Connect with us

    FILM

    ಕೆರಾಡಿ ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ಜೂ.ಎನ್ ಟಿ ಆರ್, ರಿಷಬ್ ಶೆಟ್ಟಿ ಭೇಟಿ

    Published

    on

    ಉಡುಪಿ : ನಟ ಜೂ.ಎನ್ ಟಿ ಆರ್ ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದಾರೆ. ನಟ ರಿಷಬ್ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್ ಜೊತೆ ಧಾರ್ಮಿಕ ಕ್ಷೇತ್ರಗಳಿಗೆ ಅವರು ಭೇಟಿ ನೀಡುತ್ತಿದ್ದಾರೆ.   ಕೃಷ್ಣಮಠ, ಕೊಲ್ಲೂರು ಕ್ಷೇತ್ರದ ನಂತರ ಇದೀಗ ಅವರು ಇತಿಹಾಸ ಪ್ರಸಿದ್ಧ ಕೆರಾಡಿ ಗ್ರಾಮದ ಮೂಡುಗಲ್ಲು ಕೇಶವನಾಥೇಶ್ವರ ಗುಹಾಂತರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಮೂವರೂ ತಮ್ಮ ತಮ್ಮ ಕುಟುಂಬಸ್ಥರ ಜೊತೆಗೆ ತೆರಳಿ ಕೇಶವನಾಥೇಶ್ವರನ ದರ್ಶನ ಮಾಡಿದ್ದಾರೆ.

    ಕ್ಷೇತ್ರಕ್ಕೆ ಭೇಟಿ ನೀಡಿದ ಅಪೂರ್ವ ಕ್ಷಣಗಳ ಡ್ರೋಣ್ ವೀಡಿಯೋವನ್ನು ನಟ ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಪೇಜ್ ನಲ್ಲಿ ಹಂಚಿಕೊಂಡಿದ್ದಾರೆ. ಮಳೆಯಿಂದ ಚಿಗುರಿರುವ ಸುಂದರ ಸಸ್ಯರಾಶಿ, ಗದ್ದೆ ತೋಟ , ಬೆಟ್ಟದ ತಪ್ಪಲಿನಲ್ಲಿ ಮನೋಲ್ಲಾಸದಿಂದ ಸ್ಟಾರ್ ಗಳು  ಓಡಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಇದನ್ನೂ ಓದಿ : ಈ ದೇವಸ್ಥಾನದಲ್ಲಿದೆ ಬಣ್ಣ ಬದಲಾಯಿಸುವ ವಿಸ್ಮಯಕಾರಿ ಗಣೇಶನ ಮೂರ್ತಿ

    ಮೂಡುಗಲ್ಲು ಕ್ಷೇತ್ರದ ಬಗ್ಗೆ :

    ಮೂಡುಗಲ್ಲು ಶ್ರೀ ಕೇಶವನಾಥೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧ ಕ್ಷೇತ್ರ. ಈ ದೇವಾಲಯ ಗುಹೆಯ ಮೂಲದಂತೆ ರೂಪುಗೊಂಡಿದೆ. ಈ ಕ್ಷೇತ್ರ ನೀರಿನಿಂದ ಆವೃತವಾಗಿದೆ. ಸುಮಾರು 20 ರಿಂದ 30 ಅಡಿ ವಿಶಾಲ ಜಾಗದಲ್ಲಿ ಹರಡಿಕೊಂಡಿದೆ.

    ಗುಡಿಯ ಒಳಗೆ ಕತ್ತಲಿನಲ್ಲಿ ದೇವರ ದೀಪದ ಬೆಳಕು ಬಿಟ್ಟರೆ ಬೇರೆ ಏನೂ ನಿಮ್ಮ ಕಣ್ಣಿಗೆ ಕಾಣುವುದಿಲ್ಲ. ಭಕ್ತಿ ಭಾವದ ಜೊತೆಗೆ ಮೈ ಮನಕ್ಕೆ ಶ್ರೀಕ್ಷೇತ್ರ ಮುದ ನೀಡುತ್ತದೆ.

    FILM

    ಸೀಮಂತ ಸಂಭ್ರಮದಲ್ಲಿ ‘ಬಿಗ್‌ ಬಾಸ್‌’ ಖ್ಯಾತಿಯ ಕವಿತಾ ಗೌಡ

    Published

    on

    ಬೆಂಗಳೂರು: ‘ಬಿಗ್ ಬಾಸ್’, ‘ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು ಅಲಿಯಾಸ್ ನಟಿ ಕವಿತಾ ಗೌಡ ಅವರು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಚೊಚ್ಚಲ ಮಗುವಿನ ಆಗಮನಕ್ಕಾಗಿ ಎದುರು ನೋಡುತ್ತಿರುವ ನಟಿ ಕವಿತಾ ಸೀಮಂತ ಶಾಸ್ತ್ರ ಜರುಗಿದೆ. ಕಿರುತೆರೆಯ ನಟ, ನಟಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಅಮ್ಮನಾಗ್ತಿರೋ ಕವಿತಾಗೆ ಶುಭಕೋರಿದ್ದಾರೆ.

     

    ಕವಿತಾ ಮತ್ತು ನಟ ಚಂದನ್ ಕುಮಾರ್ ಮನೆಗೆ ಸದ್ಯದಲ್ಲೇ ಪುಟ್ಟ ಕಂದಮ್ಮನ ಆಗಮನವಾಗಲಿದೆ. ಇದೇ ಖುಷಿಯಲ್ಲಿ ತುಂಬು ಗರ್ಭಿಣಿ ಕವಿತಾಗೆ ಸರಳವಾಗಿ ಸೀಮಂತ ಶಾಸ್ತ್ರ ಮಾಡಿದ್ದಾರೆ. ಈ ಸಮಾರಂಭಕ್ಕೆ ನಟಿ ನಮ್ರತಾ ಗೌಡ, ತನಿಷಾ ಕುಪ್ಪಂಡ, ಹಿರಿಯ ನಟಿ ಶ್ರುತಿ, ನಿಮಿಕಾ ರತ್ನಾಕರ್, ನೇಹಾ ಗೌಡ, ಅನುಪಮಾ ಗೌಡ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

    ಅಂದಹಾಗೆ, ಲಾಕ್‌ಡೌನ್ ವೇಳೆ 2021ರ ಮೇ 14ರಂದು ಚಂದನ್ ಕುಮಾರ್ ಮತ್ತು ಕವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇಬ್ಬರೂ ‘ಲಕ್ಷ್ಮಿ ಬಾರಮ್ಮ’ ಸೀರಿಯಲ್‌ನಲ್ಲಿ ಹೀರೋ, ಹೀರೋಯಿನ್ ಆಗಿ ನಟಿಸಿದ್ದರು.

    Continue Reading

    FILM

    ಹೇಮಾ ಸಮಿತಿಯಂತೆ ಸ್ಯಾಂಡಲ್​ವುಡ್​ನಲ್ಲಿ ನಟಿಯರ ರಕ್ಷಣೆಗೆ ಬರುತ್ತಿದೆ ಸಮಿತಿ

    Published

    on

    ಮಂಗಳೂರು/ಬೆಂಗಳೂರು :   ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಸಮಿತಿ ವರದಿ ಭಾರೀ ಚರ್ಚೆ ಹುಟ್ಟು ಹಾಕಿತ್ತು. ಮಾಲಿವುಡ್ ನಲ್ಲಿ ನಟಿಯರ ಮೇಲೆ ನಡೆಯುತ್ತಿರುವ ಕಿರುಕು*ಳದ ಬಗ್ಗೆ ವರದಿ ಬಹಿರಂಗ ಪಡಿಸಿತ್ತು. ಈ ವrದಿಯಿಂದಾಗಿ ಹಲವು ಬೆಳವಣಿಗೆಗಳು ನಡೆದ ಬೆನ್ನಲ್ಲೇ ಚಂದನವನ(Sandalwood)ದಲ್ಲೂ ಹೇಮಾ ಸಮಿತಿ ಮಾದರಿಯಲ್ಲೇ ಸಮಿತಿ ರಚಿಸಬೇಕು ಎಂಬ ಆಗ್ರಹ ಕೇಳಿ ಬಂದಿತ್ತು. ಈ ಬಗ್ಗೆ ನಟಿಯರು ಮನವಿಯನ್ನೂ ಸಲ್ಲಿಸಿದ್ದರು.

    ಈ ಹಿನ್ನೆಲೆಯಲ್ಲಿ ಇಂದು(ಸೆ.16) ಸಭೆ ನಡೆದಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಬಳಿಕ ಸುದ್ದಿಗೋಷ್ಠಿ ನಡೆಯಿತು.

    ಪಾಶ್ ಕಮಿಟಿ ರಚನೆ : 

    ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರರಂಗಕ್ಕೆ ಹೆಣ್ಣು ಮಕ್ಕಳು ಬರ್ತಾರೆ ಅಂದ್ರೆ ತಂದೆ-ತಾಯಿ ಸುಲಭದಲ್ಲಿ ಕಳುಹಿಸಬೇಕು. ಆ ರೀತಿ ಚಿತ್ರರಂಗ ಆಗಬೇಕು. ಎಲ್ಲರೂ ಡಾಕ್ಟರ್ ಆಗಿ, ಇಂಜಿನಿಯರ್ ಆಗಿ ಎನ್ನುತ್ತಾರೆ. ಆದರೆ, ಕೆಲವೇ ಕೆಲವರು ಮಾತ್ರ ನಟನೆಗೆ ಹೋಗಿ ಎಂದು ಹೇಳುತ್ತಾರೆ. ಚಿತ್ರರಂಗದಲ್ಲಿ ಹೆಣ್ಣುಮಕ್ಕಳು ಸುರಕ್ಷಿತವಾಗಿ ಇರ್ತಾರಾ ಎಂಬ ಪ್ರಶ್ನೆ ಮೂಡುವಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

    ಕನ್ನಡ ಚಿತ್ರರಂಗದಲ್ಲಿ ಪಾಶ್ ಕಮಿಟಿ ಮಾಡಲಾಗುತ್ತಿದೆ. ವಾಣಿಜ್ಯ ಚಿತ್ರರಂಗಕ್ಕೆ ಪತ್ರ ಬರೆದಿದ್ದೇವೆ.  ಇವತ್ತು ಮೀಟಿಂಗ್​ಗೆ ಬಹಳ ಕಡಿಮೆ ನಟಿಯರು ಬಂದಿದ್ದಾರೆ. ಹೊರದೇಶದಲ್ಲಿ ಕಾರ್ಯಕ್ರಮ (ಸೈಮಾ) ಇತ್ತು. ಹೀಗಾಗಿ, ಅಲ್ಲಿಗೆ ಹೋಗಿದ್ದಾರೆ ಎಂದರು.

    ನನಗೆ ಅನಾರೋಗ್ಯ ಆಗಿದೆ. ಆದರೂ ಬಂದಿದ್ದೇನೆ. ಮುಂದಿನ ಸಭೆಯಲ್ಲಿ ಎಲ್ಲರೂ ಬರುವಂತೆ ಆಗಬೇಕು. ಕಮಿಟಿ ಹೇಗೆ ಇರಬೇಕು ಎನ್ನುವ ಕುರಿತು ಕಾನೂನು ಇದೆ. ಅದೇ ರೀತಿಯಲ್ಲಿ ಸಮಿತಿ ರಚನೆ ಆಗಲಿದೆ. ಇದು ನಟಿಯರಿಗೆ ಫ್ಯಾಮಿಲಿ. ನಟಿಯರು ಸಿನಿಮಾದಲ್ಲಿ ನಟಿಸಬೇಕು ಎಂದಾಗ 17 ಪಾಯಿಂಟ್ಸ್​ ಇದೆ. ಯಾವ ಯಾವ ಫೆಸಿಲಿಟಿ ನೀಡಬೇಕು ಎಂಬುದರ ಉಲ್ಲೇಖ ಇದೆ. ಪಾಶ್ ಕಮಿಟಿ ಇರುತ್ತದೆ. ಸರ್ಕಾರದ ಗೆಜೆಟ್​ನಲ್ಲಿ ಈ ಸಮಿತಿ ಬರುತ್ತದೆ. ದೂರು ಬಂದರೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಇದನ್ನೂ ಓದಿ : ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್, ಅದಿತಿ ರಾವ್

    ಸಮಿತಿ ಮಾಡಲೇಬೇಕು. ಅದನ್ನು ಯಾರೂ ಮಾಡಲ್ಲ ಎಂದು ಹೇಳೋಕೆ ಆಗಲ್ಲ. ಮಹಿಳೆಯರಿಗೆ ರಕ್ಷಣೆ ನೀಡಲು ಇದನ್ನು ಮಾಡಲೇಬೇಕು. ಇದನ್ನು ಮಾಡೇ ಮಾಡುತ್ತೇವೆ. ಈ ಸಮಿತಿಗೆ ಹಿರಿಯ ನಟಿ ಅಧ್ಯಕ್ಷರಾಗಿರಬೇಕು. ಅರ್ಧದಷ್ಟು ಸದಸ್ಯರು ಮಹಿಳೆಯರಾಗಬೇಕು. ಮಹಿಳೆಯರ ಪರ ಹೋರಾಡುವ ಒಬ್ಬರು ಈ ಸಮಿತಿಯಲ್ಲಿ ಇರಬೇಕು ಎಂದು ವಿವರಿಸಿದ್ದಾರೆ.

    Continue Reading

    FILM

    ತೆಲುಗು ಬಿಗ್ ಬಾಸ್ ಗೆ ಎಂಟ್ರಿ ಕೊಟ್ಟ ಮಂಗಳೂರಿನ ಯುವಕ

    Published

    on

    ಮಂಗಳೂರು : ರಿಯಾಲಿಟಿ ಶೋಗಳಲ್ಲಿ ಅತ್ಯಂತ ಹೆಚ್ಚು ಜನಮೆಚ್ಚಿದ, ಪ್ರಶಂಸೆಗೆ ಪಾತ್ರವಾಗಿರುವ ಬಿಗ್ ಬಾಸ್ ಗೆ ಎಂಟ್ರಿ ಕೊಡೋದು ಸುಲಭದ ಮಾತಲ್ಲ. ಚಿತ್ರರಂಗ ಮತ್ತು ಸೀರಿಯಲ್ ಕ್ಷೇತ್ರದ ಘಟಾನುಘಟಿಗಳು ಈ ಶೋ ನಲ್ಲಿ ಪಾಲ್ಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ ಅನ್ನೋದು ಸುಳ್ಳಲ್ಲ. ಇಂಥ ಫೇಮಸ್ ರಿಯಾಲಿಟಿ ಶೋನಲ್ಲಿ ಮಂಗಳೂರಿನ ಯುವಕನೊಬ್ಬ ಎಂಟ್ರಿ ಕೊಟ್ಟಿದ್ದಾನೆ.

    ತೆಲುಗು ಬಿಗ್ ಬಾಸ್ ನ 8 ನೇ ಆವೃತ್ತಿ ಆಯ್ಕೆಯಾಗಿರುವ ಈ ಯುವಕ ಮಂಗಳೂರಿನ ಪೃಥ್ವಿ ಶೆಟ್ಟಿ. ಮೂಲತಃ ಮಂಗಳೂರಿನವರಾದ  ಇವರು ಇದೀಗ ಬಿಗ್ ಬಾಸ್ ಶೋ ಒಳಗೆ ಎಂಟ್ರಿ ಕೊಟ್ಟು ತಮ್ಮ ಪ್ರದರ್ಶನ ನೀಡುತ್ತಿದ್ದಾರೆ.

    ಧಾರಾವಾಹಿಗಳ ಮೂಲಕ ಗಮನ ಸೆಳೆದ ನಟ :

    ಕುಡ್ಲದ ಪ್ರತಿಭೆಗಳು ಕಿರುತೆರೆ, ಹಿರಿತೆರೆಯಲ್ಲಿ ಮಿನುಗುತ್ತಿದ್ದಾರೆ. ಅವರಲ್ಲಿ ಪೃಥ್ವಿ ಶೆಟ್ಟಿ ಕೂಡ ಒಬ್ಬರು. ತಮ್ಮ ಪ್ರಾಥಮಿಕ ಶಿಕ್ಷಣ ಮತ್ತು ಕಾಲೇಜು ಶಿಕ್ಷಣವನ್ನು ಮಂಗಳೂರು, ಕಾಸರಗೋಡು ಮತ್ತು‌ ಉಡುಪಿ ಜಿಲ್ಲೆಯಲ್ಲಿ ಮುಗಿಸಿರುವ ಪೃಥ್ವಿ ವಿದ್ಯಾಭ್ಯಾಸದ ಬಳಿಕ ಫ್ಯಾಷನ್ ಫೀಲ್ಡ್ ಗೆ ವಾಲಿದ್ದರು. ಕಾಲೇಜು ದಿನಗಳಲ್ಲಿಯೇ ಫ್ಯಾಷನ್ ಶೋಗಳಲ್ಲಿ ಪಾಲ್ಗೊಂಡು ಯಶಸ್ಸು ಕಂಡಿದ್ದ ಪೃಥ್ವಿ, ಬಳಿಕದ ದಿನಗಳಲ್ಲಿ ಚಿತ್ರರಂಗ ಮತ್ತು ಟಿವಿ ಶೋಗಳಲ್ಲಿ  ಅಭಿನಯಿಸುವ ಇಚ್ಛೆಯಿಂದ  ಬೆಂಗಳೂರು ಮಹಾನಗರಕ್ಕೆ ಪ್ರಯಾಣ ಬೆಳೆಸಿದ್ದರು.

    ಹಲವು ಸಣ್ಣ-ಪುಟ್ಟ ಧಾರಾವಾಹಿಗಳಲ್ಲಿ ನಟಿಸಿರುವ ಪೃಥ್ವಿ ಶೆಟ್ಟಿಗೆ ಉತ್ತಮ ಬ್ರೇಕ್ ದೊರೆತಿದ್ದು ಪ್ರೀತಿಯ ಅರಸ ಮತ್ತು ಅರ್ಧಾಂಗಿ ಎನ್ನುವ ಟಿವಿ ಸೀರಿಯಲ್ ನಲ್ಲಿ. ಎರಡೂ ಧಾರಾವಾಹಿಗಳಲ್ಲಿ ತಮ್ಮ ಸಾಧನೆ ತೋರಿರುವ ಪೃಥ್ವಿ ಗೆ ಬಳಿಕದ ದಿನಗಳಲ್ಲಿ ತೆಲುಗು ಭಾಷೆಯ ಮೆಗಾ ಧಾರಾವಾಹಿಗಳಲ್ಲೂ ಅವಕಾಶ ದೊರೆತಿದೆ. ತೆಲುಗಿನ ಸೂಪರ್ ಹಿಟ್ ಧಾರಾವಾಹಿಯಾದ ನಾಗಪಂಚಮಿಯಲ್ಲಿನ ನಟನೆಗೆ ಪೃಥ್ವಿ ಶೆಟ್ಟಿ ಮನೆ ಮಾತಾಗಿದ್ದಾರೆ.

    ಇದನ್ನೂ ಓದಿ : ಚಿನ್ನದ ಅಂಗಡಿಗೆ ಬಂದು ಬೆಲೆಬಾಳುವ ಮಾಂಗಲ್ಯ ಸರದೊಂದಿಗೆ ಎಸ್ಕೇಪ್ ಆದ ಕಳ್ಳ

    ಈಗಾಗಲೇ ಎರಡು ತೆಲುಗು ಚಿತ್ರಗಳಲ್ಲಿ ನಟಿಸಿರುವ ಪೃಥ್ವಿ ಆ ಚಿತ್ರಗಳಲ್ಲೂ ಯಶಸ್ಸು ಕಾಣುವ ವಿಶ್ವಾಸದಲ್ಲಿದ್ದಾರೆ.  ತೆಲುಗು ಟಿವಿ ಶೋಗಳಲ್ಲಿ ಮಿಂಚಿರುವ ಪೃಥ್ವಿಯವರನ್ನು ಅವರ ಸಾಧನೆ ಹಾಗು ಯಶಸ್ಸನ್ನು ಪರಿಗಣಿಸಿ ಬಿಗ್ ಬಾಸ್ ನ 8 ನೇ ಆವೃತ್ತಿಗೆ ಆಯ್ಕೆ ಮಾಡಲಾಗಿದೆ. ಓಟಿಂಗ್ ನಲ್ಲೂ ಮೂರನೇ ಸ್ಥಾನವನ್ನು ಕಾಯ್ದುಕೊಂಡಿರುವ ಪೃಥ್ವಿ ಬಿಗ್ ಬಾಸ್ ಆಗಿ ಹೊರಬರಲಿ ಎನ್ನುವ ಹಾರೈಕೆಗಳೂ ಕೇಳಿ ಬರಲಾರಂಭಿಸಿದೆ.

    Continue Reading

    LATEST NEWS

    Trending