Connect with us

DAKSHINA KANNADA

ನಾಳೆ (ಜು.11) ಮತ್ತೆ ದ.ಕ ಶಾಲೆಗಳಿಗೆ ರಜೆ: ಡಾ. ರಾಜೇಂದ್ರ ಕೆವಿ ಆದೇಶ

Published

on

ಮಂಗಳೂರು: ಕರಾವಳಿಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಆಸ್ತಿ-ಪಾಸ್ತಿ -ಜೀವ ಹಾನಿಯಾಗಿದೆ. ಮುಂದಿನ 48 ಗಂಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರಿ ಮಳೆ ಸುರಿಯುವ ಸಂಭವವಿರುವ ಕಾರಣ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.


ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಮಾತ್ರ ನಾಳೆ (ಜುಲೈ11) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಆದೇಶ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗೆ ಮಾತ್ರ ರಜೆ ಘೋಷಿಸಲಾಗಿದೆ.

ಪಿಯುಸಿ, ಡಿಗ್ರಿ ಹಾಗೂ ವೃತ್ತಿಪರ ಕಾಲೇಜುಗಳಿಗೆ ರಜೆ ಇರುವುದಿಲ್ಲ. ಅವುಗಳ ತಗರತಿ ಎಂದಿನಂತೆ ನಡೆಯಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

1 Comment

1 Comment

  1. Sinchnaaa

    10/07/2022 at 8:11 PM

    Noo namge kudaaa rahe bekuu because namma manyindaaaa horege baralikke aaagudilla soo degree clg rahe bekuuu

Leave a Reply

Your email address will not be published. Required fields are marked *

DAKSHINA KANNADA

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ

Published

on

ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.

ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ,  ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’

ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.

ಭದ್ರತಾಕೋಶ ಉದ್ಘಾಟನೆ : 

ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.

ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.

ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.

ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”

ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

Trending