Connect with us

    ಪತ್ರಕರ್ತ, ಸ್ಯಾಕ್ಸೋಫೋನ್ ಕಲಾವಿದ ದಯಾನಂದ ಕುಡುಪು ಇನ್ನಿಲ್ಲ

    Published

    on

    ಪತ್ರಕರ್ತ, ಸ್ಯಾಕ್ಸೋಫೋನ್ ಕಲಾವಿದ ದಯಾನಂದ ಕುಡುಪು ಇನ್ನಿಲ್ಲ

    ಮಂಗಳೂರು : ಪತ್ರಕರ್ತರು ಹಾಗೂ ಸ್ಯಾಕ್ಸೋಫೋನ್ ಮಾಂತ್ರಿಕ ದಯಾನಂದ ಕುಡುಪು ಇಂದು( ಸೋಮವಾರ) ಸಂಜೆ ಕುಡುಪುನಲ್ಲಿರುವ ತನ್ನ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

    ದಯಾನಂದ ಅವರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 55 ವರ್ಷದ ಅವರು ಕೆಲ ದಿನಗಳ ಹಿಂದೆ ಅಸ್ವಸ್ಥರಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

    ಪತ್ರಕರ್ತರಾಗಿರುವ ದಯಾನಂದ ಕುಡುಪು ಅವರು ಮಂಗಳೂರಿನಲ್ಲಿ ವಿವಿಧ ರಾಜ್ಯ ಹಾಗೂ ಪ್ರಾದೇಶಿಕ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.

    ಉತ್ತಮ ಸ್ಯಾಕ್ಸೋಫೋನ್ ವಾದಕರಾಗಿದ್ದ ಅವರು ಮಂಗಳೂರು ಪ್ರೆಸ್‌ಕ್ಲಬ್ ದಿನಾಚರಣೆ, ಸಭೆ ಸಮಾರಂಭಗಳ ಸಹಿತ ಜಿಲ್ಲಾ ಹಾಗೂ ರಾಜ್ಯಮಟ್ಟದ ಹಲವು ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿದ್ದರು.

    ದಯಾನಂದ ಕುಡುಪು ಅವರ ಅಕಾಲಿಕ ನಿಧನಕ್ಕೆ ಮಂಗಳೂರು ಪ್ರೆಸ್‌ ಕ್ಲಬ್‌ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಿತ ಅನೇಕ ಹಿರಿಯ- ಕಿರಿಯ ಪತ್ರಕರ್ತರು ತೀವ್ರ ಸಂತಾಪ ಸೂಚಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ತಿರುಪತಿ ದುರಂ*ತಕ್ಕೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸಂ*ತಾಪ

    Published

    on

    ಮಂಗಳೂರು/ನವದೆಹಲಿ :  ತಿರುಪತಿಯಲ್ಲಿ  ದುರಂ*ತವೊಂದು ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಉಂಟಾದ ನೂಕುನುಗ್ಗಲಿನಿಂದಾಗಿ 7 ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂ*ತಾಪ ಸೂಚಿಸಿದ್ದಾರೆ.

    ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾ*ಲ್ತುಳಿತ ಘಟನೆಯಿಂದ ನೋ*ವಾಗಿದೆ. ಘಟನೆಯಲ್ಲಿ ಗಾ*ಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ.

    ರಾಷ್ಟ್ರಪತಿ ಸಂತಾಪ :

    ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ದು*ರ್ಘಟನೆಯಲ್ಲಿ ಮೃ*ತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದೇವರು  ಕುಟುಂಬಸ್ಥರಿಗೆ ತಮ್ಮ ಆಪ್ತರನ್ನು ಕಳೆದುಕೊಂಡ ದು:ಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

    ಗುರುವಾರ(ಜ.9) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ನಿರ್ಧರಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಬುಧವಾರ ಸಂಜೆಯೇ ಭಾರಿ ಜನರು ಜಮಾಯಿಸಿದ್ದರು.

    ಇದನ್ನೂ ಓದಿ : ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್

    ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಕಾರಣ ಅವರನ್ನು ಹೊರಕ್ಕೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿಒಳನುಗ್ಗುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಕೆಲವರು ಕೆಳಗೆ ಬಿದ್ದಿದ್ದು ಕಾಲ್ತುಳಿತದಿಂದ ಅಸ್ವಸ್ಥಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅವರಲ್ಲಿ 7 ಭಕ್ತರು ಸಾವನ್ನಪ್ಪಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.

    Continue Reading

    LATEST NEWS

    ಕೆಲಸದ ಒತ್ತಡಕ್ಕೆ ಬೇಸತ್ತು ಬಿಲ್ ಕಲೆಕ್ಟರ್ ಆತ್ಮಹತ್ಯೆ

    Published

    on

    ವಿಜಯನಗರ: ಕೆಲಸದ ಒತ್ತಡದಿಂದ ಬೇಸತ್ತ ನಗರ ಸಭೆಯ ಬಿಲ್ ಕಲೆಕ್ಟರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.

    ಮೃತರನ್ನು ಮಂಜುನಾಥ್ ಎಂದು ತಿಳಿದುಬಂದಿದೆ. ಮಂಜುನಾಥ್‌ ಅವರು ಹೊಸ ವರ್ಷದ ಆರಂಭದ ದಿನವೇ ತಮಗೆ ಕೆಲಸದ ಒತ್ತಡದ ಇದೆ ಎಂದು ಹೇಳಿ ಪ್ಲಂಬಿಂಗ್‌ಗೆ ಬಳಸುವ ಗಮ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಮಾರ್ಜ್ ಆದ ಬಳಿಕ ಅವರು ಇಂದು ಮತ್ತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೂ ಮೊದಲು ಆತ್ಮಹತ್ಯೆಗೆ ಯತ್ನಿಸಿದ್ದ ಮಂಜುನಾಥ್ ಮೊಬೈಲ್ ನಲ್ಲಿ ಡೆತ್ ನೋಟ್ ಕುರಿತು ಉಲ್ಲೇಖಿಸಿದ್ದರು.

    “ನನ್ನ ಸಾವಿಗೆ ನಗರಸಭೆಯ ಆಯುಕ್ತ ಚಂದ್ರಪ್ಪ ಮತ್ತು ಕಂದಾಯ ಅಧಿಕಾರಿ ನಾಗರಾಜ್ ಕಾರಣ. ಕೆಲಸದಿಂದ ಬೇರೆಡೆ ನಿಯೋಜಿಸಲು ಒಂದು ತಿಂಗಳಿಂದ ಹೇಳುತ್ತಿದ್ದರೂ ತೆಗೆಯುತ್ತಿಲ್ಲ. ರಾತ್ರಿ ನಿದ್ದೆ ಬರುತ್ತಿಲ್ಲ, ಅಧಿಕ ಒತ್ತಡ ಇರುವುದರಿಂದ ನಾನು ಸಾವಿಗೆ ಶರಣಾಗಿದ್ದೀನಿ” ಎಂಬ ಸಂದೇಶವನ್ನು ತಮ್ಮ ಮೊಬೈಲ್ ಫೋನ್‌ನಲ್ಲಿ ಕಳುಹಿಸಿ ಮಂಜುನಾಥ ಬುಧವಾರ ಬೆಳಿಗ್ಗೆ ನಾಪತ್ತೆಯಾಗಿದ್ದರು. ಹಂಪಿ ರಸ್ತೆಯಲ್ಲಿ ಅವರನ್ನು ಪತ್ತೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಯಿತು.

    ಆದರೆ ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಮಂಜುನಾಥ್ ಇಂದು ಮತ್ತೆ ಹೊಸಪೇಟೆ ತಾಲೂಕಿನ ಕಡ್ಡಿರಾಂಪುರದಲ್ಲಿ ಖಾಸಗಿ ಹೋಂ ಸ್ಟೇ ನಲ್ಲಿ ಮಂಜುನಾಥ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲಾಧಿಕಾರಿಗಳ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಘಟನಾ ಸ್ಥಳಕ್ಕೆ ಹಂಪಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    health

    ಸೈಬರ್ ವಂಚನೆಯ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ ಎಂದ ಸುಪ್ರೀಂ ಕೋರ್ಟ್

    Published

    on

    ಮಂಗಳೂರು/ನವದೆಹಲಿ : ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕನಿಗೆ ನಷ್ಟ ಸಂಭವಿಸಿದ್ರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.

    ಬ್ಯಾಂಕುಗಳಲ್ಲಿ ಗ್ರಾಹಕನ ಖಾತೆಯಲ್ಲಿ ಯಾವುದೇ ಅನಧಿಕೃತ ವಹಿವಾಟು ನಡೆದು ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ನೇರವಾಗಿ ಹೊಣೆ ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

    ಅಸ್ಸಾಂನ ಸೈಬರ್ ವಂಚನೆಗೆ ಒಳಗಾದ ಪಲ್ಲಭ್ ಭೌಮಿಕ್ ಅವರಿಗೆ 94,000 ರೂ. ಗಳನ್ನು ಮರುಪಾವತಿಸುವಂತೆ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಹೊರಡಿಸಿದೆ.

    ಈ ಪ್ರಕರಣವು ಬ್ಯಾಂಕುಗಳು ತಮ್ಮ ಗ್ರಾಹಕರ ಹಣವನ್ನು ವಂಚನೆಯ ಚಟುವಟಿಕೆಗಳಿಂದ ರಕ್ಷಿಸುವಲ್ಲಿ ಹಣಕಾಸು ಸಂಸ್ಥೆಗಳ ಜವಾಬ್ದಾರಿಗಳನ್ನು ತೀವ್ರವಾಗಿ ಎತ್ತಿ ತೋರಿಸಿದೆ.

    ಪ್ರಕರಣದ ಹಿನ್ನೆಲೆ

    ಪಲ್ಲಭ್ ಭೌಮಿಕ್ ಎನ್ನುವವರು ಆನ್ ಲೈನ್ ನಲ್ಲಿ ವಸ್ತುವೊಂದನ್ನು ಖರೀದಿಸಿದ್ದರು. 4,000 ರೂ. ಮೌಲ್ಯದ ಲೂಯಿಸ್ ಫಿಲಿಪ್ ಬ್ಲೇಜರ್ ಅನ್ನು ಹಿಂದಿರುಗಿಸಲು ಪ್ರಯತ್ನಿಸಿದಾಗ ಸೈಬರ್ ವಂಚನೆ ಸಂಭವಿಸಿದೆ. ಗ್ರಾಹಕ ಸೇವಾ ಪ್ರತಿನಿಧಿಯಾಗಿ ನಟಿಸಿ, ವಂಚಕರು ಪಲ್ಲಭ್ ಅವರನ್ನು ದುರುದ್ದೇಶಪೂರಿತ ಅಪ್ಲಿಕೇಶನ್ ಅನ್ನು ಸ್ಥಾಪಿಸುವಂತೆ ಹೇಳಿ ವಂಚನೆ ಮಾಡಿದ್ದರು.

    ಇದನ್ನೂ ಓದಿ: ಓಂ ಶಕ್ತಿ ದರ್ಶನ ಪಡೆದು ವಾಪಾಸಾಗುತ್ತಿದ್ದಾಗ ದುರಂ*ತ; ಐವರು ಸಾ*ವು

    ಇದು ಅವರ ಎಸ್ ಬಿಐ ಉಳಿತಾಯ ಖಾತೆಯಿಂದ 94,204 ರೂ. ಗಳನ್ನು ಕಳವು ಮಾಡಲು ಕಾರಣವಾಯಿತು. ಕದ್ದ ಹಣವನ್ನು ಯುಪಿಐ ವಹಿವಾಟುಗಳ ಮೂಲಕ ಬಹು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಯಿತು.

    ಈ ಸಮಸ್ಯೆಯ ಮೂಲ ಯಾವುದೆಂದರೆ ಲೂಯಿಸ್ ಫಿಲಿಪ್ ಅವರ ವೆಬ್ ಸೈಟ್ ನಲ್ಲಿ 2021 ರಲ್ಲಿ ನಡೆದ ಡೇಟಾ ಉಲ್ಲಂಘನೆಯಾಗಿದ್ದು, ಇದರಿಂದ ಗ್ರಾಹಕರ ಸೂಕ್ಷ್ಮ ಮಾಹಿತಿಗಳು ಸೋರಿಕೆಯಾಗಿದೆ. ಈ ಡೇಟಾವನ್ನು ದುರುಪಯೋಗಪಡಿಸಿಕೊಂಡು, ವಂಚಕನು ವಂಚನೆ ನಡೆಸಿದ್ದಾನೆ.

    ಕಾನೂನು ಹೋರಾಟ ನಡೆಸಿದ ಪಲ್ಲಭ್
    ಈ ವಿಷಯವನ್ನು ನಿಯಮದಂತೆ 24 ಗಂಟೆಯೊಳಗೆ ಪಲ್ಲಭ್ ಬ್ಯಾಂಕ್ ಗಮನಕ್ಕೆ ತಂದಿದ್ದರು. ಆದರೆ ನ್ಯೂ ಒಟಿಪಿ, ಎಂಪಿನ್ ಸೇರಿದಂತೆ ರಹಸ್ಯ ಮಾಹಿತಿಯನ್ನು ವಂಚಕರಿಗೆ ನೀಡಿದ್ದೀರಿ. ಹೀಗಾಗಿ ಇದರಲ್ಲಿ ಬ್ಯಾಂಕ್ ನ ತಪ್ಪಿಲ್ಲ. ಹಣ ಮರಳಿಸಲಾಗಲ್ಲ ಎಂದು ಬ್ಯಾಂಕ್ ಹೇಳಿತ್ತು. ಈ ಬಗ್ಗೆ ಪಲ್ಲಭ್ ಹೈಕೋರ್ಟ್ ಮೊರೆ ಹೋಗಿದ್ದರು. ಗುವಾಹಟಿ ಹೈಕೋರ್ಟ್ ಪಲ್ಲಭ್ ಪರ ತೀರ್ಪು ನೀಡಿತ್ತು. ಇದನ್ನು ಎಸ್ ಬಿಐ ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಿತ್ತು.

    ಈ ಕುರಿತು ಇದೀಗ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್, ‘ಮೂರನೇ ವ್ಯಕ್ತಿಯಿಂದಾದ ವಂಚನೆ ಪ್ರಕರಣಕ್ಕೆ ಗ್ರಾಹಕ ಹೊಣೆಯಾಗುವುದಿಲ್ಲ ಎಂದು ಆರ್ ಬಿಐ ನಿಯಮಗಳೇ ಹೇಳಿವೆ. ಸೈಬರ್ ವಂಚನೆಯಂಥ ಪ್ರಕರಣದಲ್ಲಿ ಗ್ರಾಹಕರ ಹಿತ ಕಾಪಾಡುವುದು ಬ್ಯಾಂಕ್ ಗಳ ಹೊಣೆಗಾರಿಕೆ. ಈ ಪ್ರಕರಣದಲ್ಲಿ ತಾಂತ್ರಿಕ ಸಂಪನ್ಮೂಲ ಲಭ್ಯವಿದ್ದರೂ ವಂಚನೆ ತಡೆಯುವಲ್ಲಿ ಎಸ್ ಬಿಐ ವಿಫಲವಾಗಿದೆ’. ಈ ಹಿನ್ನೆಲೆ ಗ್ರಾಹಕನಿಗೆ ಹಣ ಮರಳಿಸುವಂತೆ ಎಸ್ ಬಿಐಗೆ ನ್ಯಾಯಪೀಠ ಸೂಚಿಸಿದೆ.

    Continue Reading

    LATEST NEWS

    Trending