Connect with us

LATEST NEWS

ಸ್ಟೇಷನ್‌ನಲ್ಲಿ ಪತ್ರಕರ್ತರು ಸೇರಿದಂತೆ ಒಟ್ಟು 8 ಜನರನ್ನು ಅರೆಬೆತ್ತಲೆ: ಫೋಟೋ ವೈರಲ್‌

Published

on

ಸಿಧಿ: ಇಬ್ಬರು ಪತ್ರಕರ್ತರು ಸೇರಿದಂತೆ ಒಟ್ಟು 8 ಜನರನ್ನು ಪೊಲೀಸ್ ಠಾಣೆಯೊಳಗೆ ಅರೆನಗ್ನರಾಗಿರಿಸಿದ ಫೋಟೋ ವೈರಲ್ ಆದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿದೆ.

ಈ ಫೋಟೋದಲ್ಲಿ ಇಬ್ಬರು ಪತ್ರಕರ್ತರು ಹಾಗೂ 6 ಮಂದಿ ರಂಗಭೂಮಿ ಕಲಾವಿದರನ್ನು ಅರೆಬೆತ್ತಲಾಗಿ ನಿಲ್ಲಿಸಿದ್ದು ಕಂಡು ತಮ್ಮ

ಕೈಗಳನ್ನು ಮುಂಭಾಗದಲ್ಲಿ ಕಟ್ಟಿ ಅರೆನಗ್ನಾವಸ್ಥೆಯಲ್ಲಿರುವ ದೃಶ್ಯ ವೈರಲ್ ಆಗುತ್ತಿದ್ದಂತೆಯೇ ಸಾಮಾಜಿಕ ತಾಣಗಳಲ್ಲಿ ಮಧ್ಯಪ್ರದೇಶದ ಪೊಲೀಸರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗಿದೆ.


ಫೋಟೋದಲ್ಲಿರುವವರನ್ನು ಗಮನಿಸಿದಾಗ ಒಬ್ಬರು ಸ್ಥಳೀಯ ಪತ್ರಕರ್ತ ಮತ್ತು ಯೂಟ್ಯೂಬರ್ ಕನಿಷ್ಕ್ ತಿವಾರಿ ಎಂದು ಗುರುತಿಸಲಾಗಿದೆ.

ಸ್ಥಳೀಯ ಬಿಜೆಪಿ ಶಾಸಕರ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯನ್ನು ವರದಿ ಮಾಡಲು ಹೋದಾಗ ಕೆಲವು ಪೊಲೀಸ್ ಸಿಬ್ಬಂದಿ ತನ್ನನ್ನು ನಿಂದಿಸಿದರು, ಥಳಿಸಿದರು ಮತ್ತು ವಿವಸ್ತ್ರಗೊಳಿಸಿದರು ಎಂದು ಕನಿಷ್ಕ್ ತಿವಾರಿ ಆರೋಪಿಸಿದ್ದಾರೆ.

ರಂಗಭೂಮಿ ಕಲಾವಿದ ನೀರಜ್ ಕುಂದರ್ ಎಂಬವರು ಬಿಜೆಪಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಅವರ ಪುತ್ರ ಕೇದಾರ್ ಗುರುದತ್ ಶುಕ್ಲಾ ಅವರ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ ಅಸಭ್ಯವಾಗಿ ಪೋಸ್ಟ್ ಮಾಡುತ್ತಿದ್ದಾರೆಂದು ಆರೋಪಿಸಿ ಅವರನ್ನು ಪೊಲೀಸರು ಬಂಧಿಸಿದ್ದರು.
ಅವರ ಬಂಧನವನ್ನು ವಿರೋಧಿಸಿ ಕೆಲವು ಕಲಾವಿದರು ಪ್ರತಿಭಟನೆ ನಡೆಸುತ್ತಿದ್ದರು.

ಇದನ್ನು ವರದಿ ಮಾಡಲು ತೆರಳಿದ್ದ ವೇಳೆ ಕನಿಷ್ಕ್ ತಿವಾರಿ ಸೇರಿದಂತೆ ಕಲಾವಿದರನ್ನು ಬಂಧಿಸಿದ್ದರು. ಆ ಬಳಿಕ ಅವರನ್ನು ಬಟ್ಟೆ ಬಿಚ್ಚಿಸಿ ಅರೆನಗ್ನಾವಸ್ಥೆಯಲ್ಲಿ ನಿಲ್ಲಿಸಲಾಗಿತ್ತು.

ಈ ಘಟನೆ ಏಪ್ರಿಲ್ 2 ರಂದು ನಡೆದಿತ್ತು. ಆದರೆ ಅದರ ಫೋಟೋ ಏಪ್ರಿಲ್ 7ರಂದು ವೈರಲ್ ಆಗಿದೆ.
“ನಾನೊಬ್ಬ ಪತ್ರಕರ್ತ. ಎಂಪಿ ಸಂದೇಶ್ ನ್ಯೂಸ್24 ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದೇನೆ. 1 ಲಕ್ಷದ 70 ಸಾವಿರ ಮಂದಿ ಚಂದಾದಾರರನ್ನು ಹೊಂದಿದ್ದೇನೆ.

ನಾನು ರಾಜಕಾರಣಿಗಳ ಬಗ್ಗೆ, ವಿಶೇಷವಾಗಿ ಶಾಸಕ ಕೇದಾರನಾಥ್ ಶುಕ್ಲಾ ಮತ್ತು ಇಲ್ಲಿನ ಪೊಲೀಸ್ ಇಲಾಖೆ ಅವ್ಯವಸ್ಥೆಯ ಬಗ್ಗೆ ಕಠಿಣ ಪ್ರಶ್ನೆಗಳನ್ನು ಕೇಳುತ್ತಿದ್ದೆ. ನಾನು ವಿಮರ್ಶಿಸಿ ಪ್ರಶ್ನೆ ಕೇಳಿದ್ದಕ್ಕೆ ಗುರಿ ಮಾಡಲಾಯಿತು” ಎಂದು ಕನಿಷ್ಕ್ ತಿವಾರಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.

ತನ್ನನ್ನು ಮತ್ತು ತನ್ನ ಕ್ಯಾಮರಾ ಮೆನ್ ಅನ್ನು ಬಂಧಿಸಲಾಗಿತ್ತು. ಅತಿಕ್ರಮಣ ಮತ್ತು ಸಾರ್ವಜನಿಕ ಶಾಂತಿ ಭಂಗ ಸೇರಿದಂತೆ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಿದ್ದಾರೆ. ಅಲ್ಲದೇ, ಶಾಸಕರ ವಿರುದ್ಧ ಏಕೆ ಸುದ್ದಿ ಮಾಡುತ್ತೀಯಾ ಎಂದು ತನ್ನನ್ನು ಪೊಲೀಸರು ಬೆದರಿಸಿದರು ಎಂದು ಕನಿಷ್ಕ್ ತಿವಾರಿ ತಿಳಿಸಿದ್ದಾರೆ.
ನಮ್ಮನ್ನು ಒಟ್ಟು 18 ಗಂಟೆಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿ ಇರಿಸಲಾಗಿತ್ತು. ಏಪ್ರಿಲ್ 2 ರಂದು ರಾತ್ರಿ 8 ಗಂಟೆಗೆ ನಮ್ಮನ್ನು ಕಸ್ಟಡಿಗೆ ತೆಗೆದುಕೊಂಡರು ಮತ್ತು ಏಪ್ರಿಲ್ 3 ರಂದು ಸಂಜೆ 6 ಗಂಟೆಗೆ ನಮ್ಮನ್ನು ಬಿಡುಗಡೆ ಮಾಡಿದರು ಎಂದು ತಿವಾರಿ ತಿಳಿಸಿದ್ದಾರೆ.

ಪೊಲೀಸ್ ಠಾಣೆಯ ಉಸ್ತುವಾರಿ ಅಭಿಷೇಕ್ ಸಿಂಗ್ ಪರಿಹಾರ್ ಎಂಬ ಪೊಲೀಸ್ ಅಧಿಕಾರಿ ಫೋಟೋವನ್ನು ಕ್ಲಿಕ್ ಮಾಡಿದ್ದಾರೆ. ಶಾಸಕರ ವಿರುದ್ಧ ಸುದ್ದಿ ಪ್ರಕಟಿಸಿದರೆ ನಗರದಲ್ಲಿ ಬೆತ್ತಲೆಯಾಗಿ ಮೆರವಣಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ.

ಪೊಲೀಸರೇ ಈ ಫೋಟೋವನ್ನು ಉದ್ದೇಶಪೂರ್ವಕವಾಗಿ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಮಾಡಿದ್ದಾರೆ. ಇದು ನಮ್ಮ ಹಕ್ಕುಗಳ ಸ್ಪಷ್ಟವಾದ ಉಲ್ಲಂಘನೆ ಎಂದು ಹೇಳಿದ್ದಾರೆ.

ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.
ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಸೀಧಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮುಖೇಶ್ ಕುಮಾರ್,

‘ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದವರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿದ್ದು, ಪೊಲೀಸರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಬಾರದು ಎಂದು ಮನವಿ ಮಾಡಿದರೂ ಅವರು ಕೇಳಲಿಲ್ಲ.

ಆದ್ದರಿಂದ ತಡರಾತ್ರಿ ಅವರನ್ನು ಬಂಧಿಸಲಾಗಿದೆ. ವೈರಲ್ ಆಗಿರುವ ಫೋಟೋ ಬಗ್ಗೆಯೂ ತಿಳಿದಿದ್ದು, ಆ ಫೋಟೋ ಯಾವಾಗ ತೆಗೆಯಲಾಗಿದೆ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫೈಜಲ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

                  ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫೈಜಲ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫೈಜಲ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

DAKSHINA KANNADA

“ಸೆಕ್ಸ್‌” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್‌..!

Published

on

ಮಂಗಳೂರು ( ಪಶ್ಚಿಮ ಬಂಗಾಳ ) : ಮಾಜಿ  ಸಂಸದೆ ಮಹುವಾ ಮೋಯಿತ್ರಾ ( Mahua Moitra ) ವಿವಾದದ ಕಾರಣದಿಂದ ಸಂಸತ್‌ನಿಂದ ಉಚ್ಚಾಟಿತರಾಗಿದ್ದರು. ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದರು ಎಂಬ ಆರೋಪ ಅವರ ಮೇಲಿತ್ತು. ಈಗ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದು ಅವರ ಹೇಳಿಕೆ ಬಾರಿ ವೈರಲ್ ಆಗಿದೆ. ಕೃಷ್ಣ ನಗರ ಲೋಕಸಭಾ ಕ್ಷೇತ್ರದಿಂದ ಟಿಎಂಸಿ ಅಭ್ಯರ್ಥಿಯಾಗಿ ಅವರು ಕಣಕ್ಕೆ ಇಳಿದಿದ್ದಾರೆ. ಭರ್ಜರಿ ಪ್ರಚಾರ ನಡೆಸುತ್ತಿರುವ ಅವರನ್ನ ಪತ್ರಕರ್ತರೊಬ್ಬರು ಸಂದರ್ಶನ ನಡೆಸಿದ್ದಾರೆ. ಈ ವೇಳೆ ಪತ್ರಕರ್ತ ನಿಮ್ಮ ಸಾಮಾರ್ಥ್ಯದ ರಹಸ್ಯ ಏನು ಎಂಬ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ಮೊಯಿತ್ರಾ ಅವರು “ಸೆಕ್ಸ್‌” ಎಂದು ಹೇಳಿರುವ ವಿಡಿಯೋವನ್ನು ಮೋದಿ ಕಾ ಪರಿವಾರ ವೈರಲ್ ಮಾಡಿದೆ. ವಿಡಿಯೊ ವೈರಲ್‌ ಆಗುತ್ತಲೇ ಜನ ಟೀಕೆ ವ್ಯಕ್ತಪಡಿಸಿದ್ದಾರೆ. ಒಬ್ಬ ಸಂಸದೆಯಾಗಿ ಬಹಿರಂಗವಾಗಿ ಹೀಗೆ ಹೇಳುವುದು ತಪ್ಪು ಎಂದು ಖಂಡಿಸಿದ್ದಾರೆ.

ನ್ಯೂಸ್‌ ದಿ ಟ್ರುತ್‌ ಎಂಬ ಮಾದ್ಯಮ ಮಾಡಿದ ಸಂದರ್ಶನ

ಸ್ಪಷ್ಟನೆ ನೀಡಿದ ಸಂದರ್ಶನ ನೀಡಿದ ವರದಿಗಾರ..!

“ಮಹುವಾ ಮೊಯಿತ್ರಾ ಅವರನ್ನು ಸಂದರ್ಶನ ಮಾಡಿದ್ದು ನಾನೇ. ನಿಮ್ಮ ಸಾಮರ್ಥ್ಯದ ಗುಟ್ಟೇನು ಎಂಬುದಾಗಿ ಕೇಳಿದೆ. ಅದಕ್ಕೆ ಅವರು, ಎಗ್ಸ್‌ (ಮೊಟ್ಟೆಗಳು) ಎಂಬುದಾಗಿ ಎರಡು ಬಾರಿ ಉತ್ತರಿಸಿದರು. ಆದರೆ, ಭಕ್ತ ಮಂಡಳಿಯು ಎಗ್ಸ್‌ ಎಂಬುದನ್ನು ಸೆಕ್ಸ್‌ ಎಂಬುದಾಗಿ ತಿರುಚಿದೆ” ಎಂಬುದಾಗಿ ನ್ಯೂಸ್‌ ದಿ ಟ್ರುತ್‌ ಎಂಬ ಮಾಧ್ಯಮ ಸಂಸ್ಥೆ ವರದಿಗಾರ ತಮಲ್‌ ಸಾಹ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಆದರೆ, ವರದಿಗಾರ ಸ್ಪಷ್ಟನೆ ನೀಡುವ ಹೊತ್ತಿಗೆ ವಿಡಿಯೊ ಭಾರಿ ವೈರಲ್‌ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

49 ವರ್ಷದ ಮಹುವಾ ಮೊಯಿತ್ರಾ ಅವರು ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳಲು 2 ಕೋಟಿ ರೂ. ನಗದು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದಾರೆ. ಮೊಯಿತ್ರಾ ಅವರು ತಮ್ಮ ಸಂಸತ್ತಿನ ಲಾಗ್-ಇನ್ ವಿವರಗಳನ್ನು ಉದ್ಯಮಿ ದರ್ಶನ್ ಹಿರಾನಂದಾನಿಗೆ ನೀಡಿದ್ದನ್ನು ಮೋಯಿತ್ರಾ ಒಪ್ಪಿಕೊಂಡಿದ್ದರು.  ಈ ಹಿನ್ನೆಲೆಯಲ್ಲಿ ಅವರನ್ನು ಡಿಸೆಂಬರ್ 8, 2023ರಂದು ಲೋಕಸಭೆಯಿಂದ ಉಚ್ಚಾಟಿಸಲಾಗಿತ್ತು.

 

Continue Reading

LATEST NEWS

Trending