Connect with us

    LATEST NEWS

    ‘ಭಾರತೀಯ ಈ ನಟನಿಂದ ಜೀವನವೇ ಬದಲಾಗಿದೆ’ ಎಂದ ಜಾನ್‌ ಸೀನಾ..!

    Published

    on

    ಮುಂಬೈ/ಮಂಗಳೂರು: WWE ಚಾಂಪಿಯನ್ ಹಾಗೂ ಹಾಲಿವುಡ್ ನಟ ಜಾನ್ ಸೀನಾ ಇತ್ತೀಚೆಗೆ ಅಂಬಾನಿ ಮದುವೆ ಸಮಾರಂಭಕ್ಕಾಗಿ ಭಾರತಕ್ಕೆ ಬಂದಿರುವುದು ಎಲ್ಲರಿಗೂ ತಿಳಿದಿದೆ. ಮಾತ್ರವಲ್ಲದೆ ಅನಂತ್ ಹಾಗೂ ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭದಲ್ಲಿ ಭಾರತೀಯ ಉಡುಗೆಯಲ್ಲಿ ಜಾನ್ ಸೀನಾ ಮಿಂಚಿದ್ದರು. ಬಾಲಿವುಡ್ ತಾರೆಗಳ ಮಧ್ಯೆ ರಸ್ಲಿಂಗ್ ಚಾಂಪಿಯನ್, ಹಾಲಿವುಡ್ ನಟ ಜಾನ್ ಸೀನಾ ಟಾಪ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು.

    ಅಂಬಾನಿ ಮದುವೆ ಮನೆಯಲ್ಲಿ ಅನೇಕ ಸೆಲೆಬ್ರೆಟಿಗಳನ್ನು ಜಾನ್ ಸೀನ್ ಭೇಟಿ ಮಾಡಿದ್ದಾರೆ. ಈ ವೇಳೆ ಬಾಲಿವುಡ್ ಬಾದ್‌ಷಾ ಶಾರುಖಾನ್‌ ರವರನ್ನು ಭೇಟಿ ಮಾಡಿದ್ದು, ಇದರಿಂದ ಜಾನ್‌ ಸೀನಾ ಬಹಳ ಖುಷಿ ವ್ಯಕ್ತಪಡಿಸಿದ್ದಾರೆ.  ಶಾರುಖಾನ್ ಕೂಡಾ ಜಾನ್ ಸೀನಾ ಅವರ ಜೊತೆ ಬಹಳ ಸಮಯಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದೀಗ ಜಾನ್ ಸೀನಾ ಶಾರುಖಾನ್‌ ರವರಿಂದ ಯಾವ ರೀತಿ ಸ್ಫೂರ್ತಿಗೊಂಡಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಸಂದರ್ಶನ ನೀಡಿದ ವೇಳೆ ಜಾನ್ ಸೀನಾ ಈ ವಿಚಾರವನ್ನು ಹೇಳಿದ್ದಾರೆ. ಶಾರುಖ್ ಜೊತೆ 24 ಗಂಟೆಗಳ ಕಾಲ ದಿನ ಕಳೆದಿದ್ದು ನನ್ನ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ತಂದಿದೆ. ಅವರ ಮಾತಿನಿಂದ ಸ್ಪೂರ್ತಿ ಹೆಚ್ಚಿದ್ದು ಅವರ ಭೇಟಿಯ ಬಳಿಕ ಜೀವನದಲ್ಲಿ ತುಂಬಾ ಬದಲಾವಣೆಗಳು ಉಂಟಾಗಿದೆ ಎಂದು ಹೇಳಿದ್ದಾರೆ. ಅಂದಿನಿಂದ ನನ್ನ ಮುಂದಿರುವ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳುತ್ತಿದ್ದೇನೆ. ಯಾವುದೇ ಅವಕಾಶವನ್ನುಕಳೆದುಕೊಳ್ಳುವುದಿಲ್ಲ ಎಂದಿದ್ದಾರೆ.

    ‘ಮಂಜುಮ್ಮೆಲ್ ಬಾಯ್ಸ್‌’ ಸಿನೆಮಾಗೆ ಕೊನೆಗೂ ಬಿಗ್ ರಿಲೀಫ್..!!

    ಭಾರತಕ್ಕೆ ಬಂದಿದ್ದು ನನಗೆ ತುಂಬಾ ಖುಷಿ ನೀಡಿದೆ. ಭಾರತೀಯ ಪಾಕಪದ್ಧತಿ ಅದ್ಬುತವಾಗಿದೆ. ಆದರೆ ನಾನು ಭಾರತದಲ್ಲಿ ಸ್ವಲ್ಪ ಸಮಯ ಮಾತ್ರ ಇದ್ದೆ. ಹೀಗಾಗಿ ಎಲ್ಲವನ್ನು ಸವಿಯಲು ಸಾಧ್ಯವಾಗಲಿಲ್ಲ. ಮತ್ತೊಮ್ಮೆ ಆಹಾರವನ್ನು ಸವಿಯಲು ಬಯಸುತ್ತೇನೆ. ಮತ್ತೊಮ್ಮೆ ಭಾರತಕ್ಕೆ ಬರಲು ಇಚ್ಛೆಪಡುತ್ತೇನೆ ಎಂದು ಹೇಳಿದ್ದಾರೆ. ಈ ಮದುವೆಯಿಂದ ಶಾರುಖ್ ಜೊತೆಗೆ ಹಲವಾರು ಸೆಲೆಬ್ರೆಟಿಗಳನ್ನು ಭೇಟಿ ಮಾಡುವ ಅವಕಾಶ ನನಗೆ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಅಂಬಾನಿ ಮದುವೆಯ ಬಳಿಕ ಜಾನ್‌ ಸೀನಾ ತಮ್ಮ ಎಕ್ಸ್‌ ಖಾತೆಯಲ್ಲಿ ಶಾರುಖ್ ಜೊತೆಗಿನ ಫೊಟೋವನ್ನು ಹಂಚಿಕೊಂಡಿದ್ದು, ಅತಿವಾಸ್ತವಿಕವಾದ 24ಗಂಟೆಗಳು ಎಂದು ಬರೆದುಕೊಂಡಿದ್ದರು. ಜೊತೆಗೆ ಅಂಬಾನಿ ಕಟುಂಬದ ಆತಿಥ್ಯಕ್ಕೆ ಧನ್ಯವಾದ ತಿಳಿಸಿದ್ದಾರೆ.

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending