Sunday, November 27, 2022

ಮಸೂದ್, ಫಾಝಿಲ್ ಕುಟುಂಬಕ್ಕೆ ನ್ಯಾಯಕೊಡಿ : ಮುಸ್ಲಿಂ ಐಕ್ಯತಾ ವೇದಿಕೆಯಿಂದ ಮಂಗಳೂರಿನಲ್ಲಿ ಭಾರಿ ಪ್ರತಿಭಟನೆ

ಮಂಗಳೂರು : ಸುರತ್ಕಲ್ ಫಾಝಿಲ್ ,ಬೆಳ್ಳಾರೆಯ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರಿನಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.

ಮುಸ್ಲಿಂ ಐಕ್ಯತಾ ವೇದಿಕೆಯ ನೇತೃತ್ವದಲ್ಲಿ ಮಂಗಳೂರು ನಗರದ ಹಂಪನಕಟ್ಟಾ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿ ಎರಡೂ ಕುಟುಂಬಗಳಿಗೆ ನ್ಯಾಯ ನೀಡಬೇಕೆಂದು ಒತ್ತಾಯ ಮಾಡಿತು.

ರಾಜ್ಯ ಸರಕಾರದ ದ್ವಿಮುಖ ನೀತಿಯ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು.ರಾಜ್ಯ ಸರಕಾರ ತಾರತಮ್ಯ ನೀತಿಯನ್ನು ಬದಿಗಿಟ್ಟು ತನ್ನ ತಪ್ಪನ್ನು ತಿದ್ದಿಕೊಂಡು ಸಮಾನ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸಭೇಯಲ್ಲಿ ಎಸ್ಸೆಸ್ಸೆಫ್ ರಾಜ್ಯ ಮುಖಂಡ ಯಾಕೂಬ್ ಸಅದಿ ನಾವೂರು, ಎಸ್.ಬಿ.ಮುಹಮ್ಮದ್ ದಾರಿಮಿ ಅವರು ಮಾತನಾಡಿದರು.

ಕರಾವಳಿ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೇ ನೇರ ಕಾರಣ. ಈ ಹಿಂದೆ ಎನ್‌ಆರ್‌ಸಿ, ಸಿಎಎ ಪ್ರತಿಭಟನೆಯ ವೇಳೆ ಪೊಲೀಸರ ಗುಂಡೇಟಿಗೆ ಇಬ್ಬರು ಬಲಿಯಾದರು.

ಆದರೆ ಅವರಿಗೆ ನ್ಯಾಯ, ಪರಿಹಾರ ಸಿಗಲಿಲ್ಲ. ಇದೀಗ ಫಾಝಿಲ್ ಮತ್ತು ಮಸೂದ್‌ರ ಕೊಲೆಯಾಗಿದೆ. ರಾಜ್ಯ ಬಿಜೆಪಿ ಸರಕಾರ ಪರಿಹಾರ ನೀಡುವಲ್ಲಿ ಮತ್ತು ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸುವಲ್ಲಿಯೂ ತಾರತಮ್ಯ ಎಸಗಿದೆ.

ಮುಖ್ಯಮಂತ್ರಿಯ ಈ ಆಟ ಹೆಚ್ಚು ಕಾಲ ನಡೆಯುವುದಿಲ್ಲ. ಪ್ರಜೆಗಳನ್ನು ಸಮಾನವಾಗಿ ಕಾಣಲಾಗದ ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು ಎಂದರು.

“ರಾಜ್ಯದಲ್ಲಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮುಸ್ಲಿಮರ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ. ಈ ಅನ್ಯಾಯ, ದೌರ್ಜನ್ಯ, ತಾರತಮ್ಯವನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ.

ಅಧಿಕಾರಕ್ಕಾಗಿ ಸನಾತನ ಸಂಸ್ಕೃತಿಯನ್ನೇ ನಾಶ ಮಾಡುವುದನ್ನು ಕಂಡು ಇಲ್ಲಿನ ಸಜ್ಜನ ಹಿಂದೂಗಳು ಇನ್ನು ಸುಮ್ಮನಿರಲಾರರು. ಪ್ರವೀಣ್ ನೆಟ್ಟಾರ್ ಕೊಲೆಯಾದ ಬಳಿಕ ತಿರುಗಿ ಬೀಳತೊಡಗಿದ್ದಾರೆ.

ಹಾಗಾಗಿ ನಾಡಿನ ಸರ್ವ ಪ್ರಜೆಗಳು ತಿರುಗಿ ಬೀಳುವ ಮುನ್ನ ಸರಕಾರ ರಾಜಧರ್ಮ ಪಾಲಿಸಬೇಕುನ ಒತ್ತಾಯಿಸಿದರು.

ಪಿಎಫ್‌ಐ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಜೋಕಟ್ಟೆ ,ಜಮಾಅತೆ ಇಸ್ಲಾಮೀ ಹಿಂದ್ ನ ಮುಹಮ್ಮದ್ ಕುಂಞಿ ಸಭೆಯಲ್ಲಿ ಮಾತನಾಡಿ ಸರ್ಕಾರ ಧೋರಣೆಯನ್ನು ಖಂಡಿಸಿದರು,

ಸಭೆಯಲ್ಲಿ ಭಾವುಕರಾಗಿ ಮಾತಾಡಿದ ಕೊಲೆಯಾದ ಫಾಝಿಲ್‌ನ ತಂದೆ ಉಮರ್ ಫಾರೂಕ್ ಮಗನ ಕೊಲೆಯಾಗಿ 50 ದಿನಗಳಾಗಿವೆ.

ಆದರೆ ಸರಕಾರದಿಂದ ನಮಗೆ ಸೂಕ್ತ ನ್ಯಾಯ ಸಿಗಲಿಲ್ಲ. ಎಲ್ಲದರಲ್ಲೂ ತಾರತಮ್ಯ ಎಸಗಿದೆ.

ಈ ಪ್ರಕರಣದಲ್ಲಿ ಇನ್ನೂ ಕೆಲವು ಮಂದಿ ಆರೋಪಿಗಳಿದ್ದು, ಅವರನ್ನು ಬಂಧಿಸುತ್ತೇವೆ ಎಂದು ಪೊಲೀಸರು ಹೇಳಿದ್ದರೂ ಬಂಧನವಾಗಿಲ್ಲ ಎಂದು ಗದ್ಗದಿತರಾದರು.

LEAVE A REPLY

Please enter your comment!
Please enter your name here

Hot Topics

ನಂತೂರಿನಲ್ಲಿ ಜೋಡಿ ಮೇಲೆ ದಾಳಿ-ಮೂವರು ಹಿಂದೂ ಕಾರ್ಯಕರ್ತರು ಅರೆಸ್ಟ್

ಮಂಗಳೂರು:ಮಂಗಳೂರಿನ ನಂತೂರು ಸರ್ಕಲ್‌ ಬಳಿ ಗುರುವಾರ ಸಂಜೆ ಭಿನ್ನ ಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.ಸುರತ್ಕಲ್‌ ನಿವಾಸಿ ಮುತ್ತು(18), ಪ್ರಕಾಶ್‌(21) ಮತ್ತು ಅಸೈಗೋಳಿ...

ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸಿದ್ರೆ ಭಾರತದಲ್ಲಿ 30 ಮಕ್ಕಳು ಜನಿಸ್ತಾರೆ-ಕೇಂದ್ರ ಸಚಿವ

ನವದೆಹಲಿ: ಇಂದು ಚೀನಾದಲ್ಲಿ ನಿಮಿಷಕ್ಕೆ 10 ಮಕ್ಕಳು ಜನಿಸುತ್ತಿದ್ದರೆ, ಭಾರತದಲ್ಲಿ 30 ಮಕ್ಕಳು ಜನಿಸುತ್ತಿದ್ದಾರೆ. ಹೀಗಿರುವಾಗ ನಾವು ಚೀನಾದೊಂದಿಗೆ ಸ್ಪರ್ಧಿಸೋದು ಹೇಗೆ? ಆದ್ದರಿಂದ ಮಸೂದೆಯನ್ನು ಧರ್ಮ ಅಥವಾ ಪಂಗಡವನ್ನು ಲೆಕ್ಕಿಸದೇ ಪ್ರತಿಯೊಬ್ಬರಿಗೂ ಅನ್ವಯವಾಗುವಂತೆ...

ಕುಕ್ಕೆ ಕ್ಷೇತ್ರದಲ್ಲಿ 116 ಮಂದಿ ಭಕ್ತರಿಂದ ಎಡೆಮಡೆ ಸ್ನಾನ..

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪುರಾಣ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾಗಿರುವ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಪ್ರಯುಕ್ತ 116 ಮಂದಿ ಭಕ್ತರಿಂದ ಇಂದು ಎಡೆಮಡೆ ಸ್ನಾನ ನಡೆಯಿತು.ದೇವರ ನೈವೇದ್ಯದ ಮೇಲೆ...