Wednesday, October 5, 2022

ಪ್ರೆಸ್ ಕೌನ್ಸಿಲ್‌ನ ಅಧ್ಯಕ್ಷರಾಗಿ ನ್ಯಾ. ರಂಜನಾ ದೇಸಾಯಿ ನೇಮಕ

ಹೊಸದಿಲ್ಲಿ: ಭಾರತದ ಪತ್ರಿಕಾ ಮಂಡಳಿಯ ಅಧ್ಯಕ್ಷರಾಗಿ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರನ್ನು ಮಂಗಳವಾರ ನೇಮಕ ಮಾಡಲಾಗಿದೆ.


ಈ ಹಿಂದೆ ಈ ಹುದ್ದೆಯಲ್ಲಿದ್ದ ನಿವೃತ್ತ ನ್ಯಾಯಮೂರ್ತಿ ಸಿ.ಕೆ ಪ್ರಸಾದ್ ಅವರ ಸ್ಥಾನಕ್ಕೆ ಇದೀಗ ರಂಜನಾ ದೇಸಾಯಿ ಆಯ್ಕೆಯಾಗಿದ್ದಾರೆ.

ದೇಶದಲ್ಲಿ ಪತ್ರಿಕೆಗಳ ಕಾವಲುದಾರನಾಗಿ ಕಾರ್ಯನಿರ್ವಹಿಸುವ ಈ ಸಂಸ್ಥೆಯಲ್ಲಿ 2021ರ ನವೆಂಬರ್‌ನಿಂದ ಈ ಹುದ್ದೆ ಖಾಲಿ ಇತ್ತು.

ಲೋಕಸಭಾ ಸ್ಪೀಕರ್, ರಾಜ್ಯಸಭಾ ಅಧ್ಯಕ್ಷ ಮತ್ತು ಪಿಸಿಐ ಸದಸ್ಯರು ಆಯ್ಕೆ ಮಾಡಿದ ಒಬ್ಬ ಪ್ರತಿನಿಧಿಯನ್ನು ಒಳಗೊಂಡ ಆಯ್ಕೆ ಸಮಿತಿ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿದೆ.

ನಿವೃತ್ತ ನ್ಯಾಯಮೂರ್ತಿ ರಂಜನಾ ದೇಸಾಯಿ ಅವರು ಈ ಮುನ್ನ ಮಹಾರಾಷ್ಟ್ರ ಸರ್ಕಾರದ ಸರ್ಕಾರಿ ಅಭಿಯೋಜಕರಾಗಿ ಮತ್ತು ಮುಂಬೈ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here

Hot Topics

Breaking: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನ..!

ನವದೆಹಲಿ: ಭಾರತೀಯ ಸೇನೆಗೆ ಸೇರಿದ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್‌ ಪತನವಾಗಿದೆ. ಇದರಲ್ಲಿದ್ದ ಓರ್ವ ಪೈಲೆಟ್‌ ಸಾವನ್ನಪ್ಪಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...