲಿ ಭಾರತ, ಇಂಡೋನೇಷ್ಯಾ, ಯುಎಇ, ಓಮನ್, ಓಟ್ಸ್ವಾನಾ, ದಕ್ಷಿಣ ಆಫ್ರಿಕಾ ಮತ್ತು ನೇಪಾಳ ಸೇರಿದಂತೆ ಒಟ್ಟು 12 ದೇಶಗಳ ಟೀನ್ ಯುವಕರು ಭಾಗವಹಿಸಿದ್ದರು.
ದುಬೈನಲ್ಲಿನ ದಿ ಅರ್ಬನ್ ಎಡ್ಜ್ ಆಯೋಜಿಸಿದ ಎಕ್ಲೆಕ್ಟಿಕ್ ಇಂಟರ್ನ್ಯಾಷನಲ್ ಬ್ಯೂಟಿ ಪೆಜೆಂಟ್‌ನಲ್ಲಿ 1 ನೇ ರನ್ನರ್-ಅಪ್ ಆಗುವ ಮೂಲಕ ಜೋಹಾನ್ ಅವರ ಅಂತರರಾಷ್ಟ್ರೀಯ ಹಂತದ ಪ್ರಯಾಣವು ಈ ವರ್ಷದ ಏಪ್ರಿಲ್‌ನಲ್ಲಿ ಪ್ರಾರಂಭವಾಯಿತು. ನಂತರ ಅವರು ಕ್ಯಾಲಿಕಟ್‌ನಲ್ಲಿ ನಡೆದ ದಿ ಫ್ಯಾಶನ್ ರನ್‌ವೇ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದರು. ಅಲ್ಲಿ ಅವರು ಸ್ಪರ್ಧೆಯಲ್ಲಿ ಮೊದಲ ಸ್ಥಾನ ಪಡೆದು ಹದಿಹರೆಯದ ವಿಭಾಗದಲ್ಲಿ ಭಾರತವನ್ನು ಜೋಹಾನ್ ಮತ್ತು ಇತರ ಸ್ಪರ್ಧಿಗಳು ವಿವಿಧ ದೇಶಗಳಿಂದ ಆಗಮಿಸಿದ್ದು, ಆಗಸ್ಟ್ 7 ರಂದು ಥಾಯ್ಲೆಂಡ್‌ನಲ್ಲಿ ಈವೆಂಟ್ ಪ್ರಾರಂಭವಾಯಿತು. ಈ ಸ್ಪರ್ಧೆಯು ಭಾಗವಹಿಸುವವರ ಪ್ರತಿಭೆ, ಸಂಸ್ಕೃತಿ ಮತ್ತು ಬುದ್ಧಿಶಕ್ತಿಯನ್ನು ಪ್ರದರ್ಶಿಸಲು ಅವಕಾಶ ಮಾಡಿಕೊಡುತ್ತದೆ. ಪರಸ್ಪರ ಭೇಟಿ ಮತ್ತು ಶುಭಾಶಯಗಳ ನಂತರ, ಸ್ಪರ್ಧಿಗಳನ್ನು ಅಂದವಾಗಿ ಅಲಂಕಾರ ಮಾಡಲಾಯಿತು. ನಂತರ ಈ ಯುವ ಪ್ರತಿಭೆಗಳು ಪ್ರತಿಭಾ ಪ್ರದರ್ಶನದಲ್ಲಿ ಭಾಗವಹಿಸಿದರು. ಅಲ್ಲಿ ಮಂಗಳೂರಿನ ಈ ಹುಡುಗ ಜೋಹಾನ್ ತನ್ನ ಕರಾಟೆ ಕೌಶಲ್ಯದಿಂದ ತೀರ್ಪುಗಾರರನ್ನು ಮೆಚ್ಚಿಸಿದ್ದಾನೆ.
ಆಗಸ್ಟ್ 10 ರಂದು ಗ್ರ್ಯಾಂಡ್ ಫಿನಾಲೆ ಬಜಾರ್ ಥಿಯೇಟರ್‌ನಲ್ಲಿ ನಡೆಯಿತು. ಜೋಹಾನ್ ಮತ್ತು ಇತರ ಸ್ಪರ್ಧಿಗಳು ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ಪ್ರದರ್ಶಿಸಿ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾಗವಹಿಸಿದರು. ಜೋಹಾನ್ ಅವರ ಒಟ್ಟಾರೆ ಪ್ರದರ್ಶನವು ತೀರ್ಪುಗಾರರನ್ನು ಮೆಚ್ಚಿಸಿದ್ದು ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಆಗಿ ಜೋಹಾನ್ ಆಯ್ಕೆಯಾಗಿದ್ದಾರೆ.
ಈ ಈವೆಂಟ್‌ಗಾಗಿ ಜೋಹಾನ್‌ರ ವಾರ್ಡ್‌ರೋಬ್ ಅನ್ನು ಹೇರಾ ಪಿಂಟೊ ಕೌಚರ್ ಅವರು ಪ್ರತ್ಯೇಕವಾಗಿ ವಿನ್ಯಾಸಗೊಳಿಸಿದ್ದಾರೆ. ಮಗ ಜೋಹಾನ್ ರ ಸಾಧನೆಯು ತಮ್ಮ ಕುಟುಂಬಕ್ಕೆ ಹೆಮ್ಮೆ ತಂದಿದೆ ಎಂದು ತಾಯಿ ಜೂಲಿಯೆಟ್ ಫೆರ್ನಾಂಡಿಸ್, ತಂದೆ ಜಾನ್ಸನ್ ಮಥಿಯಾಸ್ ಮತ್ತು ಸಹೋದರಿ ಜೆನ್ನಿಫರ್ ಮಥಿಯಾಸ್ ಹೇಳಿದ್ದಾರೆ. ಇದು ಅವರ ಮಾಡೆಲಿಂಗ್ ವೃತ್ತಿಜೀವನದಲ್ಲಿ ಮಹತ್ವದ ಮೈಲಿಗಲ್ಲು ಆಗಿದ್ದು ಜೋಹಾನ್ ಅವರ ಯಶಸ್ಸಿನ ಕಥೆಯು ಫ್ಯಾಷನ್ ಮತ್ತು ಮಾಡೆಲಿಂಗ್ ಉದ್ಯಮದ ಯುವ ಆಕಾಂಕ್ಷಿಗಳಿಗೆ ಸ್ಫೂರ್ತಿಯಾಗಿದೆ. ಜಾಗತಿಕ ವೇದಿಕೆಯಲ್ಲಿ ಪರಿಶ್ರಮ, ಪ್ರತಿಭೆ ಮತ್ತು ಸಾಂಸ್ಕೃತಿಕ ಪ್ರಾತಿನಿಧ್ಯದ ಮೂಲಕ ಸಣ್ಣ ಪಟ್ಟಣದ ಮಕ್ಕಳು ಕೂಡ ಕಠಿಣ ಸ್ಪರ್ಧೆ ಒಡ್ಡಿ ವಿಜಯಿಯಾಗಬಹುದು ಎನ್ನುವುದಕ್ಕೆ ಜೋಹಾನ್ ಒಂದು ಉದಾಹರಣೆ.
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.