Connect with us

    DAKSHINA KANNADA

    ಜೂ.9: ದುಬೈ ಯಕ್ಷೋತ್ಸವ..; ದಾಶರಥಿ ದರ್ಶನ ಕನ್ನಡ ಪೌರಾಣಿಕ ಯಕ್ಷಗಾನ

    Published

    on

    ಮಂಗಳೂರು: ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯುಎಇ ವತಿಯಿಂದ ಜೂ. 9 ರಂದು ಮಧ್ಯಾಹ್ನ 2ರಿಂದ ದುಬೈನ ಕರಮ ಶೇಖ್ ರಷೀದ್ ಸಭಾಗಂಣದಲ್ಲಿ ದುಬೈ ಯಕ್ಷೋತ್ಸವ ಆಯೋಜಿಸಲಾಗಿದೆ. ಯಕ್ಷಗಾನ ಅಭ್ಯಾಸ ಕೇಂದ್ರ, ಯುಎಇಯ ಬಾಲ-ಯುವ- ಪರಿಣತ-ಪ್ರೌಢ ಕಲಾವಿದರಿಂದ ದಾಶರಥಿ ದರ್ಶನ ಪ್ರಸಂಗ ಪ್ರದರ್ಶನಗೊಳ್ಳಲಿದೆ. ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಗಾನಸಾರಥ್ಯ, ಯುವ ಭಾಗವತರಾದ ಭವ್ಯಶ್ರೀ ಹರೀಶ ಕುಲ್ಕುಂದ ಅವರ ಭಾಗವತಿಕೆಯಲ್ಲಿ ಪ್ರಸಂಗ ಮೂಡಿಬರಲಿದೆ. ಹಿಮ್ಮೇಳದಲ್ಲಿ ಸವಿನಯ ನೆಲ್ಲಿತೀರ್ಥ, ಮಯೂರ ನಾಯ್ಗ ಭಾಗವಹಿಸುವರು. ಚಕ್ರತಾಳದಲ್ಲಿ ಭವ್ಯಶ್ರೀ ಅವರ ಪುತ್ರ ಅಗಸ್ತ್ಯ ಕುಲ್ಕುಂದ ಕಾಣಿಸಿಕೊಳ್ಳುವರು. ಜತೆಗೆ ಸ್ಥಳೀಯ ಕಲಾವಿದರು ಹಿಮ್ಮೇಳದಲ್ಲಿ ಇರಲಿದ್ದಾರೆ.

    ಯಕ್ಷ ಶ್ರೀ ರಕ್ಷ ಗೌರವ ಪ್ರಶಸ್ತಿ 2024

    ಈ ಬಾರಿಯ ‘ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿ’ಯನ್ನು ಸ್ಥಳೀಯ ಹಿರಿಯ ಕಲಾವಿದ ವೆಂಕಟೇಶ ಶಾಸ್ತ್ರಿ ಪುತ್ತಿಗೆ ಅವರಿಗೆ ಪ್ರದಾನ ಮಾಡಲಾಗುವುದು. ಯಕ್ಷಧ್ರುವ ಪಟ್ಲ ಫೌಂಡೇಶನ್ ಪ್ರಧಾನ ಸಂಚಾಲಕ ಶಶಿಧರ ಶೆಟ್ಟಿ ಬರೋಡ ಮತ್ತು ಯುಎಇ ಯ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಅಭ್ಯಾಸ ಕೇಂದ್ರದ ಸಂಚಾಲಕ ದಿನೇಶ ಶೆಟ್ಟಿ ಕೊಟ್ಟಿಂಜ ಅವರ ನೇತೃತ್ವದಲ್ಲಿ ಗುರುಗಳಾದ ಶೇಖರ್ ಡಿ. ಶೆಟ್ಟಿಗಾರ್ ಕಿನ್ನಿಗೋಳಿ ಮತ್ತು ಶರತ್ ಕುಡ್ಲ ಅವರ ನಿರ್ದೇಶನದಲ್ಲಿ, ಕೇಂದ್ರದ ಎಲ್ಲಾ ಹಿರಿಯ -ಕಿರಿಯ ಕಲಾವಿದರು ಪೂರ್ಣ ಪ್ರಮಾಣದ ಪ್ರದರ್ಶನಕ್ಕೆ ಸರ್ವಸಿದ್ಧತೆಯಲ್ಲಿದ್ದಾರೆ. ಪ್ರಸಾದನ ಕಲೆಯಲ್ಲಿ ಸಿದ್ಧಹಸ್ತರಾದ ಕಿನ್ನಿಗೋಳಿ ಮೋಹಿನೀ ಕಲಾ ಸಂಪದದ ಕಲಾವಿದರಾದ ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ನಿತಿನ್ ಕುಂಪಲ, ಮನೋಜ್ ಶೆಟ್ಟಿಗಾರ್ ಹಳೆಯಂಗಡಿ ಸಹಕಾರ ನೀಡಲಿದ್ದಾರೆ. ಹೆಚ್ಚಿನ ಮಾಹಿತಿಗೆ 0507083537, 0529157825, 0553912535 ಸಂಪರ್ಕಿಸಬಹುದು ಎಂದು ಅಭ್ಯಾಸ ಕೇಂದ್ರದ ಮಾಧ್ಯಮ ಪ್ರಚಾರ ಸಂಯೋಜಕ ಗಿರೀಶ್ ನಾರಾಯಣ್ ಕಾಟಿಪಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಪೂರ್ವರಂಗದಲ್ಲಿ ಗಣಪತಿ ಕೌತುಕ, ಏಕಕಾಲದಲ್ಲಿ ಮೂರು ರಂಗಸ್ಥಳಗಳಲ್ಲಿ ಪ್ರಸಂಗ ಆರಂಭಗೊಳ್ಳಲಿದೆ. ವೈಭವಪೂರ್ಣ ವಿಶೇಷ ಸೆಟ್ಟಿಂಗ್ ಗಳನ್ನು ಒಳಗೊಂಡಿದ್ದು, ನೂತನ ನಾಟ್ಯ ಸಂಯೋಜನೆ-ಸೆಟ್ಟಿಂಗ್ ನಲ್ಲಿ ಸೇತು ಬಂಧನ ದೃಶ್ಯ ಕಾಣಲಿದೆ.  ಒಟ್ಟು 127 ಪಾತ್ರಗಳು ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು,  ಕುಂಬಳೆ ಪಾರ್ತಿಸುಬ್ಬ, ಜತ್ತಿ ಈಶ್ವರ ಭಟ್, ಕಾಸರಗೋಡು ಸುಬ್ರಾಯ ಪಂಡಿತ, ಎಂ.ಎ.ಹೆಗಡೆ ಶಿರಸಿ, ಬೊಟ್ಟಿಕೆರೆ ಪುರುಷೋತ್ತಮ ಪೂಂಜ, ಹೊಸ್ತೋಟ ಮಂಜುನಾಥ ಭಾಗವತ ಮೊದಲಾದವರು ದಾಶರಥಿ ದರ್ಶನ ಪ್ರಸಂಗವನ್ನು ರಚಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಜಿಲ್ಲೆಯಲ್ಲಿ ರೆಡ್ ಅಲರ್ಟ್‌..! ಜೂನ್ 27 ಶಾಲೆಗೆ ರಜೆ ಘೋಷಣೆ..!

    Published

    on

    ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 27 ರ ಗುರುವಾರದಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಶಾಲೆಗಳು, ಅಂಗನವಾಡಿ , ಹಾಗೂ ಪ್ರೌಡಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೂನ್ 27 ರಂದು ವ್ಯಾಪಕ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಈ ಕುರಿತಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಯಿಲನ್ ಅವರು ಈ ಆದೇಶ ಹೊರಡಿಸಿದ್ದಾರೆ. ಇಷ್ಟೇ ಅಲ್ಲದೆ ತೀವೃ ಮಳೆಯ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸೂಕ್ತ ಕ್ರಮಗಳ ಬಗ್ಗೆಯೂ ಎಚ್ಚರಿಕೆ ನೀಡಿದ್ದಾರೆ. ಮೀನುಗಾರು ಸಮುದ್ರಕ್ಕೆ ಇಳಿಯದಂತೆ ಆದೇಶದಲ್ಲಿ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶಗಳಿಗೆ ಜನರು ತೆರಳದೇ ಇರುವುದು, ಹಾಗೂ ಮಳೆ ನೀರಿನಿಂದ ನೆರೆಯ ಆತಂಕ ಇರುವ ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳುವಂತೆಯೂ ಸೂಚನೆ ನೀಡಿದ್ದಾರೆ.

    ಯಾವುದೇ ತುರ್ತು ಪರಿಸ್ಥಿತಿಯ ಸಮಯದಲ್ಲಿ ಜಿಲ್ಲಾಡಳಿತದ 1077 ಅಥವಾ  0824-2442590 ನಂಬರ್ ಕರೆ ಮಾಡುವಂತೆ ಸೂಚಿನೆ ನೀಡಲಾಗಿದೆ.

    Continue Reading

    DAKSHINA KANNADA

    ಜಪ್ಪಿನಮೊಗರು ದೊಂಪದಬಲಿ ಗದ್ದೆ ಸಮೀಪ ಮನೆಗಳು ಜಲಾವೃತ

    Published

    on

    ಮಂಗಳೂರು ಹೊರವಲಯದ ಜಪ್ಪಿನಮೊಗೆರು ಪ್ರದೇಶದಲ್ಲಿ ಮಳೆಯಿಂದಾಗಿ ಹಲವು ರಸ್ತೆಗಳು ಹಾಗೂ ಮನೆಗಳು ಜಲಾವೃತಗೊಂಡಿದೆ. ಇಲ್ಲಿನ ದೊಂಪದಬಲಿ ಎಂಬಲ್ಲಿನ ರಾಜಾಕಾಲುವೆ ಬ್ಲಾಕ್ ಆಗಿ ನೀರು ನದಿ ಸೇರದೆ ಈ ಕೃತಕ ನೆರೆ ಉಂಟಾಗಿದೆ.

    ಹಲವಾರು ವರ್ಷಗಳಿಂದ ಇಲ್ಲಿ ರಸ್ತೆ ಸಮಸ್ಯೆ ಇದ್ದು, ಇತ್ತೀಚೆಗೆ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗಿದೆ. ಆದ್ರೆ ಕಾಂಕ್ರೀಟ್ ರಸ್ತೆಯ ಇಕ್ಕೆಲೆಗಳಲ್ಲಿ ನಿರ್ಮಿಸಬೇಕಾದ ಚರಂಡಿಯನ್ನು ನಿರ್ಮಾಣ ಮಾಡದೆ ಇರುವುದು ಇದಕ್ಕೆ ಕಾರಣ ಎಂದು ಸ್ಥಳಿಯರು ದೂರಿದ್ದಾರೆ. ಮೊದಲೇ ತಗ್ಗು ಪ್ರದೇಶದಲ್ಲಿ ಇರುವ ದೊಂಪದ ಬಲಿ ಪ್ರದೇಶ ರಸ್ತೆಗಿಂತ ಕೆಳಗೆ ಇರುವ ಕಾರಣ ರಸ್ತೆಯಲ್ಲಿ ಹರಿಯುವ ನೀರು ನೇರ ಜನವಸತಿ ಪ್ರದೇಶಕ್ಕೆ ನುಗ್ಗುತ್ತಿದೆ. ಚರಂಡಿ ನಿರ್ಮಾಣ ಮಾಡಿದ್ದೇ ಆಗಿದ್ದಲ್ಲಿ ಈ ರೀತಿಯ ಸಮಸ್ಯೆ ಆಗುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿ ಕಾರ್ಪೋರೇಟರ್ ವೀಣಾಮಂಗಳ ಸ್ಥಳೀಯ ನಿವಾಸಿಗಳು ತ್ಯಾಜ್ಯ ವಿಲೇವಾರಿಯಲ್ಲಿ ಸಹಕರಿಸದೇ ಇರುವುದು ಈ ಸಮಸ್ಯೆಗೆ ಮೂಲಕ ಕಾರಣ ಎಂದು ಹೇಳಿದ್ದಾರೆ. ಎಲ್ಲಾ ತ್ಯಾಜ್ಯಗಳನ್ನು ಇಲ್ಲಿನ ಚರಂಡಿಗೆ ಎಸೆಯುವ ಕಾರಣ ರಾಜಾಕಾಲುವೆಯಲ್ಲಿ ಶೇಖರಣೆಯಾಗಿ ಈ ರೀತಿ ಅವಾಂತರ ಸೃಷ್ಟಿಯಾಗಿದೆ ಎಂದು ಹೇಳಿದ್ದಾರೆ.

    ಇಷ್ಟೇ ಅಲ್ಲದೆ ನೀರು ಸರಾಗವಾಗಿ ಹರಿದು ರಾಜಕಾಲುವ ಸೇರಲು ಚರಂಡಿ ನಿರ್ಮಾಣದ ವೇಳೆ ಕೆಲವರು ಅನಗತ್ಯವಾಗಿ ಸ್ಟೇ ತಂದು ಕಾಮಾಗಾರಿ ತಡೆ ಹಿಡಿದಿದ್ದಾರೆ ಎಂದು ಸ್ಥಳಿಯರ ಅಸಹಕಾರದಿಂದ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ಅತ್ತಾವರ: ಮಳೆಗೆ ಧರೆಗುರುಳಿದ ಬೃಹತ್ ಮರ

    Published

    on

    ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ಅತ್ತಾವರ ಕಾಪ್ರಿಗುಡ್ಡದ ಬ್ರಿಟ್ಟೋಲೇನ್ ಬಳಿ ವಾಣಿಜ್ಯ ಸಂಕೀರ್ಣದ ತಳಪಾಯದ ಕಾಮಗಾರಿ ನಡೆಯುತ್ತಿದ್ದ ಜಾಗಕ್ಕೆ ಮೇಲ್ಭಾಗದಲ್ಲಿದ್ದ ಬೃಹತ್ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ.

    ಮಳೆಯ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕಾಮಗಾರಿ ನಿಲ್ಲಿಸಲಾಗಿದ್ದ ಕಾರಣ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಕಾರ್ಪೊರೇಟರ್ ಅಬ್ದುಲ್ ಲತೀಫ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Continue Reading

    LATEST NEWS

    Trending