Sunday, July 3, 2022

ಕೊಲೆ ಪ್ರಕರಣದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಕೊಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ಬೆಳಗ್ಗೆ ಕಾಸರಗೋಡಿನಲ್ಲಿ ನಡೆದಿದೆ.
ಅಣ೦ಗೂರು ಜೆ.ಪಿ.ಕಾಲನಿ ನಿವಾಸಿ ಜ್ಯೋತಿಷ್ (35) ಮೃತ ಯುವಕ.


ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದ ಜ್ಯೋತಿಷ್ ಇಂದು ಬೆಳಗ್ಗೆ ಮನೆಯವರು ಗಮನಿಸಿದಾಗ ನಾಪತ್ತೆಯಾಗಿದ್ದು,

ಹುಡುಕಾಡಿದಾಗ ಮನೆ ಸಮೀಪದ ಮರ ವೊಂದರ ರೆಂಬೆಯಲ್ಲಿ ಕುತ್ತಿಗೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಿಜೆಪಿ ಕಾರ್ಯಕರ್ತನಾಗಿದ್ದ ಜ್ಯೋತಿಷ್ ಬಂಗ್ರಗುಡ್ಡೆ ಯ ಸಿನಾನ್, ಸೂರ್ಲು ವಿನ ರಿಷಾದ್ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದನ್ನಲ್ಲದೆ,

ತಳಂಗರೆಯ ಜೈನುಲ್ ಆಬಿದ್ ಕೊಲೆ ಪ್ರಕರಣದಲ್ಲೂ ಈತ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮುಂದಿನ 30-40 ವರ್ಷಗಳು ಬಿಜೆಪಿ ಯುಗ: ಅಮಿತ್‌ ಶಾ

ಹೈದರಾಬಾದ್‌: ಮುಂದಿನ 30-40 ವರ್ಷಗಳು ಬಿಜೆಪಿ ಯುಗವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿದ್ದಾರೆ.ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, ಬಿಜೆಪಿಯ ಅಭಿವೃದ್ಧಿ...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...