Connect with us

    DAKSHINA KANNADA

    ಜೂ.17: ಜಾಗತಿಕ ಬಂಟರ ಸಂಘಗಳ ಒಕ್ಕೂಟ – ಮೆಗಾ ಆರ್ಥಿಕ ನೆರವು ವಿತರಣೆ, ನೂತನ ಸಂಸದರಿಗೆ ಸಮ್ಮಾನ

    Published

    on

    ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಹಾ ನಿರ್ದೇಶಕ ಹಾಗೂ ವಿ. ಕೆ. ಗ್ರೂಪ್ ಆಫ್ ಕಂಪೆನೀಸ್ ಕೆ. ಮುಂಬಯಿ ಸಿಎಂಡಿ ಕೆ.ಎಂ. ಶೆಟ್ಟಿಯವರ ಪ್ರಾಯೋಜಕತ್ವದಲ್ಲಿ ಸಮಾಜ ಕಲ್ಯಾಣ ಮೆಗಾ ಆರ್ಥಿಕ ನೆರವು ವಿತರಣೆ ಹಾಗೂ ದಕ್ಷಿಣ ಕನ್ನಡ ನೂತನ ಸಂಸದ ಕ್ಯಾ। ಬ್ರಿಜೇಶ್ ಚೌಟ ಮತ್ತು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಜೂ. 17ರಂದು ಸಮ್ಮಾನ ಸಮಾರಂಭವು ಬೆಳಗ್ಗೆ 10ರಿಂದ ಮಂಗಳೂರಿನ ಪುರಭವನದಲ್ಲಿ ಅದ್ದೂರಿಯಾಗಿ ನಡೆಯಲಿದೆ.

    ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭವನ್ನು ವಿ.ಕೆ ಗ್ರೂಫ್ ಆಫ್ ಕಂಪೆನೀಸ್ ನ ಸಿಎಂಡಿ ಕೆ ಎಂ ಶೆಟ್ಟಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಒಕ್ಕೂಟದ ಮಹಾದಾನಿ ಮತ್ತು ಹೇರಂಬಾ ಇಂಡಸ್ಟ್ರೀಸ್ ಲಿ. ನ ಮ್ಯಾನೆಜಿಂಗ್ ಡೈರೆಕ್ಟರ್ ಕನ್ಯಾನ ಸದಾಶಿವ ಶೆಟ್ಟಿ ಭಾಗವಹಿಸಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಎಸ್ ಸಿ ಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ ಎಂ ಎನ್ ರಾಜೇಂದ್ರಕುಮಾರ್ ಭಾಗವಹಿಸಲಿದ್ದಾರೆ.

    Read Moreವಿಧಾನ‌ಪರಿಷತ್ ಸದಸ್ಯ ಐವನ್ ಡಿಸೋಜಾರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

    ಒಕ್ಕೂಟದ ವಿಶೇಷ ಮಹಾನಿರ್ದೇಶಕರು ಮತ್ತು ಆರ್ಗಾನಿಕ್ ಗ್ರೂಪ್ ಆಫ್ ಇಂಡಸ್ಟ್ರೀಸ್‌ನ ತೋನ್ಸೆ ಆನಂದ್ ಎಂ. ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿಶೇಷ ಮಹಾ ನಿರ್ದೇಶಕ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಹಾ ನಿರ್ದೇಶಕರಾದ ಎಂಆರ್‌ಜಿ ಗ್ರೂಪ್ಸ್ ನ ಚೆಯರ್ ಮೆನ್ ಕೆ. ಪ್ರಕಾಶ್‌ ಶೆಟ್ಟಿ, ಶಶಿ ಕೇಟರಿಂಗ್ ಸರ್ವಿಸಸ್ ಬರೋಡ ಇದರ ಎಂ ಡಿ ಶಶಿಧರ ಶೆಟ್ಟಿ ಬರೋಡ, ರಾಕ್ಷಿ ಬಿಲ್ಡರ್ಸ್‌ನ ರಾಜೇಶ್ ಎನ್. ಶೆಟ್ಟಿ ಅಲಿಯನ್ಸ್ ಇಂಫ್ರಾಸ್ಟ್ರಕ್ಟರ್ ರಿಯಲ್ಟಸ್ ೯ನ ಅರವಿಂದ್ ಆನಂದ್ ಶೆಟ್ಟಿ, ಫಾರ್ಚುನ್ ಗ್ರೂಪ್ ಆಫ್ ಹೊಟೇಲ್ಸ್‌ನ ಮಾಲಕ ವಕ್ವಾಡಿ ಪ್ರವೀಣ್ ಕುಮಾ‌ರ್ ಶೆಟ್ಟಿ ಮೆರಿಟ್ ಹಾಸ್ಪಿಟಾಲಿಟಿಯ ಬೆಳ್ಳಾಡಿ ಅಶೋಕ್ ಎಸ್. ಶೆಟ್ಟಿ, ಪಂಜುರ್ಲಿ ಗ್ರೂಪ್‌ ಆಫ್ ಹೊಟೇಲ್ಸ್‌ನ ರಾಜೇಂದ್ರ ಶೆಟ್ಟಿ, ಜಾಗತಿ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಉಳ್ಳೂರು ಮೋಹನದಾಸ್ ಶೆಟ್ಟಿ ಜತೆ ಕಾರ್ಯದರ್ಶಿ ಚಂದ್ರಹಾಸ್‌ ಡಿ. ಶೆಟ್ಟಿ ರಂಗೋಲಿ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

    ಸಮಾರಂಭದಲ್ಲಿ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಶಿಷ್ಯ ವೃಂದದವರಿಂದ “ಸನಾತನ ರಾಷ್ಟ್ರಂಜಲಿ” ಕಾರ್ಯಕ್ರಮ‌ ನಡೆಯಲಿದೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇ ಶಕರು, ಮಹಾಪೋಷಕರು, ಪೋಷಕರು, ದಾನಿಗಳು, ಬಂಟರ ಸಂಘಗಳ ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿ ಸರ್ವ ಸದಸ್ಯರು ಪಾಲ್ಗೊಂಡು ಸಮಾರಂಭದ ಯಶಸ್ಸಿಗೆ ಸಹಕರಿಸುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪ್ರಕಟಣೆ ತಿಳಿಸಿದೆ.

    Baindooru

    ಬಿಗ್ ಬಾಸ್ ಗೆ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟ ಹಿಂದೂ ಫೈರ್ ಬ್ರಾಂಡ್ ಚೈತ್ರಾ

    Published

    on

    ಮಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್. ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿ ಬರೋ ಈ ಶೋಗೆ ಸ್ಪರ್ಧಿಗಳು ಯಾರಾಗ್ತಾರೆ ಅನ್ನೋದು ಕುತೂಹಲವೇ ಹೆಚ್ಚು. ಈ ಬಾರಿ ಅಂದ್ರೆ ಸೀಸನ್ 11 ರ ಸ್ಪರ್ಧಿಗಳು ಯಾರು ಅನ್ನೋ ‘ರಾಜ ರಾಣಿ’ ರಿಯಾಲಿಟಿ ಶೋ ನ ಗ್ರ್ಯಾಂಡ್ ಫಿನಾಲೇಲಿ ರಿವೀಲ್ ಆಗುತ್ತಿದೆ.

    ಎಂಟ್ರಿ ಕೊಟ್ಟ ಚೈತ್ರಾ!

    ಮೊದಲ ಸ್ಪರ್ಧಿಯಾಗಿ ‘ಸತ್ಯ’ ಧಾರಾವಾಹಿ ನಟಿ ಗೌತಮಿ ಜಾಧವ್, 2ನೇ ಸ್ಪರ್ಧಿಯಾಗಿ ಲಾಯರ್ ಜಗದೀಶ್‌ ಬಿಗ್ ಬಾಸ್ ಮನೆ ಸೇರುತ್ತಿದ್ದು, ಇನ್ನೂ 3ನೇ ಸ್ಪರ್ಧಿಯಾಗಿ ‘ಬಿಗ್ ಬಾಸ್‌’ ಮನೆಯೊಳಗೆ ಫೈರ್ ಬ್ರ್ಯಾಂಡ್ ಭಾಷಣಕಾರ್ತಿ ಚೈತ್ರಾ ಎಂಟ್ರಿ ಕೊಟ್ಟಿದ್ದಾರೆ.
    ಖಡಕ್‌ ಮಾತುಗಳಿಂದಲೇ, ಹಿಂದುತ್ವದ ಹೆಸರಿನಲ್ಲಿ ಭಾಷಣ ಮಾಡಿ, ತಮ್ಮದೇ ಆದ ಅಪಾರ ಹಿಂಬಾಲಕರನ್ನು ಹೊಂದಿದ್ದಾರೆ. ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಚೈತ್ರಾ, ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
    ಅಲ್ಲದೇ, ಖಾಸಗಿ ವಾಹಿನಿ, ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವವೂ ಇದೆ.

    ಇದನ್ನು ಓದಿ: ನಟಿ ಸುಕೃತಾ ನಾಗ್ ಸಿಲ್ಕ್ ಸೀರೆಯಲ್ಲಿ ಮಿಂಚಿಂಗ್… ಬಿಗ್ ಬಾಸ್ ಗೆ ಸ್ವಾಗತ ಅಂತಿದ್ದಾರೆ ಜನ!

    ವಂಚನೆ ಪ್ರಕರಣ:
    ಪ್ರಖರ ಭಾಷಣಗಳ ಮೂಲಕ ಗಮನ ಸೆಳೆದಿದ್ದ ಚೈತ್ರಾ ಕಾಂಟ್ರವರ್ಸಿಗಳ ಮೂಲಕವೂ ಸದ್ದು ಮಾಡಿದ್ದಾರೆ. ಅಲ್ಲದೇ, ಬಿಜೆಪಿ ಟಿಕೆಟ್ ಕೊಡುವ ವಿಚಾರದಲ್ಲಿ ಬೈಂದೂರಿನ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದಡಿ ಜೈಲು ಪಾಲಾಗಿದ್ದರು.
    ಸದ್ಯ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದಿರುವ ಚೈತ್ರಾ ಅಲ್ಲಿ ಹೇಗಿರ್ತಾರೆ? ಅನ್ನೋದನ್ನ ಕಾದು ನೋಡಬೇಕಿದೆ.

    Continue Reading

    DAKSHINA KANNADA

    ಮೈಸೂರು ದಸರಾದಲ್ಲಿ ತುತ್ತೂರಿ ಬ್ಯಾನ್

    Published

    on

    ಮಂಗಳೂರು/ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದೆ. ಜಂಬೂ ಸವಾರಿ ನೋಡಲು ಜನರು ಕಾಯುತ್ತಿದ್ದಾರೆ. ಈ ಹಿಂದೆ ದಸರಾ ಆನೆಗಳೊಂದಿಗೆ ಫೋಟೋ, ರೀಲ್ಸ್ ಗೆ ಸರ್ಕಾರ ಬ್ರೇಕ್ ಹಾಕಿತ್ತು. ಈಗ ತತ್ತೂರಿ ಬ್ಯಾನ್ ಮಾಡಲಾಗಿದೆ.

    ತುತ್ತೂರಿ ಬ್ಯಾನ್ ಮಾಡುವಂತೆ ಸೂಚಿಸಿ ಮೈಸೂರು ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ. ಪ್ರವಾಸಿಗರಿಗೆ ಹಾಗೂ ಸಾರ್ವಜನಿಕರಿಗೆ ತುತ್ತೂರಿ ಕಿರಿಕಿರಿ ಉಂಟುಮಾಡುವ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.

    ಕರ್ನಾಟಕ ಪೊಲೀಸ್ ಕಾಯ್ದೆ 1963, ಕಲಂ 35, 36 ಮತ್ತು 92 (Q) ಅಡಿ ವುವುಜೆಲಾ (ತುತ್ತೂರಿ) ಮಾರಾಟ ಮಾಡುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆ 1963 ಸೆಕ್ಷನ್ 92 (Q) ಪ್ರಕಾರ ಹಾಗೂ ಭಾರತೀಯ ನ್ಯಾಯ ಸಂಹಿತೆ-2023 ಸೆಕ್ಷನ್ 270ರಲ್ಲಿ ಸಾರ್ವಜನಿಕ ಉಪದ್ರವವನ್ನು ಅಪರಾಧವೆಂದು ಪರಿಗಣಿಸಿದ್ದು, ಸಾರ್ವಜನಿಕ ಆರೋಗ್ಯ, ಸುರಕ್ಷತೆ, ನೈತಿಕತೆಗೆ ಕಿರಿಕಿರಿ ಉಂಟುಮಾಡುತ್ತದೆ ಎಂದು ಪರಿಗಣಿಸಲಾಗಿದೆ.

    ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂ*ಬ್ ಬೆದರಿಕೆ ಇ-ಮೇಲ್

    ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನಿನನ್ವಯ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಈ ಘಟಕದ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

    Continue Reading

    DAKSHINA KANNADA

    ಮಂಗಳೂರು : ಅರ್ಚನಾ ಕಾಮತ್ ತ್ಯಾಗ ಸಂಸ್ಮರಣಾ ರಕ್ತದಾನ ಶಿಬಿರ

    Published

    on

    ಮಂಗಳೂರು : ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾ ನ ಶಿಬಿರ ಮಂಗಳೂರಿನ ಟಿ.ವಿ.ರಮಣ್ ಪೈ ಸಭಾಂಗಣದಲ್ಲಿ ನಡೆಯಿತು.

    ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಆಯೋಜಿಸಿದ ಈ ಕಾರ್ಯಕ್ರಮವನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು,  ಶಾಸಕ ಕಾಮತ್ ಬಾಲ್ಯದಿಂದಲೇ ಪರಿಚಯರಾಗಿದ್ದ ಅರ್ಚನಾ ಕಾಮತ್ ಅವರು ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನವರಾಗಿದ್ದರು. ಅವರ ಬದುಕು ನಮಗೆ ಆದರ್ಶವಾಗಿದೆ. ಅವರ ಇಡೀ ಕುಟುಂಬ ನಮಗೆ ಆತ್ಮೀಯವಾಗಿದೆ. ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ರಕ್ತದಾನ ಶಿಬಿರ ಆಯೋಜಿಸಿ ಅರ್ಚನಾ ಅವರ ಆತ್ಮೀಯರನ್ನು ಒಂದುಗೂಡಿಸಿ ಮಾದರಿ ಕಾರ್ಯ ಮಾಡಿದೆ. ಇಷ್ಟು ಚಿಕ್ಕ ವಯಸ್ಸಿನಲ್ಲಿ ನಮ್ಮನ್ನು ಅಗಲಿದ ಅರ್ಚನಾ ‌ಕಾಮತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರ ಬಗ್ಗೆ ಮಾತನಾಡುವುದು ತುಂಬಾ ನೋವಿನ ಸಂಗತಿ ಎಂದು ಭಾವುಕರಾದರು.

    ಈ ಸಂದರ್ಭ ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿ ಸಿಎ ಜಗನ್ನಾಥ್ ಕಾಮತ್, ಬೆಸೆಂಟ್ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಮಣೇಲ್ ಅಣ್ಣಪ್ಪ ನಾಯಕ್ ಮೊದಲಾದವರು ಉಪಸ್ಥಿತರಿದ್ದರು. ಬಿಎನ್ ಐ, ಸಹ್ಯಾದ್ರಿ ಶಿಕ್ಷಣ ಸಂಸ್ಥೆ, ಕೆನರಾ ಹೈಸ್ಕೂಲ್ ಅಸೋಸಿಯೇಷನ್, ಕೆಎಂಸಿ ಆಸ್ಪತ್ರೆ, ಬೆಸೆಂಟ್ ಶಿಕ್ಷಣ ಸಂಸ್ಥೆ, ಯೂತ್ ಆಫ್ ಜಿಎಸ್ ಬಿ, ಸಿಎ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ರಕ್ತದಾನ ಶಿಬಿರದಲ್ಲಿ 98ಕ್ಕೂ ಅಧಿಕ ನಾಗರಿಕರು ರಕ್ತದಾನ ಮಾಡಿದರು.

    ಇದನ್ನೂ ಓದಿ : ಮುದ್ದಾದ ಮಗಳ ಮುಖ ರಿವೀಲ್ ಮಾಡಿದ ಮಿಲನಾ ದಂಪತಿ

    ಅರ್ಚನಾ ಕಾಮತ್ ಅವರ ಪತಿ, ಸಹೋದರಿ ಹಾಗೂ ಸಂಬಂಧಿಕರು ರಕ್ತದಾನ ಮಾಡಿ ನೋವಿನಲ್ಲಿಯೂ ಹೃದಯ ವೈಶಾಲ್ಯತೆ ಮೆರೆದು ಮಾದರಿಯಾದರು.

    Continue Reading

    LATEST NEWS

    Trending